Wednesday, December 10 2025 | 10:16:57 AM
Breaking News

ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ಅವಘಡದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಪ್ರಧಾನಮಂತ್ರಿ

Connect us on:

ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ದುರ್ಘಟನೆಯಲ್ಲಿ ಅನೇಕರು ಮೃತಪಟ್ಟಿದ್ದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿಗೆ ಭೇಟಿ ನೀಡಿದರು. ಸಂತ್ರಸ್ತ ಕುಟುಂಬಗಳ ಜೊತೆಗೆ ನಿಲ್ಲುವುದಾಗಿ ಹೇಳಿರುವ ಶ್ರೀ ಮೋದಿ ಅವರು, ವಿಮಾನದಲ್ಲಿದ್ದವರ ಪೈಕಿ ಬದುಕುಳಿದ ಏಕೈಕ ವ್ಯಕ್ತಿ ಹಾಗೂ ಇತರ ಗಾಯಗೊಂಡವರನ್ನು ಭೇಟಿ ಮಾಡಿದರು ಹಾಗೂ ಈ ಸಂಕಷ್ಟದ ಸಮಯದಲ್ಲಿ ರಾಷ್ಟ್ರದ ದೃಢ ಬೆಂಬಲದ ಭರವಸೆ ನೀಡಿದರು.

ಪ್ರಸ್ತುತ ನಡೆಯುತ್ತಿರುವ ಪರಿಹಾರ ಮತ್ತು ಇತರ ಕಾರ್ಯಗಳ ಮೌಲ್ಯಮಾಪನ ಕುರಿತಾಗಿ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಉನ್ನತ ಅಧಿಕಾರಿಗಳ ಪರಿಶೀಲನಾ ಸಭೆ ನಡೆಯಿತು. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಶ್ರೀ ಮೋದಿ ಅವರು ಹೀಗೆ ಹೇಳಿದ್ದಾರೆ.

“”ಅಹಮದಾಬಾದ್‌ನಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಸೇರಿದಂತೆ ಇತರ ಗಾಯಗೊಂಡವರನ್ನು ಭೇಟಿಯಾದೆ, ಈ ಅತೀವ ಸಂಕಷ್ಟದ ಸಮಯದಲ್ಲಿ ಅವರು ಮತ್ತು ಅವರ ಕುಟುಂಬದವರೊಂದಿಗೆ ನಾವಿದ್ದೇವೆ ಎಂಬ ಭರವಸೆ ನೀಡಿದೆ. ಇಡೀ ರಾಷ್ಟ್ರವು ಗಾಯಾಳುಗಳ ಶೀಘ್ರ ಚೇತರಿಕೆಗೆ ಪ್ರಾರ್ಥಿಸುತ್ತಿದೆ.”

“ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಉನ್ನತ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದೆ.”

 

भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने के लिए आप निम्न लिंक पर क्लिक कर सकते हैं

सारांश कनौजिया की पुस्तकें

ऑडियो बुक : भारत 1885 से 1950 (इतिहास पर एक दृष्टि)

 

About Matribhumi Samachar

Check Also

ಕರ್ನಾಟಕದಲ್ಲಿ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಉಪಕ್ರಮಗಳಲ್ಲಿ ಗಮನಾರ್ಹ ಪ್ರಗತಿ

ಕರ್ನಾಟಕದಾದ್ಯಂತ ಮಣ್ಣಿನ ಆರೋಗ್ಯ ಮತ್ತು ಫಲವತ್ತತೆ ಯೋಜನೆಗಳಲ್ಲಿ ಗಮನಾರ್ಹ ಪ್ರಗತಿಯನ್ನು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವರಾದ …