Tuesday, December 09 2025 | 02:12:17 PM
Breaking News

Tag Archives: occasion

ತಮಿಳು ನಾಡಿನ ಜನಪ್ರಿಯ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶುಭಾಶಯ

ಇಂದು ತಮಿಳು ನಾಡಿನಲ್ಲಿ ಹಿಂದೂಗಳು ಆಚರಿಸುವ ಸುಬ್ರಹ್ಮಣ್ಯ ಸ್ವಾಮಿ ಆರಾಧಿಸುವ ಥೈಪೂಸಂ ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಶುಭಾಶಯ ತಿಳಿಸಿದರು. “ಮುರುಗನ್ ದೇವರ ದೈವಿಕ ಅನುಗ್ರಹವು ನಮಗೆ ಶಕ್ತಿ, ಸಮೃದ್ಧಿ ಮತ್ತು ಬುದ್ಧಿವಂತಿಕೆಯೊಂದಿಗೆ ಮಾರ್ಗದರ್ಶನ ನೀಡಲಿ. ಈ ಪವಿತ್ರ ಸಂದರ್ಭದಲ್ಲಿ, ಎಲ್ಲರಿಗೂ ಸಂತೋಷ, ಉತ್ತಮ ಆರೋಗ್ಯ ಮತ್ತು ಯಶಸ್ಸನ್ನು ನೀಡಲಿ ಎಂದು ನಾನು ಪ್ರಾರ್ಥಿಸುತ್ತೇನೆ” ಎಂದು ಶ್ರೀ ಮೋದಿ ಹೇಳಿದರು. ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಪ್ರಧಾನಮಂತ್ರಿಗಳು, …

Read More »

ನಾಳೆ ಯುನಾನಿ ದಿನದ ಸಂದರ್ಭದಲ್ಲಿ, ದೆಹಲಿಯಲ್ಲಿ ನಡೆಯುವ ಸಮಗ್ರ ಆರೋಗ್ಯ ಪರಿಹಾರಗಳ ಕುರಿತಾದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಭಾರತದ ರಾಷ್ಟ್ರಪತಿ ಉದ್ಘಾಟಿಸಲಿದ್ದಾರೆ

ಭಾರತದ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ನಾಳೆ ನವದೆಹಲಿಯ ವಿಜ್ಞಾನ ಭವನದಲ್ಲಿ ಎರಡು ದಿನಗಳ ಯುನಾನಿ ದಿನದ ಅಂತಾರಾಷ್ಟ್ರೀಯ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಮತ್ತು ಭೂ ವಿಜ್ಞಾನ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಡಾ. ಜಿತೇಂದ್ರ ಸಿಂಗ್ ಮತ್ತು ಆಯುಷ್ ಸಚಿವಾಲಯದ ರಾಜ್ಯ ಸಚಿವರಾದ (ಸ್ವತಂತ್ರ ಉಸ್ತುವಾರಿ) ಶ್ರೀ ಪ್ರತಾಪ್ರಾವ್ ಜಾಧವ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ. ಪ್ರತಿ ವರ್ಷ ಫೆಬ್ರವರಿ 11 …

Read More »

“ಪರಾಕ್ರಮ್ ದಿವಸ್‌” ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್‌ನ ಭವ್ಯವಾದ ಆಚರಣೆಯನ್ನು …

Read More »

ಪರಾಕ್ರಮ್ ದಿವಸ್‌ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ

ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು  ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …

Read More »

ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಪಾಲ್ಗೊಂಡ ಭಕ್ತರನ್ನು ಅಭಿನಂದಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಮಕರ ಸಂಕ್ರಾಂತಿಯ ಮಹಾ ಹಬ್ಬದಂದು ಮಹಾಕುಂಭದಲ್ಲಿ ನಡೆದ ಮೊದಲ ಅಮೃತ ಸ್ನಾನದಲ್ಲಿ ಭಾಗವಹಿಸಿದ ಭಕ್ತರನ್ನು ಅಭಿನಂದಿಸಿದ್ದಾರೆ. ಮಹಾಕುಂಭ ಮೇಳದ ಮುನ್ನೋಟಗಳನ್ನು ಹಂಚಿಕೊಂಡ ಶ್ರೀ ಮೋದಿಯವರು: “ಮಹಾಕುಂಭದಲ್ಲಿ ಆದ ಭಕ್ತಿ ಮತ್ತು ಆಧ್ಯಾತ್ಮಿಕತೆಯ ಅದ್ಭುತ ಸಂಗಮ! ಮಕರ ಸಂಕ್ರಾಂತಿಯ ಹಬ್ಬದ ಸಂದರ್ಭದಲ್ಲಿ ಮಹಾಕುಂಭದ ಮೊದಲ ಅಮೃತ ಸ್ನಾನದಲ್ಲಿ ಭಾಗಿಯಾಗಿರುವ ಎಲ್ಲಾ ಭಕ್ತರಿಗೆ ಹೃತ್ಪೂರ್ವಕ ಶುಭಾಶಯಗಳು. ಮಹಾ ಕುಂಭದ ಕೆಲವು ಚಿತ್ರಗಳು…” ಎಂದು ಬರೆದಿದ್ದಾರೆ.   …

Read More »

2025ನೇ ಹೊಸ ವರ್ಷಕ್ಕೆ ಪ್ರತಿಯೊಬ್ಬರಿಗೂ ಶುಭಾಶಯ ತಿಳಿಸಿದ ಪ್ರಧಾನಮಂತ್ರಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ದೇಶದ ಎಲ್ಲಾ ನಾಗರಿಕರಿಗೂ 2025ನೇ ಹೊಸ ವರ್ಷದ ಶುಭಾಶಯಗಳನ್ನು ಕೋರಿದ್ದಾರೆ. ಎಕ್ಸ್ ಪೋಸ್ಟ್ ನಲ್ಲಿ ಬರೆದುಕೊಂಡಿರುವ ಅವರು, “2025ನೇ ಹೊಸ ವರ್ಷದ ಶುಭಾಶಯಗಳು! ಈ ವರ್ಷ ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಅನಂತ ಸಂತೋಷವನ್ನು ತರಲಿ. ಪ್ರತಿಯೊಬ್ಬರಿಗೂ ಅದ್ಭುತವಾದ ಆರೋಗ್ಯ ಮತ್ತು ಸಮೃದ್ಧಿಯ ಆಶೀರ್ವಾದ ಸಿಗಲಿ.” ಎಂದು ಆಶಯ ವ್ಯಕ್ತಪಡಿಸಿದ್ದಾರೆ.   भारत : 1885 से 1950 (इतिहास …

Read More »

ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮಶತಮಾನೋತ್ಸವದ ಅಂಗವಾಗಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು

ಕೇಂದ್ರ ಗೃಹ ಮತ್ತು ಸಹಕಾರ ಸಚಿವರಾದ ಶ್ರೀ ಅಮಿತ್ ಶಾ ಅವರು ಮಾಜಿ ಪ್ರಧಾನಮಂತ್ರಿ ದಿವಂಗತ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಮಾನೋತ್ಸವದ ಸಂದರ್ಭದಲ್ಲಿ ಅವರ ಸ್ಮೃತಿ ಸ್ಥಳ ‘ಸದೈವ್ ಅಟಲ್’ ನಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು. ಸಾಮಾಜಿಕ ವೇದಿಕೆ ಎಕ್ಸ್ ನಲ್ಲಿನ ತಮ್ಮ ಖಾತೆಯ ಸರಣಿ ಸಂದೇಶಗಳಲ್ಲಿ, ಶ್ರೀ ಅಮಿತ್ ಶಾ ಅವರು “ಉತ್ತಮ ಆಡಳಿತ ಮತ್ತು ಸಾರ್ವಜನಿಕ ಕಲ್ಯಾಣಕ್ಕಾಗಿ ಅಟಲ್ ಜಿ ಅವರ ಸಮರ್ಪಣೆ ಭವಿಷ್ಯದ …

Read More »

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಮಧ್ಯಪ್ರದೇಶದ ಕೆನ್-ಬೆಟ್ವಾ ನದಿಯನ್ನು ಜೋಡಿಸುವ ರಾಷ್ಟ್ರೀಯ ಯೋಜನೆಗೆ ಡಿಸೆಂಬರ್ 25 , 2024 ರಂದು ಶಂಕುಸ್ಥಾಪನೆ ನೆರವೇರಿಸಲಿರುವ ಪ್ರಧಾನಮಂತ್ರಿ

ಮಾಜಿ ಪ್ರಧಾನಮಂತ್ರಿ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ 100ನೇ ಜನ್ಮದಿನದ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಡಿಸೆಂಬರ್ 25 ರಂದು ಮಧ್ಯಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅದೇ ದಿನ ಮಧ್ಯಾಹ್ನ 12:30 ರ ಸುಮಾರಿಗೆ ಅವರು ಖಜುರಾಹೊದಲ್ಲಿ ಬಹು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಪ್ರಧಾನಮಂತ್ರಿಯವರು ಕೆನ್-ಬೆಟ್ವಾ ನದಿಯನ್ನು ಸಂಪರ್ಕಿಸುವ ರಾಷ್ಟ್ರೀಯ ಯೋಜನೆಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ರಾಷ್ಟ್ರೀಯ ದೃಷ್ಟಿಕೋನದ ಯೋಜನೆಯಡಿಯಲ್ಲಿ ದೇಶದ ಮೊದಲ ನದಿಗಳ …

Read More »