ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಉತ್ತರ ಪ್ರದೇಶದ ಜನತೆಗೆ ಸಂಸ್ಥಾಪನಾ ದಿನದಂದು ಶುಭ ಕೋರಿದ್ದಾರೆ. Xನಲ್ಲಿ ಪೋಸ್ಟ್ ಮಾಡಿ: “ಉತ್ತರ ಪ್ರದೇಶದ ನನ್ನ ಎಲ್ಲಾ ಸಹೋದರ ಸಹೋದರಿಯರಿಗೆ ಸಂಸ್ಥಾಪನಾ ದಿನದಂದು ಶುಭಾಶಯಗಳು. ಭಾರತೀಯ ಸಂಸ್ಕೃತಿಯ ಅಸಂಖ್ಯಾತ ಪೌರಾಣಿಕ ಮತ್ತು ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿರುವ ಈ ಪವಿತ್ರ ಭೂಮಿ ಕಳೆದ ಎಂಟು ವರ್ಷಗಳಿಂದ ಅಭಿವೃದ್ಧಿಯ ಹೊಸ ಅಧ್ಯಾಯಗಳನ್ನು ರಚಿಸುವ ನಿಟ್ಟಿನಲ್ಲಿ ಸಾಗಿದೆ. ಜನರ ಕಲ್ಯಾಣಕ್ಕಾಗಿ ಸಮರ್ಪಿತವಾದ ಸರ್ಕಾರ ಮತ್ತು ಈ …
Read More »ಐರ್ಲೆಂಡ್ ಪ್ರಧಾನಮಂತ್ರಿ ಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಗೌರವಾನ್ವಿತ ಶ್ರೀ ಮೈಕೆಲ್ ಮಾರ್ಟಿನ್ ಅವರನ್ನು ಅಭಿನಂದಿಸಿದ್ದಾರೆ. ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ನಲ್ಲಿ ಹೀಗೆ ಹೇಳಿದ್ದಾರೆ. “ಐರ್ಲೆಂಡ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ @MichealMartinTD ಅವರಿಗೆ ಅಭಿನಂದನೆಗಳು. ಹಂಚಿಕೆಯ ಮೌಲ್ಯಗಳ ಭದ್ರ ಬುನಾದಿ ಮತ್ತು ಜನರ ನಡುವಿನ ಆಳವಾದ ಸಂಪರ್ಕವನ್ನು ಆಧರಿಸಿದ ನಮ್ಮ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಒಗ್ಗೂಡಿ ಕೆಲಸ …
Read More »ಖೇಲೋ ಇಂಡಿಯಾ ವಿಂಟರ್ ಗೇಮ್ಸ್ ಕ್ರೀಡಾಕೂಟ ಮೂಲಕ ಕ್ರೀಡಾ ಶ್ರೇಷ್ಠತೆಯನ್ನು ಹೊಸ ಮಟ್ಟಕ್ಕೆ ಏರಿಸಲಾಗುವುದು ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ
ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟ ಇಂದು ಲಡಾಖ್ ನ ಲೇಹ್ ನಲ್ಲಿರುವ ಪ್ರಸಿದ್ಧ ಎನ್‌ಡಿಎಸ್ ಸ್ಟೇಡಿಯಂನಲ್ಲಿ ಬಹಳ ಉತ್ಸಾಹದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮೊದಲ ಹಂತವನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶವು ಆಯೋಜಿಸುತ್ತಿದೆ ಮತ್ತು ಇದು ಜನವರಿ 27, 2025 ರವರೆಗೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಫೆಬ್ರವರಿ 22 ರಿಂದ 25 ರವರೆಗೆ ಹಿಮದ ಹಿನ್ನೆಲೆಯ ಆಟಗಳನ್ನು ಆಯೋಜಿಸುತ್ತದೆ. 5000 ಸಾಮರ್ಥ್ಯದ ಎನ್‌ಡಿಎಸ್ ಕ್ರೀಡಾಂಗಣವು ಉದ್ಘಾಟನಾ ದಿನದಂದು …
Read More »“ಪರಾಕ್ರಮ್ ದಿವಸ್” ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್‌ನ ಭವ್ಯವಾದ ಆಚರಣೆಯನ್ನು …
Read More »ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …
Read More »ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಬೇಟಿ ಬಚಾವೋ ಬೇಟಿ ಪಡಾವೋ ಉಪಕ್ರಮವು ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದೆ ಮತ್ತು ಭಾರತದ ಪ್ರಗತಿಯಲ್ಲಿ ಮಹಿಳೆಯರನ್ನು ಮುಂಚೂಣಿಯಲ್ಲಿರಿಸಿದೆ ಎಂದು ಹೇಳಿದ್ದಾರೆ. ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ ದೇವಿ ಅವರ ಲೇಖನವು ಭಾರತದ ಹೆಣ್ಣುಮಕ್ಕಳು ಹೇಗೆ ಬದಲಾವಣೆ ತರುತ್ತಿದ್ದಾರೆ, ಉದ್ಯಮಿಗಳು ಮತ್ತು ನಾಯಕಿಯರಾಗಿ ಹೊರಹೊಮ್ಮುತ್ತಿದ್ದಾರೆಂಬುದನ್ನು ಎತ್ತಿ ತೋರಿಸುತ್ತದೆ ಎಂದು ಅವರು ತಿಳಿಸಿದ್ದಾರೆ. ಪ್ರಧಾನಮಂತ್ರಿ ಅವರು ಕೇಂದ್ರ ಸಚಿವೆ ಶ್ರೀಮತಿ ಅನ್ನಪೂರ್ಣ …
Read More »ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಬಸ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದಾರೆ. ಅವರು ಪಿ ಎಂ ಎನ್ ಆರ್ ಎಫ್ ನಿಧಿಯಿಂದ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ. ಪ್ರಧಾನಮಂತ್ರಿಗಳ ಕಾರ್ಯಾಲಯ ತನ್ನ X ಪೋಸ್ಟ್ ನಲ್ಲಿ ಹೀಗೆ ಹೇಳಿದೆ. “ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯಲ್ಲಿ ನಡೆದ ಅಪಘಾತದಲ್ಲಿ …
Read More »ಪ್ರಧಾನಮಂತ್ರಿ ಅವರಿಂದ ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನರಿಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ ಕೋರಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಮಣಿಪುರದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯಗಳು. ಭಾರತದ ಅಭಿವೃದ್ಧಿಯಲ್ಲಿ ಮಣಿಪುರದ ಜನರು ವಹಿಸಿರುವ ಪಾತ್ರದ ಬಗ್ಗೆ ನಮಗೆ ಅಪಾರ ಹೆಮ್ಮೆಯಿದೆ. ಮಣಿಪುರದ ಪ್ರಗತಿಗೆ ನನ್ನ ಶುಭ ಹಾರೈಕೆಗಳು.”
Read More »ಪ್ರಧಾನಮಂತ್ರಿಗಳಿಂದ ಮೇಘಾಲಯದ ಜನತೆಗೆ ರಾಜ್ಯ ಸಂಸ್ಥಾಪನಾ ದಿನದ ಶುಭಾಶಯ
ಮೇಘಾಲಯ ರಾಜ್ಯ ಸಂಸ್ಥಾಪನಾ ದಿನದ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಅಲ್ಲಿನ ಜನತೆಗೆ ಶುಭ ಕೋರಿದ್ದಾರೆ. ಅವರು ಎಕ್ಸ್ ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ: “ಮೇಘಾಲಯದ ರಾಜ್ಯ ಸಂಸ್ಥಾಪನಾ ದಿನದಂದು ರಾಜ್ಯದ ಜನತೆಗೆ ನನ್ನ ಶುಭಾಶಯಗಳನ್ನು ತಿಳಿಸುತ್ತೇನೆ. ಮೇಘಾಲಯ ತನ್ನ ನೈಸರ್ಗಿಕ ಸೌಂದರ್ಯ ಮತ್ತು ಜನರ ಪರಿಶ್ರಮದ ಸ್ವಭಾವಕ್ಕಾಗಿ ಮೆಚ್ಚುಗೆ ಪಡೆದಿದೆ. ಮುಂದಿನ ದಿನಗಳಲ್ಲಿ ರಾಜ್ಯದ ನಿರಂತರ ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ.” भारत : 1885 …
Read More »ಜನವರಿ 22ರಂದು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ಜಿಲ್ಲೆಗಳ ಡಿಎಂ(ಜಿಲ್ಲಾ ಮ್ಯಾಜಿಸ್ಟ್ರೇಟ್)ಗಳೊಂದಿಗೆ 2022 ರ ಜನವರಿ 22 ರಂದು ಬೆಳಗ್ಗೆ 11 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂವಾದ ನಡೆಸಲಿದ್ದಾರೆ. ಜಿಲ್ಲೆಗಳಲ್ಲಿ ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳ ಅನುಷ್ಠಾನದ ಪ್ರಗತಿ ಮತ್ತು ಪ್ರಸ್ತುತ ಸ್ಥಿತಿಯ ಬಗ್ಗೆ ಪ್ರಧಾನ ಮಂತ್ರಿಯವರು ನೇರ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುತ್ತಾರೆ. ಸಂವಹನವು ಕಾರ್ಯಕ್ಷಮತೆಯನ್ನು ಪರಿಶೀಲಿಸಲು ಮತ್ತು ಎದುರಿಸುತ್ತಿರುವ ಸವಾಲುಗಳನ್ನು ಕಂಡುಹಿಡಿಯಲು ಸಹಾಯ ಮಾಡುತ್ತದೆ. ಇದು ಮಿಷನ್ ಮೋಡ್‌ನಲ್ಲಿ …
Read More »
Matribhumi Samachar Kannad