‘ಬಿಮಾ ಸಖಿ ಯೋಜನೆ’ ಕುರಿತು ಮಾತನಾಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್, “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭವನ್ನು ಸಾಧಿಸಿದ್ದೇವೆ. ಈ ಯೋಜನೆಯು ಮಹಿಳಾ ಸಬಲೀಕರಣದ ಕಡೆಗೆ ಒಂದು ಪ್ರಮುಖ ಹೆಜ್ಜೆ ಮಾತ್ರವಲ್ಲ, ಗ್ರಾಮೀಣ ಮತ್ತು ಅರೆ-ನಗರ ಭಾರತಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿಯೂ ಒಂದು ಪ್ರಮುಖ ಹೆಜ್ಜೆಯಾಗಿದೆ. …
Read More »ಸಂಸತ್ತಿನ 2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಹೇಳಿಕೆ
2025ರ ಮುಂಗಾರು ಅಧಿವೇಶನ ಆರಂಭಕ್ಕೂ ಮುನ್ನ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸಂಸತ್ ಆವರಣದಲ್ಲಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದರು. ಮುಂಗಾರು ಅಧಿವೇಶನಕ್ಕೆ ಎಲ್ಲರನ್ನೂ ಸ್ವಾಗತಿಸಿದ ಪ್ರಧಾನಮಂತ್ರಿ, ಮುಂಗಾರು ನಾವೀನ್ಯತೆ ಮತ್ತು ನವೀಕರಣವನ್ನು ಸಂಕೇತಿಸುತ್ತದೆ ಎಂದು ಹೇಳಿದರು, ದೇಶಾದ್ಯಂತ ಪ್ರಸ್ತುತ ಹವಾಮಾನ ಪರಿಸ್ಥಿತಿಗಳು ಅನುಕೂಲಕರವಾಗಿ ಮುಂದುವರಿಯುತ್ತಿವೆ, ಕೃಷಿಗೆ ಪ್ರಯೋಜನಕಾರಿ ಮುನ್ಸೂಚನೆಗಳನ್ನು ನೀಡುತ್ತಿವೆ ಎಂದು ಅವರು ಹೇಳಿದರು. ಮಳೆಯು ಗ್ರಾಮೀಣ ಆರ್ಥಿಕತೆ ಮತ್ತು ದೇಶದ ಒಟ್ಟಾರೆ ಆರ್ಥಿಕ ರಚನೆಯಲ್ಲಿ ಮಾತ್ರವಲ್ಲದೆ, ಪ್ರತಿಯೊಂದು …
Read More »ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿರುವ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜುಲೈ 18ರಂದು ಬಿಹಾರ ಮತ್ತು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11:30 ರ ಸುಮಾರಿಗೆ ಬಿಹಾರದ ಮೋತಿಹರಿಯಲ್ಲಿ 7,200 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಅನೇಕ ಅಭಿವೃದ್ಧಿ ಯೋಜನೆಗಳಿಗೆ ಅವರು ಶಿಲಾನ್ಯಾಸ, ಉದ್ಘಾಟನೆ ಮತ್ತು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ಅವರು ಸಾರ್ವಜನಿಕ ಸಮಾರಂಭವನ್ನುದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಮಧ್ಯಾಹ್ನ 3 ಗಂಟೆಗೆ ದುರ್ಗಾಪುರದಲ್ಲಿ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಿ 5000 ಕೋಟಿ ರೂ.ಗೂ ಅಧಿಕ …
Read More »ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡ ಗಣ್ಯ ವ್ಯಕ್ತಿಗಳಿಗೆ ಪ್ರಧಾನಮಂತ್ರಿ ಅಭಿನಂದನೆ
ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಭಾರತದ ರಾಷ್ಟ್ರಪತಿ ಅವರಿಂದ ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ನಾಲ್ವರು ಗಣ್ಯ ವ್ಯಕ್ತಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭ ಹಾರೈಕೆಗಳನ್ನು ಸಲ್ಲಿಸಿದ್ದಾರೆ. ಸಾಮಾಜಿಕ ಮಾಧ್ಯಮ ವೇದಿಕೆ ‘ಎಕ್ಸ್’ ನಲ್ಲಿ ಸರಣಿ ಪೋಸ್ಟ್ ಗಳಲ್ಲಿ, ಪ್ರಧಾನಮಂತ್ರಿ ಅವರು ಪ್ರತಿಯೊಬ್ಬ ನಾಮನಿರ್ದೇಶಿತರ ಕೊಡುಗೆಗಳನ್ನು ಬಿಂಬಿಸಿದ್ದಾರೆ. ಶ್ರೀ ಉಜ್ವಲ್ ನಿಕಮ್ ಅವರು ಕಾನೂನು ವೃತ್ತಿಗೆ ನೀಡಿದ ಅನುಕರಣೀಯ ಭಕ್ತಿ ಮತ್ತು ಸಾಂವಿಧಾನಿಕ ಮೌಲ್ಯಗಳಿಗೆ ಅಚಲ ಬದ್ಧತೆಯನ್ನು ಪ್ರಧಾನಿ ಶ್ಲಾಘಿಸಿದರು. …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಉದ್ಯೋಗ ಮೇಳವನ್ನುದ್ದೇಶಿಸಿ ಮಾತನಾಡಿದರು ಮತ್ತು ವಿವಿಧ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51,000 ಕ್ಕೂ ಹೆಚ್ಚು ಯುವಜನರಿಗೆ ನೇಮಕಾತಿ ಪತ್ರಗಳನ್ನು ವಿತರಿಸಿದರು. ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಭಾರತ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಈ ಯುವಜನರಿಗೆ ಇಂದು ಹೊಸ ಜವಾಬ್ದಾರಿಗಳ ಆರಂಭದ ದಿನವಾಗಿದೆ ಎಂದು ಹೇಳಿದರು. ವಿವಿಧ ಇಲಾಖೆಗಳಲ್ಲಿ ತಮ್ಮ ಸೇವೆಗಳನ್ನು ಪ್ರಾರಂಭಿಸಿದ ಯುವಜನರನ್ನು ಅವರು …
Read More »ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿ – ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್ ಪ್ರದಾನ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಸ್ವೀಕಾರ ಭಾಷಣದ ಕನ್ನಡ ಅನುವಾದ
ಗೌರವಾನ್ವಿತ ಮೇಡಂ ಅಧ್ಯಕ್ಷರೇ, ಉಪಾಧ್ಯಕ್ಷ, ಪ್ರಧಾನ ಮಂತ್ರಿ, ನಮೀಬಿಯಾದ ಗೌರವಾನ್ವಿತ ಮಂತ್ರಿಗಳೇ, ಗೌರವಾನ್ವಿತ ಅತಿಥಿಗಳೇ, ನಮೀಬಿಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ “ದಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಚಿಯಾ ಮಿರಾಬಿಲಿಸ್” ಅನ್ನು ಅಧ್ಯಕ್ಷರಿಂದ ಸ್ವೀಕರಿಸುವುದು ನನಗೆ ಅಪಾರ ಹೆಮ್ಮೆ ಮತ್ತು ಗೌರವದ ವಿಷಯವಾಗಿದೆ. ನಾನು ಅಧ್ಯಕ್ಷರಿಗೆ, ಸರ್ಕಾರಕ್ಕೆ ಮತ್ತು ನಮೀಬಿಯಾದ ಜನರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. 140 ಕೋಟಿ ಭಾರತೀಯರ ಪರವಾಗಿ ನಾನು ಈ ಗೌರವವನ್ನು ವಿನಮ್ರತೆಯಿಂದ …
Read More »ಬ್ರೆಜಿಲ್ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದ್ದಾರೆ. ಅವರು ಇಂದು ಬ್ರೆಜಿಲ್ ನ ಅಧ್ಯಕ್ಷ ಘನತೆವೆತ್ತ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರನ್ನು ಬ್ರೆಜಿಲ್ ನ ಅಲ್ವೊರಾಡಾ ಅರಮನೆಯಲ್ಲಿ ಭೇಟಿಯಾದರು. ಪ್ರಧಾನಿಯವರನ್ನು ಅಧ್ಯಕ್ಷ ಲುಲಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು ಮತ್ತು ಭವ್ಯ ಮತ್ತು ವರ್ಣರಂಜಿತ ವಿಧ್ಯುಕ್ತ ಸ್ವಾಗತವನ್ನು ನೀಡಿದರು. ಪ್ರಧಾನಮಂತ್ರಿ ಮತ್ತು ಅಧ್ಯಕ್ಷ ಲುಲಾ ಅವರು ಸೀಮಿತ ಮತ್ತು ನಿಯೋಗ ಮಟ್ಟದ ಮಾತುಕತೆಗಳನ್ನು …
Read More »ಜಂಟಿ ಹೇಳಿಕೆ: ಭಾರತ ಮತ್ತು ಬ್ರೆಜಿಲ್ – ಉನ್ನತ ಉದ್ದೇಶಗಳನ್ನು ಹೊಂದಿರುವ ಎರಡು ಶ್ರೇಷ್ಠ ರಾಷ್ಟ್ರಗಳು
ಭಾರತ ಗಣರಾಜ್ಯದ ಪ್ರಧಾನ ಮಂತ್ರಿಯವರಾದ ಗೌರವಾನ್ವಿತ ಶ್ರೀ ನರೇಂದ್ರ ಮೋದಿ ಅವರು ಜುಲೈ 8, 2025 ರಂದು ಬ್ರೆಜಿಲ್ ಗೆ ಅಧಿಕೃತ ಭೇಟಿ ನೀಡಿದರು. ಫೆಡರೇಟಿವ್ ರಿಪಬ್ಲಿಕ್ ಆಫ್ ಬ್ರೆಜಿಲ್ ನ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರ ಆಹ್ವಾನದ ಮೇರೆಗೆ ಈ ಭೇಟಿಯನ್ನು ಕೈಗೊಳ್ಳಲಾಯಿತು. ಸುಮಾರು ಎಂಟು ದಶಕಗಳಿಂದ ಬ್ರೆಜಿಲ್-ಭಾರತ ಸಂಬಂಧಗಳ ಮೂಲಾಧಾರವಾಗಿರುವ ಸ್ನೇಹ ಮತ್ತು ವಿಶ್ವಾಸದ ಉತ್ಸಾಹದಲ್ಲಿ ಈ ಭೇಟಿ ನಡೆಯಿತು. …
Read More »ಬ್ರೆಜಿಲ್ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ
ಗೌರವಾನ್ವಿತರೇ, ನನ್ನ ಆತ್ಮೀಯ ಸ್ನೇಹಿತ ಅಧ್ಯಕ್ಷ ಲೂಲಾ ಅವರೇ, ಉಭಯ ದೇಶಗಳ ನಿಯೋಗದ ಸದಸ್ಯರೇ, ಮಾಧ್ಯಮ ಸ್ನೇಹಿತರೇ, ನಮಸ್ಕಾರ, “ಬೋವಾ ತಾರ್ದೆ!” (ಶುಭ ಸಂಜೆ!) ನನ್ನ ಸ್ನೇಹಿತರಾದ ಅಧ್ಯಕ್ಷ ಲೂಲಾ ಅವರಿಗೆ ರಿಯೊ ಮತ್ತು ಬ್ರೆಸಿಲಿಯಾದಲ್ಲಿ ನೀಡಿದ ಆತ್ಮೀಯ ಸ್ವಾಗತಕ್ಕಾಗಿ ನಾನು ಹೃತ್ಪೂರ್ವಕವಾಗಿ ಧನ್ಯವಾದ ಅರ್ಪಿಸುತ್ತೇನೆ. ಅಮೆಜಾನ್ ನ ಸೌಂದಯರ್ಯ ಮತ್ತು ನಿಮ್ಮ ಸೌಜನ್ಯದಿಂದ ನಾವು ನಿಜಕ್ಕೂ ಪುಳಕಿತರಾಗಿದ್ದೇವೆ. ಇಂದು ಬ್ರೆಜಿಲ್ ಅಧ್ಯಕ್ಷರಿಂದ ಬ್ರೆಜಿಲ್ ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು …
Read More »ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆದ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಪ್ರಧಾನಮಂತ್ರಿ ಭಾಗವಹಿಸಿದ್ದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಜುಲೈ 6-7, 2025 ರಂದು ಬ್ರೆಜಿಲ್ ನ ರಿಯೊ ಡಿ ಜನೈರೊದಲ್ಲಿ ನಡೆಯುತ್ತಿರುವ 17ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದರು. ಜಾಗತಿಕ ಆಡಳಿತದ ಸುಧಾರಣೆ, ಗ್ಲೋಬಲ್ ಸೌತ್ ನ (ದಕ್ಷಿಣದ ದೇಶಗಳ) ಧ್ವನಿಯನ್ನು ಹೆಚ್ಚಿಸುವುದು, ಶಾಂತಿ ಮತ್ತು ಭದ್ರತೆ, ಬಹುಪಕ್ಷೀಯತೆಯನ್ನು ಬಲಪಡಿಸುವುದು, ಅಭಿವೃದ್ಧಿ ವಿಷಯಗಳು ಮತ್ತು ಕೃತಕ ಬುದ್ಧಿಮತ್ತೆ ಸೇರಿದಂತೆ ಬ್ರಿಕ್ಸ್ ಕಾರ್ಯಸೂಚಿಯಲ್ಲಿನ ವಿವಿಧ ವಿಷಯಗಳ ಕುರಿತು ನಾಯಕರು ಫಲಪ್ರದ ಚರ್ಚೆಗಳನ್ನು ನಡೆಸಿದರು. ಪ್ರಧಾನಮಂತ್ರಿಯವರು, …
Read More »
Matribhumi Samachar Kannad