मंगलवार, दिसंबर 03 2024 | 02:33:51 AM
Breaking News
Home / Choose Language / kannada / ಪ್ರಧಾನಮಂತ್ರಿ ಅವರಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಪ್ರಧಾನಮಂತ್ರಿ ಅವರಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Follow us on:

ಡೊಮಿನಿಕಾಗೆ ಕೋವಿಡ್ 19 ಸಾಂಕ್ರಾಮಿಕ ಸಮಯದಲ್ಲಿ ನೀಡಿದ ಬೆಂಬಲ ಹಾಗೂ ಭಾರತ ಮತ್ತು ಡೊಮಿನಿಕಾ ಬಾಂಧವ್ಯವನ್ನು ಬಲಪಡಿಸುವ ಬದ್ಧತೆಗಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಕಾಮನ್ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಗೌರವಾನ್ವಿತ ಸಿಲ್ವಾನಿ ಬರ್ಟನ್ ಅವರು ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ “ಡೊಮಿನಿಕಾ ಅವಾರ್ಡ್ ಆಫ್ ಆನರ್ (ಗೌರವ ಪ್ರಶಸ್ತಿ)” ಯನ್ನು ನೀಡಿ ಗೌರವಿಸಿದರು. ಡೊಮಿನಿಕಾದ ಪ್ರಧಾನಿ ಶ್ರೀ.ರೂಸ್ವೆಲ್ಟ್ ಸ್ಕೆರಿಟ್ ಕೂಡ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಗಯಾನಾ ಅಧ್ಯಕ್ಷ ಡಾ. ಇರ್ಫಾನ್ ಅಲಿ, ಬಾರ್ಬಡೋಸ್ ಪ್ರಧಾನಿ ಮಿಯಾ ಅಮೋರ್ ಮೊಟ್ಲಿ, ಗ್ರೆನಡಾದ ಪ್ರಧಾನಿ  ಶ್ರೀ ಡಿಕಾನ್ ಮಿಚೆಲ್, ಸೇಂಟ್ ಲೂಸಿಯಾ ಪ್ರಧಾನಿ ಫಿಲಿಪ್ ಜೆ. ಪೈರ್ರೆ ಹಾಗೂ ಆಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿ ಶ್ರೀ ಗ್ಯಾಸ್ಟನ್ ಬ್ರೌನೆ ಅವರು ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ಸಾಕ್ಷಿಯಾದರು.

ಪ್ರಧಾನಮಂತ್ರಿಯವರು ಈ ಗೌರವವನ್ನು ಭಾರತದ ಜನತೆಗೆ ಹಾಗೂ ಭಾರತ ಮತ್ತು ಡೊಮಿನಿಕಾ ನಡುವಿನ ಆಳವಾದ ಐತಿಹಾಸಿಕ ಮತ್ತು ಸಾಂಸ್ಕೃತಿಕ ಸಂಬಂಧಗಳಿಗೆ ಸಮರ್ಪಿಸಿದರು. ಮುಂದಿನ ವರ್ಷಗಳಲ್ಲಿ ಉಭಯ ರಾಷ್ಟ್ರಗಳ ನಡುವಿನ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಯಾಗಲಿದೆ ಮತ್ತು ಗಾಢವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ಗಯಾನಾದ ಜಾರ್ಜ್ಟೌನ್ ನಲ್ಲಿ ನಡೆದ ಎರಡನೇ ಭಾರತ-ಕ್ಯಾರಿಕಾಮ್ ಶೃಂಗಸಭೆಯ ನೇಪಥ್ಯದಲ್ಲಿ 2024ರ ನವೆಂಬರ್ 20 ರಂದು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.

मित्रों,
मातृभूमि समाचार का उद्देश्य मीडिया जगत का ऐसा उपकरण बनाना है, जिसके माध्यम से हम व्यवसायिक मीडिया जगत और पत्रकारिता के सिद्धांतों में समन्वय स्थापित कर सकें। इस उद्देश्य की पूर्ति के लिए हमें आपका सहयोग चाहिए है। कृपया इस हेतु हमें दान देकर सहयोग प्रदान करने की कृपा करें। हमें दान करने के लिए निम्न लिंक पर क्लिक करें -- Click Here


* 1 माह के लिए Rs 1000.00 / 1 वर्ष के लिए Rs 10,000.00

Contact us

Check Also

ಭುವನೇಶ್ವರದಲ್ಲಿ ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಪೊಲೀಸ್ ಡೈರೆಕ್ಟರ್ ಜನರಲ್‌ಗಳು / ಇನ್‌ಸ್ಪೆಕ್ಟರ್ ಜನರಲ್‌ಗಳ ಅಖಿಲ ಭಾರತ ಸಮ್ಮೇಳನದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024 ನವೆಂಬರ್ 30ರಿಂದ ಡಿಸೆಂಬರ್ 1ರ ವರೆಗೆ ಒಡಿಶಾ ರಾಜ್ಯದ ಭುವನೇಶ್ವರದ ಲೋಕಸೇವಾ …