Tuesday, December 09 2025 | 03:12:45 AM
Breaking News

Matribhumi Samachar

ಮೇರಾ ಯುವ ಭಾರತ (MYBharat) ವೇದಿಕೆಯಿಂದ ರಾಷ್ಟ್ರಧ್ವಜ ರಸಪ್ರಶ್ನೆ ಘೋಷಣೆ; ದೇಶಭಕ್ತಿ ಮತ್ತು ತ್ರಿವರ್ಣ ಧ್ವಜದ ಬಗ್ಗೆ ಅರಿವು ಹೆಚ್ಚಿಸುವ ಗುರಿ

ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯದ ನೇತೃತ್ವದಲ್ಲಿ, ‘ಮೇರಾ ಯುವ ಭಾರತ್’, (MYBharat) ಭಾರತೀಯರಲ್ಲಿ ದೇಶಪ್ರೇಮವನ್ನು ಜಾಗೃತಗೊಳಿಸುವ ಮತ್ತು ನಮ್ಮ ರಾಷ್ಟ್ರಧ್ವಜದ ಕುರಿತಾದ ಜ್ಞಾನವನ್ನು ವೃದ್ಧಿಸುವ ಮಹೋನ್ನತ ಉದ್ದೇಶದೊಂದಿಗೆ, ರಾಷ್ಟ್ರಮಟ್ಟದ ರಸಪ್ರಶ್ನೆ ಸ್ಪರ್ಧೆಯೊಂದನ್ನು ಆಯೋಜಿಸಿದೆ. ಈ ಆನ್ ಲೈನ್ ರಸಪ್ರಶ್ನೆಯನ್ನು MYBharat ಪೋರ್ಟಲ್ ನಲ್ಲಿ (mybharat.gov.in) ಆಯೋಜಿಸಲಾಗಿದ್ದು, ತ್ರಿವರ್ಣ ಧ್ವಜದ ಬಗ್ಗೆ ತಮ್ಮ ಜ್ಞಾನವನ್ನು ಪರೀಕ್ಷಿಸಲು ಎಲ್ಲಾ ನಾಗರಿಕರಿಗೂ ಇದರಲ್ಲಿ ಭಾಗವಹಿಸಲು ಮುಕ್ತ ಆಹ್ವಾನವಿದೆ. ಈ ರಸಪ್ರಶ್ನೆಯನ್ನು ಎಲ್ಲ …

Read More »

ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಪ್ರಧಾನಮಂತ್ರಿಯವರ ಆಧುನಿಕ, ದಕ್ಷ ಮತ್ತು ನಾಗರಿಕ ಕೇಂದ್ರಿತ ಆಡಳಿತದ ದೃಷ್ಟಿಕೋನಕ್ಕೆ ಸರ್ಕಾರದ ಬದ್ಧತೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಉದ್ಘಾಟನೆಯಾಗುತ್ತಿರುವ ಕರ್ತವ್ಯ ಭವನ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಪರೀಕ್ಷಾ ಪೇ ಚರ್ಚಾ 2025 ಒಂದು ತಿಂಗಳಲ್ಲಿ ಅತಿ ಹೆಚ್ಚು ನೋಂದಣಿಗಾಗಿ ಗಿನ್ನೆಸ್‌ ವಿಶ್ವ ದಾಖಲೆಗೆ ಪಾತ್ರವಾಗಿದೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮಹತ್ವಾಕಾಂಕ್ಷೆಯ ಉಪಕ್ರಮವಾದ ಪರೀಕ್ಷಾ ಪೇ ಚರ್ಚಾ (ಪಿಪಿಸಿ) 2018 ರಿಂದ ಮೈಗೌ ಸಹಯೋಗದೊಂದಿಗೆ ಶಿಕ್ಷಣ ಸಚಿವಾಲಯವು ಯಶಸ್ವಿಯಾಗಿ ಆಯೋಜಿಸಿದೆ. ಒಂದು ತಿಂಗಳಲ್ಲಿ ಅತಿ ಹೆಚ್ಚು ಜನರು ಸಿಟಿಜನ್‌ ಎಂಗೇಜ್ಮೆಂಟ್‌ ಪ್ಲಾಟ್‌ಫಾರ್ಮ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂಬ ಗಿನ್ನೆಸ್‌ ವಿಶ್ವ ದಾಖಲೆಗೆ ಲಭಿಸಿದೆ. ಈ ಮಾನ್ಯತೆಯು ಮೈಗೌ ಪ್ಲಾಟ್‌ಫಾರ್ಮ್‌ನಲ್ಲಿ ಆಯೋಜಿಸಲಾದ ಕಾರ್ಯಕ್ರಮದ 8ನೇ ಆವೃತ್ತಿಯಲ್ಲಿ ಸ್ವೀಕರಿಸಿದ 3.53 ಕೋಟಿ ಮಾನ್ಯ ನೋಂದಣಿಗಳ ಅಭೂತಪೂರ್ವ ಸಾಧನೆಯನ್ನು ಆಚರಿಸುತ್ತದೆ. ಪರೀಕ್ಷಾ ಪೇ ಚರ್ಚಾ ಒಂದು ವಿಶಿಷ್ಟ ಜಾಗತಿಕ …

Read More »

ಹೊಸದಿಲ್ಲಿಯಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಹಸ್ತಾಂತರಿಸಿದ ರೆಪ್ಕೋ ಬ್ಯಾಂಕ್

ರೆಪ್ಕೋ ಬ್ಯಾಂಕ್ 2024-25ನೇ ಸಾಲಿನ ಲಾಭಾಂಶದ ರೂಪದಲ್ಲಿ 22.90 ಕೋಟಿ ರೂ.ಗಳ ಚೆಕ್ ಅನ್ನು ಹೊಸದಿಲ್ಲಿಯಲ್ಲಿ  ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಗೆ ಹಸ್ತಾಂತರಿಸಿತು. 2024-25ನೇ ಹಣಕಾಸು ವರ್ಷದಲ್ಲಿ 140 ಕೋಟಿ ರೂ.ಗಳ ಲಾಭವನ್ನು ಗಳಿಸಿದ್ದಕ್ಕಾಗಿ ಕೇಂದ್ರ ಗೃಹ ಸಚಿವರು ರೆಪ್ಕೋ ಬ್ಯಾಂಕ್ ತಂಡವನ್ನು ಅಭಿನಂದಿಸಿದರು, ಇದು ಸಹಕಾರಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತ್ಯಧಿಕವಾಗಿದೆ. ‘X’ ನಲ್ಲಿ ಮಾಡಲಾದ ಪೋಸ್ಟ್‌ನಲ್ಲಿ ಶ್ರೀ ಅಮಿತ್ ಶಾ ಅವರು ಗೃಹ …

Read More »

ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಎಸ್‌ ಎ ಎಸ್‌ ಸಿ ಐ ಅಡಿಯಲ್ಲಿ ಹಲವಾರು ಯೋಜನೆಗಳು ಅನುಷ್ಠಾನದಲ್ಲಿವೆ: ಕೇಂದ್ರ ಪ್ರವಾಸೋದ್ಯಮ ಸಚಿವರು

ಭಾರತ ಸರ್ಕಾರವು ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆ (ಎಸ್‌ ಎ ಎಸ್‌ ಸಿ ಐ) ಗಳ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿದ್ದು, ಅನುಷ್ಠಾನದ ಹಂತದಲ್ಲಿವೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್‌ ಶೇಖಾವತ್‌ ತಿಳಿಸಿದ್ದಾರೆ. ಇದರ ಜೊತೆಗೆ, ಪ್ರವಾಸೋದ್ಯಮ ಸಚಿವಾಲಯವು ಬೀದರ್ ಮತ್ತು ಉಡುಪಿಯನ್ನು ಕರ್ನಾಟಕದ ತಾಣಗಳಾಗಿ ಸಿಬಿಡಿಡಿ (ಸವಾಲು ಆಧಾರಿತ ಗಮ್ಯತಾಣ ಅಭಿವೃದ್ಧಿ) ಅಡಿಯಲ್ಲಿ …

Read More »

ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ ವಿಶೇಷ ನೋಂದಣಿ ಅಭಿಯಾನ 2025ರ ಆಗಸ್ಟ್ 15ರವರೆಗೆ ವಿಸ್ತರಣೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯವು ಪ್ರಧಾನಮಂತ್ರಿ ಮಾತೃ ವಂದನಾ ಯೋಜನೆಯಡಿ (PMMVY) ವಿಶೇಷ ನೋಂದಣಿ ಅಭಿಯಾನವನ್ನು 2025ರ ಆಗಸ್ಟ್ 15ರವರೆಗೆ ವಿಸ್ತರಿಸಿದೆ. ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ನೇತೃತ್ವದಲ್ಲಿ ಪ್ರಸ್ತುತ ನಡೆಯುತ್ತಿರುವ ಮನೆ-ಮನೆ ಜಾಗೃತಿ ಮತ್ತು ದಾಖಲಾತಿ ಅಭಿಯಾನವು, ಎಲ್ಲಾ ಅರ್ಹ ಗರ್ಭಿಣಿಯರು ಮತ್ತು ಹಾಲುಣಿಸುವ ಮಹಿಳೆಯರನ್ನು ತಲುಪುವ ಮೂಲಕ ಯೋಜನೆಯಡಿಯಲ್ಲಿ ಅವರ ಸಕಾಲಿಕ ನೋಂದಣಿಯನ್ನು ಖಚಿತಪಡಿಸಿಕೊಳ್ಳುವ ಗುರಿಯನ್ನು ಹೊಂದಿದೆ. ಗರ್ಭಿಣಿಯರು ಮತ್ತು ಹಾಲುಣಿಸುವ ತಾಯಂದಿರು (PW&LM) ಪೌಷ್ಟಿಕ …

Read More »

ಡಿ.ಪಿ.ಐ.ಐ.ಟಿ ಕಾರ್ಯದರ್ಶಿ ನೇತೃತ್ವದ ನಿಯೋಗವು ಬೆಂಗಳೂರಿನಲ್ಲಿನ ಐ.ಒ.ಟಿ ಮತ್ತು ಎ.ಐ ಗಾಗಿ ಇರುವ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕೆ-ಟೆಕ್, ನಾಸ್ಕಾಮ್ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಭೇಟಿ ನೀಡಿತು

ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆಯ (ಡಿ.ಪಿ.ಐ.ಐ.ಟಿ) ಕಾರ್ಯದರ್ಶಿ ಶ್ರೀ ಅಮರದೀಪ್ ಸಿಂಗ್ ಭಾಟಿಯಾ ನೇತೃತ್ವದ ನಿಯೋಗವು ಎನ್.ಐ.ಸಿ.ಡಿ.ಸಿ ಯ ಸಿ.ಇ.ಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಶ್ರೀ ರಜತ್ ಕುಮಾರ್ ಸೈನಿ, ಡಿ.ಪಿ.ಐ.ಐ.ಟಿ ನಿರ್ದೇಶಕ ಮತ್ತು ಸ್ಟಾರ್ಟ್ಅಪ್ ಇಂಡಿಯಾದ ಮುಖ್ಯಸ್ಥರೊಂದಿಗೆ ಬೆಂಗಳೂರಿನಲ್ಲಿರುವ ಐ.ಒ.ಟಿ ಮತ್ತು ಎ.ಐ ಗಾಗಿ ಇರುವ ಮಾಹಿತಿ ತಂತ್ರಜ್ಞಾನ ಸಚಿವಾಲಯದ ಕೆ-ಟೆಕ್, ನಾಸ್ಕಾಮ್ ಸೆಂಟರ್ ಆಫ್ ಎಕ್ಸಲೆನ್ಸ್ ಗೆ ಭೇಟಿ ನೀಡಿತು. ನವೋದ್ಯಮ ಮತ್ತು ಇನ್ಕ್ಯುಬೇಷನ್ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ …

Read More »

ಪಾಟ್ನಾದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ ಸಂದರ್ಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …

Read More »

ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಭಾಗವಹಿಸಿದರು

ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಷಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ರೂ. 20,500 ಕೋಟಿ ಮೊತ್ತದ ನಿಧಿಯನ್ನು 9 ಕೋಟಿ 70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಕಿಸಾನ್ …

Read More »