Monday, December 29 2025 | 10:43:53 PM
Breaking News

2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ

Connect us on:

2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್‌ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್‌  (https://awards.gov.in)  ನಲ್ಲಿಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ.

ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುತ್ತದೆ. ಕಲೆ, ಸಾಹಿತ್ಯ ಮತ್ತು ಶಿಕ್ಷ ಣ, ಕ್ರೀಡೆ, ವೈದ್ಯಕೀಯ, ಸಮಾಜ ಸೇವೆ, ವಿಜ್ಞಾನ ಮತ್ತು ಎಂಜಿನಿಯರಿಂಗ್‌, ಸಾರ್ವಜನಿಕ ವ್ಯವಹಾರಗಳು, ನಾಗರಿಕ ಸೇವೆ, ವ್ಯಾಪಾರ ಮತ್ತು ಕೈಗಾರಿಕೆ ಮುಂತಾದ ಎಲ್ಲಾ ಕ್ಷೇತ್ರಗಳು / ವಿಭಾಗಗಳಲ್ಲಿ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ. ಜನಾಂಗ, ಉದ್ಯೋಗ, ಸ್ಥಾನ ಅಥವಾ ಲಿಂಗ ಭೇದವಿಲ್ಲದೆ ಎಲ್ಲಾ ವ್ಯಕ್ತಿಗಳು ಈ ಪ್ರಶಸ್ತಿಗಳಿಗೆ ಅರ್ಹರು. ವೈದ್ಯರು ಮತ್ತು ವಿಜ್ಞಾನಿಗಳನ್ನು ಹೊರತುಪಡಿಸಿ ಪಿ.ಎಸ್‌.ಯುಗಳಲ್ಲಿ ಕೆಲಸ ಮಾಡುವವರು ಸೇರಿದಂತೆ ಸರ್ಕಾರಿ ನೌಕರರು ಪದ್ಮ ಪ್ರಶಸ್ತಿಗಳಿಗೆ ಅರ್ಹರಲ್ಲ.

ಪದ್ಮ ಪ್ರಶಸ್ತಿಗಳನ್ನು ‘ಜನರ ಪದ್ಮ’ವನ್ನಾಗಿ ಪರಿವರ್ತಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ, ಎಲ್ಲಾ ನಾಗರಿಕರು ಸ್ವಯಂ ನಾಮನಿರ್ದೇಶನ ಸೇರಿದಂತೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ಮಾಡಲು ವಿನಂತಿಸಲಾಗಿದೆ. ಮಹಿಳೆಯರು, ಸಮಾಜದ ದುರ್ಬಲ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ದಿವ್ಯಾಂಗ ವ್ಯಕ್ತಿಗಳು ಮತ್ತು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಲು ಸಂಘಟಿತ ಪ್ರಯತ್ನಗಳನ್ನು ಮಾಡಬಹುದು.

ನಾಮನಿರ್ದೇಶನಗಳು / ಶಿಫಾರಸುಗಳು ಮೇಲೆ ತಿಳಿಸಿದ ಪೋರ್ಟಲ್‌ನಲ್ಲಿ ಲಭ್ಯವಿರುವ ಸ್ವರೂಪದಲ್ಲಿ ನಿರ್ದಿಷ್ಟಪಡಿಸಿದ ಎಲ್ಲಾ ಸಂಬಂಧಿತ ವಿವರಗಳನ್ನು ಒಳಗೊಂಡಿರಬೇಕು, ಇದರಲ್ಲಿ ನಿರೂಪಣಾ ರೂಪದಲ್ಲಿ ಉಲ್ಲೇಖ (ಗರಿಷ್ಠ 800 ಪದಗಳು), ಅವರವರ ಸಂಬಂಧಿತ ಕ್ಷೇತ್ರ / ವಿಭಾಗದಲ್ಲಿ ಶಿಫಾರಸು ಮಾಡಲಾದ ವ್ಯಕ್ತಿಯ ವಿಶಿಷ್ಟ ಮತ್ತು ಅಸಾಧಾರಣ ಸಾಧನೆಗಳು / ಸೇವೆಯನ್ನು ಸ್ಪಷ್ಟವಾಗಿ ಹೊರತರಬೇಕು.

ಈ ಸಂಬಂಧದ ವಿವರಗಳು ಗೃಹ ಸಚಿವಾಲಯದ (https://mha.gov.in) ವೆಬ್‌ಸೈಟ್‌ ಮತ್ತು ಪದ್ಮ ಪ್ರಶಸ್ತಿ ಪೋರ್ಟಲ್‌ (https://padmaawards.gov.in)  ನಲ್ಲಿ‘ಪ್ರಶಸ್ತಿಗಳು ಮತ್ತು ಪದಕಗಳು’ ಎಂಬ ಶೀರ್ಷಿಕೆಯಡಿಯಲ್ಲಿ ಲಭ್ಯವಿದೆ. ಈ ಪ್ರಶಸ್ತಿಗಳಿಗೆ ಸಂಬಂಧಿಸಿದ ಕಾನೂನುಗಳು ಮತ್ತು ನಿಯಮಗಳು ವೆಬ್‌ಸೈಟ್‌ನಲ್ಲಿ ಲಿಂಕ್‌ನೊಂದಿಗೆ ಲಭ್ಯವಿದೆhttp://https://padmaawards.gov.in/AboutAwards.aspx 

About Matribhumi Samachar

Check Also

ಪವಿತ್ರ ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ

ಇಂದು ಪವಿತ್ರ ಪ್ರಕಾಶ್ ಉತ್ಸವದ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಗುರು ಗೋವಿಂದ ಸಿಂಗ್ ಅವರಿಗೆ …