Wednesday, December 10 2025 | 06:32:18 AM
Breaking News

National

ವಿಜಯ ದಿವಸದಂದು ವೀರ ಯೋಧರಿಗೆ ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿಜಯ ದಿವಸದ ಸಂದರ್ಭದಲ್ಲಿ ವೀರ ಯೋಧರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “1971ರಲ್ಲಿ ಭಾರತದ ಐತಿಹಾಸಿಕ ವಿಜಯಕ್ಕೆ ಕಾರಣರಾದ ಧೀರ ಯೋಧರ ಶೌರ್ಯ ಮತ್ತು ತ್ಯಾಗವನ್ನು ನಾವು ಇಂದು, ವಿಜಯ್ ದಿವಸದಂದು ಗೌರವಿಸುತ್ತೇವೆ. ಅವರ ನಿಸ್ವಾರ್ಥ ಸಮರ್ಪಣೆ ಮತ್ತು ಅಚಲವಾದ ಸಂಕಲ್ಪ ನಮ್ಮ ರಾಷ್ಟ್ರವನ್ನು ರಕ್ಷಿಸಿದೆ ಮತ್ತು ನಮಗೆ ಕೀರ್ತಿ ತಂದಿದೆ. ಅವರ ಅಪ್ರತಿಮ ಶೌರ್ಯ …

Read More »

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನಮನ

2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಗೌರವ ನಮನ ಸಲ್ಲಿಸಿದ್ದಾರೆ. ಈ ಕುರಿತು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು: “2001ರ ಸಂಸತ್ ದಾಳಿಯಲ್ಲಿ ಹುತಾತ್ಮರಾದವರಿಗೆ ಗೌರವ ನಮನಗಳು. ಅವರ ತ್ಯಾಗ ನಮ್ಮ ದೇಶದ ನಾಗರಿಕರಿಗೆ ಶಾಶ್ವತವಾಗಿ ಸ್ಫೂರ್ತಿ ನೀಡುತ್ತದೆ. ಅವರ ಧೈರ್ಯ ಮತ್ತು ಸಮರ್ಪಣೆಗಾಗಿ ನಾವು ಶಾಶ್ವತವಾಗಿ ಕೃತಜ್ಞರಾಗಿರುತ್ತೇವೆ.” ಎಂದು ತಿಳಿಸಿದ್ದಾರೆ.

Read More »

2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ನಡೆಯಲಿರುವ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿರುವ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2024ರ ಡಿಸೆಂಬರ್ 14 ಮತ್ತು 15ರಂದು ದೆಹಲಿಯಲ್ಲಿ ಮುಖ್ಯ ಕಾರ್ಯದರ್ಶಿಗಳ ನಾಲ್ಕನೇ ರಾಷ್ಟ್ರೀಯ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಪಾಲುದಾರಿಕೆಯನ್ನು ಮತ್ತಷ್ಟು ಹೆಚ್ಚಿಸುವ ನಿಟ್ಟಿನಲ್ಲಿ ಮತ್ತೊಂದು ಪ್ರಮುಖ ಹೆಜ್ಜೆಯಾಗಿದೆ. ಮುಖ್ಯ ಕಾರ್ಯದರ್ಶಿಗಳ ಸಮ್ಮೇಳನವು ಸಹಕಾರಿ ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ಮತ್ತು ತ್ವರಿತ ಬೆಳವಣಿಗೆ ಮತ್ತು ಅಭಿವೃದ್ಧಿಯನ್ನು ಸಾಧಿಸಲು ಕೇಂದ್ರ ಮತ್ತು ರಾಜ್ಯಗಳ ನಡುವೆ ಉತ್ತಮ ಸಮನ್ವಯವನ್ನು …

Read More »

ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತಿದೆ: ಪ್ರಧಾನಮಂತ್ರಿ

ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೆಚ್ಚಿಸುತ್ತಿದೆ ಎಂದು ಪ್ರಧಾನಿಯವರು ಇಂದು ಒತ್ತಿ ಹೇಳಿದರು. ತಮ್ಮ ಮನೆ ಬಾಗಿಲಿಗೆ ಶುದ್ಧ ನೀರನ್ನು ಒದಗಿಸುವುದರಿಂದ ಮಹಿಳೆಯರು ಈಗ ಕೌಶಲ್ಯ ಅಭಿವೃದ್ಧಿ ಮತ್ತು ಸ್ವಾವಲಂಬನೆಯತ್ತ ಗಮನ ಹರಿಸಬಹುದು ಎಂದು ಅವರು ಹೇಳಿದರು. Xನಲ್ಲಿ ವೀಡಿಯೊ ಪೋಸ್ಟ್ ಅನ್ನು ಹಂಚಿಕೊಂಡ ಪ್ರಧಾನಿಯವರು: “ಜಲ ಜೀವನ ಮಿಷನ್ ವಿಶೇಷವಾಗಿ ನಮ್ಮ ಗ್ರಾಮೀಣ ಪ್ರದೇಶಗಳಲ್ಲಿ ಮಹಿಳಾ ಸಬಲೀಕರಣವನ್ನು ಹೇಗೆ ಹೆಚ್ಚಿಸುತ್ತಿದೆ ಎಂಬುದರ …

Read More »

ಐಎಂಪಿಸಿಸಿ ಕರ್ನಾಟಕ ಸಭೆಯಲ್ಲಿ ವೇವ್ಸ್ ರೋಡ್‌ ಶೋ ನಾವೀನ್ಯತೆ ಮತ್ತು ಸಹಯೋಗದ ಪ್ರದರ್ಶನ

ಮೀಡಿಯಾ ಮತ್ತು ಎಂಟರ್ ಟೆನ್ಮೆಂಟ್ ಅಸೋಸಿಯೇಷನ್ ​​ಆಫ್ ಇಂಡಿಯಾ (ಎಂಇಎಐ) ಬೆಂಗಳೂರಿನಲ್ಲಿ ನಡೆದ ಅಂತರ-ಮಾಧ್ಯಮ ಪ್ರಚಾರ ಸಮನ್ವಯ ಸಮಿತಿ (ಐಎಂಪಿಸಿಸಿ) ಸಭೆಯಲ್ಲಿ ವೇವ್ಸ್ (ವರ್ಲ್ಡ್ ಆಡಿಯೋ ವಿಷುಯಲ್ ಎಂಟರ್‌ಟೈನ್‌ಮೆಂಟ್ ಸಮ್ಮಿಟ್) ನ ದೃಷ್ಟಿ ಮತ್ತು ಉದ್ದೇಶಗಳನ್ನು ಪ್ರಸ್ತುತಪಡಿಸಿತು. ಈ ಸಭೆಯ ಅಧ್ಯಕ್ಷತೆಯನ್ನು ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾನಿರ್ದೇಶಕ ಶ್ರೀ ಎಸ್ ಜಿ ರವೀಂದ್ರ ವಹಿಸಿದ್ದರು. ಐ ಐ ಎಚ್‌ ಎಂ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಇಸ್ರೋ ಪ್ರಧಾನ ಕಛೇರಿ, ಬೆಂಗಳೂರು …

Read More »

ಎಲ್ಲರನ್ನು ಒಳಗೊಳ್ಳುವ ಸಮಗ್ರ ಅಭಿವೃದ್ಧಿಗಾಗಿ ಭಾರತ ಎಐ ಮಿಷನ್ (ಕೃತಕ ಬುದ್ಧಿಮತ್ತೆ)ನ ಏಳು ಆಧಾರ ಸ್ತಂಭಗಳ ಮಹತ್ವವನ್ನು ಪ್ರಸ್ತಾಪಿಸಿದ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್

ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ, ರೈಲ್ವೆ ಮತ್ತು ವಾರ್ತಾ ಹಾಗು ಪ್ರಸಾರ  ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಲೋಕಸಭೆಯಲ್ಲಿ ಎಐ ಆಡಳಿತ ಮತ್ತು ಅಭಿವೃದ್ಧಿ ಕುರಿತ ಸಂಸತ್ತಿನ ಪ್ರಶ್ನೆಗೆ ಉತ್ತರಿಸಿ, ತಂತ್ರಜ್ಞಾನವನ್ನು ಪ್ರಜಾಸತ್ತಾತ್ಮಕಗೊಳಿಸುವ ಮೂಲಕ ಕೃತಕ ಬುದ್ಧಿಮತ್ತೆ (ಎಐ) ಗಾಗಿ ಇರುವ ಭಾರತ ಸರ್ಕಾರದ ದೃಷ್ಟಿಕೋನವನ್ನು ವಿವರಿಸಿದರು. ಏಳು ಉತ್ತಮವಾಗಿ ವ್ಯಾಖ್ಯಾನಿಸಲಾದ ಆಧಾರ ಸ್ತಂಭಗಳ ಮೇಲೆ ರೂಪಿಸಲಾಗಿರುವ ಇಂಡಿಯಾ ಎಐ ಮಿಷನ್ ನ ಪರಿವರ್ತಕ ಪರಿಣಾಮವನ್ನು ಕೇಂದ್ರ ಸಚಿವರು ಒತ್ತಿಹೇಳಿದರು, ರಾಷ್ಟ್ರೀಯ ಅಭಿವೃದ್ಧಿಗೆ ಎಐ ಅನ್ನು ಬಳಸಿಕೊಳ್ಳುವಲ್ಲಿ ಎಲ್ಲರ ಒಳಗೊಳ್ಳುವಿಕೆ ಮತ್ತು ನಾವೀನ್ಯತೆಯನ್ನು ಇದು ಖಚಿತಪಡಿಸುತ್ತದೆ ಎಂದರು. ಭವಿಷ್ಯದ ಕೌಶಲ್ಯಗಳಲ್ಲಿ ನೊಂದಾಯಿಸಿಕೊಂಡಿರುವ  ಜನರ ಸಂಖ್ಯೆಯ ಬಗ್ಗೆ ಸಂಸತ್ತಿನ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವರು, ಇತ್ತೀಚಿನ ಉದ್ಯಮದ ಅವಶ್ಯಕತೆಗಳಿಗೆ ಅನುಗುಣವಾಗಿ ತರಬೇತಿ ನೀಡಲು ಉದ್ಯಮ ಪಾಲುದಾರರ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ ಫ್ಯೂಚರ್ ಸ್ಕಿಲ್ಸ್ ಪ್ಲಾಟ್ಫಾರ್ಮ್ನಲ್ಲಿ ಈಗಾಗಲೇ 8.6 ಲಕ್ಷ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ ಎಂದು ತಿಳಿಸಿದರು. ತಂತ್ರಜ್ಞಾನವನ್ನು ಪ್ರಜಾಸತ್ತಾತ್ಮಕಗೊಳಿಸುವುದು (ತಂತ್ರಜ್ಞಾನ ಎಲ್ಲರಿಗೂ ಲಭ್ಯವಾಗುವಂತೆ ಮಾಡುವುದು) ವಿಶೇಷವಾಗಿ ಶ್ರೇಣಿ 2 ಮತ್ತು ಶ್ರೇಣಿ 3 ನಗರಗಳನ್ನು ಸಬಲೀಕರಣಗೊಳಿಸುವ ಮೂಲಕ ತಾಂತ್ರಿಕ ಸೌಲಭ್ಯಗಳನ್ನು ವಿಕೇಂದ್ರೀಕರಿಸುವ ಸರ್ಕಾರದ ಗಮನವನ್ನು ಶ್ರೀ ವೈಷ್ಣವ್ ಪ್ರಮುಖವಾಗಿ ಪ್ರಸ್ತಾಪಿಸಿದರು. ಗೋರಖ್ಪುರ, ಲಕ್ನೋ, ಶಿಮ್ಲಾ, ಔರಂಗಾಬಾದ್, ಪಾಟ್ನಾ, ಬಕ್ಸಾರ್ ಮತ್ತು ಮುಜಾಫರ್ಪುರದಂತಹ ನಗರಗಳಲ್ಲಿ ಎಐ ಡೇಟಾ ಪ್ರಯೋಗಾಲಯಗಳನ್ನು (ಲ್ಯಾಬ್ ಗಳನ್ನು) ಸ್ಥಾಪಿಸಲಾಗುತ್ತಿದೆ ಎಂದವರುತಿಳಿಸಿದರು. ತಾಂತ್ರಿಕ ಅಭಿವೃದ್ಧಿಯು ಕೆಲವೇ ಪ್ರದೇಶಗಳಲ್ಲಿ ಕೇಂದ್ರೀಕೃತವಾಗದೆ ದೇಶಾದ್ಯಂತ ಹರಡುವುದನ್ನು ಖಚಿತಪಡಿಸಿಕೊಳ್ಳುವ ಮೂಲಕ ನವೋದ್ಯಮಗಳು, ಎಐ ಪ್ರಯೋಗಾಲಯಗಳು, 5 ಜಿ ಪ್ರಯೋಗಾಲಯಗಳು ಮತ್ತು ಅರೆವಾಹಕ ತರಬೇತಿ ಸೌಲಭ್ಯಗಳು ಸುಲಭ ಲಭ್ಯವಾಗುವ  ಪರಿಸರ ವ್ಯವಸ್ಥೆಯನ್ನು ಬೆಳೆಸುವ ಸರ್ಕಾರದ ಬದ್ಧತೆಯನ್ನು ಅವರು ಪುನರುಚ್ಚರಿಸಿದರು. ಸಾಮಾಜಿಕ ಪರಿಣಾಮಕ್ಕಾಗಿ ಎಐ ಬಳಕೆ ಕೃಷಿ, ಶಿಕ್ಷಣ, ಆರೋಗ್ಯ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇರಿದಂತೆ ವಿವಿಧ ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುವ ಎಐ ಸಾಮರ್ಥ್ಯವನ್ನು ಕೇಂದ್ರ ಸಚಿವರು ಒತ್ತಿ ಹೇಳಿದರು ಮತ್ತು ಜವಾಬ್ದಾರಿಯುತ ಎಐ ಅಭಿವೃದ್ಧಿಯಲ್ಲಿ ಜಾಗತಿಕ ನಾಯಕತ್ವಕ್ಕೆ ಭಾರತದ ಬದ್ಧತೆಯನ್ನು ಪುನರುಚ್ಚರಿಸಿದರು. “ಜನರ ಜೀವನದ ಮೇಲೆ ನೇರವಾಗಿ ಪ್ರಭಾವ ಬೀರುವ ಕ್ಷೇತ್ರಗಳಲ್ಲಿ ಎಐನ ಅತ್ಯಂತ ಮಹತ್ವದ ಅಪ್ಲಿಕೇಶನ್ಗಳು ಇರುತ್ತವೆ. ಕೃಷಿ, …

Read More »

ಗೀತಾ ಜಯಂತಿಗೆ ಶುಭ ಕೋರಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೀತಾ ಜಯಂತಿ ಅಂಗವಾಗಿ ಇಂದು ದೇಶದ ಜನತೆಗೆ ಶುಭ ಕೋರಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ಪವಿತ್ರ ಗ್ರಂಥದ ಮಹತ್ವವನ್ನು ಸಾರುವಂತಹ ಕಿರಿದಾದ ವಿಡಿಯೋ ಕ್ಲಿಪ್‌ ಅನ್ನು ಹಂಚಿಕೊಂಢಿದ್ದಾರೆ. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ  X ನಲ್ಲಿ ಹೀಗೆ ಹೇಳಿದ್ದಾರೆ. “”ಎಲ್ಲಾ ದೇಶವಾಸಿಗಳಿಗೆ ಗೀತಾ ಜಯಂತಿಯ ಶುಭಾಶಯಗಳು. ಭಾರತೀಯ ಸಂಸ್ಕೃತಿ, ಆಧ್ಯಾತ್ಮಿಕತೆ ಮತ್ತು ಸಂಪ್ರದಾಯವನ್ನು ಮಾರ್ಗದರ್ಶಿಸುವ ದೈವಿಕ ಪಠ್ಯದ ಮೂಲ ದಿನವಾಗಿ ಆಚರಿಸಲಾಗುವ …

Read More »

ಸುಬ್ರಮಣ್ಯ ಭಾರತಿ ಅವರಿಗೆ ನಮನ ಸಲ್ಲಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಕವಿ ಮತ್ತು ಬರಹಗಾರ ಸುಬ್ರಮಣ್ಯ ಭಾರತಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದರು. ಮಧ್ಯಾಹ್ನ 1 ಗಂಟೆಗೆ 7, ಲೋಕ ಕಲ್ಯಾಣ ಮಾರ್ಗದಲ್ಲಿಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಕೃತಿಗಳ ಸಂಕಲವನ್ನು ಬಿಡುಗಡೆ ಮಾಡಲಾಗುವುದು ಎಂದು ಶ್ರೀ ನರೇಂದ್ರ ಮೋದಿ ಪ್ರಕಟಿಸಿದ್ದಾರೆ. ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ ಪೋಸ್ಟ್ X ನಲ್ಲಿ ಹೀಗೆ ಬರೆದಿದ್ದಾರೆ. “ಸುಬ್ರಮಣ್ಯ ಭಾರತಿ ಅವರ ಜನ್ಮ …

Read More »

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರನ್ನು ಸ್ಮರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅವರನ್ನು ಸ್ಮರಿಸಿದ್ದಾರೆ. ಅವರನ್ನು ಒಬ್ಬ ರಾಜನೀತಿಜ್ಞ ಎಂದು ಕರೆದಿರುವ ಶ್ರೀ ನರೇಂದ್ರ ಮೋದಿ, ಮುಖರ್ಜಿ ಅವರನ್ನು ಆಡಳಿತಗಾರ ಎಂದು ಬಣ್ಣಿಸಿದ್ದಾರೆ ಮತ್ತು ದೇಶದ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ್ದಾರೆ. ಪ್ರಧಾನಮಂತ್ರಿ ಅವರು ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಬರೆದಿದ್ದಾರೆ. “ಪ್ರಣಬ್‌ ಮುಖರ್ಜಿ ಅವರ ಜನ್ಮ ವಾರ್ಷಿಕೋತ್ಸವದ ಅಂಗವಾಗಿ ಅವರನ್ನು …

Read More »

ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಅವರು ಎನ್ ಇ ಪಿ 2020 ಚಿಕ್ಕ ಮಕ್ಕಳಿಗೆ ಅವರ ಮಾತೃಭಾಷೆಯಲ್ಲಿ ಕಲಿಸುವ ದೂರದೃಷ್ಟಿಯ ನವೀನ ಉಪಕ್ರಮಗಳು ಮತ್ತು ಸಂಪನ್ಮೂಲಗಳನ್ನು ಬೆಂಬಲಿಸುತ್ತದೆ ಎಂದು ಪ್ರಮುಖವಾಗಿ ಪ್ರಸ್ತಾಪಿಸಿದ್ದಾರೆ. ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಕೇಂದ್ರ ಸಚಿವ ಶ್ರೀ ಧಮೇಂದ್ರ ಪ್ರಧಾನ್‌ ಅವರ ಪೋಸ್ಟ್‌ ಗೆ ಪ್ರತಿಕ್ರಿಯಿಸಿದ್ದಾರೆ. “ಕೇಂದ್ರ ಶಿಕ್ಷಣ ಸಚಿವರಾದ ಶ್ರೀ @dpradhanbjp ಅವರು ಆಳವಾದ ಕಲಿಕೆ, ಸೃಜನಶೀಲತೆಯನ್ನು ಬೆಳೆಸಲು ಮತ್ತು ಸಾಂಸ್ಕೃತಿಕ ಬೇರುಗಳನ್ನು ಸಂರಕ್ಷಿಸಲು ಚಿಕ್ಕ …

Read More »