ಇಂದು ವೀರ ಮಹಿಳೆ ಕಿತ್ತೂರು ರಾಣಿ ಚೆನ್ಮಮ್ಮನವರ 246ನೇ ಜನ್ಮದಿನೋತ್ಸವ ಮತ್ತು ಬ್ರಿಟಿಷರ ವಿರುದ್ದ ಜಯಗಳಿಸಿದ 200 ವರ್ಷದ ವಿಜಯೋತ್ಸವವನ್ನು ನವದೆಹಲಿಯ ಸಂಸತ್ ಭವನದ ಅವರಣದಲ್ಲಿನ ಪ್ರೇರಣಾ ಸ್ಥಳದಲ್ಲಿ ಅತ್ಯಂತ ಯಶಸ್ವಿಯಾಗಿ ಆಚರಿಸಲಾಯಿತೆಂದು ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವರಾದ ಶ್ರೀ ವಿ. ಸೋಮಣ್ಣ ಅತ್ಯಂತ ಸಂತಸದಿಂದ ಹಂಚಿಕೊಂಡಿದ್ದಾರೆ. ನವದೆಹಲಿಯ ಸಂಸತ್ ಆವರಣದಲ್ಲಿನ ಪ್ರೇರಣಾ ಸ್ಥಳದಲ್ಲಿ ಕಿತ್ತೂರು ರಾಣಿ ಚೆನ್ನಮ್ಮನವರ ಪುತ್ಥಳಿಗೆ ಇಂದು ಬೆಳಿಗ್ಗೆ ಲೋಕಸಭಾ ಸಭಾಪತಿಗಳಾದ ಶ್ರೀ ಓಂ …
Read More »ರಷ್ಯಾದಲ್ಲಿ ನಡೆಯುವ ಬ್ರಿಕ್ಸ್ ಶೃಂಗಸಭೆಗೆ ಹೊರಡುವ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆ
ರಷ್ಯಾ ಒಕ್ಕೂಟದ ಅಧ್ಯಕ್ಷ ಘನತೆವೆತ್ತ ಶ್ರೀ ವ್ಲಾಡಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ 16ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ನಾನು ಇಂದು ಕಜಾನ್ ಗೆ ಎರಡು ದಿನಗಳ ಭೇಟಿಗಾಗಿ ಹೊರಡುತ್ತಿದ್ದೇನೆ. ಜಾಗತಿಕ ಅಭಿವೃದ್ಧಿ ಕಾರ್ಯಸೂಚಿ, ಸುಧಾರಿತ ಬಹುಪಕ್ಷೀಯತೆ, ಹವಾಮಾನ ಬದಲಾವಣೆ, ಆರ್ಥಿಕ ಸಹಕಾರ, ಸ್ಥಿತಿಸ್ಥಾಪಕ ಪೂರೈಕೆ ಸರಪಳಿಗಳನ್ನು ನಿರ್ಮಿಸುವುದು, ಸಾಂಸ್ಕೃತಿಕ ಮತ್ತು ಜನರ ನಡುವಿನ ಸಂಪರ್ಕವನ್ನು ಉತ್ತೇಜಿಸುವುದು ಮುಂತಾದ ವಿಷಯಗಳ ಬಗ್ಗೆ ಸಂವಾದ ಮತ್ತು ಚರ್ಚೆಗೆ ಪ್ರಮುಖ ವೇದಿಕೆಯಾಗಿ ಹೊರಹೊಮ್ಮಿರುವ …
Read More »ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದ ಪೊಲೀಸ್ ಸಿಬ್ಬಂದಿಗೆ ಗೌರವ ನಮನ
ಪೊಲೀಸ್ ಸಂಸ್ಮರಣಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಧೀರ ಪೊಲೀಸ್ ಸಿಬ್ಬಂದಿಗೆ ಗೌರವ ನಮನ ಸಲ್ಲಿಸಿದರು. ಪ್ರಧಾನಮಂತ್ರಿಗಳು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ: “ಇಂದು, ಪೊಲೀಸ್ ಸಂಸ್ಮರಣಾ ದಿನದಂದು, ನಾವು ನಮ್ಮ ಪೊಲೀಸ್ ಸಿಬ್ಬಂದಿಯ ಶೌರ್ಯ ಮತ್ತು ತ್ಯಾಗವನ್ನು ಗೌರವಿಸುತ್ತೇವೆ. ಅವರ ಅಚಲವಾದ ಸಮರ್ಪಣೆ ನಮ್ಮ ಜನರ ಸುರಕ್ಷತೆಯನ್ನು ಖಾತರಿಪಡಿಸುತ್ತದೆ. ಅವರ ಧೈರ್ಯ ಮತ್ತು ದೃಢತೆ ಉದಾಹರಣೀಯ. ಮಾನವೀಯತೆಯ ಸವಾಲುಗಳ ಸಮಯದಲ್ಲಿ ಅವರ …
Read More »ರಾಜ್ಯಪಾಲರನ್ನು ಭೇಟಿ ಮಾಡಿದ ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್
ಮೂರು ದಿನಗಳ ಅಧಿಕೃತ ರಾಜ್ಯ ಪ್ರವಾಸದಲ್ಲಿರುವ ಮಾನ್ಯ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್ ಅವರು ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. “ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಇಂದು ಭೇಟಿ ಮಾಡುವ ಅವಕಾಶ ದೊರೆಯಿತು. ಈ ವೇಳೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದು ಸಂತೋಷ ತಂದಿದೆ” ಎಂದು ಮಾನ್ಯ ಸಚಿವರು ತಮ್ಮ ಎಕ್ಸ್ ಖಾತೆಯಲ್ಲಿ ತಿಳಿಸಿದ್ದಾರೆ. ರಾಜ್ಯಪಾಲರ ಭೇಟಿಯ ನಂತರ ಮಾನ್ಯ ಸಚಿವರು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಿವಿಧ ಮಾಧ್ಯಮ ಘಟಕಗಳ ಮುಖ್ಯಸ್ಥರ ಜೊತೆ ಪರಿಶೀಲನಾ ಸಭೆ ನಡೆಸಿದರು. ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕರಾದ ಶ್ರೀ ಎಸ್. ಜಿ. ರವೀಂದ್ರ ಅವರು ಸೇರಿದಂತೆ ಕೇಂದ್ರ ಸಂವಹನ ಇಲಾಖೆ, ಆಕಾಶವಾಣಿ, ದೂರದರ್ಶನ ಹಾಗೂ ಇತರೆ ಮಾಧ್ಯಮ ಘಟಕಗಳ ಅಧಿಕಾರಿಗಳು ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.
Read More »