Sunday, March 29 2026 | 10:01:15 AM
Breaking News

International

ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ  @MichealMartinTD ಅವರಿಗೆ  ಅಭಿನಂದನೆಗಳು. ಹಂಚಿಕೆಯ ಮೌಲ್ಯಗಳ ಭದ್ರ ಬುನಾದಿ ಮತ್ತು ಜನರ ನಡುವಿನ ಆಳವಾದ ಸಂಪರ್ಕವನ್ನು ಆಧರಿಸಿದ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ …

Read More »

ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಕ್ಕೆ ಹೈದರಬಾದಿನ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರ (INCOIS) ಆಯ್ಕೆಯಾಗಿದೆ

ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರವನ್ನು (INCOIS) ವಿಪತ್ತು ನಿರ್ವಹಣೆಯಲ್ಲಿನ ಅತ್ಯುತ್ತಮ ಕೆಲಸಕ್ಕಾಗಿ ಸಾಂಸ್ಥಿಕ ವಿಭಾಗದಲ್ಲಿ ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ-2025 ಗೆ ಆಯ್ಕೆ ಮಾಡಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೇಂದ್ರ ಸರ್ಕಾರವು ವಿಪತ್ತು ಕ್ಷೇತ್ರದಲ್ಲಿ ಭಾರತದಲ್ಲಿನ ವ್ಯಕ್ತಿಗಳು ಮತ್ತು ಸಂಸ್ಥೆಗಳು ಸಲ್ಲಿಸಿದ ಅಮೂಲ್ಯ ಕೊಡುಗೆ ಮತ್ತು ನಿಸ್ವಾರ್ಥ ಸೇವೆಯನ್ನು ಗುರುತಿಸಲು ಮತ್ತು ಗೌರವಿಸಲು ಸುಭಾಷ್ ಚಂದ್ರ ಬೋಸ್ ಆಪ್ತ ಪ್ರಬಂಧನ್ ಪುರಸ್ಕಾರ್ …

Read More »

ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್‌ನಲ್ಲಿ …

Read More »

ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನ ಸಮಾವೇಶದಲ್ಲಿ 09.01.2025ರಂದು ಕೇಂದ್ರ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಂಎಸ್ ಎಂಇ) ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಭಾಗಿ

ಒಡಿಶಾದ ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 9ರಂದು ಉದ್ಘಾಟಿಸಿದರು. “ವಿಕಸಿತ ಭಾರತಕ್ಕೆ ಅನಿವಾಸಿ ಭಾರತೀಯರ ಕೊಡುಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮವು ರಾಷ್ಟ್ರ ನಿರ್ಮಾಣದಲ್ಲಿ ಭಾರತದ ವಲಸಿಗರ ಪ್ರಮುಖ ಪಾತ್ರವನ್ನು ಪ್ರಮುಖವಾಗಿ ಎತ್ತಿ ತೋರಿಸುತ್ತಿದೆ.ಈ ಕಾರ್ಯಕ್ರಮದಲ್ಲಿ ನಾನಾ ಸಚಿವರು, ಅಧಿಕಾರಿಗಳು ಮತ್ತು ಗಮನಾರ್ಹ ಸಂಖ್ಯೆಯ ಪ್ರವಾಸಿ ಭಾರತೀಯರು ಭಾಗವಹಿಸಿದ್ದಾರೆ. ಕೇಂದ್ರ ಎಂಎಸ್ಎಂಇ ಮತ್ತು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ, ಎಂಎಸ್ ಎಂಇ ಮತ್ತು ಅದರ ಸಂಸ್ಥೆಗಳು ತೆರೆದಿರುವ ಥೀಮ್ ಪೆವಿಲಿಯನ್ ಗೆ ಭೇಟಿ ನೀಡಿದ್ದರು. ಭುವನೇಶ್ವರದ ಕೇಂದ್ರೀಯ ಯಂತ್ರಾಗಾರ ಮತ್ತು ತರಬೇತಿ ಕೇಂದ್ರ (ಸಿಟಿಟಿಸಿ) ಅಭಿವೃದ್ಧಿಪಡಿಸಿರುವ ಚಂದ್ರಯಾನ-3 ಮಾದರಿಯನ್ನು ಪ್ರದರ್ಶಿಸಲಾಯಿತು. ಈ ಕೇಂದ್ರವು ಉತ್ತಮ ಗುಣಮಟ್ಟದ ನಿರ್ಣಾಯಕ ಘಟಕಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದು ಚಂದ್ರಯಾನ -3 ಮಿಷನ್ ಮತ್ತು “ಮೇಕ್ ಇನ್ ಇಂಡಿಯಾ” ಉಪಕ್ರಮದ ಯಶಸ್ಸಿಗೆ ಗಮನಾರ್ಹ ಕೊಡುಗೆ ನೀಡಿದೆ. ಅಲ್ಲದೆ, ಸಚಿವರು ಎಆರ್-ವಿಆರ್ ಅನುಭವ ಕೇಂದ್ರಗಳು, ಡ್ರೋಣ್‌ ತಂತ್ರಜ್ಞಾನಗಳು ಮತ್ತು ಸೌರ ಫಲಕ ಉತ್ಪಾದನಾ ಘಟಕಗಳು ಸೇರಿದಂತೆ ಹೊಸ ತಂತ್ರಜ್ಞಾನ ಪ್ರದರ್ಶನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅವರು ಖಾದಿ ಚರಕಗಳು, ಕೈ ಮಗ್ಗಗಳು ಮತ್ತು ಪೇಪರ್ ಮ್ಯಾಚೆಯಂತಹ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ಪ್ರದರ್ಶಿಸುವ ಖಾದಿ ಮತ್ತು ಗ್ರಾಮೋದ್ಯೋಗ ಕುಶಲಕರ್ಮಿಗಳೊಂದಿಗೆ ಸಮಾಲೋಚಿಸಿದರು. ಅವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 17ರಂದು ಉದ್ಘಾಟಿಸಿದ ಈ ಯೋಜನೆಯು, 18 ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಮತ್ತು ಕಸುಬುದಾರರಿಗೆ ಸಂಪೂರ್ಣ ಆರ್ಥಿಕ ನೆರವನ್ನು ಒದಗಿಸುವ ಎಂಎಸ್ ಎಂಇ ಸಚಿವಾಲಯದ ಪ್ರಮುಖ ಯೋಜನೆಯಾಗಿದೆ. ವೈದ್ಯಕೀಯ ಸಾಧನಗಳು, ಏರೋ ಎಂಜಿನಿಯರಿಂಗ್, ನೀರು ಶುದ್ಧೀಕರಣ ತಂತ್ರಜ್ಞಾನಗಳು ಮತ್ತು ರೇಷ್ಮೆ ಮತ್ತು ತೆಂಗಿನ ನಾರಿನ ಉತ್ಪನ್ನಗಳಂತಹ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಭಾರತದ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಸುಶ್ರೀ ಶೋಭಾ ಕರಂದ್ಲಾಜೆ ಅವರು “ಚರಕದಿಂದ ಚಂದ್ರಯಾನಕ್ಕೆ” ಎಂಬ ಸೂಕ್ತ ಶೀರ್ಷಿಕೆಯ ಎಂಎಸ್ಎಂಇ ವಲಯದ ಥೀಮ್ ಮಳಿಗೆಯನ್ನು ಶ್ಲಾಘಿಸಿದರು. ಅವರು ದುಬೈನ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಿದರು. ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ಒತ್ತಿ ಹೇಳಿದರು. 2047ರ ವೇಳೆಗೆ “ವಿಕಸಿತ ಭಾರತ” ಗುರಿ ಸಾಧಿಸುವ ಗೌರವಾನ್ವಿತ ಪ್ರಧಾನ ಮಂತ್ರಿಯವರ ದೂರದೃಷ್ಟಿಯ ಸಾಕಾರದಲ್ಲಿ ಅನಿವಾಸಿ ಭಾರತೀಯರ ಪಾತ್ರ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು. ಪ್ರವಾಸಿ ಭಾರತೀಯರು ತಮ್ಮ ಬೇರುಗಳೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ಮತ್ತು ಭಾರತದ ಪ್ರಗತಿಗಾಥೆಗೆ ಸಕ್ರಿಯ ಕೊಡುಗೆ ನೀಡುವಂತೆ ಸಚಿವರು  ಪ್ರೋತ್ಸಾಹಿಸಿದರು.

Read More »

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …

Read More »

ಪ್ರಧಾನಮಂತ್ರಿ ಅವರಿಗೆ ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರು ಕುವೈತ್‌ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಮುಬಾರಕ್ ಅಲ್-ಕಬೀರ್ ಆರ್ಡರ್ ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿದರು. ಕುವೈತ್‌ ಪ್ರಧಾನಿ ಶೇಖ್ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಭಾರತ ಮತ್ತು ಕುವೈತ್ ನಡುವಿನ ದೀರ್ಘಕಾಲದ ಮೈತ್ರಿಗೆ ಹಾಗೂ ಕುವೈತ್‌ನಲ್ಲಿರುವ ಭಾರತೀಯ ಸಮುದಾಯ ಮತ್ತು ಭಾರತದ 1.4 ಶತಕೋಟಿ …

Read More »

ಪ್ರಧಾನಮಂತ್ರಿಗಳಿಂದ ಕುವೈತ್‌ನ ಅಮೀರ್ ಅವರ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಕುವೈತ್‌ನ ಅಮೀರ್ ಆಗಿರುವ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಬೇರ್ ಅಲ್-ಸಬಾಹ್ ಅವರನ್ನು ಭೇಟಿ ಮಾಡಿದರು. ಇದು ಉಭಯ ನಾಯಕರ ನಡುವಿನ ಮೊದಲ ಭೇಟಿಯಾಗಿತ್ತು. ಬಯಾನ್ ಅರಮನೆಗೆ ಆಗಮಿಸಿದಾಗ, ಪ್ರಧಾನಿ ಮೋದಿ ಅವರಿಗೆ ಔಪಚಾರಿಕ ಸ್ವಾಗತ ನೀಡಲಾಯಿತು ಮತ್ತು ಕುವೈತ್ ಪ್ರಧಾನಿ ಅಹ್ಮದ್ ಅಲ್-ಅಬ್ದುಲ್ಲಾ ಅಲ್-ಅಹ್ಮದ್ ಅಲ್-ಸಬಾಹ್ ಅವರು ಪ್ರಧಾನಮಂತ್ರಿ ಅವರನ್ನು ಬರಮಾಡಿಕೊಂಡರು. ಎರಡೂ ದೇಶಗಳ ನಡುವಿನ ಬಲವಾದ ಐತಿಹಾಸಿಕ ಮತ್ತು ಸೌಹಾರ್ದ ಸಂಬಂಧಗಳನ್ನು …

Read More »

ಕುವೈತ್ ಗೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ಹೇಳಿಕೆ

ಇಂದು, ಕುವೈತ್ ನ ಅಮೀರ್ ಅವರ ಹೈನೆಸ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ನಾನು ಕುವೈತ್ ಗೆ ಎರಡು ದಿನಗಳ ಭೇಟಿಯನ್ನು ಪ್ರಾರಂಭಿಸುತ್ತಿದ್ದೇನೆ. ಕುವೈತ್ ಜೊತೆಗಿನ ನಮ್ಮ ಸಂಬಂಧ ತಲೆಮಾರುಗಳಿಂದ ಬೆಳೆದು ಬಂದಿದೆ. ಇದನ್ನು ನಾವು ತುಂಬಾ ಮುಖ್ಯವೆಂದು ಭಾವಿಸುತ್ತೇವೆ. ನಾವು ಉತ್ತಮ ವ್ಯಾಪಾರ ಮತ್ತು ಇಂಧನ ಪಾಲುದಾರರು ಮಾತ್ರವಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ, ಭದ್ರತೆ ಮತ್ತು ಸಮೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುತ್ತೇವೆ. ಕುವೈತ್ …

Read More »

ಕುವೈತ್ ನಲ್ಲಿ 101 ವರ್ಷದ ಮಾಜಿ ಐ ಎಫ್ ಎಸ್ ಅಧಿಕಾರಿಯನ್ನು ಭೇಟಿಯಾಗಲು ಪ್ರಧಾನಮಂತ್ರಿ ಎದುರು ನೋಡುತ್ತಿದ್ದಾರೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಗೆ ಮಾಡಿದ ಮನವಿಗೆ ಸ್ಪಂದಿಸಿದ ಪ್ರಧಾನಮಂತ್ರಿ ಅವರು, ಇಂದು ಕುವೈತ್ ನಲ್ಲಿ 101 ವರ್ಷದ ಮಾಜಿ ಐಎಫ್ ಎಸ್ ಅಧಿಕಾರಿ ಶ್ರೀ ಮಂಗಲ್ ಸೈನ್ ಹಂಡಾ ಜೀ ಅವರನ್ನು ಭೇಟಿ ಮಾಡಲು ತಾವು ಎದುರು ನೋಡುತ್ತಿರುವುದಾಗಿ ತಿಳಿಸಿದರು. ಈ ಕುರಿತು ಎಕ್ಸ್ ಖಾತೆಯಲ್ಲಿ ಅವರು ಹೀಗೆ ಬರೆದಿದ್ದಾರೆ: “ಖಂಡಿತ! ನಾನು ಇಂದು ಕುವೈತ್ ನಲ್ಲಿ @MangalSainHanda ಜೀ ಅವರನ್ನು ಭೇಟಿಯಾಗಲು ಎದುರು ನೋಡುತ್ತಿದ್ದೇನೆ,’’ ಎಂದಿದ್ದಾರೆ. …

Read More »