ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಸಂಪರ್ಕವನ್ನು ಹೆಚ್ಚಿಸಲು 46,000 ಕೋಟಿ ರೂ.ಗಳ ದೂರದೃಷ್ಟಿ ಮತ್ತು ಪ್ರಮುಖ ಯೋಜನೆಗಳನ್ನು ರೂಪಿಸಿದ್ದಾರೆ, ಇದು ಈ ಪ್ರದೇಶದ ಸಂಪರ್ಕದಲ್ಲಿ ಐತಿಹಾಸಿಕ ಮೈಲಿಗಲ್ಲಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಭೇಟಿಗೆ ಮುಂಚಿತವಾಗಿ, ಜಮ್ಮು ಮತ್ತು ಕಾಶ್ಮೀರದ ಮುಖ್ಯಮಂತ್ರಿಗಳು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆಯಾದ ಅಪ್ರತಿಮ ಚೆನಾಬ್ ಸೇತುವೆಯ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಚೆನಾಬ್ ರೈಲು ಸೇತುವೆ ಜಮ್ಮು ಮತ್ತು …
Read More »ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಪ್ರಧಾನಮಂತ್ರಿ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೂನ್ 6 ರಂದು ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಲಿದ್ದಾರೆ. ಈ ಪ್ರದೇಶದಲ್ಲಿ ರೈಲು ಮೂಲಸೌಕರ್ಯ ಮತ್ತು ಸಂಪರ್ಕವನ್ನು ಹೆಚ್ಚಿಸುವ ತಮ್ಮ ಬದ್ಧತೆಗೆ ಅನುಗುಣವಾಗಿ, ಪ್ರಧಾನ ಮಂತ್ರಿಗಳು ಬೆಳಿಗ್ಗೆ 11 ಗಂಟೆಗೆ ಚೆನಾಬ್ ಸೇತುವೆಯನ್ನು ಉದ್ಘಾಟಿಸಲಿದ್ದಾರೆ ಮತ್ತು ಸೇತುವೆಯ ಡೆಕ್‌ಗೆ ಭೇಟಿ ನೀಡಲಿದ್ದಾರೆ. ನಂತರ, ಅವರು ಅಂಜಿ ಸೇತುವೆಗೆ ಭೇಟಿ ನೀಡಿ ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಅವರು ವಂದೇ ಭಾರತ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಬಳಿಕ, ಅವರು ಕತ್ರಾದಲ್ಲಿ 46,000 ಕೋಟಿ ರೂ.ಗಳಿಗೂ ಹೆಚ್ಚು ಮೌಲ್ಯದ ಬಹು ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಲಿದ್ದಾರೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಚೆನಾಬ್ ಮತ್ತು ಅಂಜಿ ರೈಲು ಸೇತುವೆಗಳು ನದಿಯಿಂದ 359 ಮೀಟರ್ ಎತ್ತರದಲ್ಲಿರುವ ವಾಸ್ತುಶಿಲ್ಪದ ಅದ್ಭುತ ಚೆನಾಬ್ ರೈಲು ಸೇತುವೆ ವಿಶ್ವದ ಅತಿ ಎತ್ತರದ ರೈಲ್ವೆ ಕಮಾನು ಸೇತುವೆಯಾಗಿದೆ. ಇದು ಭೂಕಂಪ ಮತ್ತು ಭಾರೀ ಗಾಳಿ ಪರಿಸ್ಥಿತಿಗಳನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ 1,315 ಮೀಟರ್ ಉದ್ದದ ಉಕ್ಕಿನ ಕಮಾನು ಸೇತುವೆಯಾಗಿದೆ. ಈ ಸೇತುವೆಯ ಮುಖ್ಯ ಪ್ರಯೋಜನ ಎಂದರೆ ಅದು ಜಮ್ಮು ಮತ್ತು ಶ್ರೀನಗರ ನಡುವಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಸೇತುವೆಯ ಮೇಲೆ ಚಲಿಸುವ ವಂದೇ ಭಾರತ್ ರೈಲು ಮೂಲಕ, ಕತ್ರಾ ಮತ್ತು ಶ್ರೀನಗರ ನಡುವೆ ಪ್ರಯಾಣಿಸಲು ಕೇವಲ 3 ಗಂಟೆ ಸಾಕಾಗುತ್ತದೆ, ಇದು ಚಾಲ್ತಿಯಲ್ಲಿರುವ ಪ್ರಯಾಣದ ಸಮಯವನ್ನು 2-3 ಗಂಟೆಗಳಷ್ಟು ಕಡಿಮೆ ಮಾಡುತ್ತದೆ. ಅಂಜಿ ಸೇತುವೆ ಭಾರತದ ಮೊದಲ ಕೇಬಲ್-ಸ್ಟೇಡ್ (ಗೋಪುರಗಳಿಗೆ ಕೇಬಲ್ ಗಳಿಂದ ಬಿಗಿದು ಕಟ್ಟಿದ) ರೈಲು ಸೇತುವೆಯಾಗಿದ್ದು, ಇದು ಸವಾಲಿನ ಭೂಪ್ರದೇಶದಲ್ಲಿ ರಾಷ್ಟ್ರಕ್ಕೆ ಸೇವೆ ಸಲ್ಲಿಸಲಿದೆ. ಸಂಪರ್ಕ ಯೋಜನೆಗಳು ಮತ್ತು ಇತರ ಅಭಿವೃದ್ಧಿ ಉಪಕ್ರಮಗಳು ಪ್ರಧಾನಮಂತ್ರಿಯವರು ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯು.ಎಸ್.ಬಿ.ಆರ್.ಎಲ್.-USBRL) …
Read More »ನವದೆಹಲಿಯಲ್ಲಿ ನಡೆದ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತ ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ
ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಇಂದು ನವದೆಹಲಿಯಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿನ ಭದ್ರತಾ ಪರಿಸ್ಥಿತಿಯ ಕುರಿತು ಉನ್ನತ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಈ ಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಶ್ರೀ ಮನೋಜ್ ಸಿನ್ಹಾ, ಕೇಂದ್ರ ಗೃಹ ಕಾರ್ಯದರ್ಶಿ, ಗುಪ್ತಚರ ಬ್ಯೂರೋ ನಿರ್ದೇಶಕರು, ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ ಮತ್ತು ಪೊಲೀಸ್ ಮಹಾನಿರ್ದೇಶಕರು, ಕೇಂದ್ರ ಗೃಹ ಸಚಿವಾಲಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …
Read More »2024ರ ಡಿಸೆಂಬರ್ 27 ರಂದು ಉಪರಾಷ್ಟ್ರಪತಿ ಜಮ್ಮು (ಜಮ್ಮು ಮತ್ತು ಕಾಶ್ಮೀರ) ಭೇಟಿ
ಭಾರತದ ಉಪರಾಷ್ಟ್ರಪತಿ ಶ್ರೀ ಜಗದೀಪ್ ಧನಕರ್ ಅವರು 2024ರ ಡಿಸೆಂಬರ್ 27ರಂದು ಜಮ್ಮು (ಜಮ್ಮು ಮತ್ತು ಕಾಶ್ಮೀರ) ವಿಗೆ ಒಂದು ದಿನದ ಭೇಟಿ ನೀಡಲಿದ್ದಾರೆ. ಉಪರಾಷ್ಟ್ರಪತಿ ಅವರು ತಮ್ಮ ಭೇಟಿಯ ವೇಳೆ ಎಸ್ ಎಂವಿಡಿಯು ಕ್ಯಾಂಪಸ್ ನಲ್ಲಿರುವ ಮಾತ್ರಿಕಾ ಸಭಾಂಗಣದಲ್ಲಿ ನಡೆಯಲಿರುವ ಶ್ರೀ ಮಾತಾ ವೈಷ್ಣವೋದೇವಿ ವಿಶ್ವವಿದ್ಯಾಲಯದ 10ನೇ ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಅಲ್ಲದೆ, ಉಪರಾಷ್ಟ್ರಪತಿ ಶ್ರೀ ಮಾತಾ ವೈಷ್ಣವೋದೇವಿ ದೇವಾಲಯ ಮತ್ತು ಭೈರೋನ್ ಬಾಬಾ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. …
Read More »
Matribhumi Samachar Kannad