“ಗುಜರಾತಿನ ವಡ್ ನಗರದ ಭವ್ಯ ಇತಿಹಾಸವು 2500 ವರ್ಷಗಳಿಗಿಂತಲೂ ಹಳೆಯದಾಗಿದೆ ಮತ್ತು ಅದನ್ನು ಉಳಿಸಲು ಮತ್ತು ಸಂರಕ್ಷಿಸಲು ಅನನ್ಯ ಪ್ರಯತ್ನಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. “ಎಕ್ಸ್” ತಾಣದ ಸಂದೇಶದಲ್ಲಿ, ಅವರು ಹೀಗೆ ಹೇಳಿದ್ದಾರೆ; “गुजरात के वडनगर का गौरवशाली इतिहास 2500 साल से भी पुराना है। इसे संजोने और संरक्षित करने के लिए यहां …
Read More »ತಿರು ಎಂ. ಜಿ. ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರು ಎಂ ಜಿ ರಾಮಚಂದ್ರನ್ ಅವರ ಜನ್ಮ ವಾರ್ಷಿಕೋತ್ಸವದಂದು ಅವರಿಗೆ ಗೌರವ ನಮನ ಸಲ್ಲಿಸಿದರು. “ಬಡವರನ್ನು ಸಬಲೀಕರಣಗೊಳಿಸಲು ಮತ್ತು ಉತ್ತಮ ಸಮಾಜವನ್ನು ನಿರ್ಮಿಸಲು ಅವರು ಮಾಡಿದ ಪ್ರಯತ್ನಗಳಿಂದ ನಾವು ಬಹಳ ಪ್ರೇರಿತರಾಗಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಪ್ರಧಾನಮಂತ್ರಿ ಅವರು “ಎಕ್ಸ್” ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ: “ತಿರು ಎಂ.ಜಿ.ಆರ್. ಅವರ ಜನ್ಮ ವಾರ್ಷಿಕೋತ್ಸವದಂದು ನಾನು …
Read More »ಕಳೆದ ಒಂಬತ್ತು ವರ್ಷಗಳಲ್ಲಿ, ಸ್ಟಾರ್ಟ್ಅಪ್ ಇಂಡಿಯಾದ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ, ಅವರ ನವೀನ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ: ಪ್ರಧಾನಮಂತ್ರಿ
“ಸ್ಟಾರ್ಟ್ ಅಪ್ ಇಂಡಿಯಾದ ಈ ಯಶಸ್ಸು ಇಂದು ಒಂಬತ್ತು ವರ್ಷಗಳ ಸಂತಸವನ್ನು ಆಚರಿಸುತ್ತಿದೆ. ಕಳೆದ ಒಂಬತ್ತು ವರ್ಷಗಳಲ್ಲಿ, ಈ ಪರಿವರ್ತನಾ ಕಾರ್ಯಕ್ರಮವು ಅಸಂಖ್ಯಾತ ಯುವಕರನ್ನು ಸಬಲೀಕರಣಗೊಳಿಸಿದೆ. ಅವರ ನವೀನ ಹಾಗೂ ವೈವಿದ್ಯಮಯ ಆಲೋಚನೆಗಳನ್ನು ಯಶಸ್ವಿ ಸ್ಟಾರ್ಟ್ ಅಪ್ ಗಳಾಗಿ ಪರಿವರ್ತಿಸಿದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ಸರ್ಕಾರದ ಮಟ್ಟಿಗೆ ಹೇಳುವುದಾದರೆ, ಸ್ಟಾರ್ಟ್ ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ನಾವು ಯಾವುದೇ ಅವಕಾಶವನ್ನು ಬಿಟ್ಟುಕೊಟ್ಟಿಲ್ಲ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ …
Read More »ಸೇನಾ ದಿನದಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ
ಸೇನಾ ದಿನವಾದ ಇಂದು ಭಾರತೀಯ ಸೇನೆಯ ಅಚಲ ಧೈರ್ಯಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. “ಭಾರತೀಯ ಸೇನೆಯು ದೃಢನಿಶ್ಚಯ, ವೃತ್ತಿಪರತೆ ಮತ್ತು ಸಮರ್ಪಣೆಯನ್ನು ಪ್ರತಿನಿಧಿಸುತ್ತದೆ” ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೇಳಿದರು. “ನಮ್ಮ ಸರ್ಕಾರವು ಸಶಸ್ತ್ರ ಪಡೆಗಳು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕೆ ಬದ್ಧವಾಗಿದೆ. ಕಳೆದ ಹಲವಾರು ವರ್ಷಗಳಲ್ಲಿ, ನಾವು ಹಲವಾರು ಸುಧಾರಣೆಗಳನ್ನು ಪರಿಚಯಿಸಿದ್ದೇವೆ ಮತ್ತು ಆಧುನೀಕರಣದ ಮೇಲೆ ಕೇಂದ್ರೀಕರಿಸಿದ್ದೇವೆ” ಎಂದು ಪ್ರಧಾನಮಂತ್ರಿ ಶ್ರೀ …
Read More »ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು. ಇಂದು ಭಾರತದ ಕಡಲ ಪರಂಪರೆ, ನೌಕಾಪಡೆಯ ಭವ್ಯ ಇತಿಹಾಸ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ದೊಡ್ಡ ದಿನವಾಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಛತ್ರಪತಿ ಶಿವಾಜಿ ಮಹಾರಾಜ್ ಅವರು ಭಾರತದ ನೌಕಾಪಡೆಗೆ ಹೊಸ ಶಕ್ತಿ ಮತ್ತು ದೂರದೃಷ್ಟಿಯನ್ನು ನೀಡಿದರು ಎಂದರು. ಶಿವಾಜಿ ಮಹಾರಾಜರ ಭೂಮಿಯಲ್ಲಿ 21ನೇ ಶತಮಾನದ ಭಾರತದ ನೌಕಾಪಡೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇಂದು ಪ್ರಮುಖ ಹೆಜ್ಜೆ ಇಟ್ಟಿದೆ ಎಂದರು. “ಇದೇ ಮೊದಲ ಬಾರಿಗೆ ವಿಧ್ವಂಸಕ ನೌಕೆ, ಯುದ್ಧನೌಕೆ ಮತ್ತು ಜಲಾಂತರ್ಗಾಮಿ ನೌಕೆಯ ತ್ರಿ-ಕಾರ್ಯಾರಂಭ ಮಾಡಲಾಗುತ್ತಿದೆ” ಎಂದು ಪ್ರಧಾನಿ ಒತ್ತಿ ಹೇಳಿದರು. ಎಲ್ಲಾ ಮೂರು ಮುಂಚೂಣಿ ನೌಕೆಗಳನ್ನು ಭಾರತದಲ್ಲಿ ತಯಾರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಸಾಧನೆಗಾಗಿ ಅವರು ಭಾರತೀಯ ನೌಕಾಪಡೆ, ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದರು. “ಇಂದಿನ ಕಾರ್ಯಕ್ರಮವು ನಮ್ಮ ಭವ್ಯ ಪರಂಪರೆಯನ್ನು ನಮ್ಮ ಭವಿಷ್ಯದ ಆಕಾಂಕ್ಷೆಗಳೊಂದಿಗೆ ಸಂಪರ್ಕಿಸುತ್ತದೆ” ಎಂದು ಶ್ರೀ ಮೋದಿ ಉದ್ಗರಿಸಿದರು. ಭಾರತವು ದೀರ್ಘ ಸಮುದ್ರಯಾನ, ವಾಣಿಜ್ಯ, ನೌಕಾ ರಕ್ಷಣೆ ಮತ್ತು ಹಡಗು ಉದ್ಯಮಕ್ಕೆ ಸಂಬಂಧಿಸಿದ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಶ್ರೀಮಂತ ಇತಿಹಾಸವನ್ನು ಉಲ್ಲೇಖಿಸಿದ ಅವರು, ಇಂದಿನ ಭಾರತವು ವಿಶ್ವದ ಪ್ರಮುಖ ಕಡಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದರು. ಇಂದು ಕಾರ್ಯಾರಂಭ ಮಾಡಲಾದ ನೌಕೆಗಳು ಅದರ ಒಂದು ನೋಟವನ್ನು ಪ್ರದರ್ಶಿಸಿವೆ ಎಂದೂ ಅವರು ಹೇಳಿದರು. ಚೋಳ ರಾಜವಂಶದ ಕಡಲ ಪರಾಕ್ರಮಕ್ಕೆ ಸಮರ್ಪಿತವಾದ ಐಎನ್ ಎಸ್ ನೀಲಗಿರಿ ಮತ್ತು ಸೂರತ್ ಯುದ್ಧನೌಕೆ ಸೇರಿದಂತೆ ಹೊಸ ನೌಕೆಗಳ ಆರಂಭವನ್ನು ಪ್ರಧಾನಿ ಉಲ್ಲೇಖಿಸಿದರು, ಇದು ಗುಜರಾತ್ ನ ಬಂದರುಗಳು ಭಾರತವನ್ನು ಪಶ್ಚಿಮ ಏಷ್ಯಾದೊಂದಿಗೆ ಸಂಪರ್ಕಿಸಿದ ಯುಗವನ್ನು ನೆನಪಿಸುತ್ತದೆ. ಕೆಲವು ವರ್ಷಗಳ ಹಿಂದೆ ಮೊದಲ ಜಲಾಂತರ್ಗಾಮಿ ನೌಕೆ ಕಲ್ವರಿಯನ್ನು ನಿಯೋಜಿಸಿದ ನಂತರ ಪಿ 75 ವರ್ಗದಲ್ಲಿ ಆರನೇ ವಗ್ಶೀರ್ ಜಲಾಂತರ್ಗಾಮಿ ನೌಕೆಯನ್ನು ನಿಯೋಜಿಸಿದ್ದನ್ನು ಅವರು ಉಲ್ಲೇಖಿಸಿದರು. ಈ ಹೊಸ ಗಡಿನಾಡಿನ ರಕ್ಷಣಾ ವೇದಿಕೆಗಳು ಭಾರತದ ಭದ್ರತೆ ಮತ್ತು ಪ್ರಗತಿ ಎರಡನ್ನೂ ಹೆಚ್ಚಿಸುತ್ತವೆ ಎಂದು ಪ್ರಧಾನಿ ವಿವರಿಸಿದರು. “ಭಾರತವು ಇಂದು ಜಾಗತಿಕವಾಗಿ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿ ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಪಾಲುದಾರನಾಗಿ ಗುರುತಿಸಲ್ಪಟ್ಟಿದೆ” ಎಂದು ಪ್ರಧಾನಿ ಉದ್ಗರಿಸಿದರು. ಭಾರತವು ಅಭಿವೃದ್ಧಿಯ ಮನೋಭಾವದಿಂದ ಕಾರ್ಯನಿರ್ವಹಿಸುತ್ತದೆಯೇ ಹೊರತು ವಿಸ್ತರಣಾವಾದದಿಂದಲ್ಲ ಎಂದು ಅವರು ಒತ್ತಿ ಹೇಳಿದರು. ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶವನ್ನು ಭಾರತ ಸದಾ ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ಕರಾವಳಿ ರಾಷ್ಟ್ರಗಳ ಅಭಿವೃದ್ಧಿಯ ವಿಷಯಕ್ಕೆ ಬಂದಾಗ, ಭಾರತವು ಸಾಗರ್ (ಈ ಪ್ರದೇಶದ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ) ಮಂತ್ರವನ್ನು ಪರಿಚಯಿಸಿತು ಮತ್ತು ಈ ದೃಷ್ಟಿಕೋನದೊಂದಿಗೆ ಮುಂದುವರಿಯಿತು ಎಂಬುದರತ್ತ ಅವರು ಬೆಟ್ಟು ಮಾಡಿದರು. “ಒಂದು ಭೂಮಿ, …
Read More »ನಮ್ಮ ನಿವೃತ್ತ ಯೋಧರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ: ಪ್ರಧಾನಮಂತ್ರಿ
ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಇಂದು ಸಶಸ್ತ್ರ ಪಡೆಗಳ ವೆಟರನ್ಸ್ ದಿನದ ಸಂದರ್ಭದಲ್ಲಿ, ನಮ್ಮ ವೆಟರನ್ ವೀರರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ. Xನ ಪೋಸ್ಟ್ ನಲ್ಲಿ, ಅವರು: “ಸಶಸ್ತ್ರ ಪಡೆಗಳ ವೆಟರನ್ಸ್ ದಿನದಂದು, ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಅವರ ತ್ಯಾಗ, …
Read More »ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ. ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು: “ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ! ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ. …
Read More »ಜನವರಿ 14ರಂದು ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯ ಆಚರಣೆಯಲ್ಲಿ ಭಾಗವಹಿಸಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 14ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ. ನಮ್ಮ ದೇಶವನ್ನು ‘ಹವಾಮಾನ ಸಿದ್ಧ ಮತ್ತು ಹವಾಮಾನ ಸ್ಮಾರ್ಟ್’ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಪ್ರಧಾನಿಯವರು ‘ಮಿಷನ್ ಮೌಸಮ್’ ಗೆ ಚಾಲನೆ ನೀಡಲಿದ್ದಾರೆ. ಅತ್ಯಾಧುನಿಕ ಹವಾಮಾನ ಕಣ್ಗಾವಲು ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೆಚ್ಚಿನ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …
Read More »ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವೆ ಒಡಂಬಡಿಕೆಗೆ ಸಹಿ – ಒಡಿಶಾದ ಜನರಿಗೆ ಪ್ರಧಾನಮಂತ್ರಿ ಅಭಿನಂದನೆ
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವಿನ ಒಡಂಬಡಿಕೆಗಾಗಿ ಒಡಿಶಾದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಈ ಯೋಜನೆಯು ಕೈಗೆಟುಕುವ ದರದಲ್ಲಿ ಅತ್ಯುನ್ನತ ಗುಣಮಟ್ಟದ ಆರೋಗ್ಯ ಸೇವೆಯನ್ನು, ವಿಶೇಷವಾಗಿ ನಾರಿ ಶಕ್ತಿ ಮತ್ತು ಒಡಿಶಾದ ಹಿರಿಯ ನಾಗರಿಕರಿಗೆ ಖಚಿತಪಡಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. …
Read More »
Matribhumi Samachar Kannad