ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಜನವರಿ 14ರಂದು ಬೆಳಿಗ್ಗೆ 10:30ಕ್ಕೆ ನವದೆಹಲಿಯ ಭಾರತ್ ಮಂಟಪದಲ್ಲಿ ಭಾರತೀಯ ಹವಾಮಾನ ಇಲಾಖೆಯ 150ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ಸಭಿಕರನ್ನುದ್ದೇಶಿಸಿ ಭಾಷಣವನ್ನು ಕೂಡಾ ಮಾಡಲಿದ್ದಾರೆ. ನಮ್ಮ ದೇಶವನ್ನು ‘ಹವಾಮಾನ ಸಿದ್ಧ ಮತ್ತು ಹವಾಮಾನ ಸ್ಮಾರ್ಟ್’ ರಾಷ್ಟ್ರವನ್ನಾಗಿ ಮಾಡುವ ಗುರಿಯೊಂದಿಗೆ ಪ್ರಧಾನಿಯವರು ‘ಮಿಷನ್ ಮೌಸಮ್’ ಗೆ ಚಾಲನೆ ನೀಡಲಿದ್ದಾರೆ. ಅತ್ಯಾಧುನಿಕ ಹವಾಮಾನ ಕಣ್ಗಾವಲು ತಂತ್ರಜ್ಞಾನಗಳು ಮತ್ತು ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವ ಮೂಲಕ, ಹೆಚ್ಚಿನ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …
Read More »ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವೆ ಒಡಂಬಡಿಕೆಗೆ ಸಹಿ – ಒಡಿಶಾದ ಜನರಿಗೆ ಪ್ರಧಾನಮಂತ್ರಿ ಅಭಿನಂದನೆ
ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗಾಗಿ ಭಾರತ ಸರ್ಕಾರದ ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರ ಮತ್ತು ಒಡಿಶಾ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಡುವಿನ ಒಡಂಬಡಿಕೆಗಾಗಿ ಒಡಿಶಾದ ಜನರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ. ಈ ಯೋಜನೆಯು ಕೈಗೆಟುಕುವ ದರದಲ್ಲಿ ಅತ್ಯುನ್ನತ ಗುಣಮಟ್ಟದ ಆರೋಗ್ಯ ಸೇವೆಯನ್ನು, ವಿಶೇಷವಾಗಿ ನಾರಿ ಶಕ್ತಿ ಮತ್ತು ಒಡಿಶಾದ ಹಿರಿಯ ನಾಗರಿಕರಿಗೆ ಖಚಿತಪಡಿಸುತ್ತದೆ ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ. …
Read More »ಸ್ವಾಮಿ ವಿವೇಕಾನಂದರ ಜಯಂತಿಯಂದು ಪ್ರಧಾನಮಂತ್ರಿ ಅವರಿಂದ ಗೌರವ ನಮನ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸ್ವಾಮಿ ವಿವೇಕಾನಂದರು ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿದ್ದಾರೆ. ಅವರು ಯುವ ಮನಸ್ಸುಗಳಲ್ಲಿ ಉತ್ಸಾಹ ಮತ್ತು ಉದ್ದೇಶವನ್ನು ಬೆಳಗಿಸುತ್ತಿದ್ದಾರೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದರು. ಈ ಸಂಬಂಧ ಪ್ರಧಾನಮಂತ್ರಿ ಅವರು ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ: “ಸ್ವಾಮಿ ವಿವೇಕಾನಂದರ ಜಯಂತಿಯಂದು ಅವರಿಗೆ ಗೌರವ ನಮನಗಳು. ಯುವಕರಿಗೆ ಶಾಶ್ವತ ಸ್ಫೂರ್ತಿಯಾಗಿರುವ ಅವರು ಯುವ ಮನಸ್ಸುಗಳಲ್ಲಿ …
Read More »ಉದ್ಯಮಿ ನಿಖಿಲ್ ಕಾಮತ್ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಭಾಗಿ
ಉದ್ಯಮಿ ನಿಖಿಲ್ ಕಾಮತ್ ಅವರು ನಡೆಸಿಕೊಡುವ ಪಾಡ್ಕ್ಯಾಸ್ಟ್ ನಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತಮ್ಮ ರಾಜಕೀಯ ಪಯಣ ಮತ್ತು ವೈಯಕ್ತಿಕ ದೃಷ್ಟಿಕೋನಗಳ ಬಗ್ಗೆ ಒಳನೋಟಗಳನ್ನು ಹಂಚಿಕೊಂಡಿದ್ದಾರೆ. ನಿಖಿಲ್ ಕಾಮತ್ ಅವರ ಎಕ್ಸ್ ಪೋಸ್ಟ್ ಗೆ ಶ್ರೀ ಮೋದಿ ಅವರ ಪ್ರತಿಕ್ರಿಯೆ ಹೀಗಿದೆ: “ನಾವು ನಿಮಗಾಗಿ ಇದನ್ನು ನಿರೂಪಿಸಲು ಸಂತಸಪಟ್ಟಷ್ಟೇ, ನೀವೆಲ್ಲರೂ ಇದನ್ನು ಆಲಿಸಿ ಆನಂದಿಸುವಿರಿ ಎಂದು ನಾನು ಭಾವಿಸುತ್ತೇನೆ!” भारत : 1885 से 1950 …
Read More »ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಖ್ಯಾತ ಹಿನ್ನೆಲೆ ಗಾಯಕರಾದ ಶ್ರೀ ಪಿ. ಜಯಚಂದ್ರನ್ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ ಮತ್ತು ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನಗಳು ಮುಂದಿನ ಪೀಳಿಗೆಗೂ ಹೃದಯಸ್ಪರ್ಶಿಯಾಗಿರಲಿವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಪಿ. ಜಯಚಂದ್ರನ್ ಅವರು ವೈವಿಧ್ಯಮಯ ಭಾವನೆಗಳನ್ನು ವ್ಯಕ್ತಪಡಿಸುವ ವಿಶಿಷ್ಟ ಧ್ವನಿಯನ್ನು ಹೊಂದಿದ್ದರು. ವಿವಿಧ ಭಾಷೆಗಳಲ್ಲಿ ಅವರ ಭಾವಪೂರ್ಣ ಗಾಯನವು ಮುಂಬರುವ ಪೀಳಿಗೆಗಳಿಗೂ ಹೃದಯಸ್ಪರ್ಶಿಯಾಗಿ ಮುಂದುವರಿಯಲಿವೆ. …
Read More »ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಪ್ರಧಾನಮಂತ್ರಿ ಸಂತಾಪ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ಉಂಟಾದ ಜೀವಹಾನಿಗೆ ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ ಪ್ರಧಾನ ಮಂತ್ರಿಗಳ ಕಾರ್ಯಾಲಯ ಎಕ್ಸ್ ಖಾತೆಯಲ್ಲಿ ಹೀಗೆ ಹೇಳಿದೆ; “ಆಂಧ್ರಪ್ರದೇಶದ ತಿರುಪತಿಯಲ್ಲಿ ಕಾಲ್ತುಳಿತದಿಂದ ದುಃಖವಾಗಿದೆ. ತಮ್ಮ ಹತ್ತಿರದ ಮತ್ತು ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನನ್ನ ಆಲೋಚನೆಗಳಿವೆ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆ. ಸಂತ್ರಸ್ತರಿಗೆ ಆಂಧ್ರಪ್ರದೇಶ ಸರ್ಕಾರ ಸಾಧ್ಯವಿರುವ ಎಲ್ಲ ನೆರವು ನೀಡುತ್ತಿದೆ: ಪ್ರಧಾನಮಂತ್ರಿ @narendramodi’’ ಎಂದಿದ್ದಾರೆ. भारत : …
Read More »ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …
Read More »ನಾಗರಿಕ ಕೇಂದ್ರಿತ ಆಡಳಿತದ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ: ಪ್ರಧಾನಮಂತ್ರಿ
ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ಆದ್ಯತೆ ನೀಡುತ್ತದೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಅಶ್ವಿನಿ ವೈಷ್ಣವ್ ಅವರ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು, “ಕರಡು ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ನಿಯಮಗಳು, 2025 ನಾಗರಿಕ ಕೇಂದ್ರಿತ ಆಡಳಿತಕ್ಕೆ ಭಾರತದ ಬದ್ಧತೆಗೆ ಹೇಗೆ ಆದ್ಯತೆ ನೀಡುತ್ತದೆ ಎಂಬುದನ್ನು ಕೇಂದ್ರ …
Read More »ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಗೌರವ ನಮನ
ಪ್ರಕಾಶ್ ಉತ್ಸವದಂದು ಶ್ರೀ ಗುರು ಗೋಬಿಂದ್ ಸಿಂಗ್ ಅವರಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗೌರವ ನಮನ ಸಲ್ಲಿಸಿದ್ದಾರೆ ಮತ್ತು ಗೋಬಿಂದ್ ಸಿಂಗ್ ಅವರ ಚಿಂತನೆಗಳು ಪ್ರಗತಿಪರ, ಸಮೃದ್ಧ ಮತ್ತು ಕರುಣಾಮಯ ಸಮಾಜವನ್ನು ನಿರ್ಮಿಸಲು ಪ್ರೇರಣೆ ನೀಡುತ್ತವೆ ಎಂದು ಹೇಳಿದ್ದಾರೆ. ಪ್ರಧಾನಮಂತ್ರಿಗಳ ಎಕ್ಸ್ ಪೋಸ್ಟ್ ಹೀಗಿದೆ: “ಶ್ರೀ ಗುರು ಗೋಬಿಂದ್ ಸಿಂಗ್ ಅವರ ಪ್ರಕಾಶ್ ಉತ್ಸವದಂದು ಅವರಿಗೆ ಶಿರಬಾಗಿ ನಮಿಸುತ್ತೇನೆ. ಪ್ರಗತಿಪರ, ಸಮೃದ್ಧ ಮತ್ತು ಸಹಾನುಭೂತಿಯ ಸಮಾಜ ನಿರ್ಮಾಣಕ್ಕೆ …
Read More »
Matribhumi Samachar Kannad