Saturday, December 13 2025 | 04:16:03 PM
Breaking News

National

ಪಾಟ್ನಾದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ ಸಂದರ್ಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …

Read More »

ಪಿಎಂ-ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಮುಂದಿನ ಕಂತು ಆಗಸ್ಟ್ 2ರಂದು ಬಿಡುಗಡೆಯಾಗಲಿದೆ. ವಾರಣಾಸಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ಈ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಲು ಮತ್ತು ಪ್ರಯೋಜನವು ಗರಿಷ್ಠ ಸಂಖ್ಯೆಯ ರೈತರಿಗೆ ತಲುಪುವುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ಇಂದು ಉನ್ನತ ಮಟ್ಟದ ಸಭೆ ನಡೆಯಿತು. ದೇಶಾದ್ಯಂತದ …

Read More »

ಕಡಿಮೆ ಮತ್ತು ಮಧ್ಯಮ ಆದಾಯದ ಕುಟುಂಬಗಳಿಗೆ ಕೈಗೆಟುಕುವ ಪ್ರಯಾಣವನ್ನು ಒದಗಿಸಲು ರೈಲ್ವೆ ಬದ್ಧವಾಗಿದೆ; ಆಧುನಿಕ ಅಮೃತ ಭಾರತ ರೈಲುಗಳು ವಿಶ್ವ ದರ್ಜೆಯ ಅನುಭವದೊಂದಿಗೆ ಹವಾನಿಯಂತ್ರಣ ರಹಿತ ರೈಲು ಪ್ರಯಾಣವನ್ನು ಮರು ವ್ಯಾಖ್ಯಾನಿಸುತ್ತಿವೆ

ಸಾಮಾನ್ಯ ವರ್ಗದಲ್ಲಿ ಪ್ರಯಾಣಿಸಲು ಬಯಸುವ ಪ್ರಯಾಣಿಕರಿಗೆ ರೈಲ್ವೆಯು ಸೌಲಭ್ಯಗಳನ್ನು ಗಣನೀಯವಾಗಿ ಹೆಚ್ಚಿಸಿದೆ. ಕಳೆದ 2024-25ನೇ ಹಣಕಾಸು ವರ್ಷದಲ್ಲಿಯೇ, ವಿವಿಧ ದೂರದ ರೈಲುಗಳಲ್ಲಿ 1250 ಸಾಮಾನ್ಯ ಬೋಗಿಗಳನ್ನು ಬಳಸಲಾಗಿದೆ. ಕೆಳಗೆ ವಿವರಿಸಿದಂತೆ ಹವಾನಿಯಂತ್ರಣ ರಹಿತ ಬೋಗಿಗಳ ಶೇಕಡಾವಾರು ಪ್ರಮಾಣವು ಸುಮಾರು 70ಕ್ಕೆ ಗಮನಾರ್ಹವಾಗಿ ಹೆಚ್ಚಾಗಿದೆ: ಕೋಷ್ಟಕ 1: ಬೋಗಿಗಳ ವಿತರಣೆ: ಹವಾನಿಯಂತ್ರಣ ರಹಿತ ಬೋಗಿಗಳು (ಸಾಮಾನ್ಯ ಮತ್ತು ಸ್ಲೀಪರ್) ~57 ~70% ಹವಾನಿಯಂತ್ರಣ ಬೋಗಿಗಳು ~25 ~30% ಒಟ್ಟು ಬೋಗಿಗಳು ~82 …

Read More »

ʻಪ್ರಳಯ್‌ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿದ ʻಡಿಆರ್‌ಡಿಒʼ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) 2025ರ ಜುಲೈ 28 ಮತ್ತು 29 ರಂದು ಒಡಿಶಾ ಕರಾವಳಿಯ ಡಾ. ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ʻಪ್ರಳಯ್‌ʼ ಕ್ಷಿಪಣಿಯ ಸತತ ಎರಡು ಪರೀಕ್ಷಾರ್ಥ ಪ್ರಯೋಗಗಳನ್ನು ಯಶಸ್ವಿಯಾಗಿ ನಡೆಸಿತು. ಕ್ಷಿಪಣಿ ವ್ಯವಸ್ಥೆಯ ಗರಿಷ್ಠ ಮತ್ತು ಕನಿಷ್ಠ ವ್ಯಾಪ್ತಿಯ ಸಾಮರ್ಥ್ಯವನ್ನು ಪ್ರಮಾಣಿಕರಿಸಲು ʻಬಳಕೆದಾರ ಮೌಲ್ಯಮಾಪನ ಪ್ರಯೋಗʼಗಳ ಭಾಗವಾಗಿ ಈ ಪರೀಕ್ಷಾರ್ಥ ಪ್ರಯೋಗ ನಡೆಸಲಾಯಿತು. ಕ್ಷಿಪಣಿಗಳು ನಿಖರವಾಗಿ ಉದ್ದೇಶಿತ ಪಥವನ್ನು ಅನುಸರಿಸಿದವು ಮತ್ತು ಎಲ್ಲಾ …

Read More »

ಪ್ರಧಾನಮಂತ್ರಿ ಅವರು ದಿನಾಂಕ 27.07.2025 ರಂದು ಮಾಡಿದ ‘ಮನ್ ಕಿ ಬಾತ್’ – 124 ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಜುಲೈ 24 ರಂದು ನವದೆಹಲಿಯಲ್ಲಿ ‘ರಾಷ್ಟ್ರೀಯ ಸಹಕಾರ ನೀತಿ 2025’ ಅನ್ನು ಅನಾವರಣಗೊಳಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜುಲೈ 24ರಂದು ನವದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಆಯೋಜಿಸಿರುವ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸಹಕಾರ ನೀತಿ 2025 ಅನ್ನು ಪ್ರಕಟಿಸಲಿದ್ದಾರೆ. ರಾಷ್ಟ್ರೀಯ ಸಹಕಾರಿ ನೀತಿಯ ಕರಡು ಸಮಿತಿಯ ಸದಸ್ಯರು, ಎಲ್ಲಾ ರಾಷ್ಟ್ರೀಯ ಸಹಕಾರಿ ಒಕ್ಕೂಟಗಳ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರು, ಸಚಿವಾಲಯದ ಹಿರಿಯ ಅಧಿಕಾರಿಗಳು, ರಾಷ್ಟ್ರೀಯ ಸಹಕಾರಿ ಅಭಿವೃದ್ಧಿ ನಿಗಮ (ಎನ್ ಸಿಡಿಸಿ), ರಾಷ್ಟ್ರೀಯ ಸಹಕಾರಿ …

Read More »

ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ

2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …

Read More »

ಕಾಶಿ ಘೋಷಣೆಯೊಂದಿಗೆ ವಾರಣಾಸಿಯಲ್ಲಿ ಯುವ ಆಧ್ಯಾತ್ಮಿಕ ಶೃಂಗಸಭೆ ಮುಕ್ತಾಯ

ವಿಕಸಿತ ಭಾರತಕ್ಕಾಗಿ ನಶಾ ಮುಕ್ತ ಯುವ ಎಂಬ ವಿಷಯದ ಮೇಲೆ ಯುವ ಆಧ್ಯಾತ್ಮಿಕ ಶೃಂಗಸಭೆ ಇಂದು ವಾರಣಾಸಿಯ ರುದ್ರಾಕ್ಷಿ ಅಂತಾರಾಷ್ಟ್ರೀಯ ಸಮಾವೇಶ ಕೇಂದ್ರದಲ್ಲಿ ಕಾಶಿ ಘೋಷಣೆಯನ್ನು ಔಪಚಾರಿಕವಾಗಿ ಅಂಗೀಕರಿಸುವುದರೊಂದಿಗೆ ಮುಕ್ತಾಯಗೊಂಡಿತು. ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಆಯೋಜಿಸಿದ್ದ ಈ ಶೃಂಗಸಭೆಯಲ್ಲಿ 600ಕ್ಕೂ ಹೆಚ್ಚು ಯುವ ನಾಯಕರು, 120ಕ್ಕೂ ಹೆಚ್ಚು ಆಧ್ಯಾತ್ಮಿಕ ಮತ್ತು ಸಾಮಾಜಿಕ-ಸಾಂಸ್ಕೃತಿಕ ಸಂಸ್ಥೆಗಳ ಪ್ರತಿನಿಧಿಗಳು, ಶಿಕ್ಷಣ ತಜ್ಞರು ಮತ್ತು ಕ್ಷೇತ್ರ ತಜ್ಞರು ಭಾಗವಹಿಸಿದ್ದರು. ಇದು 2047ರ ವೇಳೆಗೆ …

Read More »

ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ವಾಪಸ್ಸಾಗಿದ್ದನ್ನು ಸ್ವಾಗತಿಸಿ ನಿರ್ಣಯ ಕೈಗೊಂಡ ಕೇಂದ್ರ ಸಚಿವ ಸಂಪುಟ

ಭಾರತದ ಅನಂತ ಆಕಾಂಕ್ಷೆಗಳನ್ನು ಪ್ರತಿನಿಧಿಸುವ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ತಮ್ಮ ಬಾಹ್ಯಾಕಾಶ ಪ್ರಯಾಣದಿಂದ 2025ರ ಜುಲೈ 15 ರಂದು ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಇದು ಇಡೀ ರಾಷ್ಟ್ರಕ್ಕೆ ಹೆಮ್ಮೆ, ವೈಭವ ಮತ್ತು ಸಂತೋಷದ ಕ್ಷಣವಾಗಿದೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ತಮ್ಮ ಐತಿಹಾಸಿಕ 18 ದಿನಗಳ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ನಂತರ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅವರು ಭೂಮಿಗೆ ಹಿಂತಿರುಗಿರುವುದರ ರಾಷ್ಟ್ರದ ಸಂಭ್ರಮಾಚರಣೆಗೆ ಸಚಿವ ಸಂಪುಟವು ಕೈ …

Read More »

ಪ್ರಧಾನಮಂತ್ರಿ ಧನ್ ಧಾನ್ಯ ಕೃಷಿ ಯೋಜನೆಗೆ ಸಂಪುಟದ ಅನುಮೋದನೆ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆ, 2025-26ರಿಂದ ಆರು ವರ್ಷಗಳ ಅವಧಿಗೆ 100 ಜಿಲ್ಲೆಗಳನ್ನು ಒಳಗೊಳ್ಳುವ “ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ”ಗೆ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆ ನೀತಿ ಆಯೋಗದ ಮಹತ್ವಾಕಾಂಕ್ಷೆಯ ಜಿಲ್ಲಾ ಕಾರ್ಯಕ್ರಮದಿಂದ ಸ್ಫೂರ್ತಿ ಪಡೆದಿದೆ ಮತ್ತು ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳ ಮೇಲೆ ಪ್ರತ್ಯೇಕವಾಗಿ ಕೇಂದ್ರೀಕರಿಸುವ ಯೋಜನೆಗಳಲ್ಲಿ ಇದು ಮೊದಲನೆಯದು. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು …

Read More »