Tuesday, December 09 2025 | 02:49:57 AM
Breaking News

Tag Archives: Mann Ki Baat

ಪ್ರಧಾನಮಂತ್ರಿ ಅವರು ದಿನಾಂಕ 30.11.2025 ರಂದು ಮಾಡಿದ ‘ಮನ್ ಕಿ ಬಾತ್’ – 128ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಗೆ ಮತ್ತೊಮ್ಮೆ ಸ್ವಾಗತ. ನವೆಂಬರ್ ತಿಂಗಳು ಬಹಳ ಪ್ರೇರಣಾದಾಯಕವಾಗಿತ್ತು. ಕೆಲವೇ ದಿನಗಳ ಹಿಂದೆ, ನವೆಂಬರ್ 26, ‘ಸಂವಿಧಾನ ದಿನದಂದು’ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ನಿಮಿತ್ತ ರಾಷ್ಟ್ರವ್ಯಾಪಿ ಕಾರ್ಯಕ್ರಮಗಳಿಗೆ ಭವ್ಯಚಾಲನೆಯನ್ನು ಇದು ನೀಡಿತು. ನವೆಂಬರ್ 25 ರಂದು, ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮಧ್ವಜವನ್ನು ಹಾರಿಸಲಾಯಿತು. ಅದೇ ದಿನ, ಕುರುಕ್ಷೇತ್ರದ ಜ್ಯೋತಿಸರ್‌ ನಲ್ಲಿ ಪಾಂಚಜನ್ಯ ಸ್ಮಾರಕವನ್ನು ಲೋಕಾರ್ಪಣೆ ಮಾಡಲಾಯಿತು. ಸ್ನೇಹಿತರೇ, ಕೆಲವೇ ದಿನಗಳ ಹಿಂದೆ, ಹೈದರಾಬಾದ್‌ನಲ್ಲಿ ವಿಶ್ವದ ಅತಿದೊಡ್ಡ ಲೀಪ್ ಎಂಜಿನ್ MRO ಸೌಲಭ್ಯವನ್ನು ನಾನು ಉದ್ಘಾಟಿಸಿದೆ. ಭಾರತವು ವಿಮಾನ ನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆಯಲ್ಲಿ ಪ್ರಮುಖ ಹೆಜ್ಜೆಯನ್ನಿರಿಸಿದೆ. ಕಳೆದ ವಾರ, ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ, INS ‘ಮಾಹೆ’ ಯನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ಕಳೆದ ವಾರವಷ್ಟೇ, ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ತುಂಬಿದೆ. ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಗೆ ಇದು ಪ್ರತಿಬಿಂಬವಾಗಿದೆ. ಸ್ನೇಹಿತರೇ, ಕೃಷಿ ವಲಯದಲ್ಲೂ ದೇಶವು ಪ್ರಮುಖ ಸಾಧನೆ ಮೆರೆದಿದೆ. ಭಾರತವು 357 ದಶಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯೊಂದಿಗೆ ಐತಿಹಾಸಿಕ ದಾಖಲೆಯನ್ನು ಸೃಷ್ಟಿಸಿದೆ. ಮುನ್ನೂರ ಐವತ್ತೇಳು ಮಿಲಿಯನ್ ಟನ್! 10 ವರ್ಷಗಳ ಹಿಂದಿನ ಸ್ಥಿತಿಗೆ ಹೋಲಿಸಿದರೆ, ಭಾರತದ ಆಹಾರ ಧಾನ್ಯ ಉತ್ಪಾದನೆ 100 ದಶಲಕ್ಷ ಟನ್‌ಗಳಷ್ಟು ಹೆಚ್ಚಾಗಿದೆ. ಕ್ರೀಡಾ ಜಗತ್ತಿನಲ್ಲಿಯೂ ಭಾರತವು ತನ್ನ ಛಾಪು ಮೂಡಿಸಿದೆ. ಕೆಲವು ದಿನಗಳ …

Read More »

ಪ್ರಧಾನಮಂತ್ರಿ ಅವರು ದಿನಾಂಕ 27.07.2025 ರಂದು ಮಾಡಿದ ‘ಮನ್ ಕಿ ಬಾತ್’ – 124 ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರೀತಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತಿನಲ್ಲಿ’ ಮತ್ತೊಮ್ಮೆ ನಾವು ದೇಶದ ಯಶಸ್ಸಿನ ಬಗ್ಗೆ, ದೇಶವಾಸಿಗಳ ಸಾಧನೆಗಳ ಬಗ್ಗೆ ಮಾತನಾಡಲಿದ್ದೇವೆ. ಕ್ರೀಡೆಯಾಗಿರಲಿ, ವಿಜ್ಞಾನವಾಗಿರಲಿ ಅಥವಾ ಸಂಸ್ಕೃತಿಯಾಗಿರಲಿ ಎಲ್ಲ ಕ್ಷೇತ್ರಗಳಲ್ಲಿ ಕಳೆದ ಕೆಲವು ವಾರಗಳಲ್ಲಿ, ಪ್ರತಿಯೊಬ್ಬ ಭಾರತೀಯನು ಹೆಮ್ಮೆಪಡುವಂತಹ ಘಟನೆಗಳು ನಡೆದಿವೆ. ಇತ್ತೀಚೆಗೆ, ಬಾಹ್ಯಾಕಾಶದಿಂದ ಶುಭಾಂಶು ಶುಕ್ಲಾ ಹಿಂದಿರುಗಿದ ಕುರಿತು ದೇಶದಲ್ಲಿ ಬಹಳಷ್ಟು ಚರ್ಚೆಗಳು ನಡೆದಿವೆ. ಶುಭಾಂಶು ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ತಕ್ಷಣ, ಜನರು ಸಂತೋಷದಿಂದ ಕುಣಿದು ಕುಪ್ಪಳಿಸಿದರು, ಪ್ರತಿಯೊಬ್ಬರ ಹೃದಯದಲ್ಲೂ ಸಂತಸದ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ …

Read More »

ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು 76ನೇ ಗಣರಾಜ್ಯೋತ್ಸವದ ಮೆರವಣಿಗೆಗಾಗಿ ‘ಮನ್ ಕಿ ಬಾತ್’ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು

ಕೇಂದ್ರ ವಾರ್ತಾ ಮತ್ತು ಪ್ರಸಾರ, ರೈಲ್ವೆ ಮತ್ತು ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದ ವಿಶೇಷ ಆಹ್ವಾನಿತರೊಂದಿಗೆ ಸಂವಾದ ನಡೆಸಿದರು. ಭಾರತದ ಸಾರ್ವಜನಿಕ ಸೇವಾ ಪ್ರಸಾರಕದ ರೆಡಿಯೊ ವಿಭಾಗವಾದ ಆಕಾಶವಾಣಿ ಅವರನ್ನು ಆಕಾಶವಾಣಿ ಭವನದಲ್ಲಿರುವ ತನ್ನ ನವದೆಹಲಿ ಕಚೇರಿಗೆ ಆಹ್ವಾನಿಸಿತು. ಆಕಾಶವಾಣಿ: ಬದಲಾವಣೆಯ ಅಪ್ರತಿಮ ವೀರರ ಸಂಭ್ರಮ ಪ್ರಧಾನಮಂತ್ರಿ ಶ್ರೀ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 19.01.2025 ರಂದು ಮಾಡಿದ ‘ಮನ್ ಕಿ ಬಾತ್’ – 118ನೇ ಭಾಷಣದ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. ಇಂದು 2025ರ ಮೊದಲ ‘ಮನದ ಮಾತು’ ಮಾತನಾಡಲಾಗುತ್ತಿದೆ. ನೀವು ಖಂಡಿತ ಈ ವಿಷಯವನ್ನು  ಗಮನಿಸಿರಬಹುದು. ಪ್ರತಿ ಬಾರಿ ತಿಂಗಳ ಕೊನೆಯ ಭಾನುವಾರದಂದು ‘ಮನದ ಮಾತು’ ಪ್ರಸಾರವಾಗುತ್ತದೆ, ಆದರೆ ಈ ಬಾರಿ ನಾವು ನಾಲ್ಕನೇ ಭಾನುವಾರದ ಬದಲು ಮೂರನೇ ಭಾನುವಾರದಂದು ಒಂದು ವಾರ ಮುಂಚಿತವಾಗಿ ಭೇಟಿಯಾಗುತ್ತಿದ್ದೇವೆ. ಏಕೆಂದರೆ ಮುಂದಿನ ಭಾನುವಾರದಂದೇ ಗಣರಾಜ್ಯೋತ್ಸವವಿದೆ. ಮುಂಚಿತವಾಗಿಯೇ ಎಲ್ಲಾ ದೇಶವಾಸಿಗಳಿಗೆ ನಾನು ಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಸ್ನೇಹಿತರೇ, ಈ ಬಾರಿಯ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 29.12.2024 ರಂದು ಮಾಡಿದ ‘ಮನ್ ಕಿ ಬಾತ್’ – 117ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. 2025 ಇನ್ನೇನು ಬಂದೆ ಬಿಟ್ಟಿತು, ನವ ಸಂವತ್ಸರ  ಬಾಗಿಲು ತಟ್ಟುತ್ತಿದೆ. 2025ರ ಜನವರಿ 26 ರಂದು ನಮ್ಮ ಸಂವಿಧಾನ ಜಾರಿಗೆ ಬಂದು 75 ವರ್ಷಗಳು ತುಂಬುತ್ತವೆ. ನಮಗೆಲ್ಲರಿಗೂ ಇದು ಹೆಮ್ಮೆಯ ವಿಷಯ. ನಮ್ಮ ಸಂವಿಧಾನ ನಿರ್ಮಾತೃಗಳು ನಮಗೆ ಒಪ್ಪಿಸಿದ ಸಂವಿಧಾನವು ಎಲ್ಲಾ ಕಾಲದಲ್ಲು ಪ್ರಸ್ತುತವಾಗಿದೆ. ಸಂವಿಧಾನ ನಮಗೆ ದಿಕ್ಸೂಚಿಯಾಗಿದೆ, ಮಾರ್ಗದರ್ಶಕನಾಗಿದೆ. ಭಾರತದ ಸಂವಿಧಾನದಿಂದಾಗಿಯೇ  ಇಂದು ನಾನು ಇಲ್ಲಿದ್ದೇನೆ, ನಿಮ್ಮೊಂದಿಗೆ ಮಾತನಾಡುತ್ತಿದ್ದೇನೆ. ಈ ವರ್ಷ, ನವೆಂಬರ್ 26 …

Read More »