ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಅನೇಕರು ಮೃತಪಟ್ಟಿದ್ದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳ ನೋವು ಮತ್ತು ನಷ್ಟದ ಅರಿವಿದೆ ಎಂದು ಅವರು ಸಂತಾಪ ಸೂಚಿಸಿದ್ದಾರೆ.
ಇದಕ್ಕೂ ಮುನ್ನ ಶ್ರೀ ಮೋದಿ ಅವರು ಅಹಮದಾಬಾದ್‌ನಲ್ಲಿ ಅವಘಡದ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ನೇರವಾಗಿ ಪರಾಮರ್ಶಿಸಿದರು. ದುರಂತದ ನಂತರ ಅವಿಶ್ರಾಂತವಾಗಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತುರ್ತು ಪ್ರತಿಕ್ರಿಯಾ ತಂಡಗಳನ್ನು ಅವರು ಭೇಟಿ ಮಾಡಿದರು.
ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ:
“ಅಹಮದಾಬಾದ್‌ನಲ್ಲಿ ಸಂಭವಿಸಿದ ವೈಮಾನಿಕ ದುರಂತವು, ನಮ್ಮೆಲ್ಲರಿಗೂ ತೀವ್ರ ಆಘಾತಕಾರಿಯಾಗಿದೆ. ಈ ಹಠಾತ್ ಮತ್ತು ಹೃದಯವಿದ್ರಾವಕ ಘಟನೆಯಲ್ಲಿ ಅನೇಕರು ಪ್ರಾಣ ಕಳೆದುಕೊಂಡಿದ್ದು, ಪದಗಳಿಗೆ ನಿಲುಕದ್ದಾಗಿದೆ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು. ಅವರ ನೋವು ಮತ್ತು ಮುಂದಿನ ಅನೇಕ ವರ್ಷಗಳವರೆಗೆ ಅವರ ಸಾವಿನ ಶೂನ್ಯ ನಮಗೆ ತಿಳಿದಿದೆ. ಓಂ ಶಾಂತಿ.”
“ಅಹಮದಾಬಾದ್‌ನಲ್ಲಿ ಅಪಘಾತ ಸ್ಥಳಕ್ಕೆ ಇಂದು ಭೇಟಿ ನೀಡಿದ್ದೆ. ವಿನಾಶದ ದೃಶ್ಯ ಅತೀವ ದುಃಖಕರ. ಘಟನೆ ನಂತರ ಅವಿಶ್ರಾಂತವಾಗಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿ ಮಾಡಿದೆ. ಈ ಊಹಿಸಲಾಗದ ಘೋರ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪಗಳು.”
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

