ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ದೇವಾಲಯ ಮತ್ತು ಮಹಾಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ …
Read More »ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಬೆಂಗಳೂರು ಟೆಕ್ ಶೃಂಗಸಭೆ 2025
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಸ್ಥಾಪಿಸಲಾದ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್.ಟಿ.ಪಿ.ಐ), ಕರ್ನಾಟಕ ಸರ್ಕಾರದೊಂದಿಗೆ ಸೇರಿ ಬೆಂಗಳೂರು ಟೆಕ್ ಶೃಂಗಸಭೆ 2025ರ (ಬಿ.ಟಿ.ಎಸ್-2025) 28ನೇ ಆವೃತ್ತಿಯನ್ನು ಜಂಟಿಯಾಗಿ ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ನವೆಂಬರ್ 18 ರಿಂದ 20, 2025ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಎಸ್.ಟಿ.ಪಿ.ಐ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅವುಗಳಲ್ಲಿ ಪ್ರಮುಖ ಕಾರ್ಯಕ್ರಮಗಳು ಈ ಕೆಳಗಿನಂತಿವೆ: 1. …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸೋಮವಾರ ಹರಿಯಾಣದ ಫರಿದಾಬಾದ್‌ನಲ್ಲಿ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ನವೆಂಬರ್ 17 ರಂದು ಸೋಮವಾರ ಹರಿಯಾಣದ ಫರಿದಾಬಾದ್‌ನಲ್ಲಿ ನಡೆಯಲಿರುವ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ʻಉತ್ತರ ವಲಯ ಮಂಡಳಿʼಯು ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಚಂಡೀಗಢ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ …
Read More »ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ …
Read More »ಕರ್ನಾಟಕದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯಗಳ ಸ್ಥಾಪನೆ
ರಾಜ್ಯಸಭೆಯಲ್ಲಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ದುರ್ಗಾದಾಸ್ ಉಯಿಕೆ ಅವರು, ಪ್ರಸ್ತುತ, ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಅಥವಾ ಕೊಡಗು ಜಿಲ್ಲೆಗಳಲ್ಲಿ ಯಾವುದೇ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯಗಳು ಅಥವಾ ಸಾಂಸ್ಕೃತಿಕ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪ ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ಪರಿಗಣನೆಯಲ್ಲಿಲ್ಲ ಎಂದು ತಿಳಿಸಿದರು. ಆದಾಗ್ಯೂ, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ …
Read More »ಆಗಸ್ಟ್ 6 ರಂದು ಕರ್ತವ್ಯ ಭವನ ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 6 ರಂದು ಮಧ್ಯಾಹ್ನ 12:15ರ ಸುಮಾರಿಗೆ ದೆಹಲಿಯ ಕರ್ತವ್ಯ ಪಥದಲ್ಲಿ ಕರ್ತವ್ಯ ಭವನಕ್ಕೆ ಭೇಟಿ ನೀಡಿ ಅದನ್ನು ಉದ್ಘಾಟಿಸಲಿದ್ದಾರೆ. ನಂತರ, ಪ್ರಧಾನ ಮಂತ್ರಿಗಳು ಸಂಜೆ 6:30ರ ಸುಮಾರಿಗೆ ಕರ್ತವ್ಯ ಪಥದ ಕುರಿತು ಸಾರ್ವಜನಿಕ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಪ್ರಧಾನಮಂತ್ರಿಯವರ ಆಧುನಿಕ, ದಕ್ಷ ಮತ್ತು ನಾಗರಿಕ ಕೇಂದ್ರಿತ ಆಡಳಿತದ ದೃಷ್ಟಿಕೋನಕ್ಕೆ ಸರ್ಕಾರದ ಬದ್ಧತೆಯಲ್ಲಿ ಒಂದು ಪ್ರಮುಖ ಮೈಲಿಗಲ್ಲಾಗಲಿದೆ. ಉದ್ಘಾಟನೆಯಾಗುತ್ತಿರುವ ಕರ್ತವ್ಯ ಭವನ …
Read More »ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಎಸ್ ಎ ಎಸ್ ಸಿ ಐ ಅಡಿಯಲ್ಲಿ ಹಲವಾರು ಯೋಜನೆಗಳು ಅನುಷ್ಠಾನದಲ್ಲಿವೆ: ಕೇಂದ್ರ ಪ್ರವಾಸೋದ್ಯಮ ಸಚಿವರು
ಭಾರತ ಸರ್ಕಾರವು ಕರ್ನಾಟಕದಲ್ಲಿ ‘ಸ್ವದೇಶ್ ದರ್ಶನ್ 2.0’, ಪ್ರಶಾದ್ ಮತ್ತು ಬಂಡವಾಳ ಹೂಡಿಕೆಗಾಗಿ ರಾಜ್ಯಗಳಿಗೆ ವಿಶೇಷ ನೆರವು ಯೋಜನೆ (ಎಸ್ ಎ ಎಸ್ ಸಿ ಐ) ಗಳ ಅಡಿಯಲ್ಲಿ ಹಲವಾರು ಯೋಜನೆಗಳನ್ನು ಮಂಜೂರು ಮಾಡಿದ್ದು, ಅನುಷ್ಠಾನದ ಹಂತದಲ್ಲಿವೆ ಎಂದು ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರಸಿಂಗ್ ಶೇಖಾವತ್ ತಿಳಿಸಿದ್ದಾರೆ. ಇದರ ಜೊತೆಗೆ, ಪ್ರವಾಸೋದ್ಯಮ ಸಚಿವಾಲಯವು ಬೀದರ್ ಮತ್ತು ಉಡುಪಿಯನ್ನು ಕರ್ನಾಟಕದ ತಾಣಗಳಾಗಿ ಸಿಬಿಡಿಡಿ (ಸವಾಲು ಆಧಾರಿತ ಗಮ್ಯತಾಣ ಅಭಿವೃದ್ಧಿ) ಅಡಿಯಲ್ಲಿ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಉತ್ತರ ಪ್ರದೇಶದ ವಾರಾಣಸಿಯಲ್ಲಿ ಸುಮಾರು 2,200 ಕೋಟಿ ರೂ. ಮೌಲ್ಯದ ಅಭಿವೃದ್ಧಿ ಕಾಮಗಾರಿಗಳಿಗೆ ಉದ್ಘಾ್ಥಾಪನೆ ನೆರವೇರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಶ್ರೀ ನರೇಂದ್ರ ಮೋದಿ, ಶ್ರಾವಣ ಮಾಸದ ಶುಭಸಂದರ್ಭದಲ್ಲಿ ವಾರಾಣಸಿಯ ಜನರನ್ನು ಭೇಟಿಯಾಗುತ್ತಿರುವ ಬಗ್ಗೆ ತಮ್ಮ ಹೃತ್ಪೂರ್ವಕ ಭಾವನೆಗಳನ್ನು ವ್ಯಕ್ತಪಡಿಸಿದರು. ವಾರಾಣಸಿಯ ಜನರೊಂದಿಗಿನ ತಮ್ಮ ಗಾಢವಾದ ಭಾವನಾತ್ಮಕ ಬಾಂಧವ್ಯವನ್ನು ಎತ್ತಿ ತೋರಿಸಿದ ಶ್ರೀ ಮೋದಿ, ನಗರದ ಪ್ರತಿಯೊಂದು ಕುಟುಂಬದ ಸದಸ್ಯರಿಗೂ ಗೌರವಯುತ …
Read More »ಧಾರವಾಡದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಬಿಡುಗಡೆ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಶ್ರೀ ಪ್ರಲ್ಹಾದ್ ಜೋಶಿ ಭಾಗವಹಿಸಿದರು
ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ, ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವರಾದ ಶ್ರೀ ಪ್ರಲ್ಹಾದ್ ಜೋಷಿ ಅವರು ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನ ಕೇಂದ್ರದಲ್ಲಿ, ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಆಯೋಜಿಸಲಾದ ರೈತರೊಂದಿಗೆ ಸಂವಾದ ಮತ್ತು ರೂ. 20,500 ಕೋಟಿ ಮೊತ್ತದ ನಿಧಿಯನ್ನು 9 ಕೋಟಿ 70 ಲಕ್ಷ ರೈತರ ಖಾತೆಗೆ ವರ್ಗಾಯಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ರೈತರು ಕಿಸಾನ್ …
Read More »ಈಶಾನ್ಯ ಭಾರತದ ಸಬಲೀಕರಣ: ಎನ್ ಎಫ್ ಡಿ ಸಿ ಯಿಂದ ಯುವಕರಿಗೆ ಉಚಿತ ವಸತಿ ಸಹಿತ ವಿ ಎಫ್ ಎಕ್ಸ್ ಮತ್ತು ಅನಿಮೇಷನ್ ತರಬೇತಿ
ಭಾರತ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಆಶ್ರಯದಲ್ಲಿ ಭಾರತೀಯ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ (ಎನ್ ಎಫ್ ಡಿ ಸಿ), ಭಾರತದ ಈಶಾನ್ಯ ಪ್ರದೇಶದ ಮಹತ್ವಾಕಾಂಕ್ಷಿ ವೃತ್ತಿಪರರಿಗಾಗಿ ಪ್ರತ್ಯೇಕವಾಗಿ 3ಡಿ ಅನಿಮೇಷನ್ ಮತ್ತು ದೃಶ್ಯ ಪರಿಣಾಮಗಳಲ್ಲಿ (ವಿ ಎಫ್ ಎಕ್ಸ್) ಸಂಪೂರ್ಣ ವಸತಿ ತರಬೇತಿ ಕಾರ್ಯಕ್ರಮವನ್ನು ಪ್ರಾರಂಭಿಸಿದೆ. ಈ ಕಾರ್ಯಕ್ರಮವು ಎಂಟು ಈಶಾನ್ಯ ರಾಜ್ಯಗಳಾದ ಅರುಣಾಚಲ ಪ್ರದೇಶ, ಅಸ್ಸಾಂ, ಮಣಿಪುರ, ಮೇಘಾಲಯ, ಮಿಜೋರಾಂ, ನಾಗಾಲ್ಯಾಂಡ್, ಸಿಕ್ಕಿಂ ಮತ್ತು ತ್ರಿಪುರದ …
Read More »
Matribhumi Samachar Kannad