ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಅಹಮದಾಬಾದ್ ನಲ್ಲಿ ನಡೆದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದರು ಮತ್ತು ವಿವಿಧ ಮಳಿಗೆಗಳಿಗೆ ಭೇಟಿ ನೀಡಿದರು.


‘ಎಕ್ಸ್ ತಾಣದ ಸಂದೇಶದಲ್ಲಿ ಸಚಿವರಾದ ಶ್ರೀ ಅಮಿತ್ ಶಾ ಅವರು ಪುಸ್ತಕಗಳು ಜ್ಞಾನದ ಮೂಲ ಮಾತ್ರವಲ್ಲ, ವ್ಯಕ್ತಿತ್ವ ವಿಕಸನಕ್ಕೆ ಪ್ರಮುಖ ಮಾಧ್ಯಮವಾಗಿದೆ ಎಂದು ಹೇಳಿದರು. ಅವರು, ಇಂದು, ನಾನು ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದೆ ಮತ್ತು ಎಎಂಸಿ ಮತ್ತು ನ್ಯಾಷನಲ್ ಬುಕ್ ಟ್ರಸ್ಟ್ (ಎನ್.ಬಿ.ಟಿ) ಆಯೋಜಿಸಿದ ಅಹಮದಾಬಾದ್ ಅಂತಾರಾಷ್ಟ್ರೀಯ ಪುಸ್ತಕ ಮೇಳದಲ್ಲಿ ವಿವಿಧ ಮಳಿಗೆಗಳಿಗೆ ಭೇಟಿ ನೀಡಿದ್ದೇನೆ ಎಂದು ಹೇಳಿದರು.


ಸಾಹಿತ್ಯ ಕಾರ್ಯಕ್ರಮಗಳು, ಜಾನಪದ ಗೀತೆ ಮತ್ತು ಕವನ ವಾಚನಗಳು ಮತ್ತು ನವೋದ್ಯಮ ವೇದಿಕೆಯನ್ನು ಒಳಗೊಂಡಿರುವ ಈ ಮೇಳವು, ಓದು ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಉತ್ತೇಜಿಸುವ ಮೂಲಕ ಮಕ್ಕಳು ಮತ್ತು ಯುವಕರನ್ನು ಬೌದ್ಧಿಕವಾಗಿ ಶ್ರೀಮಂತಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಹೇಳಿದರು.
Matribhumi Samachar Kannad

