ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿಗಳ ಸಚಿವಾಲಯದ ಅಡಿಯಲ್ಲಿರುವ ಪಿಂಚಣಿ ಮತ್ತು ಪಿಂಚಣಿದಾರರ ಕಲ್ಯಾಣ ಇಲಾಖೆಯು ಪಿಂಚಣಿದಾರರ ಡಿಜಿಟಲ್ ಸಬಲೀಕರಣದ ಸರ್ಕಾರದ ದೃಷ್ಟಿಕೋನದ ಅಡಿಯಲ್ಲಿ ನವೆಂಬರ್ 1 ರಿಂದ 30, 2025 ರವರೆಗೆ ದೇಶಾದ್ಯಂತ ಡಿಜಿಟಲ್ ಜೀವಿತ ಪ್ರಮಾಣಪತ್ರ ಅಭಿಯಾನ 4.0 ಆಯೋಜಿಸಿದೆ. ಈ ಅಭಿಯಾನವು ದೇಶದಾದ್ಯಂತ 2,000ಕ್ಕೂ ಹೆಚ್ಚು ನಗರ ಮತ್ತು ಪಟ್ಟಣಗಳನ್ನು ಒಳಗೊಂಡು, ಬಹು ಡಿಜಿಟಲ್ ವಿಧಾನಗಳ ಮೂಲಕ ಪಿಂಚಣಿದಾರರಿಗೆ ತಮ್ಮ ಜೀವಿತ ಪ್ರಮಾಣಪತ್ರಗಳನ್ನು ಸಲ್ಲಿಸಲು ಅನುಕೂಲ …
Read More »ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025ರಲ್ಲಿ ರೈತರೊಂದಿಗೆ ಸಂವಾದ ನಡೆಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿನ್ನೆ ತಮಿಳುನಾಡಿನ ಕೊಯಮತ್ತೂರಿನಲ್ಲಿ ನಡೆದ ‘ದಕ್ಷಿಣ ಭಾರತ ನೈಸರ್ಗಿಕ ಕೃಷಿ ಶೃಂಗಸಭೆ 2025’ರಲ್ಲಿ ರೈತರೊಂದಿಗೆ ಸಂವಾದ ನಡೆಸಿದರು. ನೈಸರ್ಗಿಕ ಕೃಷಿಯಲ್ಲಿ ತೊಡಗಿರುವ ರೈತರನ್ನು ಅಭಿನಂದಿಸಿದ ಶ್ರೀ ಮೋದಿ ಅವರು, ಅಲ್ಲಿನ ಬಾಳೆ ಬೆಳೆಯನ್ನು ವೀಕ್ಷಿಸಿದರು ಮತ್ತು ಬಾಳೆ ತ್ಯಾಜ್ಯದ ಉಪಯೋಗದ ಬಗ್ಗೆ ವಿಚಾರಿಸಿದರು. ಅಲ್ಲಿ ಪ್ರದರ್ಶಿಸಲಾದ ಎಲ್ಲಾ ವಸ್ತುಗಳು ಬಾಳೆ ತ್ಯಾಜ್ಯದಿಂದ ತಯಾರಿಸಿದ ಮೌಲ್ಯವರ್ಧಿತ ಉತ್ಪನ್ನಗಳು ಎಂದು ರೈತರು ಪ್ರಧಾನಮಂತ್ರಿಯವರಿಗೆ ವಿವರಿಸಿದರು. ತಮ್ಮ …
Read More »ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಆತ್ಮೀಯ ಸ್ವಾಗತ ಸ್ವೀಕರಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಸಾಯಿ ರಾಮನ ದಿವ್ಯ ಮಂತ್ರ ಘೋಷಗಳ ನಡುವೆ ಆಂಧ್ರಪ್ರದೇಶದ ಪುಟ್ಟಪರ್ತಿಯನ್ನು ತಲುಪಿದರು ಮತ್ತು ಅವರಿಗೆ ಆತ್ಮೀಯ ಸ್ವಾಗತ ದೊರಕಿತು. ಪ್ರಶಾಂತಿ ನಿಲಯಂ ನ ಸಾಯಿ ಕುಲ್ವಂತ್ ಸಭಾಂಗಣದಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರಿಗೆ ಪ್ರಧಾನಮಂತ್ರಿ ಅವರು ಗೌರವ ನಮನ ಸಲ್ಲಿಸಿದರು ಮತ್ತು ನಂತರ ದರ್ಶನಕ್ಕಾಗಿ ಓಂಕಾರ ಸಭಾಂಗಣಕ್ಕೆ ತೆರಳಿದರು. ಈ ಪವಿತ್ರ ಸ್ಥಳದಲ್ಲಿರುವುದು ಶ್ರೀ ಸತ್ಯ ಸಾಯಿ ಬಾಬಾ ಅವರ ಅಪರಿಮಿತ ಕರುಣೆ …
Read More »ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಶ್ರೀ ಸತ್ಯ ಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭಾಷಣ
ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿ ಇಂದು ನಡೆದ ಭಗವಾನ್ ಶ್ರೀ ಸತ್ಯಸಾಯಿ ಬಾಬಾ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿದರು. ಪ್ರಧಾನಮಂತ್ರಿ ಅವರು ತಮ್ಮ ಮಾತುಗಳನ್ನು “ಸಾಯಿ ರಾಮ್” ನೊಂದಿಗೆ ಪ್ರಾರಂಭಿಸಿದರು ಮತ್ತು ಪುಟ್ಟಪರ್ತಿಯ ಪವಿತ್ರ ಭೂಮಿಯಲ್ಲಿ ಎಲ್ಲರೊಂದಿಗೆ ಇರುವುದು ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಅನುಭವ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಸ್ವಲ್ಪ ಸಮಯದ ಹಿಂದೆ, ಬಾಬಾ ಅವರ ಸಮಾಧಿಗೆ ಪುಷ್ಪ ನಮನ ಸಲ್ಲಿಸುವ ಅವಕಾಶ ತಮಗೆ …
Read More »ದೇಶದ ಮಾಹಿತಿ ತಂತ್ರಜ್ಞಾನ ರಫ್ತಿನಲ್ಲಿ ಕರ್ನಾಟಕ ಶೇ. 42ರಷ್ಟು ಕೊಡುಗೆ ನೀಡುತ್ತಿದೆ: ಎಸ್.ಟಿ.ಪಿ.ಐ. ಮಹಾನಿರ್ದೇಶಕ ಶ್ರೀ ಅರವಿಂದ ಕುಮಾರ
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ, ಸಾಫ್ಟವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಆಯೋಜಿಸಿರುವ ಬೆಂಗಳೂರು ಟೆಕ್ ಶೃಂಗಸಭೆಯಲ್ಲಿ ಇಂದು ಎಸ್.ಟಿ.ಪಿ.ಐ ಮಹಾ ನಿರ್ದೇಶಕರಾದ ಶ್ರೀ ಅರವಿಂದ ಕುಮಾರ್ ಅವರು ಎಸ್.ಟಿ.ಪಿ.ಐ. ಪೆವಿಲಿಯನ್ ಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಜಂಟಿ ಕಾರ್ಯದರ್ಶಿ ಶ್ರೀ ಕೆ.ಕೆ. ಸಿಂಗ್ ಉಪಸ್ಥಿತರಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಸ್.ಟಿ.ಪಿ.ಐ. ಮಹಾ ನಿರ್ದೇಶಕ ಶ್ರೀ ಅರವಿಂದ …
Read More »ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 19 ರಂದು ಆಂಧ್ರಪ್ರದೇಶ ಮತ್ತು ತಮಿಳುನಾಡಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಪ್ರಧಾನಮಂತ್ರಿ ಅವರು ಆಂಧ್ರಪ್ರದೇಶದ ಪುಟ್ಟಪರ್ತಿಯಲ್ಲಿರುವ ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಪವಿತ್ರ ದೇವಾಲಯ ಮತ್ತು ಮಹಾಸಮಾಧಿಗೆ ಭೇಟಿ ನೀಡಿ ನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಮಂತ್ರಿ ಅವರು ಭಗವಾನ್ ಶ್ರೀ ಸತ್ಯ ಸಾಯಿ ಬಾಬಾ ಅವರ ಶತಮಾನೋತ್ಸವ ಆಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ …
Read More »ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ ಸಹಯೋಗದಲ್ಲಿ ಬೆಂಗಳೂರು ಟೆಕ್ ಶೃಂಗಸಭೆ 2025
ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದಡಿ ಸ್ಥಾಪಿಸಲಾದ ಸಾಫ್ಟ್‌ವೇರ್ ಟೆಕ್ನಾಲಜಿ ಪಾರ್ಕ್ಸ್ ಆಫ್ ಇಂಡಿಯಾ (ಎಸ್.ಟಿ.ಪಿ.ಐ), ಕರ್ನಾಟಕ ಸರ್ಕಾರದೊಂದಿಗೆ ಸೇರಿ ಬೆಂಗಳೂರು ಟೆಕ್ ಶೃಂಗಸಭೆ 2025ರ (ಬಿ.ಟಿ.ಎಸ್-2025) 28ನೇ ಆವೃತ್ತಿಯನ್ನು ಜಂಟಿಯಾಗಿ ಆಯೋಜಿಸುತ್ತಿದೆ. ಈ ಕಾರ್ಯಕ್ರಮವು ನವೆಂಬರ್ 18 ರಿಂದ 20, 2025ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ. ಎಸ್.ಟಿ.ಪಿ.ಐ ಬೆಂಗಳೂರು ಟೆಕ್ ಶೃಂಗಸಭೆ 2025ರ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಿದೆ. ಅವುಗಳಲ್ಲಿ ಪ್ರಮುಖ ಕಾರ್ಯಕ್ರಮಗಳು ಈ ಕೆಳಗಿನಂತಿವೆ: 1. …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸೋಮವಾರ ಹರಿಯಾಣದ ಫರಿದಾಬಾದ್‌ನಲ್ಲಿ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ನವೆಂಬರ್ 17 ರಂದು ಸೋಮವಾರ ಹರಿಯಾಣದ ಫರಿದಾಬಾದ್‌ನಲ್ಲಿ ನಡೆಯಲಿರುವ ʻಉತ್ತರ ವಲಯ ಮಂಡಳಿʼಯ 32ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ʻಉತ್ತರ ವಲಯ ಮಂಡಳಿʼಯು ಹರಿಯಾಣ, ಹಿಮಾಚಲ ಪ್ರದೇಶ, ಪಂಜಾಬ್, ರಾಜಸ್ಥಾನ, ದೆಹಲಿ, ಜಮ್ಮು ಮತ್ತು ಕಾಶ್ಮೀರ, ಲಡಾಖ್ ಹಾಗೂ ಚಂಡೀಗಢ ರಾಜ್ಯಗಳು / ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡಿದೆ. ಭಾರತ ಸರ್ಕಾರ, ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ …
Read More »ಆಗಸ್ಟ್ 22ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಸ್ಟ್ 22 ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಅವರು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬಿಹಾರದ ಗಯಾದಲ್ಲಿ ಸುಮಾರು 13,000 ಕೋಟಿ ರೂ. ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವರು ಎರಡು ರೈಲುಗಳಿಗೆ ಹಸಿರು ನಿಶಾನೆ ತೋರಿ, ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ, ಅವರು ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಔಟಾ-ಸಿಮರಿಯಾ ಸೇತುವೆ ಯೋಜನೆಗೆ …
Read More »ಕರ್ನಾಟಕದಲ್ಲಿ ಬುಡಕಟ್ಟು ವಸ್ತು ಸಂಗ್ರಹಾಲಯಗಳ ಸ್ಥಾಪನೆ
ರಾಜ್ಯಸಭೆಯಲ್ಲಿ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರ ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಬುಡಕಟ್ಟು ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ದುರ್ಗಾದಾಸ್ ಉಯಿಕೆ ಅವರು, ಪ್ರಸ್ತುತ, ಕರ್ನಾಟಕದ ದಕ್ಷಿಣ ಕನ್ನಡ, ಉತ್ತರ ಕನ್ನಡ ಅಥವಾ ಕೊಡಗು ಜಿಲ್ಲೆಗಳಲ್ಲಿ ಯಾವುದೇ ಕೇಂದ್ರ ಪ್ರಾಯೋಜಿತ ಯೋಜನೆಯಡಿಯಲ್ಲಿ ಬುಡಕಟ್ಟು ವಸ್ತುಸಂಗ್ರಹಾಲಯಗಳು ಅಥವಾ ಸಾಂಸ್ಕೃತಿಕ ಕೇಂದ್ರಗಳನ್ನು ಸ್ಥಾಪಿಸುವ ಯಾವುದೇ ಪ್ರಸ್ತಾಪ ಬುಡಕಟ್ಟು ವ್ಯವಹಾರಗಳ ಸಚಿವಾಲಯದಲ್ಲಿ ಪರಿಗಣನೆಯಲ್ಲಿಲ್ಲ ಎಂದು ತಿಳಿಸಿದರು. ಆದಾಗ್ಯೂ, ಭಾರತ ಸರ್ಕಾರದ ಬುಡಕಟ್ಟು ವ್ಯವಹಾರಗಳ …
Read More »
Matribhumi Samachar Kannad