Friday, August 07 2026 | 04:08:14 AM
Breaking News

ಪ್ರಧಾನಮಂತ್ರಿ ಅವರ ಭೇಟಿಗೆ ಮುಂಚಿತವಾಗಿ ಚೆನಾಬ್‌ ಸೇತುವೆಯಲ್ಲಿನ ವ್ಯವಸ್ಥೆಗಳನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿ ಪರಿಶೀಲಿಸಿದರು

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪರ್ಕವನ್ನು ಹೆಚ್ಚಿಸಲು 46,000 ಕೋಟಿ ರೂ.ಗಳ ದೂರದೃಷ್ಟಿ ಮತ್ತು ಪ್ರಮುಖ ಯೋಜನೆಗಳನ್ನು ರೂಪಿಸಿದ್ದಾರೆ, ಇದು ಈ ಪ್ರದೇಶದ ಸಂಪರ್ಕದಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದೆ.

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಅಪ್ರತಿಮ ಚೆನಾಬ್‌ ಸೇತುವೆಯ ವ್ಯವಸ್ಥೆಗಳನ್ನು ಪರಿಶೀಲಿಸಿದರು.

ಚೆನಾಬ್‌ ರೈಲು ಸೇತುವೆ ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಸುಧಾರಿಸಲಿದೆ ಎಂದು ಶ್ರೀ ನರೇಂದ್ರ ಮೋದಿ ಉಲ್ಲೇಖಿಸಿದರು. ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿ ಆರ್‌ಎಲ್‌) ಯೋಜನೆಯು ಎಲ್ಲಾ ಹವಾಮಾನ ಸಂಪರ್ಕವನ್ನು ಖಚಿತಪಡಿಸುತ್ತದೆ ಮತ್ತು ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ಮತ್ತು ಶ್ರೀನಗರ ನಡುವೆ ವಂದೇ ಭಾರತ್‌ ರೈಲುಗಳನ್ನು ಪರಿಚಯಿಸುವುದರಿಂದ ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತದೆ ಮತ್ತು ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಅವರು ಒತ್ತಿ ಹೇಳಿದ್ದಾರೆ.

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿಯ ಎಕ್ಸ್‌ ಖಾತೆಯ ಸರಣಿ ಪೋಸ್ಟ್‌ಗಳಿಗೆ ಪ್ರತಿಕ್ರಿಯಿಸಿದ ಪ್ರಧಾನಮಂತ್ರಿ ಅವರು;

ನಾಳೆ, ಜೂನ್‌ 6 ನಿಜವಾಗಿಯೂ ಜಮ್ಮು ಮತ್ತು ಕಾಶ್ಮೀರದ ನನ್ನ ಸಹೋದರ ಸಹೋದರಿಯರಿಗೆ ವಿಶೇಷ ದಿನ. 46,000 ಕೋಟಿ ರೂಪಾಯಿ ಮೌಲ್ಯದ ಪ್ರಮುಖ ಮೂಲಸೌಕರ್ಯ ಯೋಜನೆಗಳನ್ನು ಉದ್ಘಾಟಿಸಲಾಗುತ್ತಿದ್ದು, ಇದು ಜನರ ಜೀವನದ ಮೇಲೆ ಬಹಳ ಸಕಾರಾತ್ಮಕ ಪರಿಣಾಮ ಬೀರಲಿದೆ.

ವಾಸ್ತುಶಿಲ್ಪದ ಅಸಾಧಾರಣ ಸಾಧನೆಯ ಜೊತೆಗೆ, ಚೆನಾಬ್‌ ರೈಲು ಸೇತುವೆ ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಸುಧಾರಿಸುತ್ತದೆ. ಅಂಜಿ ಸೇತುವೆಯು ಸವಾಲಿನ ಭೂಪ್ರದೇಶದಲ್ಲಿ ಭಾರತದ ಮೊದಲ ಕೇಬಲ್‌-ಸ್ಟೇ ರೈಲು ಸೇತುವೆಯಾಗಿ ನಿಂತಿದೆ.

ಉಧಂಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್‌) ಯೋಜನೆಯು ಎಲ್ಲಾ ಹವಾಮಾನ ಸಂಪರ್ಕವನ್ನು ಖಚಿತಪಡಿಸುತ್ತದೆ ಮತ್ತು ಶ್ರೀ ಮಾತಾ ವೈಷ್ಣೋ ದೇವಿ ಕತ್ರಾದಿಂದ ಶ್ರೀನಗರಕ್ಕೆ ವಂದೇ ಭಾರತ್‌ ರೈಲುಗಳು ಆಧ್ಯಾತ್ಮಿಕ ಪ್ರವಾಸೋದ್ಯಮವನ್ನು ಹೆಚ್ಚಿಸುತ್ತವೆ ಮತ್ತು ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುತ್ತವೆ ಎಂದಿದ್ದಾರೆ.

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕರ್ನಾಟಕದಲ್ಲಿ ಎನ್‌ಕಂಬ್ರೆನ್ಸ್ ಪ್ರಮಾಣಪತ್ರ ಪಡೆಯುವುದು ಹೇಗೆ? ಕಾವೇರಿ 2.0 ಪೋರ್ಟಲ್ ಇತ್ತೀಚಿನ ಗೈಡ್!

ಆಸ್ತಿ ಖರೀದಿ ಅಥವಾ ಮಾರಾಟದ ಸಂದರ್ಭದಲ್ಲಿ ಅತ್ಯಂತ ಪ್ರಮುಖವಾಗಿ ಬೇಕಾಗುವ ದಾಖಲೆಯೆಂದರೆ ಅದು ಎನ್‌ಕಂಬ್ರೆನ್ಸ್ ಪ್ರಮಾಣಪತ್ರ (Encumbrance Certificate – …