Friday, February 20 2026 | 07:11:38 PM
Breaking News

ಮದೀನಾದಲ್ಲಿ ಭಾರತೀಯ ಪ್ರಜೆಗಳು ಭಾಗಿಯಾಗಿದ್ದ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸೌದಿ ಅರೇಬಿಯಾದ ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಲ್ಲಿ ಉಂಟಾದ ಜೀವಹಾನಿಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ಅವರು ಹೃದಯಾಂತರಾಳದ ಸಂತಾಪ ಸೂಚಿಸಿದರು ಮತ್ತು ಗಾಯಗೊಂಡವರು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸಿದರು.

ರಿಯಾದ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ ಎಂದು ಪ್ರಧಾನಮಂತ್ರಿ ಹೇಳಿದರು. ಅಗತ್ಯ ಬೆಂಬಲ ಮತ್ತು ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ಭಾರತೀಯ ಅಧಿಕಾರಿಗಳು ಸೌದಿ ಅರೇಬಿಯಾದ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.

ಈ ಸಂಬಂಧ ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹೀಗೆ ಬರೆದಿದ್ದಾರೆ;

“ಮದೀನಾದಲ್ಲಿ ಭಾರತೀಯ ಪ್ರಜೆಗಳನ್ನು ಒಳಗೊಂಡ ಅಪಘಾತದಿಂದ ತೀವ್ರ ದುಃಖಿತನಾಗಿದ್ದೇನೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಗೊಂಡವರೆಲ್ಲರೂ ಶೀಘ್ರ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ರಿಯಾದ್ ನಲ್ಲಿರುವ ನಮ್ಮ ರಾಯಭಾರ ಕಚೇರಿ ಮತ್ತು ಜೆಡ್ಡಾದಲ್ಲಿನ ರಾಯಭಾರ ಕಚೇರಿ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿವೆ. ನಮ್ಮ ಅಧಿಕಾರಿಗಳು ಸೌದಿ ಅರೇಬಿಯಾ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದಾರೆ,’’ ಎಂದು ತಿಳಿಸಿದರು.

‘गांधी जी की राजनीतिक यात्रा के कुछ पन्ने’ पुस्तक के बारे में जानने के लिए लिंक पर क्लिक करें :

https://matribhumisamachar.com/2025/12/10/86283/

आप इस ई-बुक को पढ़ने के लिए निम्न लिंक पर भी क्लिक कर सकते हैं:

https://www.amazon.in/dp/B0FTMKHGV6

यह भी पढ़ें : 1857 का स्वातंत्र्य समर : कारण से परिणाम तक

About Matribhumi Samachar

Check Also

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ …