Saturday, December 06 2025 | 09:32:13 AM
Breaking News

Tag Archives: Amit Shah

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತಕ್ಕೆ ಆತಿಥ್ಯ ನೀಡಲು ನಿರ್ಧರಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ವಹಿಸುವ ದೇಶವಾಗಿ ನೇಮಿಸಿರುವುದಕ್ಕೆ ಸಂತೋಷ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಅಮಿತ್ ಶಾ ಅವರು, “ಪ್ರತಿಷ್ಠಿತ 2029ರ ವಿಶ್ವ ಪೊಲೀಸ್ ಮತ್ತು ಅಗ್ನಿಶಾಮಕ ಕ್ರೀಡಾಕೂಟಕ್ಕೆ ಭಾರತವನ್ನು ಆತಿಥ್ಯ ದೇಶವಾಗಿ ನಿಯೋಜಿಸಿರುವುದರಿಂದ ಇದು ಪ್ರತಿಯೊಬ್ಬ ನಾಗರಿಕರಿಗೆ ಬಹಳ ಹೆಮ್ಮೆಯ ಕ್ಷಣವಾಗಿದೆ. …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ ʻಕೇಂದ್ರ ವಲಯ ಮಂಡಳಿʼಯ 25ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು 2025ರ ಜೂನ್ 24ರ ಮಂಗಳವಾರ ಉತ್ತರ ಪ್ರದೇಶದ ವಾರಣಾಸಿಯಲ್ಲಿ `ಕೇಂದ್ರ ವಲಯ ಮಂಡಳಿ’ಯ 25ನೇ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ. ಸಭೆಯಲ್ಲಿ ಸದಸ್ಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಪ್ರತಿ ರಾಜ್ಯದ ಇಬ್ಬರು ಹಿರಿಯ ಸಚಿವರು ಭಾಗವಹಿಸಲಿದ್ದಾರೆ. ರಾಜ್ಯ ಸರ್ಕಾರಗಳ ಮುಖ್ಯ ಕಾರ್ಯದರ್ಶಿಗಳು ಮತ್ತು ಇತರ ಹಿರಿಯ ಅಧಿಕಾರಿಗಳು ಹಾಗೂ ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ. ʻಕೇಂದ್ರ ವಲಯ ಮಂಡಳಿʼಯು ಛತ್ತೀಸ್‌ಗಢ, ಮಧ್ಯಪ್ರದೇಶ, ಉತ್ತರಾಖಂಡ ಮತ್ತು ಉತ್ತರ ಪ್ರದೇಶ ರಾಜ್ಯಗಳನ್ನು ಒಳಗೊಂಡಿದೆ. ಭಾರತ ಸರ್ಕಾರದ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಅಂತರ-ರಾಜ್ಯ ಮಂಡಳಿ ಸಚಿವಾಲಯವು ಉತ್ತರ ಪ್ರದೇಶ ಸರ್ಕಾರದ ಸಹಯೋಗದೊಂದಿಗೆ ಈ ಸಭೆಯನ್ನು ಆಯೋಜಿಸಿದೆ. ʻರಾಜ್ಯಗಳ ಪುನರ್‌ಸಂಘಟನೆ ಕಾಯ್ದೆ-1956ʼರ ಸೆಕ್ಷನ್ 15 ರಿಂದ 22ರ ಅಡಿಯಲ್ಲಿ, ಐದು ವಲಯ ಮಂಡಳಿಗಳನ್ನು ಸ್ಥಾಪಿಸಲಾಯಿತು. ಕೇಂದ್ರ ಗೃಹ ಸಚಿವರು ಈ ಐದು ವಲಯ ಮಂಡಳಿಗಳ ಅಧ್ಯಕ್ಷರಾಗಿದ್ದಾರೆ. ಸದಸ್ಯ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳು / ಲೆಫ್ಟಿನೆಂಟ್ ಗವರ್ನರ್ಗಳು / ಆಡಳಿತಗಾರರು ಇದರ ಸದಸ್ಯರಾಗಿರುತ್ತಾರೆ. ಈ ಸದಸ್ಯರಲ್ಲಿ, ಒಂದು ಸದಸ್ಯ ರಾಜ್ಯದ ಮುಖ್ಯಮಂತ್ರಿ (ಪ್ರತಿ ವರ್ಷ ಆವರ್ತನೆ) ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಾರೆ. ಪ್ರತಿ ಸದಸ್ಯ ರಾಜ್ಯದಿಂದ, ರಾಜ್ಯಪಾಲರು ಇಬ್ಬರು ಮಂತ್ರಿಗಳನ್ನು ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡುತ್ತಾರೆ. ಪ್ರತಿ ʻವಲಯ ಮಂಡಳಿʼಯು ಮುಖ್ಯ ಕಾರ್ಯದರ್ಶಿಗಳ ಮಟ್ಟದಲ್ಲಿ ಶಾಶ್ವತ ಸಮಿತಿಯನ್ನು ರಚಿಸಿದೆ. ರಾಜ್ಯಗಳು ಪ್ರಸ್ತಾಪಿಸಿದ ಸಮಸ್ಯೆಗಳನ್ನು ಮೊದಲಿಗೆ ಚರ್ಚೆಗಾಗಿ ಸಂಬಂಧಪಟ್ಟ ವಲಯ ಮಂಡಳಿಯ ಶಾಶ್ವತ ಸಮಿತಿಯ ಮುಂದಿಡಲಾಗುತ್ತದೆ. ಶಾಶ್ವತ ಸಮಿತಿಯ ಪರಿಶೀಲನೆಯ ನಂತರ, ಉಳಿದ ಸಮಸ್ಯೆಗಳನ್ನು ಹೆಚ್ಚಿನ ಚರ್ಚೆಗಾಗಿ ವಲಯ ಮಂಡಳಿ ಸಭೆಯ ಮುಂದಿಡಲಾಗುತ್ತದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಸಹಕಾರ ಮತ್ತು ಸ್ಪರ್ಧಾತ್ಮಕ ಒಕ್ಕೂಟ ವ್ಯವಸ್ಥೆಯನ್ನು ಬಳಸಿಕೊಳ್ಳುವ ಅಗತ್ಯವನ್ನು ಒತ್ತಿ ಹೇಳಿದ್ದಾರೆ. ಬಲವಾದ ರಾಜ್ಯಗಳು ಬಲವಾದ ರಾಷ್ಟ್ರವನ್ನು ನಿರ್ಮಿಸಬಲ್ಲವು ಎಂಬ ನಂಬಿಕೆಯೊಂದಿಗೆ, ʻವಲಯ ಮಂಡಳಿʼಗಳು ಎರಡು ಅಥವಾ ಹೆಚ್ಚು ರಾಜ್ಯಗಳ ಮೇಲೆ ಪರಿಣಾಮ ಬೀರುವ ಅಥವಾ ಕೇಂದ್ರ ಮತ್ತು ರಾಜ್ಯಗಳ ಮೇಲೆ ಪರಿಣಾಮ ಬೀರುವ ವಿಷಯಗಳ ಬಗ್ಗೆ ಸಂವಾದ ಮತ್ತು ಚರ್ಚೆಗೆ ರಚನಾತ್ಮಕ ಕಾರ್ಯವಿಧಾನವನ್ನು ಒದಗಿಸುತ್ತವೆ.  ಈ ಮೂಲಕ ಪರಸ್ಪರ ಸಹಕಾರವನ್ನು ಹೆಚ್ಚಿಸಲು ಪ್ರಮುಖ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತವೆ. ʻವಲಯ ಮಂಡಳಿʼಗಳು ಸಲಹೆದಾರನ ಪಾತ್ರವನ್ನು ವಹಿಸುತ್ತದೆ; ಆದಾಗ್ಯೂ, ಕಳೆದ ಕೆಲವು ವರ್ಷಗಳಲ್ಲಿ, ಈ ಮಂಡಳಿಗಳು ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ತಿಳಿವಳಿಕೆ ಮತ್ತು ಸಹಕಾರದ ಆರೋಗ್ಯಕರ ಬಂಧಗಳನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರ ವಹಿಸಿರುವುದನ್ನು ಕಾಣಬಹುದು. ಎಲ್ಲಾ ರಾಜ್ಯ ಸರ್ಕಾರಗಳು, ಕೇಂದ್ರ ಸಚಿವಾಲಯಗಳು ಮತ್ತು ಇಲಾಖೆಗಳ ಸಹಕಾರದೊಂದಿಗೆ, ಕಳೆದ ಹನ್ನೊಂದು ವರ್ಷಗಳಲ್ಲಿ ವಿವಿಧ ವಲಯ ಮಂಡಳಿಗಳು ಮತ್ತು ಅವುಗಳ ಶಾಶ್ವತ ಸಮಿತಿಗಳ ಒಟ್ಟು 61 ಸಭೆಗಳು ನಡೆದಿವೆ. ಮಹಿಳೆಯರು ಮತ್ತು ಮಕ್ಕಳ ವಿರುದ್ಧದ ಲೈಂಗಿಕ ಅಪರಾಧಗಳ ಪ್ರಕರಣಗಳ ತ್ವರಿತ ತನಿಖೆ ಮತ್ತು ಅವುಗಳ ತ್ವರಿತ ವಿಲೇವಾರಿಗಾಗಿ ತ್ವರಿತ ವಿಶೇಷ ನ್ಯಾಯಾಲಯಗಳ (ಎಫ್‌ಟಿಎಸ್‌ಸಿ) ಅನುಷ್ಠಾನ ಸೇರಿದಂತೆ ರಾಷ್ಟ್ರೀಯ ಪ್ರಾಮುಖ್ಯತೆಯ ವಿಶಾಲ ವಿಷಯಗಳ ಬಗ್ಗೆಯೂ ವಲಯ ಮಂಡಳಿಗಳು ಚರ್ಚಿಸುತ್ತವೆ. ಪ್ರತಿ ಹಳ್ಳಿಯ ಗೊತ್ತುಪಡಿಸಿದ ಪ್ರದೇಶದಲ್ಲಿ ಶಾಶ್ವತ ಬ್ಯಾಂಕಿಂಗ್ ಶಾಖೆಯ ಸೌಲಭ್ಯಗಳನ್ನು ಒದಗಿಸುವುದು; ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರಿಂದ ಬೆಂಗಳೂರಿನ ಆದಿಚುಂಚನಗಿರಿ ವಿಶ್ವವಿದ್ಯಾಲಯ (ACU) ಕ್ಯಾಂಪಸ್ ಉದ್ಘಾಟನೆ

ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ಬೆಂಗಳೂರಿನಲ್ಲಿ ಆದಿಚುಂಚನಗಿರಿ ವಿಶ್ವವಿದ್ಯಾಲಯದ (ಎಸಿಯು) ಬೆಂಗಳೂರು ಕ್ಯಾಂಪಸ್ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಕೇಂದ್ರ ಗೃಹ ಸಚಿವರಾದ ಶ್ರೀ ಅಮಿತ್ ಶಾ, ನಮ್ಮ ಸಂಸ್ಕೃತಿಯ ಮೂಲ ತತ್ವ “ಸರ್ವ ಜನ ಹಿತಾಯ, ಸರ್ವ ಜನ ಸುಖಾಯ” ಎಂಬುದಾಗಿದೆ. ಇದರರ್ಥ ಕೇವಲ ತನ್ನ ಬಗ್ಗೆ ಮಾತ್ರವಲ್ಲದೆ ಎಲ್ಲರ ಕಲ್ಯಾಣ ಮತ್ತು ಸಂತೋಷದ ಬಗ್ಗೆ ಚಿಂತಿಸುವುದು ಎಂದು ಹೇಳಿದರು. …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ, ಭಾರತ ಸರ್ಕಾರವು ಪ್ರಕೃತಿ ವಿಕೋಪಗಳು ಮತ್ತು ವಿಪತ್ತುಗಳ ಸಮಯದಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಜೊತೆಯಾಗಿ ನಿಂತಿದೆ

2023ರ ಪ್ರವಾಹ, ಭೂಕುಸಿತ, ಮೇಘಸ್ಫೋಟದ ನಂತರ ಹಿಮಾಚಲ ಪ್ರದೇಶ ರಾಜ್ಯಕ್ಕೆ ಚೇತರಿಕೆ ಮತ್ತು ಪುನರ್ ನಿರ್ಮಾಣ ಯೋಜನೆಗೆ ಒಟ್ಟು 2006.40 ಕೋಟಿ ರೂ.ಗಳನ್ನು  ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯ ಉನ್ನತ ಮಟ್ಟದ ಸಮಿತಿಯು ಅನುಮೋದಿಸಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿ (ಎನ್.ಡಿ.ಆರ್.ಎಫ್) ಅಡಿಯಲ್ಲಿ ಚೇತರಿಕೆ ಮತ್ತು ಪುನರ್ನಿರ್ಮಾಣ ನಿಧಿ ವಿಭಾಗದಿಂದ ರಾಜ್ಯಕ್ಕೆ ಆರ್ಥಿಕ ಸಹಾಯದ ಪ್ರಸ್ತಾವನೆಯನ್ನು ಹಣಕಾಸು ಸಚಿವರು, ಕೃಷಿ ಸಚಿವರು ಮತ್ತು …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿಯು ಐದು ರಾಜ್ಯಗಳಿಗೆ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವಿನ ತನ್ನ ಅನುಮೋದನೆ ನೀಡಿದೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ (ಎಚ್ಎಲ್ ಸಿ) 2024ರಲ್ಲಿ ಪ್ರವಾಹ, ಪ್ರವಾಹ, ಭೂಕುಸಿತ, ಚಂಡಮಾರುತದಿಂದ ಹಾನಿಗೊಳಗಾದ ಐದು ರಾಜ್ಯಗಳಿಗೆ ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ನಿಧಿ (ಎನ್ ಡಿ ಆರ್ ಎಫ್) ಅಡಿಯಲ್ಲಿ 1554.99 ಕೋಟಿ ರೂ.ಗಳ ಹೆಚ್ಚುವರಿ ಕೇಂದ್ರ ನೆರವನ್ನು ನೀಡಲು ಅನುಮೋದನೆ ನೀಡಿದೆ. ಈ ನೈಸರ್ಗಿಕ ವಿಪತ್ತುಗಳನ್ನು ಎದುರಿಸಿದ ಐದು ರಾಜ್ಯಗಳ ಜನರಿಗೆ ಸಹಾಯ ಮಾಡುವ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ನವದೆಹಲಿಯಲ್ಲಿ ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ನವದೆಹಲಿಯಲ್ಲಿ‘ಸಹಕಾರ ಸಂಘಗಳನ್ನು ಬಲಪಡಿಸಲು ಕೈಗೊಂಡ ಮತ್ತು ಪ್ರಸ್ತುತ ತೆಗೆದುಕೊಳ್ಳುತ್ತಿರುವ ಉಪಕ್ರಮಗಳ’ ಕುರಿತು ಸಹಕಾರ ಸಚಿವಾಲಯದ ಸಂಸದೀಯ ಸಮಾಲೋಚನಾ ಸಮಿತಿಯ ಮೊದಲ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಸಹಕಾರ ಖಾತೆ ರಾಜ್ಯ ಸಚಿವರಾದ ಶ್ರೀ ಕೃಷ್ಣ ಪಾಲ್‌ ಮತ್ತು ಶ್ರೀ ಮುರಳೀಧರ್‌ ಮೊಹೋಲ್‌, ಸಮಿತಿಯ ಸದಸ್ಯರು, ಸಹಕಾರ ಸಚಿವಾಲಯದ ಕಾರ್ಯದರ್ಶಿ ಮತ್ತು ಸಚಿವಾಲಯದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಸಹಕಾರ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ‘ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ’ ಕುರಿತು ಗೃಹ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯ ಅಧ್ಯಕ್ಷತೆ ವಹಿಸಿದ್ದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನವದೆಹಲಿಯಲ್ಲಿ ‘ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ’ ವಿಷಯದ ಕುರಿತು ಗೃಹ ಸಚಿವಾಲಯದ ಸಂಸದೀಯ ಸಲಹಾ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಶ್ರೀ ನಿತ್ಯಾನಂದ ರೈ, ಶ್ರೀ ಬಂಡಿ ಸಂಜಯ್ ಕುಮಾರ್, ಸಮಿತಿಯ ಸದಸ್ಯರು, ಕೇಂದ್ರ ಗೃಹ ಕಾರ್ಯದರ್ಶಿ ಮತ್ತು ಗೃಹ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ …

Read More »

ನವದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವಾಲಯ …

Read More »

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಗುಜರಾತ್‌ನ ಅಹಮದಾಬಾದ್‌ನಲ್ಲಿ‘ಹಿಂದೂ ಅಧ್ಯಾತ್ಮಿಕ ಔರ್‌ ಸೇವಾ ಮೇಳ’ವನ್ನು ಉದ್ಘಾಟಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್‌ ಶಾ ಅವರು ಇಂದು ಗುಜರಾತ್‌ನ ಅಹಮದಾಬಾದ್‌ನಲ್ಲಿ ಹಿಂದೂ ಅಧ್ಯಾತ್ಮಿಕ ಔರ್‌ ಸೇವಾ ಮೇಳವನ್ನು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಗುಜರಾತ್‌ ಮುಖ್ಯಮಂತ್ರಿ ಶ್ರೀ ಭೂಪೇಂದ್ರ ಪಟೇಲ್‌ ಸೇರಿದಂತೆ ಹಲವಾರು ಗಣ್ಯರು ಭಾಗವಹಿಸಿದ್ದರು. ಕೇಂದ್ರ ಗೃಹ ಸಚಿವರು ತಮ್ಮ ಭಾಷಣದಲ್ಲಿ, 200ಕ್ಕೂ ಹೆಚ್ಚು ಸೇವಾ ಸಂಸ್ಥೆಗಳನ್ನು ಒಂದೇ ವೇದಿಕೆಯಲ್ಲಿ ಒಟ್ಟುಗೂಡಿಸಿದ ಹಿಂದೂ ಅಧ್ಯಾತ್ಮಿಕ್‌ ಔರ್‌ ಸೇವಾ ಮೇಳದ ಮಹತ್ವವನ್ನು ಬಿಂಬಿಸಿದರು. ಹಲವಾರು ಆಕ್ರಮಣಗಳು ಮತ್ತು …

Read More »

ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್-ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂ’ (ಎಫ್‌ ಟಿ ಐ-ಟಿಟಿಪಿ) ಅನ್ನು ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ನಾಳೆ ಅಹಮದಾಬಾದ್‌ ನಲ್ಲಿ ಉದ್ಘಾಟಿಸಲಿದ್ದಾರೆ

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮುಂಬೈ, ಚೆನ್ನೈ, ಕೋಲ್ಕತ್ತಾ, ಬೆಂಗಳೂರು, ಹೈದರಾಬಾದ್, ಕೊಚ್ಚಿನ್ ಮತ್ತು ಅಹಮದಾಬಾದ್ ವಿಮಾನ ನಿಲ್ದಾಣಗಳಲ್ಲಿ ‘ಫಾಸ್ಟ್ ಟ್ರ್ಯಾಕ್ ಇಮಿಗ್ರೇಷನ್ – ಟ್ರಸ್ಟೆಡ್ ಟ್ರಾವೆಲರ್ ಪ್ರೋಗ್ರಾಂʼ (ಎಫ್‌ ಟಿ ಐ-ಟಿ ಟಿ ಪಿ) ಅನ್ನು 16 ಜನವರಿ 2025 ರಂದು ಅಹಮದಾಬಾದ್‌ ನಿಂದ ಉದ್ಘಾಟಿಸಲಿದ್ದಾರೆ. ಗೃಹ ಸಚಿವರು ಈ ಹಿಂದೆ ಜೂನ್ 22, 2024 ರಂದು ನವದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ …

Read More »