ನವದೆಹಲಿಯ ಪಿ.ಹೆಚ್.ಡಿ ವಾಣಿಜ್ಯ ಮತ್ತು ಕೈಗಾರಿಕಾ ಮಂಡಳಿಯಲ್ಲಿ’ಕಿಸಾನ್ ಟ್ರಸ್ಟ್’ ವತಿಯಿಂದ ಆಯೋಜಿಸಲಾಗಿದ್ದ ‘ಚೌಧರಿ ಚರಣ್ ಸಿಂಗ್ ಕಿಸಾನ್ ಸಮ್ಮಾನ್’ ಸಮಾರಂಭದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವರು ಪುಸ್ತಕವೊಂದನ್ನು ಬಿಡುಗಡೆ ಮಾಡಿದ್ದಲ್ಲದೆ, ಕೃಷಿ ಕ್ಷೇತ್ರದಲ್ಲಿನ ಅಭೂತಪೂರ್ವ ಕೊಡುಗೆಗಾಗಿ ಪ್ರಗತಿಪರ ರೈತರನ್ನು ಮತ್ತು ವಿವಿಧ ಸಂಸ್ಥೆಗಳನ್ನು ಸನ್ಮಾನಿಸಿ ಗೌರವಿಸಿದರು. …
Read More »ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಖಾತೆ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರೊಂದಿಗೆ, ಕೇಂದ್ರ ಹಣಕಾಸು ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆ ವಹಿಸಿದರು
ಕರ್ನಾಟಕದ ವಿಜಯನಗರ ಜಿಲ್ಲೆಯ ಹಂಪಿಯಲ್ಲಿ ಇಂದು ನಡೆದ ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯಗಳ ಚಿಂತನ ಶಿಬಿರದ ಅಧ್ಯಕ್ಷತೆಯನ್ನು ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವರಾದ ಶ್ರೀ ಹರ್ಷ್ ಮಲ್ಹೋತ್ರಾ ಅವರು ವಹಿಸಿದ್ದರು. ಕೇಂದ್ರ ವಿತ್ತ ಸಚಿವಾಲಯ ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಎಲ್ಲಾ ಕಾರ್ಯದರ್ಶಿಗಳು, ಕೇಂದ್ರ ನೇರ ತೆರಿಗೆ ಮಂಡಳಿ (ಸಿ.ಬಿ.ಡಿ.ಟಿ) …
Read More »ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯ ಕೋರಿದ್ದಾರೆ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಸಶಸ್ತ್ರ ಸೀಮಾ ಬಲ್ (ಎಸ್‌ಎಸ್‌ಬಿ) ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳನ್ನು ಕೋರಿದ್ದಾರೆ. ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ ಅವರು ಈ ಸಂಬಂಧ ‘ಎಕ್ಸ್’ ನಲ್ಲಿ ಹಂಚಿಕೊಂಡಿದ್ದು, “ಸಂಸ್ಥಾಪನಾ ದಿನದಂದು ಎಸ್‌ಎಸ್‌ಬಿ ಸಿಬ್ಬಂದಿ ಮತ್ತು ಅವರ ಕುಟುಂಬಗಳಿಗೆ ಶುಭಾಶಯಗಳು. ನಮ್ಮ ಗಡಿಗಳನ್ನು ರಕ್ಷಿಸುವುದರಿಂದ ಹಿಡಿದು ಬಿಕ್ಕಟ್ಟಿನ ಸಮಯದಲ್ಲಿ ನಾಗರಿಕರೊಂದಿಗೆ ಹೆಗಲಿಗೆ ಹೆಗಲು …
Read More »ಹದಿನೆಂಟನೇ ಲೋಕಸಭೆಯ ಆರನೇ ಅಧಿವೇಶನ ಮುಕ್ತಾಯ
ಡಿಸೆಂಬರ್ 1, 2025 ರಂದು ಪ್ರಾರಂಭವಾದ ಹದಿನೆಂಟನೇ ಲೋಕಸಭೆಯ ಆರನೇ ಅಧಿವೇಶನವು ಇಂದು ಮುಕ್ತಾಯವಾಯಿತು. ಈ ಸಂಬಂಧವಾಗಿ ಮಾಹಿತಿ ನೀಡಿದ ಲೋಕಸಭಾ ಅಧ್ಯಕ್ಷರಾದ ಶ್ರೀ ಓಂ ಬಿರ್ಲಾ ಅವರು, ಅಧಿವೇಶನದ ಅವಧಿಯಲ್ಲಿ 15 ಕಲಾಪಗಳು ನಡೆದವು ಎಂದು ತಿಳಿಸಿದರು. ಈ ಅಧಿವೇಶನದ ಒಟ್ಟು ಕಲಾಪದ ಅವಧಿ 92 ಗಂಟೆ 25 ನಿಮಿಷಗಳಾಗಿತ್ತು. ಅಧಿವೇಶನದ ಅವಧಿಯಲ್ಲಿ ಸದನದ ಕಾರ್ಯದಕ್ಷತೆಯು ಶೇಕಡಾ 111 ರಷ್ಟಿತ್ತು ಎಂದು ಶ್ರೀ ಬಿರ್ಲಾ ಅವರು ತಿಳಿಸಿದರು. ಅಧಿವೇಶನದ …
Read More »ಪ್ರಧಾನಮಂತ್ರಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 20-21ರಂದು ಅಸ್ಸಾಂಗೆ ಭೇಟಿ ನೀಡಲಿದ್ದಾರೆ. ಡಿಸೆಂಬರ್ 20ರಂದು ಮಧ್ಯಾಹ್ನ ಸುಮಾರು 3 ಗಂಟೆಗೆ ಪ್ರಧಾನಮಂತ್ರಿ ಅವರು ಗುವಾಹಟಿಯನ್ನು ತಲುಪಲಿದ್ದು, ಅಲ್ಲಿ ಲೋಕಪ್ರಿಯ ಗೋಪಿನಾಥ್ ಬೊರ್ಡೊಲೋಯ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಕಟ್ಟಡವನ್ನು ವೀಕ್ಷಿಸಿ ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಡಿಸೆಂಬರ್ 21ರಂದು ಬೆಳಿಗ್ಗೆ ಸುಮಾರು 9:45ಕ್ಕೆ ಪ್ರಧಾನಮಂತ್ರಿ ಅವರು ಗುವಾಹಟಿಯ ಬೊರಗಾಂನಲ್ಲಿರುವ ಸ್ವಾಹಿದ್ ಸ್ಮಾರಕ ಕ್ಷೇತ್ರಕ್ಕೆ ಭೇಟಿ …
Read More »ಹಡಗುಗಳು ಮತ್ತು ಬಂದರು ಸೌಲಭ್ಯಗಳ ಭದ್ರತೆಗಾಗಿ ಮೀಸಲಾದ ಬಂದರು ಭದ್ರತಾ ಬ್ಯೂರೋ (ಬಿಒಪಿಎಸ್) ರಚನೆಗಾಗಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಸಭೆ ನಡೆಸಿದರುರು
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಹಡಗುಗಳು ಮತ್ತು ಬಂದರು ಸೌಲಭ್ಯಗಳ ಭದ್ರತೆಗಾಗಿ ಮೀಸಲಾದ ಬಂದರು ಭದ್ರತಾ ಬ್ಯೂರೋ (ಬಿಒಪಿಎಸ್) ರಚನೆಗಾಗಿ ಸಭೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಬಂದರುಗಳು, ಹಡಗು ಸಾಗಣೆ ಮತ್ತು ಜಲಮಾರ್ಗಗಳ ಸಚಿವರು ಮತ್ತು ನಾಗರಿಕ ವಿಮಾನಯಾನ ಸಚಿವರು ಭಾಗವಹಿಸಿದ್ದರು. ಸಭೆಯಲ್ಲಿ, ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ದೇಶಾದ್ಯಂತ ಬಲಿಷ್ಠ ಬಂದರು ಭದ್ರತಾ …
Read More »ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು (ಡಿಡಿಡಬ್ಲ್ಯೂಎಸ್) 8 ರಾಜ್ಯಗಳ 8 ಗ್ರಾಮ ಪಂಚಾಯತ್ ಕೇಂದ್ರಿತ ಗ್ರಾಮಗಳೊಂದಿಗೆ ಅವರ ಸ್ಥಳೀಯ ಭಾಷೆಯಲ್ಲಿಯೇ ಬಹುಭಾಷಾ ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿಯನ್ನು ಆಯೋಜಿಸಿತು
ಜಲಶಕ್ತಿ ಸಚಿವಾಲಯದ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು (ಡಿಡಿಡಬ್ಲ್ಯೂಎಸ್), ಇಂದು ‘ಸುಜಲ ಗ್ರಾಮ ಸಂವಾದ’ದ ಎರಡನೇ ಆವೃತ್ತಿಯನ್ನು ಯಶಸ್ವಿಯಾಗಿ ಆಯೋಜಿಸಿತು. ಇದು ಭಾಗವಹಿಸುವಿಕೆಯ ಜಲ ಆಡಳಿತ ಮತ್ತು ಜಲ ಜೀವನ್ ಮಿಷನ್ (ಜೆಜೆಎಂ) ನ ಸಮುದಾಯ ನೇತೃತ್ವದ ಅನುಷ್ಠಾನಕ್ಕೆ ಭಾರತ ಸರ್ಕಾರದ ಬದ್ಧತೆಯನ್ನು ಬಲಪಡಿಸಿತು. ಈ ವರ್ಚುವಲ್ ಸಂವಾದವು ಗ್ರಾಮ ಪಂಚಾಯತ್ ಪ್ರತಿನಿಧಿಗಳು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿಯ ಸದಸ್ಯರು, ಸಮುದಾಯದ ಭಾಗವಹಿಸುವವರು, ಮಹಿಳಾ ಸ್ವಸಹಾಯ ಸಂಘಗಳು …
Read More »ಪ.ಜಾ/ಪ.ಪಂಗಳಲ್ಲಿ ಉದ್ಯಮಶೀಲತೆಯ ಉತ್ತೇಜನಕ್ಕೆ, ಪ.ಜಾ/ಪ.ಪಂ ಎಂಎಸ್ ಇ ಗಳಿಂದ ಕಡ್ಡಾಯ ಶೇ.4ರಷ್ಟು ಖರೀದಿ ಪೂರೈಸಲು ಎಂಎಸ್ ಎಂಇ ಸಚಿವಾಲಯದಿಂದ ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಬ್ (ಎನ್ ಎಸ್ ಎಸ್ ಎಚ್) ಯೋಜನೆ ಜಾರಿ
ಪ.ಜಾ/ಪ.ಪಂಗಳಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ಮತ್ತು ಭಾರತ ಸರ್ಕಾರದ ಅತಿ ಸಣ್ಣ ಮತ್ತು ಸಣ್ಣ ಉದ್ಯಮಗಳಿಗೆ ಸಾರ್ವಜನಿಕ ಖರೀದಿ ನೀತಿಯಡಿಯಲ್ಲಿ ಪ.ಜಾ/ಪ.ಪಂ ಎಂಎಸ್ ಇ ಗಳಿಂದ ಶೇ.4ರಷ್ಟು ಕಡ್ಡಾಯ ಖರೀದಿಯನ್ನು ಪೂರೈಸಲು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂ ಎಸ್ ಎಂ ಇ) ಸಚಿವಾಲಯವು ರಾಷ್ಟ್ರೀಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಬ್ (ಎನ್ ಎಸ್ ಎಸ್ ಎಚ್) ಯೋಜನೆಯನ್ನು ಜಾರಿಗೊಳಿದೆ. ಈ ಯೋಜನೆಯು ಸಾಮರ್ಥ್ಯ ವೃದ್ಧಿ …
Read More »ಸಾಂಪ್ರದಾಯಿಕ ಔಷಧದ ಕುರಿತಾದ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಶೃಂಗಸಭೆಯ ಸಮಾರೋಪ ಸಮಾರಂಭವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಭಾಷಣ ಮಾಡಲಿದ್ದಾರೆ
ಡಿಸೆಂಬರ್ 19, 2025 ರಂದು ಸಂಜೆ 4:30 ಕ್ಕೆ ನವದೆಹಲಿಯ ಭಾರತ ಮಂಟಪದಲ್ಲಿ ನಡೆಯಲಿರುವ ಎರಡನೇ ವಿಶ್ವ ಆರೋಗ್ಯ ಸಂಸ್ಥೆಯ ಜಾಗತಿಕ ಸಾಂಪ್ರದಾಯಿಕ ಔಷಧ ಶೃಂಗಸಭೆಯ ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದಲ್ಲಿ ಪ್ರಧಾನಮಂತ್ರಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಕಾರ್ಯಕ್ರಮವು ಜಾಗತಿಕ, ವಿಜ್ಞಾನ ಆಧಾರಿತ ಮತ್ತು ಜನ-ಕೇಂದ್ರಿತ ಸಾಂಪ್ರದಾಯಿಕ ಔಷಧ ಕಾರ್ಯಸೂಚಿಯನ್ನು ರೂಪಿಸುವಲ್ಲಿ ಭಾರತದ ಬೆಳೆಯುತ್ತಿರುವ ನಾಯಕತ್ವ ಮತ್ತು ಪ್ರವರ್ತಕ ಉಪಕ್ರಮಗಳನ್ನು ಪ್ರದರ್ಶಿಸುತ್ತದೆ. ಪ್ರಧಾನಮಂತ್ರಿ …
Read More »ಒಮಾನ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ಪ್ರಧಾನಮಂತ್ರಿ ಅವರು ಇಂದು ಮಸ್ಕತ್‌ನಲ್ಲಿ ಭಾರತೀಯ ಸಮುದಾಯದ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಈ ಸಭೆಯಲ್ಲಿ ವಿವಿಧ ಭಾರತೀಯ ಶಾಲೆಗಳ 700ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಓಮನ್ ನಲ್ಲಿ ಭಾರತೀಯ ಶಾಲೆಗಳು ಸ್ಥಾಪನೆಯಾಗಿ 50 ವರ್ಷಗಳನ್ನು ಪೂರೈಸುತ್ತಿರುವ ಹಿನ್ನೆಲೆಯಲ್ಲಿ, ಈ ವರ್ಷವು ಅಲ್ಲಿನ ಶಿಕ್ಷಣ ಸಂಸ್ಥೆಗಳಿಗೆ ವಿಶೇಷವಾಗಿದೆ. ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ಭಾರತದಲ್ಲಿರುವ ಕುಟುಂಬದವರು ಮತ್ತು ಸ್ನೇಹಿತರ ಪರವಾಗಿ ಅನಿವಾಸಿ ಭಾರತೀಯರಿಗೆ ಶುಭಾಶಯಗಳನ್ನು ತಿಳಿಸಿದರು. ತಮಗೆ ನೀಡಿದ ಅತ್ಯಂತ ಆತ್ಮೀಯ …
Read More »
Matribhumi Samachar Kannad