Saturday, December 06 2025 | 12:50:14 AM
Breaking News

ಪ್ರಯಾಗ್ ರಾಜ್ ನ ಮಹಾಕುಂಭದಲ್ಲಿ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

Connect us on:

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪ್ರಯಾಗ್ ರಾಜ್‌ ನ ಮಹಾಕುಂಭದಲ್ಲಿ ಸಂಭವಿಸಿದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ.

ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಉತ್ತರಪ್ರದೇಶದ ಮುಖ್ಯಮಂತ್ರಿಯೊಂದಿಗೆ ಮಾತನಾಡಿದ್ದಾರೆ ಮತ್ತು ದುರಂತದಲ್ಲಿ ತೊಂದರೆಗೀಡಾದವರಿಗೆ ನೆರವು ನೀಡಲು ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದಾರೆ. ಗಾಯಗೊಂಡಿರುವವರು ಆದಷ್ಟು ಶೀಘ್ರ ಗುಣಮುಖರಾಗಲಿ ಎಂದೂ ಸಹ ಶ್ರೀ ನರೇಂದ್ರ ಮೋದಿ ಅವರು ಆಶಿಸಿದ್ದಾರೆ.

ಪ್ರಧಾಮಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ  X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ.

“ಪ್ರಯಾಗರಾಜ್ ಮಹಾ ಕುಂಭದಲ್ಲಿ ಸಂಭವಿಸಿದ ದುರಂತವು ಅತ್ಯಂತ ದುಃಖಕರವಾಗಿದೆ. ಇದರಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಭಕ್ತರಿಗೆ ನನ್ನ ತೀವ್ರ ಸಂತಾಪಗಳು. ಎಲ್ಲಾ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸುತ್ತೇನೆ. ಸ್ಥಳೀಯ ಆಡಳಿತವು ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಸಹಾಯವನ್ನು ಒದಗಿಸುವ ಕಾರ್ಯದಲ್ಲಿ ನಿರತವಾಗಿದೆ. ಆ ನಿಟ್ಟಿನಲ್ಲಿ, ನಾನು ಮುಖ್ಯಮಂತ್ರಿ ಯೋಗಿ ಜೀ ಅವರೊಂದಿಗೆ ಮಾತನಾಡಿದ್ದೇನೆ ಮತ್ತು ರಾಜ್ಯ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ’’.

About Matribhumi Samachar

Check Also

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಗುಜರಾತ್‌ ನಲ್ಲಿ ‘ಅರ್ಥ್ ಶೃಂಗಸಭೆ – 2025’ ಉದ್ಘಾಟಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಗುಜರಾತ್ ರಾಜಧಾನಿ ಗಾಂಧಿನಗರದ ಮಹಾತ್ಮ ಮಂದಿರದಲ್ಲಿ …