Tuesday, January 06 2026 | 07:13:29 PM
Breaking News

International

ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದಲ್ಲಿರುವ ಕುಟುಂಬದವರು ಮತ್ತು ಸ್ನೇಹಿತರ ಪರವಾಗಿ ಅನಿವಾಸಿ ಭಾರತೀಯರಿಗೆ ಶುಭಾಶಯಗಳನ್ನು ತಿಳಿಸಿದರು. ತಮಗೆ ನೀಡಿದ ಅತ್ಯಂತ ಆತ್ಮೀಯ …

Read More »

ಇಥಿಯೋಪಿಯಾದಲ್ಲಿ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಪ್ರಧಾನಮಂತ್ರಿ ಇಂದು ಇಥಿಯೋಪಿಯನ್ ಸಂಸತ್ತಿನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಮಾತನಾಡಿದರು. ಇಥಿಯೋಪಿಯಾಕ್ಕೆ ತಮ್ಮ ಮೊದಲ ದ್ವಿಪಕ್ಷೀಯ ಭೇಟಿಯಲ್ಲಿರುವ ಪ್ರಧಾನಮಂತ್ರಿಯವರಿಗೆ ಇದು ವಿಶೇಷ ಗೌರವವಾಗಿದೆ. ಇಥಿಯೋಪಿಯಾದ ಕಾನೂನು ನಿರ್ಮಾಪಕರಿಗೆ  ಭಾರತದ ಜನರಿಂದ ಸ್ನೇಹ ಮತ್ತು ಸದ್ಭಾವನೆಯ ಶುಭಾಶಯಗಳನ್ನು ಕೋರುವ ಮೂಲಕ ಪ್ರಧಾನಮಂತ್ರಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು. ಸಂಸತ್ತನ್ನು ಉದ್ದೇಶಿಸಿ ಮಾತನಾಡುವುದು ಮತ್ತು ಈ ಪ್ರಜಾಪ್ರಭುತ್ವದ ದೇವಾಲಯದ ಮೂಲಕ ಇಥಿಯೋಪಿಯಾದ ಸಾಮಾನ್ಯ ಜನರನ್ನು ಉದ್ದೇಶಿಸಿ ಮಾತನಾಡುವುದು ಒಂದು ಸೌಭಾಗ್ಯ ಎಂಬುದರತ್ತ ಅವರು ಬೆಟ್ಟು ಮಾಡಿದರು. …

Read More »

ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯಕ್ಕೆ ಭೇಟಿ ನೀಡಿದ ಕುರಿತು ಜಂಟಿ ಹೇಳಿಕೆ

ಜೋರ್ಡಾನ್ ನ ಹ್ಯಾಶೆಮೈಟ್ ಸಾಮ್ರಾಜ್ಯದ ಘನವೆತ್ತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ, ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಡಿಸೆಂಬರ್ 15 ಮತ್ತು 16 ರಂದು ಜೋರ್ಡಾನ್ಗೆ ಭೇಟಿ ನೀಡಿದರು. ಉಭಯ ದೇಶಗಳು ತಮ್ಮ ದ್ವಿಪಕ್ಷೀಯ ರಾಜತಾಂತ್ರಿಕ ಸಂಬಂಧಗಳ 75ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿರುವ ಈ ಐತಿಹಾಸಿಕ ಸಂದರ್ಭದಲ್ಲಿ, ಪ್ರಧಾನಮಂತ್ರಿ ಮೋದಿಯವರ ಈ ಭೇಟಿ ನಡೆಯುತ್ತಿರುವುದು ಅತ್ಯಂತ ಮಹತ್ವದ್ದು …

Read More »

ಜೋರ್ಡಾನ್, ಇಥಿಯೋಪಿಯಾ ಮತ್ತು ಓಮಾನ್ ಭೇಟಿಗೆ ಮುನ್ನ ಪ್ರಧಾನಮಂತ್ರಿ ಅವರ ಹೇಳಿಕೆ

ಇಂದು, ನಾನು ಹಾಶೆಮೈಟ್ ಕಿಂಗ್ಡಂ ಆಫ್ ಜೋರ್ಡಾನ್ , ಫೆಡರಲ್ ಡೆಮಾಕ್ರಟಿಕ್ ರಿಪಬ್ಲಿಕ್ ಆಫ್ ಇಥಿಯೋಪಿಯಾ ಮತ್ತು ಒಮಾನ್ ಸುಲ್ತಾನೇಟ್ ಗೆ ಮೂರು ದೇಶಗಳ ಭೇಟಿಯನ್ನು ಕೈಗೊಳ್ಳುತ್ತಿದ್ದೇನೆ, ಈ ಮೂರು ದೇಶಗಳೊಂದಿಗೆ ಭಾರತವು ವ್ಯಾಪಕವಾದ ಸಮಕಾಲೀನ ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಾಚೀನ ನಾಗರಿಕ ಸಂಬಂಧಗಳನ್ನು ಹೊಂದಿದೆ. ಮೊದಲಿಗೆ, ಗೌರವಾನ್ವಿತ ರಾಜ ಅಬ್ದುಲ್ಲಾ II ಇಬ್ನ್ ಅಲ್ ಹುಸೇನ್ ಅವರ ಆಹ್ವಾನದ ಮೇರೆಗೆ ನಾನು ಜೋರ್ಡಾನ್ ಗೆ ಭೇಟಿ ನೀಡಲಿದ್ದೇನೆ. ಈ …

Read More »

ಫಲಿತಾಂಶಗಳ ಪಟ್ಟಿ: ರಷ್ಯಾ ಒಕ್ಕೂಟದ ಅಧ್ಯಕ್ಷರ ಅಧಿಕೃತ ಭಾರತ ಭೇಟಿ

ತಿಳುವಳಿಕಾ ಒಡಂಬಡಿಕೆಗಳು ಮತ್ತು ಒಪ್ಪಂದಗಳು. ವಲಸೆ ಮತ್ತು ಚಲನಶೀಲತೆ: ಒಂದು ದೇಶದ ನಾಗರಿಕರು ಇನ್ನೊಂದು ದೇಶದ ಭೂಭಾಗದಲ್ಲಿ ಕೈಗೊಳ್ಳುವ  ತಾತ್ಕಾಲಿಕ ಕಾರ್ಮಿಕ ಚಟುವಟಿಕೆಯ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ ಅಕ್ರಮ ವಲಸೆಯನ್ನು ಎದುರಿಸುವಲ್ಲಿ/ತಡೆಯುವಲ್ಲಿ  ಸಹಕಾರದ ಕುರಿತು ಭಾರತ ಗಣರಾಜ್ಯ ಸರ್ಕಾರ ಮತ್ತು ರಷ್ಯನ್ ಒಕ್ಕೂಟ ಸರ್ಕಾರದ ನಡುವೆ ಒಪ್ಪಂದ. ಆರೋಗ್ಯ ಮತ್ತು ಆಹಾರ ಸುರಕ್ಷತೆ: ಆರೋಗ್ಯ ರಕ್ಷಣೆ, ವೈದ್ಯಕೀಯ ಶಿಕ್ಷಣ ಮತ್ತು ವಿಜ್ಞಾನ ಕ್ಷೇತ್ರದಲ್ಲಿ ಸಹಕಾರದ ಕುರಿತು ಭಾರತ ಗಣರಾಜ್ಯದ ಆರೋಗ್ಯ ಮತ್ತು ಕುಟುಂಬ …

Read More »

ರಷ್ಯಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತ, ನನ್ನ ಸ್ನೇಹಿತ, ಅಧ್ಯಕ್ಷ ಪುಟಿನ್, ಎರಡೂ ದೇಶಗಳ ಪ್ರತಿನಿಧಿಗಳೇ ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಡೋಬ್ರಿ ಡೆನ್! (ರಶ್ಯನ್ ಭಾಷೆಯಲ್ಲಿ ಶುಭ ಮಧ್ಯಾಹ್ನ) ಇಂದು 23 ನೇ ಭಾರತ-ರಷ್ಯಾ ಶೃಂಗಸಭೆಗೆ ಅಧ್ಯಕ್ಷ ಪುಟಿನ್ ಅವರನ್ನು ಸ್ವಾಗತಿಸಲು ನನಗೆ ಸಂತೋಷವಾಗಿದೆ. ನಮ್ಮ ದ್ವಿಪಕ್ಷೀಯ ಸಂಬಂಧವು ಹಲವಾರು ಐತಿಹಾಸಿಕ ಮೈಲಿಗಲ್ಲುಗಳ ಮೂಲಕ ಸಾಗುತ್ತಿರುವ ಸಮಯದಲ್ಲಿ ಅವರ ಭೇಟಿ ಬಂದಿದೆ. ನಿಖರವಾಗಿ 25 ವರ್ಷಗಳ ಹಿಂದೆ, ಅಧ್ಯಕ್ಷ ಪುಟಿನ್ ನಮ್ಮ ಕಾರ್ಯತಂತ್ರದ ಪಾಲುದಾರಿಕೆಗೆ ಅಡಿಪಾಯ ಹಾಕಿದರು. ಹದಿನೈದು ವರ್ಷಗಳ ಹಿಂದೆ, 2010 ರಲ್ಲಿ, …

Read More »

ಕೃಷಿ ಕ್ಷೇತ್ರದಲ್ಲಿ ಭಾರತ-ರಷ್ಯಾ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಕೇಂದ್ರ ಕೃಷಿ ಸಚಿವರು ರಷ್ಯಾದ ತಮ್ಮ ಸಹವರ್ತಿಯೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ರಷ್ಯಾ ಒಕ್ಕೂಟದ ಕೃಷಿ ಸಚಿವರಾದ ಗೌರವಾನ್ವಿತ ಶ್ರೀಮತಿ ಒಕ್ಸಾನಾ ಲುಟ್ ಅವರೊಂದಿಗೆ 2025ರ ಡಿಸೆಂಬರ್ 4 ರಂದು ಕೃಷಿ ಭವನದಲ್ಲಿ ದ್ವಿಪಕ್ಷೀಯ ಸಭೆ ನಡೆಸಿದರು. ಈ ಸಭೆಯಲ್ಲಿ ಉಭಯ ನಾಯಕರು ಪ್ರಸ್ತುತ ನಡೆಯುತ್ತಿರುವ ಸಹಕಾರದ ಕುರಿತು ಚರ್ಚಿಸಿದರು ಮತ್ತು ಭವಿಷ್ಯದ ಸಹಯೋಗದ ಕ್ಷೇತ್ರಗಳನ್ನು ಗುರುತಿಸಿದರು. ಭಾರತ ಮತ್ತು ರಷ್ಯಾ ಸಂಬಂಧಗಳು ವಿಶ್ವಾಸ, ಸ್ನೇಹ ಮತ್ತು …

Read More »

ನಾಗರಿಕರ ಅನುಕೂಲ ಮತ್ತು ಸುರಕ್ಷತೆಗಾಗಿ ಡಿಜಿಲಾಕರ್ ನಲ್ಲಿ ಈಗ ‘ಪಾಸ್ ಪೋರ್ಟ್ ಪರಿಶೀಲನಾ ದಾಖಲೆ’ ಲಭ್ಯ

ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿರುವ ‘ರಾಷ್ಟ್ರೀಯ ಇ-ಆಡಳಿತ ವಿಭಾಗ’ವು, ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಸಹಯೋಗದೊಂದಿಗೆ ಡಿಜಿಲಾಕರ್ ಪ್ಲಾಟ್ ಫಾರ್ಮ್ ನಲ್ಲಿ ‘ಪಾಸ್ ಪೋರ್ಟ್ ಪರಿಶೀಲನಾ ದಾಖಲೆ’ (PVR) ಸೌಲಭ್ಯವನ್ನು ಒದಗಿಸುವ ಮೂಲಕ ನಾಗರಿಕ ಸೇವೆಗಳಲ್ಲಿ ಮಹತ್ವದ ಸುಧಾರಣೆಯನ್ನು ಘೋಷಿಸಿದೆ. ಡಿಜಿಲಾಕರ್ ಎನ್ನುವುದು ಡಿಜಿಟಲ್ ಇಂಡಿಯಾ ಕಾರ್ಯಕ್ರಮದಡಿಯಲ್ಲಿರುವ ಒಂದು ಸುರಕ್ಷಿತ ಹಾಗೂ ಕ್ಲೌಡ್ ಆಧಾರಿತ ವೇದಿಕೆಯಾಗಿದೆ. ಇದು ಡಿಜಿಟಲ್ ದಾಖಲೆಗಳು ಮತ್ತು ಪ್ರಮಾಣಪತ್ರಗಳ ವಿತರಣೆ, ಸಂಗ್ರಹಣೆ, ಹಂಚಿಕೆ ಮತ್ತು ಪರಿಶೀಲನೆಗೆ ಅನುವು ಮಾಡಿಕೊಡುತ್ತದೆ. ನಾಗರಿಕರ …

Read More »

ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3

ಗೌರವಾನ್ವಿತರೇ, ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ. ’ಹಣಕಾಸು ಕೇಂದ್ರಿತ’ ಬದಲು ‘ಮಾನವ ಕೇಂದ್ರಿತ’, ಕೇವಲ ‘ರಾಷ್ಟ್ರೀಯ’ ಬದಲು ‘ಜಾಗತಿಕ’ ಮತ್ತು ‘ವಿಶೇಷ’ ಬದಲು ‘ಓಪನ್ ಸೋರ್ಸ್’ ಮಾದರಿಗಳನ್ನು …

Read More »

ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ

ಗೌರವಾನ್ವಿತ ಅಧ್ಯಕ್ಷ ರಾಮಫೋಸಾ, ಗೌರವಾನ್ವಿತ ಅಧ್ಯಕ್ಷ ಲೂಲಾ, ಸ್ನೇಹಿತರೇ, ನಮಸ್ಕಾರ! ಜೋಹಾನ್ಸ್‌ಬರ್ಗ್‌ನ ರೋಮಾಂಚಕ ಮತ್ತು ಸುಂದರ ನಗರದಲ್ಲಿ ನಡೆಯುತ್ತಿರುವ ಐಬಿಎಸ್‌ಎ ನಾಯಕರ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಉಪಕ್ರಮಕ್ಕಾಗಿ ಐಬಿಎಸ್‌ಎ ಅಧ್ಯಕ್ಷ ಲೂಲಾ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಅಧ್ಯಕ್ಷ ರಾಮಫೋಸಾ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು …

Read More »