Thursday, December 11 2025 | 08:20:50 PM
Breaking News

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್.) ಪ್ರಧಾನ ಕಚೇರಿಗೆ ಭೇಟಿ ನೀಡಿದರು

Connect us on:

ಕೇಂದ್ರ ಗೃಹ ಸಚಿವರು ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿರುವ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿ.ಆರ್..ಪಿ.ಎಫ್) ಪ್ರಧಾನ ಕಛೇರಿಗೆ ಭೇಟಿ ನೀಡಿದರು. ಗೃಹ ಸಚಿವರು ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಿದರು ಮತ್ತು ಸಿಆರ್‌ಪಿಎಫ್‌ನ ಕಾರ್ಯಾಚರಣೆಗಳು ಮತ್ತು ಆಡಳಿತಾತ್ಮಕ ದಕ್ಷತೆಯ ಸಮಗ್ರ ಪರಿಶೀಲನೆ ನಡೆಸಿದರು. ಕೇಂದ್ರ ಗೃಹ ಕಾರ್ಯದರ್ಶಿ ಸೇರಿದಂತೆ ಗೃಹ ಸಚಿವಾಲಯದ  ಹಲವಾರು ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

ಸಭೆಯಲ್ಲಿ, ಸಿಆರ್‌ಪಿಎಫ್‌ನ ಮಹಾನಿರ್ದೇಶಕ ಶ್ರೀ ಅನೀಶ್ ದಯಾಳ್ ಸಿಂಗ್ ಅವರು ಸಿಆರ್‌ಪಿಎಫ್‌ನಲ್ಲಿ ಸಹಾನುಭೂತಿಯ ನೇಮಕಾತಿ ಸೇರಿದಂತೆ ಹುತಾತ್ಮ ಯೋಧರ ಕುಟುಂಬಗಳಿಗೆ ಜಾರಿಗೊಳಿಸಲಾಗುತ್ತಿರುವ ವಿವಿಧ ಕಲ್ಯಾಣ ಯೋಜನೆಗಳ ಬಗ್ಗೆ ಗೃಹ ಸಚಿವರಿಗೆ ತಿಳಿಸಿದರು.

“ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ದೇಶದ ಆಂತರಿಕ ಭದ್ರತೆ ಮತ್ತು ಶಾಂತಿಯನ್ನು ಖಾತ್ರಿಪಡಿಸುವಲ್ಲಿ ಸಿ.ಆರ್.ಪಿ.ಎಫ್ ಪ್ರಮುಖ ಪಾತ್ರ ವಹಿಸುತ್ತಿದೆ” ಎಂದು ಕೇಂದ್ರ ಗೃಹ ಸಚಿವರು ಹೇಳಿದರು. “ನಕ್ಸಲಿಸಂ ಅನ್ನು ಎದುರಿಸುವಲ್ಲಿ ಮತ್ತು ಈಶಾನ್ಯ ರಾಜ್ಯಗಳು ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿ ಮತ್ತು ಸ್ಥಿರತೆಯನ್ನು ಮರುಸ್ಥಾಪಿಸುವಲ್ಲಿ ಸಿಆರ್‌ಪಿಎಫ್ ಶ್ಲಾಘನೀಯ ಕೆಲಸ ಮಾಡಿದೆ” ಎಂದು ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರು ಹೇಳಿದರು.

ಶ್ರೀ ಅಮಿತ್ ಶಾ ಅವರು ಭಾಷಾ ಏಕತೆಯನ್ನು ಬಲಪಡಿಸುವ ಪಡೆಯ ದೈನಂದಿನ ಕಾರ್ಯಚಟುವಟಿಕೆಯಲ್ಲಿ ಹಿಂದಿಯನ್ನು ಉತ್ತೇಜಿಸುವ ಪ್ರಾಮುಖ್ಯತೆ ಹಾಗೂ ಸೈನಿಕರ ಉತ್ತಮ ಆರೋಗ್ಯಕ್ಕಾಗಿ ಹೆಚ್ಚು ಹೆಚ್ಚು ‘ಶ್ರೀ ಆನ್ನ’ (ಸಿರಿಧಾನ್ಯ) ಬಳಕೆಯ ಪ್ರಾಧಾನ್ಯತೆಗಳಿಗೆ ಒತ್ತು ನೀಡಿದ ಕೇಂದ್ರ ಗೃಹ ಸಚಿವರು, “ವ್ಯಕ್ತಿಯ ಪ್ರಕೃತಿಯ ಪ್ರಕಾರ, ಯೋಗಕ್ಷೇಮ ಮತ್ತು ಉತ್ತಮ ಆರೋಗ್ಯವನ್ನು ಆಯುರ್ವೇದ ಉತ್ತೇಜಿಸುತ್ತದೆ.
ಆಯುರ್ವೇದದ ಪ್ರಯೋಜನಗಳನ್ನು ಪಡೆದುಕೊಳ್ಳಲು ಮತ್ತು ಆರೋಗ್ಯ ಪರಿಶೀಲನಾ ಒಳನೋಟಗಳನ್ನು ಪಡೆಯಲು ‘ಪ್ರಕೃತಿ ಪರೀಕ್ಷಾ ಅಭಿಯಾನ’ದಲ್ಲಿ ಸೈನಿಕರು ಭಾಗವಹಿಸಬೇಕು” ಎಂದು ಕರೆ ನೀಡಿದರು.

ಕೇಂದ್ರ ಗೃಹ ಸಚಿವರ ಭೇಟಿಯು ರಾಷ್ಟ್ರೀಯ ಭದ್ರತೆಗೆ ಸಿಆರ್‌ಪಿಎಫ್‌ನ ಬದ್ಧತೆಯನ್ನು ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅದರ ಬಹುಮುಖಿ ಕೊಡುಗೆಗಳನ್ನು ಕೇಂದ್ರ ಸರ್ಕಾರ ಗುರುತಿಸಿರುವುದನ್ನು ಸೂಚಿಸುತ್ತದೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

 

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ ಅಂಗವಾಗಿ ರಾಜ್ಯಸಭೆಯಲ್ಲಿ ವಿಶೇಷ ಚರ್ಚೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ‘ವಂದೇ ಮಾತರಂ’ ರಾಷ್ಟ್ರೀಯ ಗೀತೆಯ 150ನೇ ವಾರ್ಷಿಕೋತ್ಸವದ …