गुरुवार, नवंबर 21 2024 | 11:14:23 PM
Breaking News
Home / Choose Language / kannada (page 3)

kannada

kannada

ಲೈಟ್ಸ್, ಕ್ಯಾಮೆರಾ, ಗೋವಾ! ಐ ಎಫ್‌ ಎಫ್‌ ಐ 2024 ಕ್ಕೆ ಧುಮುಕಿ

ವಾರ್ತಾ ಮತ್ತು ಪ್ರಸಾರ ಸಚಿವಾಲಯವು, ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್‌ ಎಫ್‌ ಡಿ ಸಿ) ಮತ್ತು ಎಂಟರ್‌ಟೈನ್‌ಮೆಂಟ್ ಸೊಸೈಟಿ ಆಫ್ ಗೋವಾ (ಇ ಎಸ್‌ ಜಿ) ಸಹಯೋಗದೊಂದಿಗೆ 2024ರ ನವೆಂಬರ್ 20 ರಿಂದ 28 ರವರೆಗೆ ಗೋವಾದಲ್ಲಿ 55ನೇ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು (ಐ ಎಫ್‌ ಎಫ್‌ ಐ) ಆಯೋಜಿಸಲಿದೆ. 55ನೇ ಭಾರತದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸ ಒಂದು ರೋಮಾಂಚಕ ಮತ್ತು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಪ್ರಾರಂಭವಾಗಲಿದ್ದು, ಇದು ಜಾಗತಿಕ ಸಿನಿಮಾದ ಅವಿಸ್ಮರಣೀಯ ಆಚರಣೆಯಾಗಲಿದೆ ಎಂದು ಕಥೆಗಾರರು ಮತ್ತು ಸಿನಿಮಾ …

Read More »

ಮೌಲಾನಾ ಆಜಾದ್ ಅವರ ಜನ್ಮದಿನದಂದು ಪ್ರಧಾನಮಂತ್ರಿ ಅವರಿಗೆ ಗೌರವ ಸಲ್ಲಿಸಿದರು

ಮೌಲಾನಾ ಆಜಾದ್ ಅವರ ಜನ್ಮಜಯಂತಿ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಆಜಾದ್ ಅವರು ಜ್ಞಾನದ ದಾರಿದೀಪವಾಗಿದ್ದು, ಭಾರತದ ಸ್ವಾತಂತ್ರ್ಯ ಚಳವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು ಎಂದು ಶ್ಲಾಘಿಸಿದರು. ಈ ಕುರಿತು ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “ಇಂದು ಮೌಲಾನಾ ಆಜಾದ್ ಅವರ ಜನ್ಮಜಯಂತಿ ಅಂಗವಾಗಿ ನಾವು ಮೌಲಾನಾ ಆಜಾದ್ ಅವರಿಗೆ ಗೌರವ ಸಲ್ಲಿಸುತ್ತೇವೆ. ಅವರು ಜ್ಞಾನದ ದಾರಿದೀಪ ಮತ್ತು ಭಾರತದ ಸ್ವಾತಂತ್ರ್ಯ …

Read More »

ಪ್ರಧಾನಮಂತ್ರಿಯವರು ಆಚಾರ್ಯ ಕೃಪಲಾನಿ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸಿದರು

ಶ್ರೀ ನರೇಂದ್ರ ಮೋದಿ ಅವರು ಆಚಾರ್ಯ ಕೃಪಲಾನಿ ಅವರ ಜನ್ಮಜಯಂತಿ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿದರು. ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅಪ್ರತಿಮ ವ್ಯಕ್ತಿ ಮತ್ತು ಬುದ್ಧಿವಂತಿಕೆ, ಸಮಗ್ರತೆ ಹಾಗೂ ಧೈರ್ಯದ ಮೂರ್ತರೂಪ ಎಂದು ಕೃಪಲಾನಿ ಅವರನ್ನು ನೆನಪಿಸಿಕೊಂಡ ಶ್ರೀ ಮೋದಿ ಅವರು, ಸಮೃದ್ಧ, ಬಲಿಷ್ಠ, ಬಡವರು ಮತ್ತು ನಿರ್ಗತಿಕರು ಸಬಲ ಭಾರತದ ಉದಾತ್ತ ದೃಷ್ಟಿಯನ್ನು ಪೂರೈಸುವ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು. ಈ ಬಗ್ಗೆ ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಪ್ರಧಾನ …

Read More »

ಶ್ರೀ ಸುಂದರ್ ಲಾಲ್ ಪಟ್ವಾ ಅವರ ಜನ್ಮಶತಮಾನೋತ್ಸವದಂದು ಪ್ರಧಾನಮಂತ್ರಿಗಳಿಂದ ಗೌರವ ನಮನ

ಬಿಜೆಪಿಯನ್ನು ಪೋಷಿಸುವಲ್ಲಿ ಮತ್ತು ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದ ಶ್ರೀ ಸುಂದರ್ ಲಾಲ್ ಪಟ್ವಾ ಅವರ ಜನ್ಮಶತಮಾನೋತ್ಸವದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಟ್ವಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ದೇಶ ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆಗಾಗಿ ಶ್ರೀ ಪತ್ವಾ ಅವರು ತಮ್ಮ ಇಡೀ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಶ್ರೀ ಮೋದಿ ಸ್ಮರಿಸಿದ್ದಾರೆ. ಶ್ರೀ ಮೋದಿ ಅವರು ಸಾಮಾಜಿಕ ಮಾಧ್ಯಮ ಎಕ್ಸ್ ನ ತಮ್ಮ ಪೋಸ್ಟ್ ನಲ್ಲಿ ಹೀಗೆ …

Read More »

ಉದ್ಯಮ ಸ್ಥಾಪಿಸಲು ಎಂ ಎಸ್ ಎಂ ಇ ಬಹಳ ಸಹಕಾರಿಯಾಗಿದೆ

ಉದ್ಯಮ ಸ್ಥಾಪಿಸಲು ಎಂ ಎಸ್ ಎಂ ಇ  ಬಹಳ ಸಹಕಾರಿಯಾಗಿದೆ. ಉದ್ಯಮ ಬೆಳೆದರೆ ಭಾರತದ ಆರ್ಥಿಕತೆಯ ಬೆಳೆಯುತ್ತದೆ ಹಾಗೂ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಬ್ಯಾಂಕ್ ಆಫ್ ಬರೋಡ  ಪ್ರಧಾನ ವ್ಯವಸ್ಥಾಪಕ ರಾಜೇಶ್ ಖನ್ನಾ ಹೇಳಿದ್ದಾರೆ. ಅವರು ಇಂದು ರಾಷ್ಟ್ರೀಯ ಎಂಎಸ್ಎಂಇ ಕ್ಲಸ್ಟರ್  ಔಟರೀಚ್  ನೇರ  ಕಾರ್ಯಕ್ರಮ ಹುಬ್ಬಳ್ಳಿಯ  ಉತ್ತರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿದರು. ಅದೇ ರೀತಿ ಮಂಗಳೂರ ಬ್ರಾಂಚ್ ನ ವ್ಯವಸ್ಥಾಪಕರಾದ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸ್ವಚ್ಚತಾ ಕಾರ್ಯವನ್ನು ಸಾಂಸ್ಥಿಕಗೊಳಿಸುವ ಮತ್ತು ಸರ್ಕಾರದಲ್ಲಿನ ಕೆಲಸ ಬಾಕಿ ಉಳಿಸುವುದನ್ನು ಕಡಿಮೆ ಮಾಡುವ ದೃಷ್ಟಿಕೋನದಿಂದ ಸ್ಫೂರ್ತಿ ಪಡೆದು, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯವು ವಿಶೇಷ ಅಭಿಯಾನ 4.0 ಅನ್ನು ಯಶಸ್ವಿಯಾಗಿ ನಡೆಸಿತು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸ್ವಚ್ಛತಾವನ್ನು ಸಾಂಸ್ಥಿಕಗೊಳಿಸುವ ಮತ್ತು ಸರ್ಕಾರದಲ್ಲಿ ಬಾಕಿ ಉಳಿದಿರುವ ಕೆಲಸಗಳನ್ನು ಕಡಿಮೆ ಮಾಡುವ ದೃಷ್ಟಿಕೋನದಿಂದ ಸ್ಫೂರ್ತಿ ಪಡೆದುಕೊಂಡು , ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಮಾರ್ಗದರ್ಶನದಲ್ಲಿ ವಿಶೇಷ ಸ್ವಚ್ಚತಾ ಅಭಿಯಾನ 4.0 ಅನ್ನು ಯಶಸ್ವಿಯಾಗಿ ನಡೆಸಲಾಯಿತು. ಕಳೆದ 2ನೇ ಅಕ್ಟೋಬರ್‌ ನಿಂದ 31ನೇ ಅಕ್ಟೋಬರ್, 2024 ರವರೆಗೆ ಕೇಂದ್ರ ಗೃಹ ಸಚಿವಾಲಯದೊಳಗೆ ಮತ್ತು ಅದರ ಪರಿಧಿಯ/ ಅಂಗಸಂಸ್ಥೆ /ಲಗತ್ತಿಸಲಾದ ಇಲಾಖೆ/ಅಧೀನ …

Read More »

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿಂದು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ಸೇರಿದಂತೆ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆಯ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಬೆಂಗಳೂರಿನಲ್ಲಿಂದು ಕರ್ನಾಟಕ, ಆಂಧ್ರಪ್ರದೇಶ, ಕೇರಳ, ತಮಿಳುನಾಡು ಮತ್ತು ತೆಲಂಗಾಣ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯನ್ನುನ್ನು ಒಳಗೊಂಡಿರುವ ದಕ್ಷಿಣ ವಲಯದ 10 ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳ ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಸಭೆ ನಡೆಸಿದರು. ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಶ್ರೀ ಪಂಕಜ್ ಚೌಧರಿ; ಹಣಕಾಸು ಸೇವೆಗಳ ಇಲಾಖೆ ಕಾರ್ಯದರ್ಶಿ ಶ್ರೀ ಎಂ. ನಾಗರಾಜು; ಇಡಿ, ಆರ್‌ ಬಿ …

Read More »

ದೇವಭೂಮಿ ಉತ್ತರಾಖಂಡದ ರಜತ ಮಹೋತ್ಸವ ಸಂದರ್ಭದಲ್ಲಿ ಉತ್ತರಾಖಂಡದ ಜನತೆಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದನೆ

ಉತ್ತರಾಖಂಡದ ಸಂಸ್ಥಾಪನಾ ದಿನದಂದು ಅಲ್ಲಿನ ಎಲ್ಲ ಜನತೆಗೆ ಶುಭ ಕೋರಿರುವ  ಪ್ರಧಾನಮಂತ್ರಿಯವರು, ಇಂದಿನಿಂದ ಉತ್ತರಾಖಂಡ ರಾಜ್ಯ ರಚನೆಯ ರಜತ ಮಹೋತ್ಸವ ವರ್ಷ ಆರಂಭವಾಗುತ್ತಿರುವುದನ್ನು ಉಲ್ಲೇಖಿಸಿದರು. ಉತ್ತರಾಖಂಡವು ರಾಜ್ಯ ಸ್ಥಾಪನೆಯ 25ನೇ ವರ್ಷಕ್ಕೆ ಪ್ರವೇಶಿಸಿರುವುದನ್ನು ಉಲ್ಲೇಖಿಸಿದ ಶ್ರೀ ಮೋದಿ, ರಾಜ್ಯದ ಮುಂಬರುವ 25 ವರ್ಷಗಳ ಉಜ್ವಲ ಭವಿಷ್ಯಕ್ಕಾಗಿ ಕೆಲಸ ಮಾಡುವಂತೆ ಜನರನ್ನು ಆಗ್ರಹಿಸಿದರು. ಉತ್ತರಾಖಂಡದ ಮುಂಬರುವ 25 ವರ್ಷಗಳ ಪ್ರಯಾಣವು ಭಾರತದ  ಅಮೃತ್ ಕಾಲ್ ನ 25 ನೇ ವರ್ಷದ ಜೊತೆ ಸರಿಹೊಂದಿಕೆಯಾಗುವಂತಿದೆ. ಇದೊಂದು ಕಾಕತಾಳೀಯ ಎಂದ ಪ್ರಧಾನ ಮಂತ್ರಿ ಅವರು, ಇದು ವಿಕ್ಷಿತ್ ಭಾರತ್ ಗಾಗಿ ವಿಕ್ಷಿತ್ (ಅಭಿವೃದ್ಧಿ ಹೊಂದಿದ) ಉತ್ತರಾಖಂಡವನ್ನು ಸಂಕೇತಿಸುತ್ತದೆ ಎಂದರು. ಈ ಅವಧಿಯಲ್ಲಿ ವಿಕ್ಷಿತ್ ಭಾರತದ ಸಂಕಲ್ಪ ಈಡೇರುವುದಕ್ಕೆ ದೇಶ ಸಾಕ್ಷಿಯಾಗಲಿದೆ ಎಂದು ಶ್ರೀ ಮೋದಿ ಹೇಳಿದರು. ಮುಂಬರುವ 25 ವರ್ಷಗಳಲ್ಲಿ ಸಂಕಲ್ಪಗಳ ಜೊತೆಗೆ ಜನರು ಅನೇಕ ಕಾರ್ಯಕ್ರಮಗಳನ್ನು ಕೈಗೊಂಡಿದ್ದಾರೆ ಎಂದು ಪ್ರಧಾನಿ ಸಂತಸ ವ್ಯಕ್ತಪಡಿಸಿದರು. ಈ ಕಾರ್ಯಕ್ರಮಗಳ ಮೂಲಕ ಉತ್ತರಾಖಂಡದ ಹೆಮ್ಮೆಯನ್ನು ಹರಡಲಾಗುವುದು ಮತ್ತು ಅಭಿವೃದ್ಧಿ ಹೊಂದಿದ ಉತ್ತರಾಖಂಡದ ಗುರಿ ರಾಜ್ಯದ ಪ್ರತಿಯೊಬ್ಬ ನಿವಾಸಿಯನ್ನು ತಲುಪಲಿದೆ ಎಂದು ಅವರು ಹೇಳಿದರು. ಈ ಮಹತ್ವದ ಸಂದರ್ಭದಲ್ಲಿ ಮತ್ತು ಈ ಮಹತ್ವದ ನಿರ್ಣಯವನ್ನು ಅಂಗೀಕರಿಸಿದ್ದಕ್ಕಾಗಿ ಶ್ರೀ ಮೋದಿ ಅವರು ರಾಜ್ಯದ ಎಲ್ಲ ನಿವಾಸಿಗಳನ್ನು ಅಭಿನಂದಿಸಿದರು. ಇತ್ತೀಚೆಗೆ ಯಶಸ್ವಿಯಾಗಿ ಆಯೋಜಿಸಲಾದ ‘ಪ್ರವಾಸಿ ಉತ್ತರಾಖಂಡ ಸಮ್ಮೇಳನ’ದ ಬಗ್ಗೆಯೂ ಅವರು ಗಮನಸೆಳೆದರು ಮತ್ತು ಉತ್ತರಾಖಂಡದ ಅಭಿವೃದ್ಧಿಯಲ್ಲಿ ಸಾಗರೋತ್ತರ ಉತ್ತರಾಖಂಡದ ಜನರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ಭರವಸೆಯನ್ನು ವ್ಯಕ್ತಪಡಿಸಿದರು. ಪ್ರತ್ಯೇಕ ರಾಜ್ಯ ರಚನೆಗಾಗಿ ಉತ್ತರಾಖಂಡದ ಜನತೆಯ ಪ್ರಯತ್ನಗಳನ್ನು ಪ್ರಸ್ತಾಪಿಸಿದ ಪ್ರಧಾನಿಯವರು ಅಟಲ್ ಜೀ ಅವರ ನಾಯಕತ್ವ ಇದ್ದಾಗ ಅವು ಫಲ ನೀಡಿದವು ಎಂದರು.  ಇಂದು ಕನಸುಗಳು ಮತ್ತು ಆಕಾಂಕ್ಷೆಗಳು ನನಸಾಗುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಪ್ರಸ್ತುತ ಸರ್ಕಾರವು ಉತ್ತರಾಖಂಡದ ಅಭಿವೃದ್ಧಿಗೆ ಇರುವ ಯಾವುದೇ ಅವಕಾಶವನ್ನೂ  ಬಿಟ್ಟು ಬಿಡದೆ ಬಳಸಿಕೊಳ್ಳುತ್ತಿದೆ ಎಂದು ಅವರು ಒತ್ತಿಹೇಳಿದರು. ಪ್ರಸ್ತುತ ದಶಕ ಉತ್ತರಾಖಂಡಕ್ಕೆ ಸೇರಿದೆ ಮತ್ತು ಕಳೆದ ವರ್ಷಗಳಲ್ಲಿ ಈ ಕುರಿತಾದ ತಮ್ಮ  ನಂಬಿಕೆ ಸಾಬೀತಾಗಿದೆ ಎಂಬುದನ್ನು ಪ್ರಧಾನಿ ಪುನರುಚ್ಚರಿಸಿದರು. ಉತ್ತರಾಖಂಡವು ಅಭಿವೃದ್ಧಿಯ ಹೊಸ ದಾಖಲೆಗಳನ್ನು ಸೃಷ್ಟಿಸುತ್ತಿದೆ ಮತ್ತು ಹೊಸ ಮೈಲಿಗಲ್ಲುಗಳನ್ನು ಸಾಧಿಸುತ್ತಿದೆ ಎಂದು ಒತ್ತಿ ಹೇಳಿದ ಪ್ರಧಾನಮಂತ್ರಿಯವರು, …

Read More »

ಭಾರತವು ವಿವಿಧ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರೆಯನ್ನು ಹೊಂದಿದೆ-ನಿರ್ಮಲಾ ಸೀತಾರಾಮನ್

ಭಾರತದಲ್ಲಿನ ಪ್ರತಿಯೊಂದು ರಾಜ್ಯವು ತನ್ನದೇ ಆದ ವಿಭಿನ್ನ ಸಂಸ್ಕೃತಿ, ಭಾಷೆ ಹಾಗೂ ಸಂಗೀತದ ಪರಂಪರೆಯನ್ನು ಹೊಂದಿದ್ದು, ಪ್ರತಿಯೊಂದು ದೇಶದ ಇತಿಹಾಸದಲ್ಲಿ ಪ್ರಮುಖ ಪಾತ್ರ ವಹಿಸಿವೆ ಹಾಗೂ ಸಂಗೀತ ಕ್ಷೇತ್ರಕ್ಕೆ ಮೈಸೂರಿನ ಕೊಡುಗೆ ಅಪಾರ ಎಂದು ಕೇಂದ್ರ ಹಣಕಾಸು ಮತ್ತು ಕಾರ್ಪೋರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಹೇಳಿದರು. ಇಂದು ಪ್ರವಾಸೋದ್ಯಮ ಸಚಿವಾಲಯದ ವತಿಯಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಘಟಿಕೋತ್ಸವ ಸಭಾಂಗಣದಲ್ಲಿ “ಮೈಸೂರು ಸಂಗೀತ ಸುಗಂಧ ಉತ್ಸವ” …

Read More »

ಡಿಜಿಟಲ್ ಜೀವನ ಪ್ರಮಾಣಪತ್ರ ಅಭಿಯಾನವನ್ನು ಬೆಂಗಳೂರಿನಲ್ಲಿ ಕೇಂದ್ರ ಪಿಂಚಣಿ ಇಲಾಖೆ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖಾ ಕಾರ್ಯದರ್ಶಿ, ಶ್ರೀ ವಿ. ಶ್ರೀನಿವಾಸ್ ಅವರು ಪರಿಶೀಲಿಸಿದರು

ಪಿಂಚಣಿದಾರರ ಡಿಜಿಟಲ್ ಸಬಲೀಕರಣಕ್ಕಾಗಿ ಕೇಂದ್ರ ಪಿಂಚಣಿ ಇಲಾಖೆ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ರಾಷ್ಟ್ರವ್ಯಾಪಿ ಡಿಜಿಟಲ್ ಜೀವನ ಪ್ರಮಾಣಪತ್ರ ಅಭಿಯಾನ 3.0 ಅನ್ನು ಪ್ರಾರಂಭಿಸಿತು. ಪಿಂಚಣಿದಾರರ ಸಬಲೀಕರಣಕ್ಕಾಗಿ ಡಿಜಿಟಲ್ ಜೀವನ ಪ್ರಮಾಣಪತ್ರವು ಪ್ರಧಾನ ಮಂತ್ರಿಯವರು ಹೊಂದಿರುವ ದೃಷ್ಟಿಕೋನವಾಗಿದೆ. ನವೆಂಬರ್ 1-30, 2024 ರಿಂದ ಭಾರತದ 800 ನಗರಗಳು/ ಪಟ್ಟಣಗಳಲ್ಲಿ ಡಿಜಿಟಲ್ ಜೀವನ ಪ್ರಮಾಣಪತ್ರ ಅಭಿಯಾನ  3.0 ನಡೆಯಲಿದೆ ಇದರಲ್ಲಿ ಕೇಂದ್ರ/ರಾಜ್ಯ ಸರ್ಕಾರಗಳು/ಇಪಿಎಫ್ಒ/ಸ್ವಾಯತ್ತ ಸಂಸ್ಥೆಗಳ ಎಲ್ಲಾ ಪಿಂಚಣಿದಾರರು ತಮ್ಮ ಡಿಜಿಟಲ್ ಜೀವನ ಪ್ರಮಾಣಪತ್ರ …

Read More »