शनिवार, जनवरी 03 2026 | 11:49:57 PM
Breaking News
Home / अन्य समाचार / ರಾಜ್ಯಪಾಲರನ್ನು ಭೇಟಿ ಮಾಡಿದ ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್

ರಾಜ್ಯಪಾಲರನ್ನು ಭೇಟಿ ಮಾಡಿದ ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್

Follow us on:

ಮೂರು ದಿನಗಳ ಅಧಿಕೃತ ರಾಜ್ಯ ಪ್ರವಾಸದಲ್ಲಿರುವ ಮಾನ್ಯ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್ ಅವರು ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು.

“ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್‌ ಗೆಹ್ಲೋಟ್‌ ಅವರನ್ನು ಇಂದು ಭೇಟಿ ಮಾಡುವ ಅವಕಾಶ ದೊರೆಯಿತು. ಈ ವೇಳೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದು ಸಂತೋಷ ತಂದಿದೆ” ಎಂದು ಮಾನ್ಯ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ.

ರಾಜ್ಯಪಾಲರ ಭೇಟಿಯ ನಂತರ ಮಾನ್ಯ ಸಚಿವರು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಿವಿಧ ಮಾಧ್ಯಮ ಘಟಕಗಳ ಮುಖ್ಯಸ್ಥರ ಜೊತೆ ಪರಿಶೀಲನಾ ಸಭೆ ನಡೆಸಿದರು.

ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕರಾದ ಶ್ರೀ ಎಸ್. ಜಿ. ರವೀಂದ್ರ ಅವರು ಸೇರಿದಂತೆ ಕೇಂದ್ರ ಸಂವಹನ ಇಲಾಖೆ, ಆಕಾಶವಾಣಿ, ದೂರದರ್ಶನ ಹಾಗೂ ಇತರೆ ಮಾಧ್ಯಮ ಘಟಕಗಳ ಅಧಿಕಾರಿಗಳು ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.

मित्रों,
मातृभूमि समाचार का उद्देश्य मीडिया जगत का ऐसा उपकरण बनाना है, जिसके माध्यम से हम व्यवसायिक मीडिया जगत और पत्रकारिता के सिद्धांतों में समन्वय स्थापित कर सकें। इस उद्देश्य की पूर्ति के लिए हमें आपका सहयोग चाहिए है। कृपया इस हेतु हमें दान देकर सहयोग प्रदान करने की कृपा करें। हमें दान करने के लिए निम्न लिंक पर क्लिक करें -- Click Here


* 1 माह के लिए Rs 1000.00 / 1 वर्ष के लिए Rs 10,000.00

Contact us

Check Also

उत्तर भारत में शीतलहर का कहर, पहाड़ों पर बर्फबारी का अलर्ट

नई दिल्ली. 30 दिसंबर 2025 साल के अंत में उत्तर और उत्तर-पूर्वी भारत कड़ाके की …