बुधवार, अक्तूबर 30 2024 | 10:45:10 AM
Breaking News
Home / Choose Language / kannada / ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ಬಾರಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ – ಸಚಿವ ವಿ. ಸೋಮಣ್ಣ

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ಬಾರಿ 60 ಸಾವಿರ ಹುದ್ದೆಗಳ ನೇಮಕಾತಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ – ಸಚಿವ ವಿ. ಸೋಮಣ್ಣ

Follow us on:

ಭಾರತೀಯ ರೈಲ್ವೆ ಇಲಾಖೆಯಲ್ಲಿ ಈ ವರ್ಷ 60 ಸಾವಿರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲಾಗುವುದು. ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಕೇಂದ್ರ ಸರ್ಕಾರದ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರು ತಿಳಿಸಿದರು.

ಅಖಿಲ ಭಾರತೀಯ ವಾಕ್ ಮತ್ತು ಶ್ರವಣ ಸಂಸ್ಥೆಯ ವಿಜ್ಞಾನ ಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಸರ್ಕಾರಿ ಉದ್ಯೋಗಕ್ಕೆ ಆಯ್ಕೆಯಾದ 51000ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ನೇಮಕಾತಿ ಪತ್ರಗಳ ವಿತರಣೆ ಹಾಗೂ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರಿಂದ ಉದ್ಯೋಗ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಷ್ಟ್ರೀಯ ರೋಜ್ ಗಾರ್ ಯೋಜನೆಯನ್ನು ಜಾರಿಗೆ ತಂದರು. 2014 ರಿಂದ 12 ಆವೃತ್ತಿಯಲ್ಲಿ ಉದ್ಯೋಗ ಮೇಳವನ್ನು ಮಾಡಿ ಇಲ್ಲಿಯವರೆಗೆ 14 ಲಕ್ಷಕ್ಕೂ ಹೆಚ್ಚು ಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದ ಪ್ರತಿಭಾವಂತರಿಗೆ ಉದೋಗಗಳನ್ನು ನೀಡಲಾಗುತ್ತಿದೆ. ರೈಲ್ವೆ ಇಲಾಖೆಯಲ್ಲಿ 2014 ರಿಂದ ಇಲ್ಲಿಯವರೆಗೆ ಮಿಶನ್ ಮೋಡ್ ನಲ್ಲಿ 5.2 ಲಕ್ಷ ಉದ್ಯೋಗಳನ್ನು ನೀಡಲಾಗಿದೆ ಎಂದು ವಿ. ಸೋಮಣ್ಣ ಅವರು ತಿಳಿಸಿದರು.

ಅಂಚೆ ಇಲಾಖೆಯಲ್ಲಿ ಹೆಚ್ಚಿನ ನೇಮಕಾತಿಗಳು ನಡೆಯುತ್ತಿವೆ. ಭಾರತದಲ್ಲಿ ಕರ್ನಾಟಕ ಸಾಂಸ್ಕೃತಿಕ ರಾಜ್ಯ, ಕರ್ನಾಟಕದಲ್ಲಿ ಮೈಸೂರು ಸಾಂಸ್ಕೃತಿಕ ರಾಜಧಾನಿ. ಪ್ರಧಾನಮಂತ್ರಿ ಜನ ಧನ್ ಯೋಜನೆಯಡಿ ಸೌಲಭ್ಯ, ಆರೋಗ್ಯ ಸೌಲಭ್ಯ ಹೆಚ್ಚಿಸಲು ಆಯುಷ್ಮನ ಭಾರತ್ ಯೋಜನೆ, ಮುದ್ರ ಯೋಜನೆ, ಬೇಟಿ ಬಚಾವ್ ಬೇಟಿ ಪಡವೋ, ಮುಂತಾದ ಯೋಜನೆಗಳನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಸರ್ಕಾರ ಜಾರಿಗೆ ತಂದು ಅಭಿವೃದ್ದಿ ಮಾಡಿದೆ. ವಾಕ್ ಮತ್ತು ಶ್ರವಣ ಸಂಸ್ಥೆಗೆ 150 ಕೋಟಿ ರೂ. ಅನುದಾನ ನೀಡಿ ಇದರ ಸರ್ವಾಂಗೀಣ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ ಎಂದರು.

ದೇಶಕ್ಕೆ ತನ್ನದೇ ಆದ ಪರಂಪರೆ ಇದೆ ಇತಿಹಾಸ ಇದೆ. ಪ್ರತಿಯೊಬ್ಬರೂ ದೇಶ ಪ್ರೇಮವನ್ನು ಬೆಳೆಸಿಕೊಳ್ಳಿ. ಉದ್ಯೋಗವನ್ನು ಪಡೆದ 51 ಸಾವಿರ ಅಭ್ಯರ್ಥಿಗಳಿಗೆ ಶುಭವಾಗಲಿ. ಮೈಸೂರಿನಲ್ಲಿ ಇಂದು 25 ಅಭ್ಯರ್ಥಿಗಳಿಗೆ ನೇಮಕಾತಿ ಪತ್ರ ವಿತರಿಸಲಾಗುತ್ತಿದೆ ಎಂದು ತಿಳಿಸಿದರು.

ಇದೇ ವೇಳೆ ಮಾತನಾಡಿದ ಕೊಡಗು-ಮೈಸೂರು ಲೋಕಸಭಾ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಅವರು ಕಳೆದ 10 ವರ್ಷಗಳಲ್ಲಿ ಮಾನ್ಯ ಪ್ರಧಾನ ಮಂತ್ರಿ ಗಳು ವಿಕಸಿತ ಭಾರತಕ್ಕೆ ಅಡಿಪಾಯ ಇಟ್ಟಿದ್ದಾರೆ. ವಿಕಸಿತ ಭಾರತ 2047ಕ್ಕೇ ಅಭಿವೃದ್ದಿ ಗುರಿಯನ್ನು ರೂಪಿಸಿದ್ದಾರೆ. ಸರ್ಕಾರದ ಹಲವು ಇಲಾಖೆಗಳು ದೇಶದ ಅಭಿವೃದ್ದಿ ಹಾಗೂ ಉದ್ಯೋಗ ನೀಡುವಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡುತ್ತಿವೆ. ಭಾರತ ಉತ್ತಮ ಭವಿಷ್ಯವನ್ನು ಹೊಂದಿದ್ದು, ವಿಕಸಿತ ಭಾರತದ ಅಬಿವೃದ್ದಿಗೆ ಪ್ರತಿಯೊಬ್ಬರೂ ಕೈಜೋಡಿಸಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀವತ್ಸ, ದಕ್ಷಿಣ ಕರ್ನಾಟಕ ವಿಭಾಗದ ಅಂಚೆ ಇಲಾಖೆಯ ನಿರ್ದೇಶಕರಾದ ಸಂದೇಶ್ ಮಹದೇವಪ್ಪ, ರೈಲ್ವೆ ಇಲಾಖೆಯ ಡಿ ಆರ್ ಎಂ ಶಿಲ್ಪಿ ಅಗರವಾಲ್, ಆಯುಷ್ ಸಂಸ್ಥೆ ನಿರ್ದೇಶಕರಾದ ಪುಷ್ಪಾವತಿ, ದಕ್ಷಿಣ ಭಾರತದ  ಪೋಸ್ಟ್ ಮಾಸ್ಟರ್ ಜನರಲ್ ಮ್ಯಾನೇಜರ್, ಚಂದ್ರಶೇಖರ್ ಕಾಕುಮಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

मित्रों,
मातृभूमि समाचार का उद्देश्य मीडिया जगत का ऐसा उपकरण बनाना है, जिसके माध्यम से हम व्यवसायिक मीडिया जगत और पत्रकारिता के सिद्धांतों में समन्वय स्थापित कर सकें। इस उद्देश्य की पूर्ति के लिए हमें आपका सहयोग चाहिए है। कृपया इस हेतु हमें दान देकर सहयोग प्रदान करने की कृपा करें। हमें दान करने के लिए निम्न लिंक पर क्लिक करें -- Click Here


* 1 माह के लिए Rs 1000.00 / 1 वर्ष के लिए Rs 10,000.00

Contact us

Check Also

ಕಿತ್ತೂರು ರಾಣಿ ಚೆನ್ಮಮ್ಮ ಭಾರತದ ಆಸ್ತಿ, ನಾರಿ ಶಕ್ತಿಯ ಪ್ರೇರಣೆ – ವಿ.ಸೋಮಣ್ಣ, ಕೇಂದ್ರ ಸಚಿವರು

ಇಂದು ವೀರ ಮಹಿಳೆ ಕಿತ್ತೂರು ರಾಣಿ ಚೆನ್ಮಮ್ಮನವರ 246ನೇ ಜನ್ಮದಿನೋತ್ಸವ ಮತ್ತು ಬ್ರಿಟಿಷರ ವಿರುದ್ದ ಜಯಗಳಿಸಿದ 200 ವರ್ಷದ ವಿಜಯೋತ್ಸವವನ್ನು ನವದೆಹಲಿಯ …