ಬಿಜೆಪಿಯನ್ನು ಪೋಷಿಸುವಲ್ಲಿ ಮತ್ತು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಸುಂದರ್ ಲಾಲ್ ಪಟ್ವಾ ಅವರ ಜನ್ಮಶತಮಾನೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಟ್ವಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ದೇಶ ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆಗಾಗಿ ಶ್ರೀ ಪತ್ವಾ ಅವರು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಶ್ರೀ ಮೋದಿ ಸ್ಮರಿಸಿದ್ದಾರೆ.
ಶ್ರೀ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನ ತಮ್ಮ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:
“ಬಿಜೆಪಿಗೆ ನೀರೆರೆದು ಪೋಷಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಸುಂದರ್ಲಾಲ್ ಪಟ್ವಾ ಅವರ ಜನ್ಮಶತಮಾನೋತ್ಸವದಂದು ಅವರಿಗೆ ನನ್ನ ಗೌರವ ನಮನಗಳು. ದೇಶ ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆಗಾಗಿ ಅವರು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು. ಮಧ್ಯಪ್ರದೇಶದ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿಗೆ ಹೊಸ ದಿಕ್ಕು ನೀಡುವಂತಹ ಕೆಲಸ ಮಾಡಿದರು. ಸಂಘಟನೆಯನ್ನು ಬಲಪಡಿಸುವುದರ ಜೊತೆಗೆ, ರಾಷ್ಟ್ರ ನಿರ್ಮಾಣಕ್ಕೆ ಅವರ ಕೊಡುಗೆ ಎಲ್ಲರಿಗೂ ಸದಾ ಪ್ರೇರಣಾದಾಯಕ”