ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ 26 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕೈಗೊಂಡ ಮೊಟ್ಟಮೊದಲ ದ್ವಿಪಕ್ಷೀಯ ಭೇಟಿ ಇದಾಗಿದ್ದು, ಈ ಪ್ರವಾಸವು ಐತಿಹಾಸಿಕ ಮಹತ್ವವನ್ನು ಪಡೆದಿತ್ತು. 1845ರಲ್ಲಿ ಭಾರತೀಯ ವಲಸಿಗರು …
Read More »ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್‌ನ ಸಂಗಮ್ 2025 ಜಾಗತಿಕ ಅನ್ವೇಷಣೆ ಮತ್ತು ಹಳೆಯ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಭಾಗವಹಿಸಿದರು
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಇಂದು ಬೆಂಗಳೂರಿನಲ್ಲಿ ನಡೆದ ಐಐಟಿ ಮದ್ರಾಸ್ ಸಂಗಮ್ 2025 ಜಾಗತಿಕ ನಾವೀನ್ಯತೆ ಮತ್ತು ಪೂರ್ವ ವಿದ್ಯಾರ್ಥಿಗಳ ಶೃಂಗಸಭೆಯಲ್ಲಿ ಭಾಗವಹಿಸಿದರು. ಸಭೆಯಲ್ಲಿ ಮಾತನಾಡಿ ಅವರು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ನೀತಿಗಳ ದೂರದೃಷ್ಟಿ ಹಾಗೂ ಬದ್ಧತೆಗಳನ್ನು ಉಲ್ಲೇಖಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಭಾರತವನ್ನು 2047ರೊಳಗಾಗಿ ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ರೂಪಿಸುವ ದೃಷ್ಟಿಕೋನವನ್ನು ತಿಳಿಸಿದರು. …
Read More »ಗೌರವಾನ್ವಿತ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಉದ್ಯಮ ಮುಖಂಡರೊಂದಿಗೆ ಸಂವಾದ ನಡೆಸಿದರು
ಕೇಂದ್ರ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಕರ್ನಾಟಕ ಸರ್ಕಾರದ ಗೌರವಾನ್ವಿತ ವಾಣಿಜ್ಯ ಮತ್ತು ಕೈಗಾರಿಕೆ ಹಾಗೂ ಮೂಲಸೌಕರ್ಯ ಸಚಿವರಾದ ಶ್ರೀ ಎಂ.ಬಿ.ಪಾಟೀಲ್ ಅವರ ಉಪಸ್ಥಿತಿಯಲ್ಲಿ ಬೆಂಗಳೂರಿನಲ್ಲಿ ಉದ್ಯಮದ ಮುಖಂಡರು, ನವೋದ್ಯಮಗಳು ಮತ್ತು ಡೀಪ್ ಟೆಕ್ ನಾವೀನ್ಯಕಾರರ ಜೊತೆ ಫಲಪ್ರದ ಸಂವಾದ ನಡೆಸಿದರು. ಭಾರತದ ದೃಢವಾದ ನಾವೀನ್ಯತೆ, ನೀತಿಚೌಕಟ್ಟು ವಿವರಿಸಿದ ಶ್ರೀ ಪಿಯೂಷ್ ಗೋಯಲ್ ಅವರು ಆರಂಭಿಕ ಮತ್ತು ಬೆಳವಣಿಗೆಯ ಹಂತದ ಡೀಪ್ಟೆಕ್ ಸ್ಟಾರ್ಟ್‌ಅಪ್ ಗಳನ್ನು ಬೆಂಬಲಿಸುವ 10,000 ಕೋಟಿ ರೂ.ಗಳ ‘ನವೋದ್ಯಮಗಳಿಗಾಗಿ ಫಂಡ್ ಆಫ್ ಫಂಡ್ಸ್ʼ(ಎಫ್ಎಫ್ಎಸ್)ಅನ್ನು ಪ್ರಾರಂಭಿಸುವಲ್ಲಿ ಸರ್ಕಾರದ …
Read More »ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿನ ಭಾರತೀಯ ಸಮುದಾಯದ ಪ್ರಯಾಣವು ಧೈರ್ಯಕ್ಕೆ ಸಂಬಂಧಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು. ಈ …
Read More »ಐಐಟಿ ಮದ್ರಾಸ್ ನಿಂದ ಬೆಂಗಳೂರಿನಲ್ಲಿ ಸಂಗಮ್-2025 ಆಯೋಜನೆ
ಭಾರತೀಯ ತಂತ್ರಜ್ಞಾನ ಸಂಸ್ಥೆ ಮದ್ರಾಸ್ ಹಾಗೂ ಐಐಟಿ ಮದ್ರಾಸ್ ಪೂರ್ವ ವಿದ್ಯಾರ್ಥಿಗಳ ಸಂಘ ಜಂಟಿಯಾಗಿ ಪ್ರಮುಖ ಜಾಗತಿಕ ನಾವೀನ್ಯತೆ ಹಾಗೂ ಪೂರ್ವ ವಿದ್ಯಾರ್ಥಿಗಳ 6ನೇ ಆವೃತ್ತಿಯ ಸಂಗಮ್-2025 ಶೃಂಗಸಭೆಯನ್ನು ನಾಳೆ ಬೆಂಗಳೂರಿನ ಎಂಜಿ ರಸ್ತೆಯ ತಾಜ್ ನಲ್ಲಿ ಆಯೋಜಿಸಿದೆ. ಕೇಂದ್ರ ವಾಣಿಜ್ಯ ಹಾಗೂ ಕೈಗಾರಿಕೆ ಸಚಿವರಾದ ಶ್ರೀ ಪಿಯೂಷ್ ಗೋಯಲ್ ಅವರು ಪ್ರಸ್ತುತ ನೀತಿ- ಪ್ರತಿಭಾ ಪಲಾಯನದಿಂದ ಪ್ರತಿಭಾ ಜೋಡಣೆವರೆಗೆ ವಿಷಯದ ಕುರಿತು ಮಾತನಾಡುವರು. ಕಾರ್ಯಕ್ರಮದಲ್ಲಿ ನಾವೀನ್ಯತೆ ಹಾಗೂ ಉದ್ಯಮಶೀಲತೆಯಲ್ಲಿನ …
Read More »ಜಾಗತಿಕ ಉಪಸ್ಥಿತಿಯನ್ನು ಬಲಪಡಿಸಲು ದುಬೈನಲ್ಲಿ ಎಸ್ಎಐಎಲ್ (ಸೈಲ್) ಪ್ರತಿನಿಧಿ ಕಚೇರಿ ಉದ್ಘಾಟನೆ
ವಾರ್ಷಿಕ 20 ಮಿಲಿಯನ್ ಟನ್ ಕಚ್ಚಾ ಉಕ್ಕು ಸಾಮರ್ಥ್ಯವನ್ನು ಹೊಂದಿರುವ ಭಾರತದ ಅತಿದೊಡ್ಡ ಉಕ್ಕು ಉತ್ಪಾದಕರಲ್ಲಿ ಒಂದಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್ (ಎಸ್ಎಐಎಲ್) ದುಬೈನಲ್ಲಿ ತನ್ನ ಪ್ರತಿನಿಧಿ ಕಚೇರಿಯನ್ನು ತೆರೆಯಿತು. ಮಧ್ಯಪ್ರಾಚ್ಯದಲ್ಲಿ ಎಸ್ಎಐಎಲ್ ಮೊದಲ ಅಂತಾರಾಷ್ಟ್ರೀಯ ಕಚೇರಿ ಅದರ ಜಾಗತಿಕ ವಿಸ್ತರಣಾ ಕಾರ್ಯತಂತ್ರದಲ್ಲಿ ಮಹತ್ವದ ಹೆಜ್ಜೆಯಾಗಿದೆ. ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕಾ ಸಚಿವರಾದ ಶ್ರೀ ಎಚ್.ಡಿ.ಕುಮಾರಸ್ವಾಮಿ ಅವರು ದುಬೈನಲ್ಲಿರುವ ಭಾರತೀಯ ಕಾನ್ಸುಲ್ ಜನರಲ್ ಶ್ರೀ ಸತೀಶ್ …
Read More »ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
ಗೌರವಾನ್ವಿತ ಅಧ್ಯಕ್ಷರಾದ ಜಾನ್ ಮಹಾಮ ಅವರೇ, ಉಭಯ ದೇಶಗಳ ಪ್ರತಿನಿಧಿಗಳೇ, ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ. ಈ ಅವಕಾಶ ಸಿಕ್ಕಿರುವುದು ನನಗೆ ತುಂಬಾ ಹೆಮ್ಮೆಯ ವಿಷಯ. “ಅಯ್ಯ ಮೆ ಅನೆಜೆ ಸೆ ಮೆವೊಹ್” ಘಾನಾದಲ್ಲಿ ನನ್ನನ್ನು ಸೌಹಾರ್ದತೆ ಮತ್ತು ಗೌರವದಿಂದ ಸ್ವಾಗತಿಸಿರುವುದಕ್ಕಾಗಿ ನಾನು ಬಹಳ ಕೃತಜ್ಞನಾಗಿದ್ದೇನೆ. ಖುದ್ದು ಅಧ್ಯಕ್ಷರೇ ನನ್ನನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿರುವುದು ನನಗೆ ಬಹಳ ಗೌರವದ …
Read More »ಘಾನಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾದ ಅಧ್ಯಕ್ಷರಾದ, ಗೌರವಾನ್ವಿತ ಡಾ. ಜಾನ್ ಡ್ರಾಮಾನಿ ಮಹಾಮಾ ಅವರನ್ನು ಭೇಟಿ ಮಾಡಿದರು. ಜ್ಯೂಬಿಲಿ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಮಹಾಮಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಘಾನಾಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಡಿ ಇದಾಗಿದೆ. ಇಬ್ಬರು ನಾಯಕರು ಏಕಾಂತ ಸಭೆ ಮತ್ತು ನಿಯೋಗ ಮಟ್ಟದ ಸಭೆಗಳನ್ನು ನಡೆಸಿ, ವಿಸ್ತೃತ ಮಾತುಕತೆ ನಡೆಸಿದರು. ಉಭಯ …
Read More »ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ
ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆ. ಗರವಾನ್ವಿತ ಅಧ್ಯಕ್ಷರಾದ ಜಾನ್ ಡ್ರಾಮನಿ ಮಹಾಮಾ ಅವರ ಆಹ್ವಾನದ ಮೇರೆಗೆ, ನಾನು ಜುಲೈ 2-3 ರಂದು ಘಾನಾಗೆ ಭೇಟಿ ನೀಡಲಿದ್ದೇನೆ. ಘಾನಾ ದೇಶವು ಜಾಗತಿಕ ದಕ್ಷಿಣದಲ್ಲಿ ಮೌಲ್ಯಯುತ ಪಾಲುದಾರ ಮತ್ತು ಆಫ್ರಿಕನ್ ಒಕ್ಕೂಟ ಹಾಗು ಪಶ್ಚಿಮ ಆಫ್ರಿಕಾದ ರಾಜ್ಯಗಳ ಆರ್ಥಿಕ ಸಮುದಾಯದಲ್ಲಿ ಪ್ರಮುಖ ಪಾತ್ರ …
Read More »2026ನೇ ಸಾಲಿನ ಪದ್ಮ ಪ್ರಶಸ್ತಿಗೆ ಜುಲೈ 31ರವರೆಗೆ ಅರ್ಜಿ ಸಲ್ಲಿಕೆ
2026ರ ಗಣರಾಜ್ಯೋತ್ಸವದ ಸಂದರ್ಭದಲ್ಲಿ ಘೋಷಿಸಲಾಗುವ ಪದ್ಮ ಪ್ರಶಸ್ತಿಗಳು -2026 ಗಾಗಿ ನಾಮನಿರ್ದೇಶನಗಳು / ಶಿಫಾರಸುಗಳು 2025ರ ಮಾರ್ಚ್ 15 ರಂದು ಪ್ರಾರಂಭವಾಗಿವೆ. ಪದ್ಮ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲು 2025ರ ಜುಲೈ 31 ಕೊನೆಯ ದಿನಾಂಕವಾಗಿದೆ. ಪದ್ಮ ಪ್ರಶಸ್ತಿಗಳಿಗೆ ನಾಮನಿರ್ದೇಶನಗಳು / ಶಿಫಾರಸುಗಳನ್ನು ರಾಷ್ಟ್ರೀಯ ಪುರಸ್ಕಾರ ಪೋರ್ಟಲ್ (https://awards.gov.in) ನಲ್ಲಿಆನ್‌ಲೈನ್‌ನಲ್ಲಿ ಮಾತ್ರ ಸ್ವೀಕರಿಸಲಾಗುತ್ತದೆ. ಪದ್ಮ ಪ್ರಶಸ್ತಿಗಳಾದ ಪದ್ಮ ವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿಒಂದಾಗಿದೆ. 1954 ರಲ್ಲಿ ಸ್ಥಾಪಿಸಲಾದ ಈ ಪ್ರಶಸ್ತಿಗಳನ್ನು ಪ್ರತಿವರ್ಷ …
Read More »
Matribhumi Samachar Kannad