Saturday, April 04 2026 | 02:55:28 PM
Breaking News

ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾರತದ ರಾಷ್ಟ್ರಪತಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಫೆಬ್ರವರಿ 14, 2025) ಬೆಂಗಳೂರಿನಲ್ಲಿ ನಡೆದ ಆರ್ಟ್ ಆಫ್ ಲಿವಿಂಗ್ ನ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಅಧಿವೇಶನದಲ್ಲಿ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಗಳು, ಭಾರತದ ನಾರಿ ಶಕ್ತಿಯು ಮಹತ್ವಾಕಾಂಕ್ಷೆ, ಸಾಧನೆ ಮತ್ತು ಕೊಡುಗೆ ನೀಡಲು ಸಿದ್ದಗೊಳ್ಳುತ್ತಿದೆ ಎಂದರು. ಅದು ವಿಜ್ಞಾನ, ಕ್ರೀಡೆ, ರಾಜಕೀಯ, ಕಲೆ ಅಥವಾ ಸಂಸ್ಕೃತಿಯಾಗಿರಲಿ, ನಮ್ಮ ಸಹೋದರಿಯರು ಮತ್ತು ಹೆಣ್ಣುಮಕ್ಕಳು ತಲೆ ಎತ್ತಿ ಮುಂದೆ ಸಾಗುತ್ತಿದ್ದಾರೆ. ಅವರು ತಮ್ಮ ಕುಟುಂಬ, ಸಂಸ್ಥೆಗಳು ಮತ್ತು ದೇಶ ಹೆಮ್ಮೆಪಡುವಂತೆ ಮಾಡುತ್ತಿದ್ದಾರೆ. ಮಾನಸಿಕ ಸ್ಥೈರ್ಯ-ಶಕ್ತಿಯಿಲ್ಲದೆ ಅಡೆತಡೆಗಳನ್ನು ಮುರಿಯಲು ಮತ್ತು ಸ್ಟೀರಿಯೊಟೈಪ್ ಗಳಿಗೆ  ಸವಾಲೆಸೆಯಲು  ಸಾಧ್ಯವಿಲ್ಲ. ಪ್ರತಿಯೊಬ್ಬ ಮಹಿಳೆಯೂ ಧೈರ್ಯವನ್ನು ಒಟ್ಟುಗೂಡಿಸಬೇಕು, ದೊಡ್ಡ ಕನಸುಗಳನ್ನು ಕಾಣಬೇಕು ಮತ್ತು ತನ್ನ ಕನಸುಗಳನ್ನು ಸಾಧಿಸಲು ಎಲ್ಲಾ ಶಕ್ತಿ ಮತ್ತು ಸಾಮರ್ಥ್ಯವನ್ನು ಬಳಸಿಕೊಳ್ಳಬೇಕು ಎಂದು ಅವರು ಆಗ್ರಹಿಸಿದರು. ಪ್ರತಿಯೊಬ್ಬರೂ ತಮ್ಮ ಗುರಿ ಸಾಧನೆಯತ್ತ  ಇಡುವ ಪ್ರತಿಯೊಂದು ಸಣ್ಣ ಹೆಜ್ಜೆಯೂ ಅಭಿವೃದ್ಧಿ ಹೊಂದಿದ ಭಾರತದತ್ತ ಒಂದು ಹೆಜ್ಜೆಯಾಗುತ್ತದೆ ಎಂದು ಅವರು ಹೇಳಿದರು. ನಾವು ತಾಂತ್ರಿಕ ಅಸ್ತವ್ಯಸ್ತಗಳ  ಯುಗದಲ್ಲಿದ್ದೇವೆ ಎಂದು ರಾಷ್ಟ್ರಪತಿ  ನುಡಿದರು. ತಂತ್ರಜ್ಞಾನದ ಪ್ರಗತಿಯು ನಮಗೆ ಕೆಲವು ರೀತಿಯಲ್ಲಿ ಉತ್ತಮ ಗುಣಮಟ್ಟದ ಜೀವನವನ್ನು ನೀಡಿದೆ. ಅಂತಹ ಸ್ಪರ್ಧಾತ್ಮಕ ಜಗತ್ತಿನಲ್ಲಿ, ನಮ್ಮ ಮಾನವೀಯ ಮೌಲ್ಯಗಳು ಹಾಗೇ ಉಳಿಯುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. ವಾಸ್ತವವಾಗಿ, ಸಹಾನುಭೂತಿ, ಪ್ರೀತಿ ಮತ್ತು ಏಕತೆಯ ಮಾನವೀಯ ಮೌಲ್ಯಗಳನ್ನು ಉತ್ತೇಜಿಸಲು ಪ್ರತಿಯೊಬ್ಬ ಮನುಷ್ಯನು ಪ್ರಜ್ಞಾಪೂರ್ವಕವಾಗಿ ಹೆಚ್ಚುವರಿ ಪ್ರಯತ್ನವನ್ನು ಮಾಡಬೇಕಾಗಿದೆ. ಇಲ್ಲಿ ಮಹಿಳೆಯರ ಪಾತ್ರ ಬಹಳ ಮುಖ್ಯವಾಗುತ್ತದೆ. ಮಹಿಳೆಯರಿಗೆ ಸಹಾನುಭೂತಿಯ ಮೂಲಕ ಮುನ್ನಡೆಸುವ ವಿಶೇಷ ಸಾಮರ್ಥ್ಯವಿದೆ. ಅವರು ವ್ಯಕ್ತಿಯನ್ನು ಮೀರಿ ನೋಡುವ ಮತ್ತು ಜಾಗತಿಕ ಮಟ್ಟದಲ್ಲಿ ಕುಟುಂಬಗಳು, ಸಮುದಾಯಗಳು ಮತ್ತು ಸಂಬಂಧಗಳ ಯೋಗಕ್ಷೇಮಕ್ಕಾಗಿ ಕೆಲಸ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಈ ಸಮ್ಮೇಳನದಲ್ಲಿ ಭಾಗವಹಿಸುತ್ತಿರುವ  ಎಲ್ಲಾ ಮಹಿಳೆಯರು, ತಮ್ಮ ಜೀವನವನ್ನು ಮತ್ತು ತಮ್ಮ ಸುತ್ತಲಿನವರ ಜೀವನವನ್ನು ಹೆಚ್ಚು ಸುಂದರ ಮತ್ತು ಶಾಂತಿಯುತವಾಗಿಸಲು ಅನ್ವಯಿಸಬಹುದಾದ ಆಧ್ಯಾತ್ಮಿಕ ತತ್ವಗಳನ್ನು ಮೈಗೂಡಿಸಿಕೊಳ್ಳುತ್ತಾರೆ  ಎಂಬ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು. ಆರ್ಟ್ ಆಫ್ ಲಿವಿಂಗ್,  ಶಿಕ್ಷಣ ಕ್ಷೇತ್ರದಲ್ಲಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ರಾಷ್ಟ್ರಪತಿಗಳು ಸಂತಸ ವ್ಯಕ್ತಪಡಿಸಿದರು. ನಮ್ಮ ಮಕ್ಕಳ ಶಿಕ್ಷಣಕ್ಕಿಂತ ಮಾನವೀಯತೆಯ ಕ್ಷೇತ್ರದಲ್ಲಿ ಬೇರೆ ಯಾವ  ದೊಡ್ಡ ಹೂಡಿಕೆಯೂ  ಇಲ್ಲ ಎಂದು ಅವರು ಹೇಳಿದರು. ಸರಿಯಾದ ಮಾರ್ಗದರ್ಶನ ಮತ್ತು ಬೆಂಬಲದೊಂದಿಗೆ, ಅನೇಕ ಮಕ್ಕಳು ನಮ್ಮ ರಾಷ್ಟ್ರದ ಪ್ರಯಾಣದಲ್ಲಿ ಸಕ್ರಿಯವಾಗಿ ಭಾಗವಹಿಸಬಹುದು ಎಂದ ಅವರು  ಹವಾಮಾನ ಬದಲಾವಣೆಯಂತಹ ಜಾಗತಿಕ ಸವಾಲುಗಳನ್ನು ಎದುರಿಸಲು ಒಟ್ಟಾಗಿ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು. ಪರಿಸರ ಸಂರಕ್ಷಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಚರ್ಚಿಸಲು ಅವರು ಎಲ್ಲರನ್ನೂ ಒತ್ತಾಯಿಸಿದರು.

Read More »

ಪರೀಕ್ಷಾ ಪೇ ಚರ್ಚಾ 2025ರ ಮೊದಲ ಸಂಚಿಕೆಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು

ಫೆಬ್ರವರಿ 10, 2025 ರಂದು, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವದೆಹಲಿಯ ಸುಂದರ್ ನರ್ಸರಿಯಲ್ಲಿ 8ನೇ ಆವೃತ್ತಿಯ ಪರೀಕ್ಷಾ ಪೇ ಚರ್ಚಾ (ಪಿಪಿಸಿ)ಯ ಮೊದಲ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಈ ಅನೌಪಚಾರಿಕ ಆದರೆ ಅನುಭವ ಹಂಚಿಕೊಳ್ಳುವ ಒಳನೋಟವುಳ್ಳ ಅಧಿವೇಶನದಲ್ಲಿ, ಪ್ರಧಾನಮಂತ್ರಿ ಅವರು ದೇಶಾದ್ಯಂತದ ವಿದ್ಯಾರ್ಥಿಗಳೊಂದಿಗೆ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. ಹಾಜರಿದ್ದ 36 ವಿದ್ಯಾರ್ಥಿಗಳು ಪೌಷ್ಟಿಕಾಂಶ ಮತ್ತು ಸ್ವಾಸ್ಥ್ಯದ ಬಗ್ಗೆ ಅಮೂಲ್ಯವಾದ ಪಾಠಗಳನ್ನು ಕಲಿತರು; ಒತ್ತಡವನ್ನು ಕರಗತ ಮಾಡಿಕೊಳ್ಳುವುದು; …

Read More »

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕರು ಪ್ರಧಾನಮಂತ್ರಿ ಅವರನ್ನು ಭೇಟಿಯಾದರು

ಅಮೆರಿಕದ ರಾಷ್ಟ್ರೀಯ ಗುಪ್ತಚರ ನಿರ್ದೇಶಕಿ ಶ್ರೀಮತಿ ತುಳಸಿ ಗಬ್ಬಾರ್ಡ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಶ್ರೀಮತಿ ಗಬ್ಬಾರ್ಡ್ ಅವರೊಂದಿಗಿನ ತಮ್ಮ ಹಿಂದಿನ ಸಂವಾದವನ್ನು ಪ್ರಧಾನಮಂತ್ರಿ ಅವರು ಪ್ರೀತಿಯಿಂದ ಸ್ಮರಿಸಿದರು. ದ್ವಿಪಕ್ಷೀಯ ಗುಪ್ತಚರ ಸಹಕಾರವನ್ನು ಹೆಚ್ಚಿಸುವುದು, ವಿಶೇಷವಾಗಿ ಭಯೋತ್ಪಾದನೆ ನಿಗ್ರಹ, ಸೈಬರ್ ಭದ್ರತೆ, ಹೊರಹೊಮ್ಮು ತ್ತಿರುವ ಬೆದರಿಕೆಗಳು ಮತ್ತು ಕಾರ್ಯತಂತ್ರದ ಗುಪ್ತಚರ ಮಾಹಿತಿ ಹಂಚಿಕೆಯ ಕುರಿತು ಅವರ ಚರ್ಚೆಗಳು ಸ್ಪರ್ಶಿಸಿದವು. ಅವರು ಪರಸ್ಪರ ಹಿತಾಸಕ್ತಿಯ ಪ್ರಾದೇಶಿಕ …

Read More »

ವಿಶ್ವ ಬಾನುಲಿ ದಿನದ ಅಂಗವಾಗಿ ಸರ್ವರಿಗೂ ಶುಭಾಶಯ ಕೋರಿದ ಪ್ರಧಾನಮಂತ್ರಿ

ವಿಶ್ವ ಬಾನುಲಿ ದಿನದ ಅಂಗವಾಗಿ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಈ ತಿಂಗಳ 23ರಂದು ನಿಗದಿಯಾಗಿರುವ ಮಾಸಿಕ ಕಾರ್ಯಕ್ರಮ “ಮನ್ ಕಿ ಬಾತ್‌”ಗಾಗಿ  ಜನರು ತಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳುವಂತೆ ಅವರು ಎಲ್ಲರಿಗೂ ಆಹ್ವಾನ ನೀಡಿದ್ದಾರೆ. ಶ್ರೀ ಮೋದಿ ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ವಿಶ್ವ ಬಾನುಲಿ ದಿನದ ಶುಭಾಶಯಗಳು! ಮಾಹಿತಿ ಒದಗಿಸುತ್ತಾ, ಸ್ಫೂರ್ತಿಯ ಸೆಲೆಯಾಗಿ ಮತ್ತು ಜನರನ್ನು …

Read More »

ಕರ್ನಾಟಕ ಮತ್ತು ಜಾರ್ಖಂಡ್ ಗಳಿಗೆ ಫೆಬ್ರವರಿ 14 ಮತ್ತು 15 ರಂದು ಭಾರತದ ರಾಷ್ಟ್ರಪತಿಗಳ ಭೇಟಿ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು 2025ರ ಫೆಬ್ರವರಿ 14 ಮತ್ತು 15 ರಂದು ಕರ್ನಾಟಕ ಮತ್ತು ಜಾರ್ಖಂಡ್‌ಗೆ ಭೇಟಿ ನೀಡಲಿದ್ದಾರೆ. ಫೆಬ್ರವರಿ 14 ರಂದು ರಾಷ್ಡ್ರಪತಿಗಳು ಬೆಂಗಳೂರಿನ‌ ಆರ್ಟ್ ಆಫ್ ಲಿವಿಂಗ್ ನಲ್ಲಿ ಆಯೋಜನೆಯಾಗಿರುವ 10ನೇ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಫೆಬ್ರವರಿ 15 ರಂದು ರಾಷ್ಟ್ರಪತಿಗಳು ರಾಂಚಿಯಲ್ಲಿ ಬಿಐಟಿ ಮೆಸ್ರಾದ ಪ್ಲಾಟಿನಂ ಜುಬಿಲಿ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಲಿದ್ದಾರೆ.   भारत : 1885 …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ನವದೆಹಲಿಯಲ್ಲಿ ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ನವದೆಹಲಿಯಲ್ಲಿ‘ಸಹಕಾರ ಸಂಘಗಳನ್ನು ಬಲಪಡಿಸಲು ಕೈಗೊಂಡ ಮತ್ತು ಪ್ರಸ್ತುತ ತೆಗೆದುಕೊಳ್ಳುತ್ತಿರುವ ಉಪಕ್ರಮಗಳ’ ಕುರಿತು ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಸಹಕಾರ ಖಾತೆ ರಾಜ್ಯ ಸಚಿವರಾದ ಶ್ರೀ ಕೃಷ್ಣ ಪಾಲ್‌ ಮತ್ತು ಶ್ರೀ ಮುರಳೀಧರ್‌ ಮೊಹೋಲ್‌, ಸಮಿತಿಯ ಸದಸ್ಯರು, ಸಹಕಾರ ಸಚಿವಾಲಯದ ಕಾರ್ಯದರ್ಶಿ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಹಕಾರ …

Read More »

14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಉದ್ದೇಶಿಸಿ ಪ್ರಧಾನಮಂತ್ರಿ ಯವರಿಂದ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರಾನ್ಸ್ ಅಧ್ಯಕ್ಷ ಘನತೆವೆತ್ತ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ಇಂದು ಪ್ಯಾರಿಸ್‌ ನಲ್ಲಿ 14ನೇ ಭಾರತ-ಫ್ರಾನ್ಸ್ ಸಿಇಒ ಫೋರಂ ಅನ್ನು ಉದ್ದೇಶಿಸಿ ಜಂಟಿಯಾಗಿ ಮಾತನಾಡಿದರು. ರಕ್ಷಣೆ, ಏರೋಸ್ಪೇಸ್, ​​ನಿರ್ಣಾಯಕ ಮತ್ತು ಉದಯೋನ್ಮುಖ ತಂತ್ರಜ್ಞಾನಗಳು, ಮೂಲಸೌಕರ್ಯ, ಸುಧಾರಿತ ಉತ್ಪಾದನೆ, ಕೃತಕ ಬುದ್ಧಿಮತ್ತೆ, ಜೀವನ-ವಿಜ್ಞಾನ, ಕ್ಷೇಮ ಮತ್ತು ಜೀವನಶೈಲಿ ಮತ್ತು ಆಹಾರ ಮತ್ತು ಆತಿಥ್ಯ ಮುಂತಾದ ಕ್ಷೇತ್ರಗಳ ಮೇಲೆ ಕೇಂದ್ರೀಕರಿಸುವ, ಎರಡೂ ಕಡೆಯ ಕಂಪನಿಗಳ ವೈವಿಧ್ಯಮಯ …

Read More »

ಪ್ರಧಾನಮಂತ್ರಿಯವರ ಫ್ರಾನ್ಸ್‌ ಭೇಟಿಯ ಫಲಿತಾಂಶಗಳು

ಕ್ರ.ಸಂ ಎಂಒಯುಗಳು/ ಒಪ್ಪಂದಗಳು/ ತಿದ್ದುಪಡಿಗಳು ಕ್ಷೇತ್ರಗಳು ಕೃತಕ ಬುದ್ಧಿಮತ್ತೆ (ಎಐ) ಕುರಿತು ಭಾರತ ಫ್ರಾನ್ಸ್ ಘೋಷಣೆ ತಂತ್ರಜ್ಞಾನ ಮತ್ತು ನಾವೀನ್ಯತೆ, ಎಸ್&ಟಿ ಭಾರತ-ಫ್ರಾನ್ಸ್ ನಾವೀನ್ಯತೆ ವರ್ಷ 2026ರ  ಲೋಗೋ ಬಿಡುಗಡೆ ತಂತ್ರಜ್ಞಾನ ಮತ್ತು ನಾವೀನ್ಯತೆ, ಎಸ್&ಟಿ ಇಂಡೋ-ಫ್ರೆಂಚ್ ಸೆಂಟರ್ ಫಾರ್ ದಿ ಡಿಜಿಟಲ್ ಸೈನ್ಸಸ್ ಅನ್ನು ಸ್ಥಾಪಿಸಲು ಭಾರತ ಸರ್ಕಾರದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ (ಡಿ ಎಸ್‌ ಟಿ), ಮತ್ತು ಫ್ರಾನ್ಸ್ ನ ಇನ್‌ಸ್ಟಿಟ್ಯೂಟ್ ನ್ಯಾಷನಲ್ ಡಿ ರೆಚೆರ್ಚೆ ಎನ್ ಇನ್‌ಫಾರ್ಮ್ಯಾಟಿಕ್ …

Read More »

ಪ್ರಧಾನಮಂತ್ರಿಯವರಿಂದ ಫ್ರಾನ್ಸ್ ಅಧ್ಯಕ್ಷರೊಂದಿಗೆ ದ್ವಿಪಕ್ಷೀಯ ಮಾತುಕತೆ

ಉಭಯ ನಾಯಕರ ನಡುವಿನ ವೈಯಕ್ತಿಕ ಬಾಂಧವ್ಯವನ್ನು ಪ್ರತಿಬಿಂಬಿಸುವ ವಿಶೇಷ ಸಂದರ್ಭವಾಗಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಶ್ರೀ ಇಮ್ಯಾನುಯೆಲ್ ಮ್ಯಾಕ್ರೋನ್ ಅವರು ನಿನ್ನೆ ಫ್ರಾನ್ಸ್ ಅಧ್ಯಕ್ಷೀಯ ವಿಮಾನದಲ್ಲಿ ಪ್ಯಾರಿಸ್‌ ನಿಂದ ಮಾರ್ಸೆಲ್ಲೆಗೆ ಒಟ್ಟಿಗೆ ಪ್ರಯಾಣಿಸಿದರು. ಅವರು ದ್ವಿಪಕ್ಷೀಯ ಸಂಬಂಧಗಳು ಮತ್ತು ಪ್ರಮುಖ ಜಾಗತಿಕ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಕುರಿತು ಚರ್ಚಿಸಿದರು. ಇದಾದ ಬಳಿಕ ಮಾರ್ಸೆಲ್ಲೆ ತಲುಪಿದ ಬಳಿಕ ನಿಯೋಗ ಮಟ್ಟದ ಮಾತುಕತೆ ನಡೆಯಿತು. ಕಳೆದ 25 ವರ್ಷಗಳಲ್ಲಿ …

Read More »

ಪ್ರಧಾನಮಂತ್ರಿ ಮತ್ತು ಫ್ರಾನ್ಸ್ ಅಧ್ಯಕ್ಷರು ಮಾರ್ಸಿಲ್ಲೆಯಲ್ಲಿ ಭಾರತದ ದೂತವಾಸ ಕಚೇರಿ ಅನ್ನು ಜಂಟಿಯಾಗಿ ಉದ್ಘಾಟಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮತ್ತು ಫ್ರೆಂಚ್ ಗಣರಾಜ್ಯದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಎಮ್ಯಾನುಯೆಲ್ ಮ್ಯಾಕ್ರನ್ ಅವರು ಇಂದು ಮಾರ್ಸಿಲ್ಲೆಯಲ್ಲಿ ಹೊಸದಾಗಿ ತೆರೆಯಲಾದ ಭಾರತದ ದೂತವಾಸ ಕಚೇರಿ ಅನ್ನು ಜಂಟಿಯಾಗಿ ಉದ್ಘಾಟಿಸಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರು ಭಾರತದ ದೂತವಾಸ ಕಚೇರಿ ಅನ್ನು ಉದ್ಘಾಟಿಸಿದ್ದು  ಇದು ಭಾರತ ಮತ್ತು ಫ್ರಾನ್ಸ್ ನಡುವಿನ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಮೈಲಿಗಲ್ಲು ಆಗಿದೆ. ಉದ್ಘಾಟನಾ ಸಮಾರಂಭದಲ್ಲಿ ಅಧ್ಯಕ್ಷ ಶ್ರೀ ಮ್ಯಾಕ್ರನ್ ಅವರ …

Read More »