Saturday, January 17 2026 | 11:42:12 AM
Breaking News

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರಾಮೀಣ ಭಾರತ ಮಹೋತ್ಸವ 2025 ಉದ್ಘಾಟಿಸಿದರು

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ 2024 ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು …

Read More »

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ

ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ. “ಡಾ. ರಾಜಗೋಪಾಲ ಚಿದಂಬರಂ ಅವರ …

Read More »

ಕೃತಕ ಬುದ್ಧಿಮತ್ತೆಯಲ್ಲಿ ನಾಯಕತ್ವ ವಹಿಸಲು ಭಾರತ ಬದ್ಧವಾಗಿದೆ: ಪ್ರಧಾನಮಂತ್ರಿ

ಭಾರತೀಯ ಉದ್ಯಮಿ ಶ್ರೀ ವಿಶಾಲ್ ಸಿಕ್ಕಾ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿ ಮಾಡಿದರು. ಶ್ರೀ ಮೋದಿಯವರು ಈ ಭೇಟಿಯನ್ನು ಉಪಯುಕ್ತ ಸಂವಾದ ಎಂದು ಬಣ್ಣಿಸಿದರು. ನಾವೀನ್ಯತೆ ಮತ್ತು ಯುವಕರಿಗೆ ಅವಕಾಶಗಳನ್ನು ಸೃಷ್ಟಿಸುವತ್ತ ಗಮನ ಹರಿಸಿ ಎಐನಲ್ಲಿ ಮುನ್ನಡೆ ಸಾಧಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು. ಅವರಿಬ್ಬರೂ ಕೃತಕ ಬುದ್ಧಿಮತ್ತೆ ಹಾಗೂ ಭಾರತದ ಮೇಲೆ ಅದರ ಪರಿಣಾಮ ಮತ್ತು ಮುಂಬರುವ ದಿನಗಳಲ್ಲಿನ ಹಲವಾರು ವಿಧಿರೂಪ ಬಗ್ಗೆ ವಿವರವಾದ …

Read More »

ಅಹಮದಾಬಾದ್ ಅಂತಾರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಅಹಮದಾಬಾದ್ ಅಂತಾರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಇಣುಕುನೋಟಗಳನ್ನು ಹಂಚಿಕೊಂಡಿದ್ದಾರೆ. ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಈ ಪ್ರದರ್ಶನದ ಬೆಳವಣಿಗೆಯನ್ನು ಗಮನಿಸುತ್ತಿರುವುದರಿಂದ ಈ ಪ್ರದರ್ಶನದೊಂದಿಗೆ ನನಗೆ ಬಲವಾದ ನಂಟಿದೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಇಂತಹ ಪ್ರದರ್ಶನಗಳು ಪ್ರಕೃತಿಯ ಸೌಂದರ್ಯವನ್ನು ವೈಭವೀಕರಿಸಿ ಸುಸ್ಥಿರತೆಯ ಬಗ್ಗೆ ಜಾಗೃತಿ ಮೂಡಿಸುತ್ತವೆ ಎಂದು ಶ್ರೀ ಮೋದಿಯವರು ಹೇಳಿದ್ದಾರೆ. ಪ್ರಧಾನಮಂತ್ರಿಯವರು Xನಲ್ಲಿ ಪೋಸ್ಟ್ ಮಾಡಿ; “ಅಹಮದಾಬಾದ್ ಅಂತರರಾಷ್ಟ್ರೀಯ ಫಲಪುಷ್ಪ ಪ್ರದರ್ಶನದ ಕೆಲವು ನೋಟಗಳು ಇಲ್ಲಿವೆ. …

Read More »

ಭಾರತದ ಪ್ರತಿಭಾವಂತ ಯುವಕರು ವಿವಿಧ ಕ್ಷೇತ್ರಗಳಲ್ಲಿ ಅಭೂತಪೂರ್ವ ಸಾಧನೆಯನ್ನು ಮಾಡುತ್ತಿದ್ದಾರೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು, ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳನ್ನು ಶ್ಲಾಘಿಸಿದರು, ಈ ಯಶಸ್ಸಿಗೆ ರಾಷ್ಟ್ರದ ಯುವಕರ ಶಕ್ತಿ ಮತ್ತು ಪ್ರತಿಭೆಯೇ ಕಾರಣ ಎಂದು ಅವರು ಹೇಳಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಭಾರತದ ಗಮನಾರ್ಹ ಸಾಧನೆಗಳ ಬಗ್ಗೆ X ಪ್ಲಾಟ್ ಫಾರ್ಮ್ ನಲ್ಲಿ MyGov ನ ನವೀಕರಣಗಳಿಗೆ ಪ್ರತಿಕ್ರಿಯಿಸಿದ ಶ್ರೀ ಮೋದಿಯವರು; “ಭಾರತವು ಪ್ರಭಲ ಪ್ರವೃತ್ತಿಯನ್ನು ಸ್ಥಾಪಿಸುತ್ತಿದ್ದು ಇದಕ್ಕೆ ನಮ್ಮ ಪ್ರತಿಭಾವಂತ ಯುವಕರು ಕಾರಣ! ಮುಂಬರುವ ದಿನಗಳಲ್ಲಿ ನಾವು ಇನ್ನೂ …

Read More »

ಕೇಂದ್ರ ಸಚಿವರಾದ ಶ್ರೀ ವಿ ಸೋಮಣ್ಣ ಅವರಿಂದ ಅಡಿಪ್ (ADIP) ಯೋಜನೆಯಡಿ ದಿವ್ಯಾಂಗ ಫಲಾನುಭವಿಗಳಿಗೆ ಉಚಿತವಾಗಿ ಸಾಧನ ಸಲಕರಣೆಗಳ ವಿತರಣೆ

ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆಗಳ ರಾಜ್ಯ ಸಚಿವರಾದ ಶ್ರೀ ವಿ ಸೋಮಣ್ಣ ಇಂದು ತುಮಕೂರು ಜಿಲ್ಲೆ, ಗುಬ್ಬಿ ತಾಲೂಕು,  ಕಸಬಾ, ಚೇಳೂರು ಮತ್ತು ಹಾಗಲವಾಡಿ ಹೋಬಳಿಗಳ ಪ್ರವಾಸ ಕೈಗೊಂಡಿದ್ದರು. ಕಸಬಾ ಹೋಬಳಿ ವ್ಯಾಪ್ತಿಯ 6 ಪಂಚಾಯಿತಿ, ಚೇಳೂರು ಮತ್ತು ಹಾಗಲವಾಡಿ ಹೋಬಳಿ ವ್ಯಾಪ್ತಿಯ 9 ಪಂಚಾಯಿತಿಯ ದಿವ್ಯಾಂಗ ಫಲಾನುಭವಿಗಳಿಗೆ ಭಾರತ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ADIP ಯೋಜನೆಯಡಿಯಲ್ಲಿ ದಿವ್ಯಾಂಗ ಫಲಾನುಭವಿಗಳಿಗೆ ಸಹಾಯಕ ಸಲಕರಣೆ ವಿತರಿಸಿದರು. ಈ ಸಂದರ್ಭದಲ್ಲಿ ಸಾರ್ವಜನಿಕರ ಆಹವಾಲು ಸ್ವೀಕರಿಸಿ …

Read More »

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಗೌರವ ನಮನ

ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದ ಅಂಗವಾಗಿ  ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದರು. ಅವರು ಮಹಿಳಾ ಸಬಲೀಕರಣದ ಆಶಾಕಿರಣ; ಶಿಕ್ಷಣ ಮತ್ತು ಸಾಮಾಜಿಕ ಸುಧಾರಣೆಯ ಆದ್ಯ ಪ್ರವರ್ತರು ಎಂದು ಶ್ರೀ ಮೋದಿ ಅವರು ಶ್ಲಾಘಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನದಂದು ಅವರಿಗೆ ಗೌರವ ನಮನಗಳು. ಅವರು ಮಹಿಳಾ ಸಬಲೀಕರಣದ ಆಶಾಕಿರಣ ಹಾಗೂ ಶಿಕ್ಷಣ ಮತ್ತು ಸಾಮಾಜಿಕ …

Read More »

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮ ದಿನದ ಅಂಗವಾಗಿ ಪ್ರಧಾನಮಂತ್ರಿಗಳಿಂದ ಅವರ ಸ್ಮರಣೆ

ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಚ್ಚಿಯಾರ್ ಅವರನ್ನು ಧೈರ್ಯಶಾಲಿ ಮಹಿಳೆ ಎಂದು ಸ್ಮರಿಸಿದ್ದಾರೆ. ಅಪ್ರತಿಮ ಶೌರ್ಯ ಮತ್ತು ತಂತ್ರಗಾರಿಕಾ ಕೌಶಲ್ಯದೊಂದಿಗೆ ವಸಾಹತುಶಾಹಿ ಆಳ್ವಿಕೆಯ ವಿರುದ್ಧ ಅವರು ವೀರೋಚಿತ ಹೋರಾಟ ನಡೆಸಿದರು ಎಂದು ಶ್ರೀ ಮೋದಿ ಅವರು  ಬಣ್ಣಿಸಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ: “ಧೈರ್ಯಶಾಲಿ ರಾಣಿ ವೇಲು ನಾಚ್ಚಿಯಾರ್ ಅವರ ಜನ್ಮದಿನದಂದು ಅವರ ಸ್ಮರಣೆ! …

Read More »

ದೆಹಲಿಯಲ್ಲಿ ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ನಮ್ಮ ಬದ್ಧತೆಯ ಪ್ರತಿಬಿಂಬ: ಪ್ರಧಾನಮಂತ್ರಿ

ದೆಹಲಿಯಲ್ಲಿಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳು ಅಲ್ಲಿನ ಜನರನ್ನು ಸಬಲಗೊಳಿಸುವ ಕೇಂದ್ರ ಸರ್ಕಾರದ ಬದ್ಧತೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ದೆಹಲಿಯ ಜನರಿಗೆ ಉತ್ತಮ ಅವಕಾಶಗಳು ಮತ್ತು ಉತ್ತಮ ಜೀವನ ಗುಣಮಟ್ಟ ನೀಡುವ ಮೂಲಕ ಅವರನ್ನು ಸಬಲಗೊಳಿಸುವ ನಮ್ಮ ಅಚಲ ಬದ್ಧತೆಯು ಇಂದು ಉದ್ಘಾಟನೆಯಾಗುತ್ತಿರುವ ಯೋಜನೆಗಳಲ್ಲಿ ಪ್ರತಿಫಲಿತವಾಗಿದೆ!”   भारत : 1885 से 1950 (इतिहास पर एक दृष्टि) …

Read More »

ರಾಷ್ಟ್ರಪತಿಯವರು ಬೆಂಗಳೂರಿನಲ್ಲಿ ನಿಮ್ಹಾನ್ಸ್‌ ನ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು (ಜನವರಿ 3, 2025) ಬೆಂಗಳೂರಿನಲ್ಲಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರ ವಿಜ್ಞಾನಗಳ ಸಂಸ್ಥೆಯ (ನಿಮ್ಹಾನ್ಸ್) ಸುವರ್ಣ ಮಹೋತ್ಸವ ಆಚರಣೆಯಲ್ಲಿ ಭಾಗವಹಿಸಿದರು.‌ ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರಪತಿಯವರು, ಅಸಾಮಾನ್ಯ ರೋಗಿಗಳ ಆರೈಕೆಯೊಂದಿಗೆ ನವೀನ ಸಂಶೋಧನೆ ಮತ್ತು ಕಠಿಣ ಶೈಕ್ಷಣಿಕ ಕಾರ್ಯಕ್ರಮವು ನಿಮ್ಹಾನ್ಸ್ ಅನ್ನು ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಕ್ಷೇತ್ರದಲ್ಲಿ ನಿರ್ವಿವಾದ ನಾಯಕನನ್ನಾಗಿ ಮಾಡಿದೆ ಎಂದು ಹೇಳಿದರು. ಬಳ್ಳಾರಿ ಮಾದರಿ …

Read More »