ಮಾನ್ಯ ಅಧ್ಯಕ್ಷರೇ, (ಸಂಸತ್ತಿನ) ಚಳಿಗಾಲದ ಅಧಿವೇಶನ ಪ್ರಾರಂಭವಾಗುತ್ತಿದೆ, ಮತ್ತು ಇಂದು ಈ ಸದನದ ಎಲ್ಲಾ ಗೌರವಾನ್ವಿತ ಸದಸ್ಯರಿಗೆ ಹೆಮ್ಮೆಯ ಕ್ಷಣವಾಗಿದೆ. ನಿಮ್ಮನ್ನು ಸ್ವಾಗತಿಸುತ್ತಾ, ನಿಮ್ಮ ಮಾರ್ಗದರ್ಶನದಲ್ಲಿ ಈ ಸದನದ ಮೂಲಕ ಪ್ರಮುಖ ವಿಷಯಗಳನ್ನು ಚರ್ಚಿಸಲು, ರಾಷ್ಟ್ರವನ್ನು ಪ್ರಗತಿಯ ಹಾದಿಯಲ್ಲಿ ಕೊಂಡೊಯ್ಯಲು, ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲು ಮತ್ತು ನಿಮ್ಮ ಅಮೂಲ್ಯ ಮಾರ್ಗದರ್ಶನವನ್ನು ಪಡೆಯಲು ನಮಗೆಲ್ಲರಿಗೂ ಇದು ಒಂದು ಉತ್ತಮ ಅವಕಾಶವಾಗಿದೆ. ಸದನದ ಪರವಾಗಿ ಮತ್ತು ನನ್ನ ಪರವಾಗಿ, ನಾನು ನಿಮ್ಮನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆ, …
Read More »2025ರ ಸಂಸತ್ ಚಳಿಗಾಲದ ಅಧಿವೇಶನ ಆರಂಭದ ವೇಳೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ಹೇಳಿಕೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ತಿನ ಆವರಣದಲ್ಲಿ 2025ರ ಚಳಿಗಾಲದ ಸಂಸತ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಈ ಅಧಿವೇಶನವು ಕೇವಲ ಒಂದು ಆಚರಣೆಯಲ್ಲ, ಬದಲಿಗೆ, ತ್ವರಿತ ಪ್ರಗತಿಯತ್ತ ರಾಷ್ಟ್ರದ ಪಯಣಕ್ಕೆ ಹೊಸ ಶಕ್ತಿಯ ಮೂಲವಾಗಿದೆ ಎಂದು ಪ್ರಧಾನಮಂತ್ರಿ ತಿಳಿಸಿದರು. “ರಾಷ್ಟ್ರದ ಪ್ರಗತಿಯನ್ನು ವೇಗಗೊಳಿಸಲು ಪ್ರಸ್ತುತ ನಡೆಯುತ್ತಿರುವ ಪ್ರಯತ್ನಗಳಿಗೆ ಈ ಅಧಿವೇಶನವು ಹೊಸ ಶಕ್ತಿಯನ್ನು ತುಂಬಲಿದೆ ಎಂಬುದು ನನ್ನ ದೃಢವಾದ ನಂಬಿಕೆ,” ಎಂದು ಶ್ರೀ ಮೋದಿ …
Read More »ಪ್ರಧಾನಮಂತ್ರಿ ಅವರು ದಿನಾಂಕ 30.11.2025 ರಂದು ಮಾಡಿದ ‘ಮನ್ ಕಿ ಬಾತ್’ – 128ನೇ ಸಂಚಿಕೆಯ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಗೆ ಮತ್ತೊಮ್ಮೆ ಸ್ವಾಗತ. ನವೆಂಬರ್ ತಿಂಗಳು ಬಹಳ ಪ್ರೇರಣಾದಾಯಕವಾಗಿತ್ತು. ಕೆಲವೇ ದಿನಗಳ ಹಿಂದೆ, ನವೆಂಬರ್ 26, ‘ಸಂವಿಧಾನ ದಿನದಂದು’ ಸೆಂಟ್ರಲ್ ಹಾಲ್‌ನಲ್ಲಿ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಂದೇ ಮಾತರಂನ 150ನೇ ವಾರ್ಷಿಕೋತ್ಸವದ ನಿಮಿತ್ತ ರಾಷ್ಟ್ರವ್ಯಾಪಿ ಕಾರ್ಯಕ್ರಮಗಳಿಗೆ ಭವ್ಯಚಾಲನೆಯನ್ನು ಇದು ನೀಡಿತು. ನವೆಂಬರ್ 25 ರಂದು, ಅಯೋಧ್ಯೆಯ ರಾಮ ಮಂದಿರದಲ್ಲಿ ಧರ್ಮಧ್ವಜವನ್ನು ಹಾರಿಸಲಾಯಿತು. ಅದೇ ದಿನ, ಕುರುಕ್ಷೇತ್ರದ ಜ್ಯೋತಿಸರ್ ನಲ್ಲಿ ಪಾಂಚಜನ್ಯ ಸ್ಮಾರಕವನ್ನು ಲೋಕಾರ್ಪಣೆ ಮಾಡಲಾಯಿತು. ಸ್ನೇಹಿತರೇ, ಕೆಲವೇ ದಿನಗಳ ಹಿಂದೆ, ಹೈದರಾಬಾದ್‌ನಲ್ಲಿ ವಿಶ್ವದ ಅತಿದೊಡ್ಡ ಲೀಪ್ ಎಂಜಿನ್ MRO ಸೌಲಭ್ಯವನ್ನು ನಾನು ಉದ್ಘಾಟಿಸಿದೆ. ಭಾರತವು ವಿಮಾನ ನಿರ್ವಹಣೆ, ದುರಸ್ತಿ ಮತ್ತು ಕೂಲಂಕಷ ಪರೀಕ್ಷೆಯಲ್ಲಿ ಪ್ರಮುಖ ಹೆಜ್ಜೆಯನ್ನಿರಿಸಿದೆ. ಕಳೆದ ವಾರ, ಮುಂಬೈನಲ್ಲಿ ನಡೆದ ಸಮಾರಂಭದಲ್ಲಿ, INS ‘ಮಾಹೆ’ ಯನ್ನು ಭಾರತೀಯ ನೌಕಾಪಡೆಗೆ ಸೇರ್ಪಡೆಗೊಳಿಸಲಾಯಿತು. ಕಳೆದ ವಾರವಷ್ಟೇ, ಸ್ಕೈರೂಟ್‌ನ ಇನ್ಫಿನಿಟಿ ಕ್ಯಾಂಪಸ್ ಭಾರತದ ಬಾಹ್ಯಾಕಾಶ ಪರಿಸರ ವ್ಯವಸ್ಥೆಗೆ ಹೊಸ ಚೈತನ್ಯ ತುಂಬಿದೆ. ಭಾರತದ ಹೊಸ ಚಿಂತನೆ, ನಾವೀನ್ಯತೆ ಮತ್ತು ಯುವ ಶಕ್ತಿಗೆ ಇದು ಪ್ರತಿಬಿಂಬವಾಗಿದೆ. ಸ್ನೇಹಿತರೇ, ಕೃಷಿ ವಲಯದಲ್ಲೂ ದೇಶವು ಪ್ರಮುಖ ಸಾಧನೆ ಮೆರೆದಿದೆ. ಭಾರತವು 357 ದಶಲಕ್ಷ ಟನ್ ಆಹಾರ ಧಾನ್ಯ ಉತ್ಪಾದನೆಯೊಂದಿಗೆ ಐತಿಹಾಸಿಕ ದಾಖಲೆಯನ್ನು ಸೃಷ್ಟಿಸಿದೆ. ಮುನ್ನೂರ ಐವತ್ತೇಳು ಮಿಲಿಯನ್ ಟನ್! 10 ವರ್ಷಗಳ ಹಿಂದಿನ ಸ್ಥಿತಿಗೆ ಹೋಲಿಸಿದರೆ, ಭಾರತದ ಆಹಾರ ಧಾನ್ಯ ಉತ್ಪಾದನೆ 100 ದಶಲಕ್ಷ ಟನ್‌ಗಳಷ್ಟು ಹೆಚ್ಚಾಗಿದೆ. ಕ್ರೀಡಾ ಜಗತ್ತಿನಲ್ಲಿಯೂ ಭಾರತವು ತನ್ನ ಛಾಪು ಮೂಡಿಸಿದೆ. ಕೆಲವು ದಿನಗಳ …
Read More »ರಾಯ್‌ಪುರದಲ್ಲಿ ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ಇನ್‌ಸ್ಪೆಕ್ಟರ್ ಜನರಲ್‌ಗಳ ಸಮ್ಮೇಳನದ ಅಧ್ಯಕ್ಷತೆ ವಹಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ರಾಯ್ ಪುರದಲ್ಲಿಂದು ನಡೆದ 60ನೇ ಅಖಿಲ ಭಾರತ ಪೊಲೀಸ್ ಮಹಾನಿರ್ದೇಶಕರ/ ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಸಮ್ಮೇಳನದಲ್ಲಿ ಭಾಗವಹಿಸಿದ್ದರು. ಮೂರು ದಿನಗಳ ಸಮಾವೇಶದ ಘೋಷವಾಕ್ಯ “ವಿಕಸಿತ ಭಾರತ; ಭದ್ರತಾ ಆಯಾಮಗಳು’’ ಎಂಬುದಾಗಿದೆ. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತನಾಡಿ, ವೃತ್ತಿಪರತೆ, ಸೂಕ್ಷ್ಮತೆ ಮತ್ತು ತ್ವರಿತ ಸ್ಪಂದಿಸುವಿಕೆ ಹೆಚ್ಚಿಸುವ ಮೂಲಕ ಪೊಲೀಸರ ಬಗ್ಗೆ, ವಿಶೇಷವಾಗಿ ಯುವಕರಲ್ಲಿ ಸಾರ್ವಜನಿಕ ಗ್ರಹಿಕೆಯನ್ನು ಪರಿವರ್ತಿಸುವ ತುರ್ತು …
Read More »ನವೆಂಬರ್ 26ರಂದು ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ ಘಟಕವನ್ನು ಉದ್ಘಾಟಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 26ರಂದು ಬೆಳಗ್ಗೆ 10ಗಂಟೆಗೆ ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ʻಜಿಎಂಆರ್ ಏರೋಸ್ಪೇಸ್ ಮತ್ತು ಕೈಗಾರಿಕಾ ಪಾರ್ಕ್ʼ – ವಿಶೇಷ ಆರ್ಥಿಕ ವಲಯದಲ್ಲಿರುವ ʻಸಫ್ರಾನ್ ಏರ್‌ಕ್ರಾಫ್ಟ್ ಎಂಜಿನ್ ಸರ್ವೀಸಸ್ ಇಂಡಿಯಾʼ (ಎಸ್ಎಇಎಸ್ಐ) ಘಟಕವನ್ನು ವಿಡಿಯೊ ಕಾನ್ಫರೆನ್ಸಿಂಗ್ ಮೂಲಕ ಉದ್ಘಾಟಿಸಲಿದ್ದಾರೆ. ʻಎಸ್‌ಎಇಎಸ್‌ಐʼ ಎಂಬುದು ʻಲೀಪ್ʼ (ಲೀಡಿಂಗ್ ಎಡ್ಜ್ ಏವಿಯೇಷನ್ ಪ್ರೊಪಲ್ಶನ್) ಎಂಜಿನ್‌ಗಳಿಗಾಗಿ ʻಸಫ್ರಾನ್ʼ ಸಂಸ್ಥೆ ಸ್ಥಾಪಿಸಿರುವ ವಿಶೇಷವಾದ ʻನಿರ್ವಹಣೆ, ದುರಸ್ತಿ ಮತ್ತು …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ಶ್ರೀ ರಾಮ ಜನ್ಮಭೂಮಿ ಮಂದಿರ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಭಾಷಣ ಮಾಡಿದರು
ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕತೆಯ ಒಂದು ಮಹತ್ವದ ಸಂದರ್ಭವನ್ನು ಗುರುತಿಸುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಪವಿತ್ರ ಶ್ರೀ ರಾಮ ಜನ್ಮಭೂಮಿ ದೇವಾಲಯದ ಶಿಖರದಲ್ಲಿ ಕೇಸರಿ ಧ್ವಜವನ್ನು ವಿಧ್ಯುಕ್ತವಾಗಿ ಹಾರಿಸಿದರು. ಧ್ವಜಾರೋಹಣ ಉತ್ಸವವು ದೇವಾಲಯದ ನಿರ್ಮಾಣದ ಪೂರ್ಣಗೊಳಿಸುವಿಕೆಯನ್ನು ಸಂಕೇತಿಸುತ್ತದೆ ಮತ್ತು ಸಾಂಸ್ಕೃತಿಕ ಆಚರಣೆ ಮತ್ತು ರಾಷ್ಟ್ರೀಯ ಏಕತೆಯ ಹೊಸ ಅಧ್ಯಾಯವನ್ನು ಪ್ರಾರಂಭಿಸುತ್ತದೆ. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ , ಇಂದು ಅಯೋಧ್ಯಾ ನಗರವು …
Read More »ನವೆಂಬರ್ 25 ರಂದು ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವೆಂಬರ್ 25, 2025 ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಶ್ರೀ ರಾಮ ಜನ್ಮಭೂಮಿ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಹಾಗೂ, ಈ ಮೂಲಕ ದೇಶದ ಸಾಮಾಜಿಕ-ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಭೂಚೌಕಟ್ಟಿನ ಅತ್ಯಂತ ಮಹತ್ವಪೂರ್ಣ ಸಂದರ್ಭವನ್ನು ಕೂಡಾ ಗುರುತಿಸಲಿದ್ದಾರೆ. ನವೆಂಬರ್ 25, 2025 ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ, ಪ್ರಧಾನಮಂತ್ರಿ ಅವರು ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, …
Read More »ಜಿ-20 ಶೃಂಗಸಭೆ ವೇಳೆ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ: ಅಧಿವೇಶನ -3
ಗೌರವಾನ್ವಿತರೇ, ತಂತ್ರಜ್ಞಾನ ಮುಂದುವರಿದಂತೆ, ಅವಕಾಶಗಳು ಮತ್ತು ಸಂಪನ್ಮೂಲಗಳು ಎರಡೂ ಕೆಲವೇ ಜನರ ಕೈಗಳಲ್ಲಿ ಕೇಂದ್ರೀಕೃತವಾಗುತ್ತಿವೆ. ವಿಶ್ವದಾದ್ಯಂತ ನಿರ್ಣಾಯಕ ತಂತ್ರಜ್ಞಾನಗಳ ಮೇಲಿನ ಸ್ಪರ್ಧೆ ತೀವ್ರಗೊಳ್ಳುತ್ತಿದೆ. ಇದು ಮನುಕುಲಕ್ಕೆ ಕಳವಳಕಾರಿ ವಿಷಯವಾಗಿದೆ ಮತ್ತು ಇದು ನಾವೀನ್ಯತೆಗೆ ದೊಡ್ಡ ಅಡ್ಡಿಯಾಗಿದೆ. ಇದನ್ನು ಪರಿಹರಿಸಲು ನಾವು ನಮ್ಮ ಕಾರ್ಯ ವಿಧಾನದಲ್ಲಿ ಮೂಲಭೂತ ಬದಲಾವಣೆಯನ್ನು ತಂದುಕೊಳ್ಳಬೇಕಾಗಿದೆ. ’ಹಣಕಾಸು ಕೇಂದ್ರಿತ’ ಬದಲು ‘ಮಾನವ ಕೇಂದ್ರಿತ’, ಕೇವಲ ‘ರಾಷ್ಟ್ರೀಯ’ ಬದಲು ‘ಜಾಗತಿಕ’ ಮತ್ತು ‘ವಿಶೇಷ’ ಬದಲು ‘ಓಪನ್ ಸೋರ್ಸ್’ ಮಾದರಿಗಳನ್ನು …
Read More »ಐ.ಬಿ.ಎಸ್.ಎ ನಾಯಕರ ಸಭೆಯಲ್ಲಿ ಪ್ರಧಾನಮಂತ್ರಿ ಅವರ ಹೇಳಿಕೆಯ ಕನ್ನಡ ಅನುವಾದ
ಗೌರವಾನ್ವಿತ ಅಧ್ಯಕ್ಷ ರಾಮಫೋಸಾ, ಗೌರವಾನ್ವಿತ ಅಧ್ಯಕ್ಷ ಲೂಲಾ, ಸ್ನೇಹಿತರೇ, ನಮಸ್ಕಾರ! ಜೋಹಾನ್ಸ್‌ಬರ್ಗ್‌ನ ರೋಮಾಂಚಕ ಮತ್ತು ಸುಂದರ ನಗರದಲ್ಲಿ ನಡೆಯುತ್ತಿರುವ ಐಬಿಎಸ್‌ಎ ನಾಯಕರ ಸಭೆಯಲ್ಲಿ ಭಾಗವಹಿಸಲು ನನಗೆ ತುಂಬಾ ಸಂತೋಷವಾಗಿದೆ. ಈ ಉಪಕ್ರಮಕ್ಕಾಗಿ ಐಬಿಎಸ್‌ಎ ಅಧ್ಯಕ್ಷ ಲೂಲಾ ಮತ್ತು ಅವರ ಆತ್ಮೀಯ ಆತಿಥ್ಯಕ್ಕಾಗಿ ಅಧ್ಯಕ್ಷ ರಾಮಫೋಸಾ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳನ್ನು ಅರ್ಪಿಸುತ್ತೇನೆ. ಐಬಿಎಸ್‌ಎ ಕೇವಲ ಮೂರು ದೇಶಗಳ ವೇದಿಕೆಯಲ್ಲ; ಇದು ಮೂರು ಖಂಡಗಳು, ಮೂರು ಪ್ರಮುಖ ಪ್ರಜಾಪ್ರಭುತ್ವ ಶಕ್ತಿಗಳು ಮತ್ತು …
Read More »ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಾಲ್ಕು ಕಾರ್ಮಿಕ ಸಂಹಿತೆಗಳ ಅನುಷ್ಠಾನವನ್ನು ಸ್ವಾಗತಿಸಿದ್ದಾರೆ. ಇದು ಸ್ವಾತಂತ್ರ್ಯಾ ನಂತರದ ಅತ್ಯಂತ ಸಮಗ್ರ ಮತ್ತು ಪ್ರಗತಿಪರ ಕಾರ್ಮಿಕ ಆಧಾರಿತ ಸುಧಾರಣೆಗಳಲ್ಲಿ ಒಂದಾಗಿದೆ ಎಂದು ಬಣ್ಣಿಸಿದ್ದಾರೆ. ಈ ಸುಧಾರಣೆಗಳು ಕಾರ್ಮಿಕರನ್ನು ಹೆಚ್ಚು ಸಬಲೀಕರಣಗೊಳಿಸುತ್ತವೆ ಮತ್ತು ಅನುಸರಣೆಯನ್ನು ಗಮನಾರ್ಹವಾಗಿ ಸರಳಗೊಳಿಸುತ್ತವೆ ಮತ್ತು ‘ಸುಲಭ ವ್ಯವಹಾರ’ವನ್ನು ಉತ್ತೇಜಿಸುತ್ತವೆ ಎಂದು ಅವರು ಹೇಳಿದರು. ನಾಲ್ಕು ಕಾರ್ಮಿಕ ಸಂಹಿತೆಗಳು ಸಾರ್ವತ್ರಿಕ ಸಾಮಾಜಿಕ ಭದ್ರತೆ, ಕನಿಷ್ಠ ಮತ್ತು ಸಮಯೋಚಿತ ವೇತನ ಪಾವತಿ, …
Read More »
Matribhumi Samachar Kannad