Friday, December 05 2025 | 05:08:20 PM
Breaking News

ನಕಲಿ ಸುದ್ದಿಗಳು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ ಎಂದು ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಹೇಳಿದ್ದಾರೆ

Connect us on:

ಸಾಮಾಜಿಕ ಮಾಧ್ಯಮ ಮತ್ತು ನಕಲಿ ಸುದ್ದಿಗಳಿಗೆ ಸಂಬಂಧಿಸಿದಂತೆ ಎತ್ತಲಾಗಿರುವ ವಿಷಯವು ತುಂಬಾ ಗಂಭೀರವಾದುದು ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಲೋಕಸಭೆಗೆ ತಿಳಿಸಿದರು. ನಕಲಿ ಸುದ್ದಿಗಳು ಭಾರತದ ಪ್ರಜಾಪ್ರಭುತ್ವಕ್ಕೆ ಅಪಾಯವನ್ನುಂಟುಮಾಡುತ್ತವೆ ಎಂದು ಅವರು ಹೇಳಿದರು ಮತ್ತು ಸಾಮಾಜಿಕ ಮಾಧ್ಯಮ ವೇದಿಕೆಗಳು, ತಪ್ಪು ಮಾಹಿತಿ ಮತ್ತು ಕೃತಕ ಬುದ್ಧಿಮತ್ತೆ ಆಧಾರಿತ ಡೀಪ್‌ಫೇಕ್‌ ಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವನ್ನು ಒತ್ತಿ ಹೇಳಿದರು. ಸಾಮಾಜಿಕ ಮಾಧ್ಯಮವನ್ನು ಬಳಸುತ್ತಿರುವ ವಿಧಾನವು ಭಾರತದ ಸಂವಿಧಾನ ಅಥವಾ ಸಂಸತ್ತು ಮಾಡಿದ ಕಾನೂನುಗಳನ್ನು ಪಾಲಿಸಲು ಬಯಸದ ಪರಿಸರ ವ್ಯವಸ್ಥೆಗಳನ್ನು ಸೃಷ್ಟಿಸಿದೆ ಎಂದು ಅವರು ಹೇಳಿದರು. ಕಠಿಣ ಕ್ರಮ ಮತ್ತು ಬಲವಾದ ನಿಯಮಗಳ ತುರ್ತು ಅಗತ್ಯವನ್ನು ಅವರು ಒತ್ತಿ ಹೇಳಿದರು.

ಸಂಸತ್ತಿನಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶ್ರೀ ವೈಷ್ಣವ್, ಇತ್ತೀಚೆಗೆ ಹೊಸ ನಿಯಮಗಳನ್ನು ಪರಿಚಯಿಸಲಾಗಿದೆ, ಇದರಲ್ಲಿ ನಕಲಿ ಸುದ್ದಿಗಳನ್ನು 36 ಗಂಟೆಗಳ ಒಳಗೆ ತೆಗೆದುಹಾಕುವ ನಿಬಂಧನೆಯೂ ಸೇರಿದೆ ಎಂದು ಹೇಳಿದರು. ಕೃತಕ ಬುದ್ಧಿಮತ್ತೆಯಿಂದ ಸೃಷ್ಟಿಮಾಡಿದ ಡೀಪ್‌ಫೇಕ್‌ಗಳನ್ನು ಗುರುತಿಸಲು ಮತ್ತು ಅವುಗಳ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳಲು ಕರಡು ನಿಯಮವನ್ನು ಸಹ ಪ್ರಕಟಿಸಲಾಗಿದೆ ಮತ್ತು ಈ ಕುರಿತು ಪ್ರಸ್ತುತ ಸಮಾಲೋಚನೆಗಳು ನಡೆಯುತ್ತಿವೆ ಎಂದು ಅವರು ಹೇಳಿದರು. ಈ ಕುರಿತ ಸಂಸದೀಯ ಸಮಿತಿಯ ಕೆಲಸವನ್ನು ಶ್ಲಾಘಿಸಿದ ಸಚಿವರು, ಕಾನೂನು ಚೌಕಟ್ಟನ್ನು ಬಲಪಡಿಸಲು ಪ್ರಮುಖ ಶಿಫಾರಸುಗಳೊಂದಿಗೆ ವಿವರವಾದ ವರದಿಯನ್ನು ಸಲ್ಲಿಸಿದ್ದಕ್ಕಾಗಿ ಶ್ರೀ ನಿಶಿಕಾಂತ್ ದುಬೆ ಮತ್ತು ಎಲ್ಲಾ ಸದಸ್ಯರಿಗೆ ಧನ್ಯವಾದಗಳನ್ನು ತಿಳಿಸಿದರು.

ನಕಲಿ ಸುದ್ದಿ ಮತ್ತು ಸಾಮಾಜಿಕ ಮಾಧ್ಯಮಗಳಿಗೆ ಸಂಬಂಧಿಸಿದ ವಿಷಯಗಳು ವಾಕ್ ಸ್ವಾತಂತ್ರ್ಯ ಮತ್ತು ನಮ್ಮ ಪ್ರಜಾಪ್ರಭುತ್ವದ ರಕ್ಷಣೆಯ ನಡುವಿನ ಸೂಕ್ಷ್ಮ ಸಮತೋಲನವನ್ನು ಒಳಗೊಂಡಿವೆ ಮತ್ತು ಸರ್ಕಾರವು ಈ ಸಮತೋಲನ ಕಾಪಾಡಲು ಅತ್ಯಂತ ಸೂಕ್ಷ್ಮತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ಹೇಳಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಡಿಜಿಟಲ್ ಇಂಡಿಯಾ ಉಪಕ್ರಮವು ಪ್ರಮುಖ ಪರಿವರ್ತನೆಯನ್ನು ತಂದಿದೆ ಮತ್ತು ತಂತ್ರಜ್ಞಾನವನ್ನು ಪ್ರಜಾಪ್ರಭುತ್ವಗೊಳಿಸಿದೆ, ಇದರ ಸಕಾರಾತ್ಮಕ ಪರಿಣಾಮಗಳನ್ನು ಒಪ್ಪಿಕೊಳ್ಳಬೇಕು ಎಂದು ಅವರು ಒತ್ತಿ ಹೇಳಿದರು. ಸಾಮಾಜಿಕ ಮಾಧ್ಯಮವು ಪ್ರತಿಯೊಬ್ಬ ನಾಗರಿಕನಿಗೂ ಒಂದು ವೇದಿಕೆಯನ್ನು ಒದಗಿಸಿದೆ ಎಂದು ಅವರು ಹೇಳಿದರು. ಈ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡು, ಸರ್ಕಾರವು ಸಮಾಜದ ಅಡಿಪಾಯವನ್ನು ರೂಪಿಸುವ ಸಂಸ್ಥೆಗಳು ಮತ್ತು ನಂಬಿಕೆಯನ್ನು ಬಲಪಡಿಸಲು ಕೆಲಸ ಮಾಡುತ್ತಿದೆ ಎಂದು ಅವರು ಹೇಳಿದರು.

About Matribhumi Samachar

Check Also

ನವೆಂಬರ್ ನಲ್ಲಿ 231 ಕೋಟಿ ಆಧಾರ್ ದೃಢೀಕರಣ ವಹಿವಾಟುಗಳನ್ನು ದಾಖಲಿಸಿದ UIDAI, ನವೆಂಬರ್ 2024ಕ್ಕೆ ಹೋಲಿಸಿದರೆ ಶೇ. 8.47 ರಷ್ಟು ಬೆಳವಣಿಗೆ

ನವೆಂಬರ್ 2025ರಲ್ಲಿ ಆಧಾರ್ ಬಳಕೆದಾರರು ಬರೋಬ್ಬರಿ 231 ಕೋಟಿ ದೃಢೀಕರಣ ವಹಿವಾಟುಗಳನ್ನು ನಡೆಸಿದ್ದಾರೆ. ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ …