ಇಂದು ಮಹಾಪರಿನಿರ್ವಾಣ ದಿವಸದ ಅಂಗವಾಗಿ ಪ್ರಧಾನಮಂತ್ರಿ ಅವರು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು.
ನ್ಯಾಯ, ಸಮಾನತೆ ಮತ್ತು ಸಾಂವಿಧಾನಿಕತೆಗೆ ಡಾ. ಅಂಬೇಡ್ಕರ್ ಅವರ ಅಚಲ ಬದ್ಧತೆ ಭಾರತದ ರಾಷ್ಟ್ರೀಯ ಪಯಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ ಎಂದು ಪ್ರಧಾನಮಂತ್ರಿ ಅವರು ಹೇಳಿದರು. ಮಾನವ ಘನತೆಯನ್ನು ಉಲ್ಲೇಖಿಸುವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸುವ ಡಾ. ಅಂಬೇಡ್ಕರ್ ಅವರ ಸಮರ್ಪಣೆಯಿಂದ ತಲೆಮಾರುಗಳು ಸ್ಫೂರ್ತಿ ಪಡೆದಿವೆ ಎಂದು ಅವರು ಹೇಳಿದರು.
ದೇಶವು ವಿಕಸಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಡಾ. ಅಂಬೇಡ್ಕರ್ ಅವರ ಆದರ್ಶಗಳು ರಾಷ್ಟ್ರದ ಹಾದಿಯನ್ನು ಬೆಳಗಿಸುತ್ತಲೇ ಇರುತ್ತವೆ ಎಂದು ಪ್ರಧಾನಮಂತ್ರಿ ವಿಶ್ವಾಸ ವ್ಯಕ್ತಪಡಿಸಿದರು.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ;
“ಮಹಾಪರಿನಿರ್ವಾಣ ದಿನದಂದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಸ್ಮರಿಸುತ್ತಿದ್ದೇನೆ. ಅವರ ದೂರದೃಷ್ಟಿಯ ನಾಯಕತ್ವ ಮತ್ತು ನ್ಯಾಯ, ಸಮಾನತೆ ಮತ್ತು ಸಾಂವಿಧಾನಿಕತೆಗೆ ಅಚಲವಾದ ಬದ್ಧತೆ ನಮ್ಮ ರಾಷ್ಟ್ರೀಯ ಪ್ರಯಾಣಕ್ಕೆ ಮಾರ್ಗದರ್ಶನ ನೀಡುತ್ತಲೇ ಇದೆ. ಮಾನವ ಘನತೆಯನ್ನು ಎತ್ತಿಹಿಡಿಯಲು ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬಲಪಡಿಸಲು ಅವರು ತಲೆಮಾರುಗಳಿಗೆ ಸ್ಫೂರ್ತಿ ನೀಡಿದರು. ನಾವು ವಿಕಸಿತ ಭಾರತವನ್ನು ನಿರ್ಮಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತಿರುವಾಗ ಅವರ ಆದರ್ಶಗಳು ನಮ್ಮ ಹಾದಿಯನ್ನು ಬೆಳಗಿಸಲಿ.”
“ಇಂದು, ಮಹಾಪರಿನಿರ್ವಾಣ ದಿನದಂದು, ದೆಹಲಿಯಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ನಮ್ಮ ರಾಷ್ಟ್ರಕ್ಕಾಗಿ ಅವರ ಕನಸನ್ನು ನನಸಾಗಿಸಲು ನಾವು ಪೂರ್ಣ ಹುರುಪಿನಿಂದ ಕೆಲಸ ಮಾಡುತ್ತೇವೆ.”
Matribhumi Samachar Kannad

