Friday, January 09 2026 | 11:01:04 PM
Breaking News

Tag Archives: Narendra Modi

ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಪ್ರಧಾನಮಂತ್ರಿ ಅವರ ಅಧಿಕೃತ ಭೇಟಿಯ ಕುರಿತು ಜಂಟಿ ಹೇಳಿಕೆ

ಭಾರತ ಗಣರಾಜ್ಯದ ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯದ ಪ್ರಧಾನಮಂತ್ರಿಗಳಾದ ಗೌರವಾನ್ವಿತ ಕಮಲಾ ಪರ್ಸಾದ್-ಬಿಸೆಸ್ಸಾರ್ ಅವರ ಆಹ್ವಾನದ ಮೇರೆಗೆ, ಜುಲೈ 3 ರಿಂದ 4, 2025 ರವರೆಗೆ ಟ್ರಿನಿಡಾಡ್ ಮತ್ತು ಟೊಬಾಗೋ ಗಣರಾಜ್ಯಕ್ಕೆ ಅಧಿಕೃತ ಭೇಟಿ ನೀಡಿದರು. ಕಳೆದ 26 ವರ್ಷಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಕೈಗೊಂಡ ಮೊಟ್ಟಮೊದಲ ದ್ವಿಪಕ್ಷೀಯ ಭೇಟಿ ಇದಾಗಿದ್ದು, ಈ ಪ್ರವಾಸವು ಐತಿಹಾಸಿಕ ಮಹತ್ವವನ್ನು ಪಡೆದಿತ್ತು. 1845ರಲ್ಲಿ ಭಾರತೀಯ ವಲಸಿಗರು …

Read More »

ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿನ ಭಾರತೀಯ ಸಮುದಾಯದ ಪ್ರಯಾಣವು ಧೈರ್ಯಕ್ಕೆ ಸಂಬಂಧಿಸಿದೆ: ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಟ್ರಿನಿಡಾಡ್ ಮತ್ತು ಟೊಬಾಗೊದಲ್ಲಿ ಭಾರತೀಯ ವಲಸಿಗರ ಬೃಹತ್ ಸಭೆಯನ್ನುದ್ದೇಶಿಸಿ ಭಾಷಣ ಮಾಡಿದರು. ಈ ಕಾರ್ಯಕ್ರಮದಲ್ಲಿ ಟ್ರಿನಿಡಾಡ್ ಮತ್ತು ಟೊಬಾಗೊ ಗಣರಾಜ್ಯದ ಪ್ರಧಾನ ಮಂತ್ರಿ ಗೌರವಾನ್ವಿತ ಶ್ರೀಮತಿ ಕಮಲಾ ಪರ್ಸಾದ್-ಬಿಸ್ಸೆಸ್ಸಾರ್, ಅವರ ಕ್ಯಾಬಿನೆಟ್ ಸದಸ್ಯರು, ಸಂಸತ್ ಸದಸ್ಯರು ಮತ್ತು ಹಲವಾರು ಗಣ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ, ಪ್ರಧಾನಮಂತ್ರಿಯವರನ್ನು ವಲಸಿಗರು ಅಸಾಧಾರಣ ಆತ್ಮೀಯತೆಯಿಂದ ಸ್ವಾಗತಿಸಿದರು ಮತ್ತು ವರ್ಣರಂಜಿತ ಸಾಂಪ್ರದಾಯಿಕ ಇಂಡೋ-ಟ್ರಿನಿಡಾಡಿಯನ್ ಸ್ವಾಗತವನ್ನು ನೀಡಲಾಯಿತು. ಈ …

Read More »

ಘಾನಾ ಅಧ್ಯಕ್ಷರೊಂದಿಗಿನ ಜಂಟಿ ಪತ್ರಿಕಾ ಹೇಳಿಕೆಯ ಸಂದರ್ಭದಲ್ಲಿ ಪ್ರಧಾನಮಂತ್ರಿ ಅವರ ಪತ್ರಿಕಾ ಹೇಳಿಕೆ

ಗೌರವಾನ್ವಿತ ಅಧ್ಯಕ್ಷರಾದ ಜಾನ್ ಮಹಾಮ ಅವರೇ, ಉಭಯ ದೇಶಗಳ ಪ್ರತಿನಿಧಿಗಳೇ, ಮಾಧ್ಯಮದ ಸ್ನೇಹಿತರೇ, ನಮಸ್ಕಾರ! ಮೂರು ದಶಕಗಳ ಸುದೀರ್ಘ ಅಂತರದ ನಂತರ, ಭಾರತದ ಪ್ರಧಾನಮಂತ್ರಿಯೊಬ್ಬರು ಘಾನಾಗೆ ಭೇಟಿ ನೀಡುತ್ತಿದ್ದಾರೆ. ಈ ಅವಕಾಶ ಸಿಕ್ಕಿರುವುದು ನನಗೆ ತುಂಬಾ ಹೆಮ್ಮೆಯ ವಿಷಯ. “ಅಯ್ಯ ಮೆ ಅನೆಜೆ ಸೆ ಮೆವೊಹ್” ಘಾನಾದಲ್ಲಿ ನನ್ನನ್ನು  ಸೌಹಾರ್ದತೆ ಮತ್ತು ಗೌರವದಿಂದ ಸ್ವಾಗತಿಸಿರುವುದಕ್ಕಾಗಿ ನಾನು ಬಹಳ ಕೃತಜ್ಞನಾಗಿದ್ದೇನೆ. ಖುದ್ದು ಅಧ್ಯಕ್ಷರೇ  ನನ್ನನ್ನು ಸ್ವೀಕರಿಸಲು ವಿಮಾನ ನಿಲ್ದಾಣಕ್ಕೆ ಬಂದಿರುವುದು ನನಗೆ ಬಹಳ ಗೌರವದ …

Read More »

ಘಾನಾ ಅಧ್ಯಕ್ಷರನ್ನು ಭೇಟಿಯಾದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಘಾನಾದ ಅಧ್ಯಕ್ಷರಾದ, ಗೌರವಾನ್ವಿತ ಡಾ. ಜಾನ್ ಡ್ರಾಮಾನಿ ಮಹಾಮಾ ಅವರನ್ನು ಭೇಟಿ ಮಾಡಿದರು. ಜ್ಯೂಬಿಲಿ ಹೌಸ್ ಗೆ ಆಗಮಿಸಿದ ಪ್ರಧಾನಮಂತ್ರಿಯವರನ್ನು ಅಧ್ಯಕ್ಷ ಮಹಾಮಾ ಅವರು ಆತ್ಮೀಯವಾಗಿ ಬರಮಾಡಿಕೊಂಡರು. ಕಳೆದ ಮೂರು ದಶಕಗಳಲ್ಲಿ ಭಾರತದ ಪ್ರಧಾನಿಯೊಬ್ಬರು ಘಾನಾಕ್ಕೆ ನೀಡುತ್ತಿರುವ ಮೊದಲ ಅಧಿಕೃತ ಭೇಡಿ ಇದಾಗಿದೆ. ಇಬ್ಬರು ನಾಯಕರು ಏಕಾಂತ ಸಭೆ ಮತ್ತು ನಿಯೋಗ ಮಟ್ಟದ ಸಭೆಗಳನ್ನು ನಡೆಸಿ, ವಿಸ್ತೃತ ಮಾತುಕತೆ ನಡೆಸಿದರು. ಉಭಯ …

Read More »

ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಭೇಟಿಯ ಮುನ್ನ ಪ್ರಧಾನಮಂತ್ರಿ ಅವರ ನಿರ್ಗಮನ ಹೇಳಿಕೆ

ಇಂದು, ನಾನು ಜುಲೈ 2 ರಿಂದ 9, 2025 ರವರೆಗೆ ಘಾನಾ, ಟ್ರಿನಿಡಾಡ್ ಮತ್ತು ಟೊಬಾಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾಕ್ಕೆ ಐದು ರಾಷ್ಟ್ರಗಳ ಭೇಟಿಯನ್ನು ಕೈಗೊಳ್ಳುತ್ತೇನೆ. ಗರವಾನ್ವಿತ ಅಧ್ಯಕ್ಷರಾದ ಜಾನ್ ಡ್ರಾಮನಿ ಮಹಾಮಾ ಅವರ ಆಹ್ವಾನದ ಮೇರೆಗೆ, ನಾನು ಜುಲೈ 2-3 ರಂದು ಘಾನಾಗೆ ಭೇಟಿ ನೀಡಲಿದ್ದೇನೆ. ಘಾನಾ ದೇಶವು ಜಾಗತಿಕ ದಕ್ಷಿಣದಲ್ಲಿ ಮೌಲ್ಯಯುತ ಪಾಲುದಾರ ಮತ್ತು ಆಫ್ರಿಕನ್ ಒಕ್ಕೂಟ ಹಾಗು ಪಶ್ಚಿಮ ಆಫ್ರಿಕಾದ ರಾಜ್ಯಗಳ ಆರ್ಥಿಕ ಸಮುದಾಯದಲ್ಲಿ ಪ್ರಮುಖ ಪಾತ್ರ …

Read More »

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದಿನಾಂಕ 29.06.2025 ರಂದು ಮಾಡಿದ ‘ಮನ್ ಕಿ ಬಾತ್’ – 123ನೇ ಸಂಚಿಕೆಯ ಕನ್ನಡ ಅವತರಣಿಕೆ

ನನ್ನ ಪ್ರಿಯ ದೇಶವಾಸಿಗಳೇ, ನಮಸ್ಕಾರ. ‘ಮನದ ಮಾತು’ ಕಾರ್ಯಕ್ರಮಕ್ಕೆ ಸ್ವಾಗತ, ನಿಮ್ಮೆಲ್ಲರಿಗೂ ಅಭಿನಂದನೆಗಳು. ಯೋಗದ ಶಕ್ತಿ ಮತ್ತು ‘ಅಂತಾರಾಷ್ಟ್ರೀಯ ಯೋಗ ದಿನ’ದ ನೆನಪುಗಳಿಂದ ನಿಮ್ಮ ಮನ ಉತ್ಸಾಹದಿಂದಿರಬಹುದು. ಈ ಬಾರಿಯೂ, ಜೂನ್ 21 ರಂದು, ದೇಶ ಮತ್ತು ವಿದೇಶಗಳ ಕೋಟ್ಯಂತರ ಜನರು ‘ಅಂತಾರಾಷ್ಟ್ರೀಯ ಯೋಗ ದಿನ’ದಲ್ಲಿ ಭಾಗವಹಿಸಿದ್ದರು. ಇದು 10 ವರ್ಷಗಳ ಹಿಂದೆ ಪ್ರಾರಂಭವಾಯಿತು ಎಂಬುದು ನಿಮಗೆ ನೆನಪಿದೆಯೇ. ಈ 10 ವರ್ಷಗಳಲ್ಲಿ, ಈ ಯೋಗ ದಿನಾಚರಣೆ ಪ್ರತಿ ವರ್ಷವೂ …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರ ಜನ್ಮ ಜಯಂತಿಯಂದು ಪ್ರಧಾನಮಂತ್ರಿ ಗೌರವ ನಮನ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮಾಜಿ ಪ್ರಧಾನಮಂತ್ರಿ ಶ್ರೀ ಪಿ.ವಿ.ನರಸಿಂಹ ರಾವ್ ಅವರಿಗೆ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಗೌರವ ನಮನ ಸಲ್ಲಿಸಿದರು. ರಾಷ್ಟ್ರದ ಆರ್ಥಿಕ ಮತ್ತು ರಾಜಕೀಯ ಪರಿವರ್ತನೆಯ ನಿರ್ಣಾಯಕ ಹಂತದಲ್ಲಿ ಭಾರತದ ಅಭಿವೃದ್ಧಿ ಪಥವನ್ನು ರೂಪಿಸುವಲ್ಲಿ ಅವರು ವಹಿಸಿದ ಪ್ರಮುಖ ಪಾತ್ರವನ್ನು ಸ್ಮರಿಸಿದರು. ಈ ಸಂಬಂಧ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ, ಅವರು ಹೀಗೆ ಬರೆದಿದ್ದಾರೆ: “ಶ್ರೀ ಪಿ.ವಿ.ನರಸಿಂಹ ರಾವ್ ಅವರನ್ನು ಅವರ ಜನ್ಮದಿನದಂದು …

Read More »

ಸಂವಿಧಾನ ಹತ್ಯಾ ದಿವಸ್ ಸಂದರ್ಭದಲ್ಲಿ ಪ್ರಜಾಪ್ರಭುತ್ವದ ರಕ್ಷಕರಿಗೆ ಗೌರವ ಸಲ್ಲಿಸಿದ ಪ್ರಧಾನಮಂತ್ರಿ

ದೇಶದ ಇತಿಹಾಸದ ಅತ್ಯಂತ ಕರಾಳ ಅಧ್ಯಾಯಗಳಲ್ಲಿ ಒಂದಾದ ತುರ್ತು ಪರಿಸ್ಥಿತಿ ಹೇರಿಕೆಗೆ ಐವತ್ತು ವರ್ಷಗಳು ತುಂಬಿದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೇಶದ ಪ್ರಜಾಪ್ರಭುತ್ವ ರಕ್ಷಣೆಗೆ ದೃಢವಾಗಿ ನಿಂತ ಅಸಂಖ್ಯಾತ ಭಾರತೀಯರಿಗೆ ಹೃತ್ಪೂರ್ವಕ ಗೌರವ ಸಲ್ಲಿಸಿದ್ದಾರೆ. ಸಾಂವಿಧಾನಿಕ ಮೌಲ್ಯಗಳ ಮೇಲಿನ ಗಂಭೀರ ದಾಳಿಯನ್ನು ನೆನಪಿಸಿಕೊಂಡ ಪ್ರಧಾನಿ, ಜೂನ್ 25 ಅನ್ನು ಸಂವಿಧಾನ ಹತ್ಯಾ ದಿವಸ್ ಎಂದು ಆಚರಿಸಲಾಗುತ್ತಿದೆ ಎಂದು ಹೇಳಿದ್ದಾರೆ. ಮೂಲಭೂತ ಹಕ್ಕುಗಳನ್ನು ಅಮಾನತುಗೊಳಿಸಿದ, ಪತ್ರಿಕಾ ಸ್ವಾತಂತ್ರ್ಯವನ್ನು …

Read More »

ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ ಗ್ರಾಮೀಣ ಉದ್ಯಮಿಗಳನ್ನು ಸಬಲಗೊಳಿಸುವುದರ ಜೊತೆಗೆ ಹಲವು ವರ್ಷಗಳಿಂದ ಹೇಗೆ ಗಮನಾರ್ಹ ಪರಿವರ್ತನೆ ಹೊಂದಿದೆ ಎಂದು ಉಲ್ಲೇಖಿಸುವ ಲೇಖನವನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಚಿರಾಗ್ ಪಾಸ್ವಾನ್ ಅವರ ಎಕ್ಸ್‍ ಪೋಸ್ಟ್ ಗೆ ಪ್ರತಿಕ್ರಿಯೆ ನೀಡುತ್ತ, ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ: “ಕೇಂದ್ರ ಸಚಿವರಾದ ಶ್ರೀ @iChiragPaswan ಅವರು ಭಾರತದ ಆಹಾರ ಸಂಸ್ಕರಣೆ ಕ್ಷೇತ್ರ, ಕ್ರಿಯಾತ್ಮಕ ವಿಧಾನದೊಂದಿಗೆ …

Read More »

11 ವರ್ಷಗಳ ಗಣಿ ಕ್ಷೇತ್ರದ ಪರಿವರ್ತನಾ ಸುಧಾರಣೆಗಳ ಕುರಿತು ಲೇಖನವನ್ನು ಹಂಚಿಕೊಂಡ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು, ಕಳೆದ 11 ವರ್ಷಗಳಿಂದ ಆದ ಮಹತ್ವದ ಸುಧಾರಣೆ ಹೇಗೆ ಭಾರತದ ಗಣಿ ಕ್ಷೇತ್ರವನ್ನು ಸಹಕಾರ ಸಂಯುಕ್ತ ವ್ಯವಸ್ಥೆ ಹಾಗೂ ಪಾರದರ್ಶಕ ಆಡಳಿತಕ್ಕೆ ದಾರಿದೀಪವಾಗಿದೆ ಎಂಬುದರ ಕುರಿತು ಲೇಖನವೊಂದನ್ನು ಹಂಚಿಕೊಂಡಿದ್ದಾರೆ. ಕೇಂದ್ರ ಸಚಿವರಾದ ಶ್ರೀ ಜಿ. ಕಿಶನ್ ರೆಡ್ಡಿ ಅವರ ಎಕ್ಸ್ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿದ ಪ್ರಧಾನಮಂತ್ರಿಗಳು ಹೀಗೆ ಹೇಳಿದ್ದಾರೆ: “ಕೇಂದ್ರ ಸಚಿವರಾದ ಶ್ರೀ @kishanreddybjp ಕಳೆದ 11 ವರ್ಷಗಳ ಸುಧಾರಣೆಗಳು ಹೇಗೆ …

Read More »