गुरुवार, दिसंबर 05 2024 | 07:57:00 AM
Breaking News
Home / Choose Language / kannada / ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ತರಬೇತಿ ನಿರತ ಅಧಿಕಾರಿಗಳು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದರು

ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ತರಬೇತಿ ನಿರತ ಅಧಿಕಾರಿಗಳು ರಾಷ್ಟ್ರಪತಿ ಅವರನ್ನು ಭೇಟಿ ಮಾಡಿದರು

Follow us on:

ಭಾರತೀಯ ಕಂದಾಯ ಸೇವೆಯ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ತರಬೇತಿ ನಿರತ ಅಧಿಕಾರಿಗಳು ಇಂದು (ಡಿಸೆಂಬರ್ 2, 2024) ರಾಷ್ಟ್ರಪತಿ ಭವನದಲ್ಲಿ ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾದರು.

ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಅವರು, ಭಾರತೀಯ ಕಂದಾಯ ಸೇವೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಏಕರೂಪದ ತೆರಿಗೆ ವ್ಯವಸ್ಥೆ ಮತ್ತು ಹಂಚಿಕೆಯ ಆಡಳಿತಾತ್ಮಕ ಮೌಲ್ಯಗಳ ಮೂಲಕ ನಮ್ಮ ಆರ್ಥಿಕತೆಯನ್ನು ಸಂಪರ್ಕಿಸುತ್ತದೆ ಎಂದು ಹೇಳಿದರು. ಈ ಸೇವೆಯು ದೇಶದ ತೆರಿಗೆ ಆಡಳಿತದಲ್ಲಿ ಏಕರೂಪತೆಯನ್ನು ಉತ್ತೇಜಿಸುತ್ತದೆ. ಐ ಆರ್ ಎಸ್ ಅಧಿಕಾರಿಗಳು ಭಾರತ ಸರ್ಕಾರ, ವ್ಯವಹಾರ ಮತ್ತು ವಿವಿಧ ರಾಜ್ಯಗಳ ತೆರಿಗೆ ಆಡಳಿತಗಳ ನಡುವಿನ ಪ್ರಮುಖ ಕೊಂಡಿಯಾಗಿದ್ದಾರೆ. ವಿಶ್ವದಾದ್ಯಂತ ಬದಲಾಗುತ್ತಿರುವ ಸಾಮಾಜಿಕ-ಆರ್ಥಿಕ ಸನ್ನಿವೇಶದಲ್ಲಿ, ರಾಷ್ಟ್ರೀಯ ಹಿತಾಸಕ್ತಿಯ ಕಾರ್ಯಸೂಚಿಯನ್ನು ಹೆಚ್ಚಾಗಿ ಅಂತಾರಾಷ್ಟ್ರೀಯ ಆರ್ಥಿಕ ಸಹಕಾರದಿಂದ ನಿರ್ಧರಿಸಲಾಗುತ್ತದೆ ಎಂದು ರಾಷ್ಟ್ರಪತಿ ಹೇಳಿದರು. ಐಆರ್ ಎಸ್ ಅಧಿಕಾರಿಗಳು ದೇಶದ ಆರ್ಥಿಕ ಗಡಿಗಳ ರಕ್ಷಕರು. ಅವರು ಯಾವಾಗಲೂ ಪ್ರಾಮಾಣಿಕತೆ ಮತ್ತು ಸಮರ್ಪಣೆಯಿಂದ ಕೆಲಸ ಮಾಡಬೇಕಾಗುತ್ತದೆ ಎಂದು ಅವರು ಅಧಿಕಾರಿಗಳಿಗೆ ಕಿವಿ ಮಾತು ಹೇಳಿದರು.

ಇತರ ದೇಶಗಳೊಂದಿಗೆ ವ್ಯಾಪಾರ ಸೌಲಭ್ಯ ಒಪ್ಪಂದಗಳಲ್ಲಿ ಅವರ ಪಾತ್ರ ಮುಖ್ಯವಾಗಿರುತ್ತದೆ. ಭಾರತೀಯ ಕಂದಾಯ ಸೇವೆ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆಗಳು) ಆರ್ಥಿಕ ಅಭಿವೃದ್ಧಿ ಮತ್ತು ಮೂಲಸೌಕರ್ಯ ನಿರ್ಮಾಣ, ಸಾಮಾಜಿಕ-ಆರ್ಥಿಕ ಯೋಜನೆಗಳನ್ನು ನಡೆಸುವುದು, ಶಿಕ್ಷಣ ಮತ್ತು ಆರೋಗ್ಯ ಸೇವೆಗಳನ್ನು ಒದಗಿಸುವುದು ಇತ್ಯಾದಿಗಳಿಗೆ ಸಂಪನ್ಮೂಲಗಳನ್ನು ಬಳಸಿಕೊಳ್ಳಲು ದೇಶಕ್ಕೆ ಅನುವು ಮಾಡಿಕೊಡುತ್ತದೆ ಎಂದು ರಾಷ್ಟ್ರಪತಿ ಹೇಳಿದರು. ಇದು ರಾಷ್ಟ್ರ ನಿರ್ಮಾಣದಲ್ಲಿ ಐ ಆರ್ ಎಸ್ ಅಧಿಕಾರಿಗಳ ಪ್ರಮುಖ ಪಾತ್ರವನ್ನು ಒತ್ತಿಹೇಳುತ್ತದೆ. ಆಡಳಿತಗಾರರಾಗಿ ತಮ್ಮ ಪಾತ್ರವನ್ನು ಪೂರೈಸಲು, ಅವರು ಪಾರದರ್ಶಕವಾದ ವ್ಯವಸ್ಥೆಗಳು ಮತ್ತು ಪ್ರಕ್ರಿಯೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ ಮತ್ತು ಉತ್ತರದಾಯಿತ್ವವನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ಹೇಳಿದರು.

ಈ ಹೊಸ ಮತ್ತು ಕ್ರಿಯಾತ್ಮಕ ಯುಗದಲ್ಲಿ, ತೆರಿಗೆ ಸಂಗ್ರಹದಲ್ಲಿ ತಂತ್ರಜ್ಞಾನವನ್ನು ಕಡಿಮೆ ಒಳನುಗ್ಗುವ ಮತ್ತು ಹೆಚ್ಚು ಬಳಸುವ ಪ್ರಯತ್ನಗಳನ್ನು ಮಾಡಬೇಕು ಎಂದು ರಾಷ್ಟ್ರಪತಿ ಹೇಳಿದರು. ತೆರಿಗೆ ಆಡಳಿತ ಕ್ಷೇತ್ರದಲ್ಲಿ ಹೊಸ ಆಲೋಚನೆಗಳು ಮತ್ತು ಹೊಸ ಪರಿಹಾರಗಳನ್ನು ತರುವ ಜವಾಬ್ದಾರಿ ಯುವ ಅಧಿಕಾರಿಗಳ ಮೇಲಿದೆ.

ತೆರಿಗೆ ವಿಧಿಸುವುದು ಕೇವಲ ದೇಶದ ಆದಾಯವನ್ನು ಹೆಚ್ಚಿಸುವ ಸಾಧನವಲ್ಲ ಎಂಬುದನ್ನು ನೆನಪಿನಲ್ಲಿಡುವಂತೆ ರಾಷ್ಟ್ರಪತಿ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು. ಇದು ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅಭಿವೃದ್ಧಿಗೆ ಸಹ ಮುಖ್ಯವಾಗಿದೆ. ದೇಶದ ನಾಗರಿಕರು ಪಾವತಿಸುವ ತೆರಿಗೆಯನ್ನು ದೇಶ ಮತ್ತು ಜನರ ಅಭಿವೃದ್ಧಿಗೆ ಬಳಸಲಾಗುತ್ತದೆ. ಆದ್ದರಿಂದ, ಅವರು ತಮ್ಮ ಕೆಲಸವನ್ನು ಸಮರ್ಪಣೆ ಮತ್ತು ಭಕ್ತಿಯಿಂದ ಮಾಡಿದರೆ, ಅವರು ದೇಶದ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಲು ಸಾಧ್ಯವಾಗುತ್ತದೆ.

मित्रों,
मातृभूमि समाचार का उद्देश्य मीडिया जगत का ऐसा उपकरण बनाना है, जिसके माध्यम से हम व्यवसायिक मीडिया जगत और पत्रकारिता के सिद्धांतों में समन्वय स्थापित कर सकें। इस उद्देश्य की पूर्ति के लिए हमें आपका सहयोग चाहिए है। कृपया इस हेतु हमें दान देकर सहयोग प्रदान करने की कृपा करें। हमें दान करने के लिए निम्न लिंक पर क्लिक करें -- Click Here


* 1 माह के लिए Rs 1000.00 / 1 वर्ष के लिए Rs 10,000.00

Contact us

Check Also

ಮಹತ್ವದ ಪ್ರಾದೇಶಿಕ ಕಾನೂನು ಪರಿಶೀಲನಾ ಸಮಾಲೋಚನೆಗಾಗಿ ಎನ್ ಸಿ ಡಬ್ಲೂ ಜತೆ ಪಾಲುದಾರಿಕೆ ಮಾಡಿಕೊಂಡ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (ಆರ್ ಆರ್ ಯು)

ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯದಡಿ ಬರುವ ರಾಷ್ಟ್ರೀಯ ಪ್ರಾಮುಖ್ಯತಾ ಸಂಸ್ಥೆ, ಗುಜರಾತ್ ನ ಗಾಂಧಿನಗರದ ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯ (ಆರ್ …