Tuesday, February 03 2026 | 09:59:46 PM
Breaking News

National

ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು. ಇಂದು ಭಾರತದ ಕಡಲ ಪರಂಪರೆ, ನೌಕಾಪಡೆಯ ಭವ್ಯ ಇತಿಹಾಸ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ದೊಡ್ಡ ದಿನವಾಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಛತ್ರಪತಿ ಶಿವಾಜಿ ಮಹಾರಾಜ್ ಅವರು ಭಾರತದ ನೌಕಾಪಡೆಗೆ ಹೊಸ ಶಕ್ತಿ ಮತ್ತು ದೂರದೃಷ್ಟಿಯನ್ನು ನೀಡಿದರು ಎಂದರು. ಶಿವಾಜಿ ಮಹಾರಾಜರ ಭೂಮಿಯಲ್ಲಿ 21ನೇ ಶತಮಾನದ ಭಾರತದ ನೌಕಾಪಡೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇಂದು ಪ್ರಮುಖ ಹೆಜ್ಜೆ ಇಟ್ಟಿದೆ ಎಂದರು. “ಇದೇ ಮೊದಲ ಬಾರಿಗೆ ವಿಧ್ವಂಸಕ ನೌಕೆ, ಯುದ್ಧನೌಕೆ ಮತ್ತು ಜಲಾಂತರ್ಗಾಮಿ ನೌಕೆಯ ತ್ರಿ-ಕಾರ್ಯಾರಂಭ ಮಾಡಲಾಗುತ್ತಿದೆ” ಎಂದು ಪ್ರಧಾನಿ ಒತ್ತಿ ಹೇಳಿದರು. ಎಲ್ಲಾ ಮೂರು ಮುಂಚೂಣಿ ನೌಕೆಗಳನ್ನು ಭಾರತದಲ್ಲಿ ತಯಾರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಸಾಧನೆಗಾಗಿ ಅವರು ಭಾರತೀಯ ನೌಕಾಪಡೆ, ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದರು. “ಇಂದಿನ ಕಾರ್ಯಕ್ರಮವು ನಮ್ಮ ಭವ್ಯ ಪರಂಪರೆಯನ್ನು ನಮ್ಮ ಭವಿಷ್ಯದ ಆಕಾಂಕ್ಷೆಗಳೊಂದಿಗೆ ಸಂಪರ್ಕಿಸುತ್ತದೆ” ಎಂದು ಶ್ರೀ ಮೋದಿ ಉದ್ಗರಿಸಿದರು. ಭಾರತವು ದೀರ್ಘ ಸಮುದ್ರಯಾನ, ವಾಣಿಜ್ಯ, ನೌಕಾ ರಕ್ಷಣೆ ಮತ್ತು ಹಡಗು ಉದ್ಯಮಕ್ಕೆ ಸಂಬಂಧಿಸಿದ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಶ್ರೀಮಂತ ಇತಿಹಾಸವನ್ನು ಉಲ್ಲೇಖಿಸಿದ  ಅವರು, ಇಂದಿನ ಭಾರತವು ವಿಶ್ವದ ಪ್ರಮುಖ ಕಡಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದರು. ಇಂದು ಕಾರ್ಯಾರಂಭ ಮಾಡಲಾದ ನೌಕೆಗಳು ಅದರ ಒಂದು ನೋಟವನ್ನು ಪ್ರದರ್ಶಿಸಿವೆ ಎಂದೂ ಅವರು ಹೇಳಿದರು. ಚೋಳ ರಾಜವಂಶದ ಕಡಲ ಪರಾಕ್ರಮಕ್ಕೆ ಸಮರ್ಪಿತವಾದ ಐಎನ್ ಎಸ್ ನೀಲಗಿರಿ ಮತ್ತು ಸೂರತ್ ಯುದ್ಧನೌಕೆ ಸೇರಿದಂತೆ ಹೊಸ ನೌಕೆಗಳ ಆರಂಭವನ್ನು ಪ್ರಧಾನಿ ಉಲ್ಲೇಖಿಸಿದರು, ಇದು ಗುಜರಾತ್ ನ ಬಂದರುಗಳು ಭಾರತವನ್ನು ಪಶ್ಚಿಮ ಏಷ್ಯಾದೊಂದಿಗೆ ಸಂಪರ್ಕಿಸಿದ ಯುಗವನ್ನು ನೆನಪಿಸುತ್ತದೆ. ಕೆಲವು ವರ್ಷಗಳ ಹಿಂದೆ ಮೊದಲ ಜಲಾಂತರ್ಗಾಮಿ ನೌಕೆ ಕಲ್ವರಿಯನ್ನು ನಿಯೋಜಿಸಿದ ನಂತರ ಪಿ 75 ವರ್ಗದಲ್ಲಿ ಆರನೇ ವಗ್ಶೀರ್ ಜಲಾಂತರ್ಗಾಮಿ ನೌಕೆಯನ್ನು ನಿಯೋಜಿಸಿದ್ದನ್ನು ಅವರು ಉಲ್ಲೇಖಿಸಿದರು. ಈ ಹೊಸ ಗಡಿನಾಡಿನ ರಕ್ಷಣಾ ವೇದಿಕೆಗಳು ಭಾರತದ ಭದ್ರತೆ ಮತ್ತು ಪ್ರಗತಿ ಎರಡನ್ನೂ ಹೆಚ್ಚಿಸುತ್ತವೆ ಎಂದು ಪ್ರಧಾನಿ ವಿವರಿಸಿದರು. “ಭಾರತವು ಇಂದು ಜಾಗತಿಕವಾಗಿ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿ ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಪಾಲುದಾರನಾಗಿ ಗುರುತಿಸಲ್ಪಟ್ಟಿದೆ” ಎಂದು ಪ್ರಧಾನಿ ಉದ್ಗರಿಸಿದರು. ಭಾರತವು ಅಭಿವೃದ್ಧಿಯ ಮನೋಭಾವದಿಂದ ಕಾರ್ಯನಿರ್ವಹಿಸುತ್ತದೆಯೇ ಹೊರತು ವಿಸ್ತರಣಾವಾದದಿಂದಲ್ಲ ಎಂದು ಅವರು ಒತ್ತಿ ಹೇಳಿದರು. ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶವನ್ನು ಭಾರತ ಸದಾ ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ಕರಾವಳಿ ರಾಷ್ಟ್ರಗಳ ಅಭಿವೃದ್ಧಿಯ ವಿಷಯಕ್ಕೆ ಬಂದಾಗ, ಭಾರತವು ಸಾಗರ್ (ಈ ಪ್ರದೇಶದ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ) ಮಂತ್ರವನ್ನು ಪರಿಚಯಿಸಿತು ಮತ್ತು ಈ ದೃಷ್ಟಿಕೋನದೊಂದಿಗೆ ಮುಂದುವರಿಯಿತು ಎಂಬುದರತ್ತ  ಅವರು ಬೆಟ್ಟು ಮಾಡಿದರು. “ಒಂದು ಭೂಮಿ, …

Read More »

ಭಾರತದ ನವೀಕರಿಸಬಹುದಾದ ಇಂಧನ ಸಾಮರ್ಥ್ಯವು ವರ್ಷದಿಂದ ವರ್ಷಕ್ಕೆ 15.84% ಬೆಳವಣಿಗೆಯನ್ನು ದಾಖಲಿಸಿದೆ

ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯವು (ಎಂ.ಎನ್.ಆರ್.ಇ.) ಭಾರತದ ನವೀಕರಿಸಬಹುದಾದ ಇಂಧನ ವಲಯದಲ್ಲಿ ಗಮನಾರ್ಹ ಪ್ರಗತಿಯನ್ನು ವರದಿ ಮಾಡಿದೆ. ಇದು ಡಿಸೆಂಬರ್ 2023 ಮತ್ತು ಡಿಸೆಂಬರ್ 2024ರ ನಡುವಿನ ಗಮನಾರ್ಹ ಸಾಧನೆಗಳನ್ನು ಎತ್ತಿ ತೋರಿಸುತ್ತದೆ. ಈ ಬೆಳವಣಿಗೆಯು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಘೋಷಿಸಿದ ‘ಪಂಚಾಮೃತ’ ಯೋಜನೆಯ ಗುರಿಗಳ ದೃಷ್ಟಿಕೋನದ ಅಡಿಯಲ್ಲಿ ತನ್ನ ಶುದ್ಧ ಇಂಧನ ಗುರಿಗಳನ್ನು ಸಾಧಿಸುವ ಭಾರತದ ದೃಢ ಬದ್ಧತೆ ಮತ್ತು ಅದರ ವಿಶಾಲ …

Read More »

ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನ ಸಮಾವೇಶದಲ್ಲಿ 09.01.2025ರಂದು ಕೇಂದ್ರ ಸಣ್ಣ, ಅತಿಸಣ್ಣ ಹಾಗೂ ಮಧ್ಯಮ ಕೈಗಾರಿಕೆಗಳ (ಎಂಎಸ್ ಎಂಇ) ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ ಭಾಗಿ

ಒಡಿಶಾದ ಭುವನೇಶ್ವರದ ಜನತಾ ಮೈದಾನದಲ್ಲಿ ನಡೆಯುತ್ತಿರುವ 18ನೇ ಪ್ರವಾಸಿ ಭಾರತೀಯ ದಿನವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2025ರ ಜನವರಿ 9ರಂದು ಉದ್ಘಾಟಿಸಿದರು. “ವಿಕಸಿತ ಭಾರತಕ್ಕೆ ಅನಿವಾಸಿ ಭಾರತೀಯರ ಕೊಡುಗೆ” ಎಂಬ ಧ್ಯೇಯ ವಾಕ್ಯದೊಂದಿಗೆ ನಡೆಯುತ್ತಿರುವ ಈ ಕಾರ್ಯಕ್ರಮವು ರಾಷ್ಟ್ರ ನಿರ್ಮಾಣದಲ್ಲಿ ಭಾರತದ ವಲಸಿಗರ ಪ್ರಮುಖ ಪಾತ್ರವನ್ನು ಪ್ರಮುಖವಾಗಿ ಎತ್ತಿ ತೋರಿಸುತ್ತಿದೆ.ಈ ಕಾರ್ಯಕ್ರಮದಲ್ಲಿ ನಾನಾ ಸಚಿವರು, ಅಧಿಕಾರಿಗಳು ಮತ್ತು ಗಮನಾರ್ಹ ಸಂಖ್ಯೆಯ ಪ್ರವಾಸಿ ಭಾರತೀಯರು ಭಾಗವಹಿಸಿದ್ದಾರೆ. ಕೇಂದ್ರ ಎಂಎಸ್ಎಂಇ ಮತ್ತು ಕಾರ್ಮಿಕ ಹಾಗೂ ಉದ್ಯೋಗ ಖಾತೆ ರಾಜ್ಯ ಸಚಿವರಾದ ಸುಶ್ರೀ ಶೋಭಾ ಕರಂದ್ಲಾಜೆ, ಎಂಎಸ್ ಎಂಇ ಮತ್ತು ಅದರ ಸಂಸ್ಥೆಗಳು ತೆರೆದಿರುವ ಥೀಮ್ ಪೆವಿಲಿಯನ್ ಗೆ ಭೇಟಿ ನೀಡಿದ್ದರು. ಭುವನೇಶ್ವರದ ಕೇಂದ್ರೀಯ ಯಂತ್ರಾಗಾರ ಮತ್ತು ತರಬೇತಿ ಕೇಂದ್ರ (ಸಿಟಿಟಿಸಿ) ಅಭಿವೃದ್ಧಿಪಡಿಸಿರುವ ಚಂದ್ರಯಾನ-3 ಮಾದರಿಯನ್ನು ಪ್ರದರ್ಶಿಸಲಾಯಿತು. ಈ ಕೇಂದ್ರವು ಉತ್ತಮ ಗುಣಮಟ್ಟದ ನಿರ್ಣಾಯಕ ಘಟಕಗಳ ತಯಾರಿಕೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಇದು ಚಂದ್ರಯಾನ -3 ಮಿಷನ್ ಮತ್ತು “ಮೇಕ್ ಇನ್ ಇಂಡಿಯಾ” ಉಪಕ್ರಮದ ಯಶಸ್ಸಿಗೆ ಗಮನಾರ್ಹ ಕೊಡುಗೆ ನೀಡಿದೆ. ಅಲ್ಲದೆ, ಸಚಿವರು ಎಆರ್-ವಿಆರ್ ಅನುಭವ ಕೇಂದ್ರಗಳು, ಡ್ರೋಣ್‌ ತಂತ್ರಜ್ಞಾನಗಳು ಮತ್ತು ಸೌರ ಫಲಕ ಉತ್ಪಾದನಾ ಘಟಕಗಳು ಸೇರಿದಂತೆ ಹೊಸ ತಂತ್ರಜ್ಞಾನ ಪ್ರದರ್ಶನ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಅವರು ಖಾದಿ ಚರಕಗಳು, ಕೈ ಮಗ್ಗಗಳು ಮತ್ತು ಪೇಪರ್ ಮ್ಯಾಚೆಯಂತಹ ಸಾಂಪ್ರದಾಯಿಕ ಕರಕುಶಲ ವಸ್ತುಗಳನ್ನು ಪ್ರದರ್ಶಿಸುವ ಖಾದಿ ಮತ್ತು ಗ್ರಾಮೋದ್ಯೋಗ ಕುಶಲಕರ್ಮಿಗಳೊಂದಿಗೆ ಸಮಾಲೋಚಿಸಿದರು. ಅವರು ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು. ಭಾರತದ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2023ರ ಸೆಪ್ಟೆಂಬರ್ 17ರಂದು ಉದ್ಘಾಟಿಸಿದ ಈ ಯೋಜನೆಯು, 18 ವ್ಯಾಪಾರಗಳಲ್ಲಿ ತೊಡಗಿರುವ ಕುಶಲಕರ್ಮಿಗಳು ಮತ್ತು ಕಸುಬುದಾರರಿಗೆ ಸಂಪೂರ್ಣ ಆರ್ಥಿಕ ನೆರವನ್ನು ಒದಗಿಸುವ ಎಂಎಸ್ ಎಂಇ ಸಚಿವಾಲಯದ ಪ್ರಮುಖ ಯೋಜನೆಯಾಗಿದೆ. ವೈದ್ಯಕೀಯ ಸಾಧನಗಳು, ಏರೋ ಎಂಜಿನಿಯರಿಂಗ್, ನೀರು ಶುದ್ಧೀಕರಣ ತಂತ್ರಜ್ಞಾನಗಳು ಮತ್ತು ರೇಷ್ಮೆ ಮತ್ತು ತೆಂಗಿನ ನಾರಿನ ಉತ್ಪನ್ನಗಳಂತಹ ಸ್ಥಳೀಯ ಕರಕುಶಲ ವಸ್ತುಗಳಲ್ಲಿ ಭಾರತದ ಪ್ರಗತಿಯನ್ನು ಪ್ರಮುಖವಾಗಿ ಪ್ರಸ್ತಾಪಿಸಿದ ಸುಶ್ರೀ ಶೋಭಾ ಕರಂದ್ಲಾಜೆ ಅವರು “ಚರಕದಿಂದ ಚಂದ್ರಯಾನಕ್ಕೆ” ಎಂಬ ಸೂಕ್ತ ಶೀರ್ಷಿಕೆಯ ಎಂಎಸ್ಎಂಇ ವಲಯದ ಥೀಮ್ ಮಳಿಗೆಯನ್ನು ಶ್ಲಾಘಿಸಿದರು. ಅವರು ದುಬೈನ ಅನಿವಾಸಿ ಭಾರತೀಯರೊಂದಿಗೆ ಸಂವಾದ ನಡೆಸಿದರು. ಜಾಗತಿಕವಾಗಿ ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ಒತ್ತಿ ಹೇಳಿದರು. 2047ರ ವೇಳೆಗೆ “ವಿಕಸಿತ ಭಾರತ” ಗುರಿ ಸಾಧಿಸುವ ಗೌರವಾನ್ವಿತ ಪ್ರಧಾನ ಮಂತ್ರಿಯವರ ದೂರದೃಷ್ಟಿಯ ಸಾಕಾರದಲ್ಲಿ ಅನಿವಾಸಿ ಭಾರತೀಯರ ಪಾತ್ರ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು. ಪ್ರವಾಸಿ ಭಾರತೀಯರು ತಮ್ಮ ಬೇರುಗಳೊಂದಿಗೆ ಮತ್ತೆ ಸಂಪರ್ಕ ಸಾಧಿಸುವಂತೆ ಮತ್ತು ಭಾರತದ ಪ್ರಗತಿಗಾಥೆಗೆ ಸಕ್ರಿಯ ಕೊಡುಗೆ ನೀಡುವಂತೆ ಸಚಿವರು  ಪ್ರೋತ್ಸಾಹಿಸಿದರು.

Read More »

ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …

Read More »

ಎಚ್ ಎಂ ಪಿ ವಿ ಕುರಿತು ಇತ್ತೀಚಿನ ಮಾಹಿತಿ

ಭಾರತದಲ್ಲಿನ ಉಸಿರಾಟದ ಕಾಯಿಲೆಗಳ ಪ್ರಸ್ತುತ ಪರಿಸ್ಥಿತಿ ಮತ್ತು ಚೀನಾದಲ್ಲಿ ಎಚ್‌ಎಂಪಿವಿ ಪ್ರಕರಣಗಳ ಮಾಧ್ಯಮ ವರದಿಗಳ ನಂತರ ದೇಶದಲ್ಲಿನ ಎಚ್‌ಎಂಪಿವಿ ಪ್ರಕರಣಗಳ ಸ್ಥಿತಿಗತಿ ಹಾಗೂ ಅವುಗಳ ನಿರ್ವಹಣೆಗಾಗಿ ಕೈಗೊಂಡಿರುವ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಪರಿಶೀಲಿಸಲು ಕೇಂದ್ರ ಆರೋಗ್ಯ ಕಾರ್ಯದರ್ಶಿ ಶ್ರೀಮತಿ ಪುಣ್ಯ ಸಲೀಲಾ ಶ್ರೀವಾಸ್ತವ ಅವರು ನಿನ್ನೆ ವರ್ಚುವಲ್ ಮಾದರಿಯಲ್ಲಿ ರಾಜ್ಯಗಳು/ಕೇಂದ್ರಾಳಿತ ಪ್ರದೇಶಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯದರ್ಶಿ (ಎ ಎಚ್ ಆರ್) ಡಾ.ರಾಜೀವ್ ಬಹ್ಲ್‌, ಡಿ ಜಿ ಎಚ್ ಎಸ್ …

Read More »

ನಾಗರಿಕ ಕೇಂದ್ರಿತ ಆಡಳಿತದ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ: ಪ್ರಧಾನಮಂತ್ರಿ

ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು, “ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಹೇಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು. ಶ್ರೀ ಗುರು ಗೋಬಿಂದ್ ಸಿಂಗ್‌ ಅವರ ಜಯಂತಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, …

Read More »

ಮೆಟ್ರೋ ಸಂಪರ್ಕವನ್ನು ಹೆಚ್ಚಿಸುವಲ್ಲಿ, ನಗರ ಸಾರಿಗೆಯನ್ನು ಬಲಪಡಿಸುವಲ್ಲಿ ಮಾಡಿದ ವ್ಯಾಪಕವಾದ ಕೆಲಸಕಾರ್ಯಗಳನ್ನು ವಿವರಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತದಾದ್ಯಂತ ಮೆಟ್ರೋ ಸಂಪರ್ಕವನ್ನು ವಿಸ್ತರಿಸುವಲ್ಲಿ ಆಗಿರುವ ಗಮನಾರ್ಹ ಪ್ರಗತಿಯನ್ನು ಮತ್ತು ನಗರ ಸಾರಿಗೆಯನ್ನು ಪರಿವರ್ತಿಸುವಲ್ಲಿ ಮತ್ತು ಲಕ್ಷಾಂತರ ನಾಗರಿಕರಿಗೆ ‘ಸುಗಮ ಜೀವನ’ ಸುಧಾರಿಸುವಲ್ಲಿ ಅದರ ಪ್ರಮುಖ ಪಾತ್ರವನ್ನು ಎತ್ತಿ ತೋರಿಸಿದ್ದಾರೆ. ಭಾರತದ ಮೆಟ್ರೋ ಕ್ರಾಂತಿಯ ಕುರಿತು ಎಕ್ಸ್ ತಾಣದಲ್ಲಿ ಮೈಗೌವ್ ಮಾಡಿರುವ ಸರಣಿ ಸಂದೇಶಕ್ಕೆ ಸ್ಪಂದಿಸಿ, ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಉತ್ತರಿಸಿದ್ದಾರೆ; “ಕಳೆದ ದಶಕದಲ್ಲಿ, ಮೆಟ್ರೋ ಸಂಪರ್ಕವನ್ನು …

Read More »

ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಯೋಜನೆಗಳ ಕುರಿತು ಪರಿಶೀಲನಾ ಸಭೆ ನಡೆಸಿದರು

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ನವದೆಹಲಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಸಚಿವಾಲಯದ ವಿವಿಧ ಯೋಜನೆಗಳ ವಾಸ್ತವ ಪರಿಶೀಲನಾ ಸಭೆಯನ್ನು ನಡೆಸಿದರು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಚಿವಾಲಯದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರಾಮೀಣ ಭಾರತ ಮಹೋತ್ಸವ 2025 ಉದ್ಘಾಟಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ 2024 ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು …

Read More »