ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯವು ಬಹಿರಂಗ ಪಡಿಸಿದ 2026ರ ಶ್ರೇಯಾಂಕಗಳನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಸ್ವಾಗತಿಸಿದರು. ಇದು ಜಾಗತಿಕ ಶಿಕ್ಷಣ ಮತ್ತು ಸಂಶೋಧನೆಯಲ್ಲಿ ಭಾರತದ ಬೆಳೆಯುತ್ತಿರುವ ಸ್ಥಾನಮಾನಕ್ಕೆ ಸಾಕ್ಷಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಹೆಚ್ಚಿಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು.
ಕೇಂದ್ರ ಸಚಿವರಾದ ಶ್ರೀ ಧರ್ಮೇಂದ್ರ ಪ್ರಧಾನ್ ಅವರ X ಕುರಿತಾದ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು,
“ಕ್ಯೂಎಸ್ ವಿಶ್ವ ವಿಶ್ವವಿದ್ಯಾಲಯದ 2026ರ ಶ್ರೇಯಾಂಕಗಳು ನಮ್ಮ ಶಿಕ್ಷಣ ಕ್ಷೇತ್ರಕ್ಕೆ ಉತ್ತಮ ಸುದ್ದಿಯಾಗಿದೆ. ಭಾರತದ ಯುವಜನತೆಯ ಅಭಿವೃದ್ದಿಗಾಗಿ ಸಂಶೋಧನೆ ಮತ್ತು ನಾವೀನ್ಯತೆಯ ಪರಿಸರ ವ್ಯವಸ್ಥೆಗಳನ್ನು ಮತ್ತಷ್ಟು ಬಲಪಡಿಸಲು ನಮ್ಮ ಸರ್ಕಾರವು ಬದ್ಧವಾಗಿದೆ” ಎಂದು ಹೇಳಿದ್ದಾರೆ.
भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं
ऑडियो बुक : भारत 1885 से 1950 (इतिहास पर एक दृष्टि)
Matribhumi Samachar Kannad

