Saturday, September 19 2026 | 03:33:37 AM
Breaking News

Regional

ಜನವರಿ 15 ರಂದು ಮಹಾರಾಷ್ಟ್ರಕ್ಕೆ ಪ್ರಧಾನಮಂತ್ರಿ ಭೇಟಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 15 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿಯವರು ಮೂರು ಮುಂಚೂಣಿ ಯುದ್ಧ ನೌಕೆಗಳಾದ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್‌ಗಳನ್ನು ಮುಂಬೈನ ನೌಕಾ ನೌಕಾನೆಲೆಯಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಮಧ್ಯಾಹ್ನ 3:30ರ ಸುಮಾರಿಗೆ ಅವರು ನವಿ ಮುಂಬೈನ ಖಾರ್ಘರ್‌ನಲ್ಲಿ ಇಸ್ಕಾನ್ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಮೂರು ಪ್ರಮುಖ ನೌಕೆಗಳು ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್‌ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …

Read More »

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವೆ ಒಡಂಬಡಿಕೆಗೆ ಸಹಿ – ಒಡಿಶಾದ ಜನರಿಗೆ ಪ್ರಧಾನಮಂತ್ರಿ ಅಭಿನಂದನೆ

ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವಿನ ಒಡಂಬಡಿಕೆಗಾಗಿ ಒಡಿಶಾದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.  ಈ ಯೋಜನೆಯು ಕೈಗೆಟುಕುವ ದರದಲ್ಲಿ ಅತ್ಯುನ್ನತ ಗುಣಮಟ್ಟದ ಆರೋಗ್ಯ ಸೇವೆಯನ್ನು, ವಿಶೇಷವಾಗಿ ನಾರಿ ಶಕ್ತಿ ಮತ್ತು ಒಡಿಶಾದ ಹಿರಿಯ ನಾಗರಿಕರಿಗೆ ಖಚಿತಪಡಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. …

Read More »

2025ರ ಮಹಾ ಕುಂಭವನ್ನು ಜಾಗತಿಕ ಪ್ರವಾಸೋದ್ಯಮ ಕೇಂದ್ರವಾಗಿ ಉತ್ತೇಜಿಸಲು ಪ್ರವಾಸೋದ್ಯಮ ಸಚಿವಾಲಯ ಪ್ರಮುಖ ಉಪಕ್ರಮಗಳನ್ನು ಅನಾವರಣಗೊಳಿಸಿದೆ

ಭಾರತ ಸರ್ಕಾರದ ಪ್ರವಾಸೋದ್ಯಮ ಸಚಿವಾಲಯವು ಮಹಾ ಕುಂಭ 2025 ಅನ್ನು ಆಧ್ಯಾತ್ಮಿಕ ಕೂಟಗಳಿಗೆ ಮಾತ್ರವಲ್ಲದೆ ಜಾಗತಿಕ ಪ್ರವಾಸೋದ್ಯಮಕ್ಕೂ ಹೆಗ್ಗುರುತು ಘಟನೆಯನ್ನಾಗಿ ಮಾಡಲು ಸಜ್ಜಾಗಿದೆ. ಈ ಮಹತ್ವದ ಸಂದರ್ಭವನ್ನು ಆಚರಿಸಲು, ಸಚಿವಾಲಯವು ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ಉದ್ದೇಶದಿಂದ ಹಲವಾರು ಉಪಕ್ರಮಗಳನ್ನು ರೂಪಿಸುತ್ತಿದೆ. ಮಹಾ ಕುಂಭವು ವಿಶ್ವದ ಅತಿದೊಡ್ಡ ಮತ್ತು ಅತ್ಯಂತ ಮಹತ್ವದ ಧಾರ್ಮಿಕ ಸಭೆಗಳಲ್ಲಿ ಒಂದಾಗಿದೆ, ಇದನ್ನು ಪ್ರತಿ 12 ವರ್ಷಗಳಿಗೊಮ್ಮೆ ಭಾರತದ ನಾಲ್ಕು ಸ್ಥಳಗಳಲ್ಲಿ ಒಂದರಲ್ಲಿ ನಡೆಸಲಾಗುತ್ತದೆ. …

Read More »

ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; “ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ.   भारत : …

Read More »

ಕರ್ನಾಟಕದ ಬೆಂಗಳೂರಿಗೆ 2025ರ ಜನವರಿ 11ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2025ರ ಜನವರಿ 11 ರಂದು ಬೆಂಗಳೂರಿಗೆ (ಕರ್ನಾಟಕ) ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ, ಉಪರಾಷ್ಟ್ರಪತಿಗಳು ಕರ್ನಾಟಕದ ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಾರ್ವಜನಿಕ ಸೇವಾ ಆಯೋಗಗಳ ಅಧ್ಯಕ್ಷರ 25ನೇ ರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक …

Read More »

ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ

ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ; “ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.”   भारत : 1885 से 1950 (इतिहास पर एक दृष्टि) व/या भारत : 1857 …

Read More »

ಕರ್ನಾಟಕದ ಧರ್ಮಸ್ಥಳಕ್ಕೆ 2025ರ ಜನವರಿ 7 ರಂದು ಉಪರಾಷ್ಟ್ರಪತಿ ಭೇಟಿ

ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು  2025ರ ಜನವರಿ 7ರಂದು ಧರ್ಮಸ್ಥಳ (ಕರ್ನಾಟಕ)ಕ್ಕೆ ಭೇಟಿ ನೀಡಲಿದ್ದಾರೆ. ಭೇಟಿಯ ಸಂದರ್ಭದಲ್ಲಿ ಉಪರಾಷ್ಟ್ರಪತಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೃಹತ್ ಸರತಿಸಾಲು ಸಂಕೀರ್ಣ (ಕ್ಯೂ ಕಾಂಪ್ಲೆಕ್ಸ್) ಉದ್ಘಾಟಿಸಲಿದ್ದಾರೆ ಮತ್ತು 2024-25 ಜ್ಞಾನದೀಪ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.   भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक …

Read More »

ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ದೆಹಲಿ-ಎನ್.ಸಿಆರ್ ಭಾರತ ಸರ್ಕಾರದಿಂದ ಮಹತ್ವದ …

Read More »

ಅಹಮದಾಬಾದ್ ಅಂತಾರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಹಮದಾಬಾದ್ ಅಂತಾರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದರ್ಶನದ ಬೆಳವಣಿಗೆಯನ್ನು ಗಮನಿಸುತ್ತಿರುವುದರಿಂದ ಈ ಪ್ರದರ್ಶನದೊಂದಿಗೆ ನನಗೆ ಬಲವಾದ ನಂಟಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಇಂತಹ ಪ್ರದರ್ಶನಗಳು ಪ್ರಕೃತಿಯ ಸೌಂದರ್ಯವನ್ನು ವೈಭವೀಕರಿಸಿ ಸುಸ್ಥಿರತೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ; “ಅಹಮದಾಬಾದ್ ಅಂತರರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಕೆಲವು ನೋಟಗಳು ಇಲ್ಲಿವೆ. …

Read More »