ಖೇಲೋ ಇಂಡಿಯಾ ವಿಂಟರ್ ಗೇಮ್ಸ್ 2025 ಕ್ರೀಡಾಕೂಟ ಇಂದು ಲಡಾಖ್ ನ ಲೇಹ್ ನಲ್ಲಿರುವ ಪ್ರಸಿದ್ಧ ಎನ್‌ಡಿಎಸ್ ಸ್ಟೇಡಿಯಂನಲ್ಲಿ ಬಹಳ ಉತ್ಸಾಹದೊಂದಿಗೆ ಪ್ರಾರಂಭವಾಯಿತು. ಕಾರ್ಯಕ್ರಮದ ಮೊದಲ ಹಂತವನ್ನು ಲಡಾಖ್ ಕೇಂದ್ರಾಡಳಿತ ಪ್ರದೇಶವು ಆಯೋಜಿಸುತ್ತಿದೆ ಮತ್ತು ಇದು ಜನವರಿ 27, 2025 ರವರೆಗೆ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವು ಫೆಬ್ರವರಿ 22 ರಿಂದ 25 ರವರೆಗೆ ಹಿಮದ ಹಿನ್ನೆಲೆಯ ಆಟಗಳನ್ನು ಆಯೋಜಿಸುತ್ತದೆ. 5000 ಸಾಮರ್ಥ್ಯದ ಎನ್‌ಡಿಎಸ್ ಕ್ರೀಡಾಂಗಣವು ಉದ್ಘಾಟನಾ ದಿನದಂದು …
Read More »“ಪರಾಕ್ರಮ್ ದಿವಸ್” ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಭಾಷಣ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿಯ ಅಂಗವಾಗಿ ಆಚರಿಸಿರುವ “ಪರಾಕ್ರಮ್ ದಿವಸ್” ಸಂದರ್ಭದಲ್ಲಿ ಇಂದು ಭಾಷಣವನ್ನು ಮಾಡಿದರು. ವೀಡಿಯೋ ಸಂದೇಶ ನೀಡಿದ ಪ್ರಧಾನಮಂತ್ರಿಗಳು ಜನತೆಗೆ ಶುಭಾಶಯ ಕೋರಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವಾದ ಇಂದು ಇಡೀ ರಾಷ್ಟ್ರವು ಅವರನ್ನು ಗೌರವಪೂರ್ವಕವಾಗಿ ಸ್ಮರಿಸುತ್ತಿದೆ. ನೇತಾಜಿ ಸುಭಾಸ್ ಬೋಸ್ ಅವರಿಗೆ ಗೌರವ ಸಲ್ಲಿಸಿದ ಶ್ರೀ ಮೋದಿ, ಈ ವರ್ಷದ ಪರಾಕ್ರಮ್ ದಿವಸ್‌ನ ಭವ್ಯವಾದ ಆಚರಣೆಯನ್ನು …
Read More »ಪರಾಕ್ರಮ್ ದಿವಸ್ ಸಂದರ್ಭ ವಿದ್ಯಾರ್ಥಿಗಳೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಸಂವಾದ
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನವನ್ನು ಪರಾಕ್ರಮ್ ದಿವಸ್ ಎಂದು ಆಚರಿಸುವ ಸಂದರ್ಭದಲ್ಲಿ, ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಯುವ ಸ್ನೇಹಿತರೊಂದಿಗೆ ವಿಶೇಷ ಸಂವಾದ ನಡೆಸಿದರು. 2047ರ ವೇಳೆಗೆ ರಾಷ್ಟ್ರದ ಗುರಿ ಏನು ಎಂದು ವಿದ್ಯಾರ್ಥಿಗಳಿಗೆ ವಿಚಾರಿಸಿದ ಪ್ರಧಾನಿ, ಇದಕ್ಕೆ ಅತ್ಯಂತ ಆತ್ಮವಿಶ್ವಾಸದಿಂದ ವಿದ್ಯಾರ್ಥಿಯೊಬ್ಬರು ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡುವುದು (ವಿಕಸಿತ ಭಾರತ) ಎಂದು ಉತ್ತರಿಸಿದರು.2047 ರವರೆಗೆ ಮಾತ್ರ ಏಕೆ …
Read More »ಪ್ರಧಾನಮಂತ್ರಿಗಳನ್ನು ಭೇಟಿ ಮಾಡಿದ ಮಿಜೋರಾಂ ರಾಜ್ಯಪಾಲರು
ಮಿಜೋರಾಂ ರಾಜ್ಯಪಾಲರಾದ ಜನರಲ್ ವಿ ಕೆ ಸಿಂಗ್ ಅವರು ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರನ್ನು ಭೇಟಿಯಾದರು. ಪ್ರಧಾನಮಂತ್ರಿಗಳ ಕಚೇರಿಯ ಎಕ್ಸ್ ಹ್ಯಾಂಡಲ್ ಇದನ್ನು ಹಂಚಿಕೊಂಡಿದ್ದು,: “ಮಿಜೋರಾಂ ರಾಜ್ಯಪಾಲರಾದ @Gen_VKSingh ಅವರು ಪ್ರಧಾನಮಂತ್ರಿ @narendramodi ಭೇಟಿ ಮಾಡಿದರು. @MizoramGovernor” भारत : 1885 से 1950 (इतिहास पर एक दृष्टि) व/या भारत : 1857 से 1957 (इतिहास पर एक दृष्टि) पुस्तक अपने घर/कार्यालय पर मंगाने …
Read More »ಆಟಿಕೆ ತಯಾರಿಕಾ ವಲಯದಲ್ಲಿ ನಮ್ಮ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ನಮ್ಮ ಹೊಸ ಅವಕಾಶಗಳ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ: ಪ್ರಧಾನಮಂತ್ರಿ
ಆಟಿಕೆ ತಯಾರಿಕಾ ವಲಯದಲ್ಲಿ ಕೇಂದ್ರ ಸರ್ಕಾರದ ದಾಪುಗಾಲುಗಳು ಆತ್ಮನಿರ್ಭರತೆಗಾಗಿ ಹೊಸ ಅವಕಾಶಗಳ ನಮ್ಮ ಅನ್ವೇಷಣೆಯನ್ನು ಹೆಚ್ಚಿಸಿವೆ ಮತ್ತು ಆಟಿಕೆ ತಯಾರಿಕಾ ಸಂಪ್ರದಾಯಗಳು ಮತ್ತು ಉದ್ಯಮವನ್ನು ಜನಪ್ರಿಯಗೊಳಿಸಿವೆ ಎಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಹೇಳಿದರು. ಮನ್ ಕಿ ಬಾತ್ ನವೀಕರಣಗಳ ಕುರಿತಾಗಿ ಎಕ್ಸ್ ತಾಣದ ಸಂದೇಶಕ್ಕೆ ಪ್ರತಿಕ್ರಿಯಿಸುತ್ತಾ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ: “ಮನ್ ಕಿ ಬಾತ್ (#MannKiBaat) ಸಂಚಿಕೆಯೊಂದರಲ್ಲಿ ನಾವು ಆಟಿಕೆ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ದಿನಾಂಕ 19.01.2025 ರಂದು ಮಾಡಿದ ‘ಮನ್ ಕಿ ಬಾತ್’ – 118ನೇ ಭಾಷಣದ ಕನ್ನಡ ಅವತರಣಿಕೆ
ನನ್ನ ಪ್ರಿಯ ದೇಶವಾಸಿಗಳಿಗೆ ನಮಸ್ಕಾರ. ಇಂದು 2025ರ ಮೊದಲ ‘ಮನದ ಮಾತು’ ಮಾತನಾಡಲಾಗುತ್ತಿದೆ. ನೀವು ಖಂಡಿತ ಈ ವಿಷಯವನ್ನು ಗಮನಿಸಿರಬಹುದು. ಪ್ರತಿ ಬಾರಿ ತಿಂಗಳ ಕೊನೆಯ ಭಾನುವಾರದಂದು ‘ಮನದ ಮಾತು’ ಪ್ರಸಾರವಾಗುತ್ತದೆ, ಆದರೆ ಈ ಬಾರಿ ನಾವು ನಾಲ್ಕನೇ ಭಾನುವಾರದ ಬದಲು ಮೂರನೇ ಭಾನುವಾರದಂದು ಒಂದು ವಾರ ಮುಂಚಿತವಾಗಿ ಭೇಟಿಯಾಗುತ್ತಿದ್ದೇವೆ. ಏಕೆಂದರೆ ಮುಂದಿನ ಭಾನುವಾರದಂದೇ ಗಣರಾಜ್ಯೋತ್ಸವವಿದೆ. ಮುಂಚಿತವಾಗಿಯೇ ಎಲ್ಲಾ ದೇಶವಾಸಿಗಳಿಗೆ ನಾನು ಣರಾಜ್ಯೋತ್ಸವದ ಶುಭಾಶಯಗಳನ್ನು ಕೋರುತ್ತೇನೆ. ಸ್ನೇಹಿತರೇ, ಈ ಬಾರಿಯ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಉದ್ಘಾಟಿಸಿದರು, ದಂತಕಥೆಗಳಾದ ರತನ್ ಟಾಟಾ ಮತ್ತು ಒಸಾಮು ಸುಜುಕಿ ಅವರ ಕೊಡುಗೆಯನ್ನು ನೆನಪಿಸಿಕೊಂಡರು, ಅವರ ಪರಂಪರೆಯು ಚಲನಶೀಲ ವಲಯಕ್ಕೆ ಸ್ಫೂರ್ತಿ ನೀಡುತ್ತದೆ ಎಂದ ಪ್ರಧಾನಮಂತ್ರಿ
ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್‌ಪೋ 2025 ಅನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಉದ್ಘಾಟಿಸಿದರು. ಉದ್ಯಮ ತಜ್ಞರು, ಚಲನಶೀಲ ಪರಿಸರ ವ್ಯವಸ್ಥೆಯ ಪ್ರತಿನಿಧಿಗಳು, ಪಾಲುದಾರಿಕೆ ಸಂಘಗಳು, ವಿದೇಶಿ ರಾಯಭಾರ ಕಚೇರಿಗಳ ಪ್ರತಿನಿಧಿಗಳನ್ನು ಒಳಗೊಂಡಿರುವ ರೋಮಾಂಚಕ ಮತ್ತು ಉತ್ಸಾಹಭರಿತ ಪ್ರೇಕ್ಷಕರು, ಮಿಷನ್‌ಗಳು, ಸರ್ಕಾರಿ ಅಧಿಕಾರಿಗಳು, ನೀತಿ ನಿರೂಪಕರು ಮತ್ತು ಪತ್ರಿಕಾ ಮತ್ತು ಮಾಧ್ಯಮದ ಸದಸ್ಯರ ಸಮ್ಮುಖದಲ್ಲಿ ಈ ಬೃಹತ್ ಮೇಳವನ್ನು ಉದ್ಘಾಟಿಸಲಾಯಿತು. ದಂತಕಥೆಗಳಾದ ರತನ್ …
Read More »ತಿರುವಳ್ಳುವರ್ ದಿನದಂದು, ನಮ್ಮ ನಾಡಿನ ಶ್ರೇಷ್ಠ ತತ್ವಜ್ಞಾನಿಗಳು, ಕವಿಗಳು ಮತ್ತು ಚಿಂತಕರಲ್ಲಿ ಒಬ್ಬರಾದ ಧೀಮಂತ ತಿರುವಳ್ಳುವರ್ ಅವರನ್ನು ನಾವು ಸ್ಮರಿಸುತ್ತೇವೆ: ಪ್ರಧಾನಮಂತ್ರಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ತಿರುವಳ್ಳುವರ್ ದಿನದಂದು ತಮಿಳಿನ ಮಹಾನ್ ತತ್ವಜ್ಞಾನಿ, ಕವಿ ಮತ್ತು ಚಿಂತಕರಾದ ತಿರುವಳ್ಳುವರ್ ಅವರನ್ನು ಸ್ಮರಿಸಿದ್ದಾರೆ. ಧೀಮಂತ ತಿರುವಳ್ಳವರ್ ಅವರ ವಚನ/ಪದ್ಯಗಳು ತಮಿಳು ಸಂಸ್ಕೃತಿಯ ಸಾರ ಮತ್ತು ನಮ್ಮ ತಾತ್ವಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ ಎಂದು ಪ್ರಧಾನಮಂತ್ರಿ ಶ್ರೀ ಮೋದಿ ಅವರು ಬಣ್ಣಿಸಿದ್ದಾರೆ. “ವೈವಿಧ್ಯಮಯ ವಿಷಯಗಳ ಬಗ್ಗೆ ಆಳವಾದ ಒಳನೋಟ ನೀಡುವ ಅವರ ಸಮಯಾತೀತವಾದ ಕೃತಿ, ತಿರುಕ್ಕುರಲ್, ಸ್ಪೂರ್ತಿಯ ಸೆಲೆಯಾಗಿದೆ, ” ಎಂದು ಶ್ರೀ …
Read More »ಮುಂಚೂಣಿ ಯುದ್ಧ ನೌಕೆಗಳಾದ ಐ ಎನ್ ಎಸ್ ಸೂರತ್, ಐ ಎನ್ ಎಸ್ ನೀಲಗಿರಿ ಮತ್ತು ಐ ಎನ್ ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಮುಂಬೈಯ ನೌಕಾ ಹಡಗುಕಟ್ಟೆಯಲ್ಲಿ ಮೂರು ಮುಂಚೂಣಿ ನೌಕಾ ಯುದ್ಧ ನೌಕೆಗಳಾದ ಐಎನ್ಎಸ್ ಸೂರತ್, ಐಎನ್ಎಸ್ ನೀಲಗಿರಿ ಮತ್ತು ಐಎನ್ಎಸ್ ವಘ್ ಶೀರ್ ಗಳನ್ನು ರಾಷ್ಟ್ರಕ್ಕೆ ಸಮರ್ಪಿಸಿದರು. ಬಳಿಕ ಸಭಿಕರನ್ನುದ್ದೇಶಿಸಿ ಮಾತನಾಡಿದ ಶ್ರೀ ಮೋದಿ, ಜನವರಿ 15 ಅನ್ನು ಸೇನಾ ದಿನವಾಗಿ ಆಚರಿಸಲಾಗುತ್ತದೆ ಮತ್ತು ರಾಷ್ಟ್ರದ ಸುರಕ್ಷತೆ ಹಾಗು ಭದ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡುವ ಪ್ರತಿಯೊಬ್ಬ ಧೈರ್ಯಶಾಲಿ ಯೋಧನಿಗೆ ನಮಸ್ಕರಿಸುತ್ತೇನೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಅವರು ಎಲ್ಲ ವೀರ ಯೋಧರನ್ನು ಅಭಿನಂದಿಸಿದರು. ಇಂದು ಭಾರತದ ಕಡಲ ಪರಂಪರೆ, ನೌಕಾಪಡೆಯ ಭವ್ಯ ಇತಿಹಾಸ ಮತ್ತು ಆತ್ಮನಿರ್ಭರ ಭಾರತ ಅಭಿಯಾನಕ್ಕೆ ದೊಡ್ಡ ದಿನವಾಗಿದೆ ಎಂದು ಹೇಳಿದ ಪ್ರಧಾನಮಂತ್ರಿ, ಛತ್ರಪತಿ ಶಿವಾಜಿ ಮಹಾರಾಜ್ ಅವರು ಭಾರತದ ನೌಕಾಪಡೆಗೆ ಹೊಸ ಶಕ್ತಿ ಮತ್ತು ದೂರದೃಷ್ಟಿಯನ್ನು ನೀಡಿದರು ಎಂದರು. ಶಿವಾಜಿ ಮಹಾರಾಜರ ಭೂಮಿಯಲ್ಲಿ 21ನೇ ಶತಮಾನದ ಭಾರತದ ನೌಕಾಪಡೆಯನ್ನು ಸಶಕ್ತಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಇಂದು ಪ್ರಮುಖ ಹೆಜ್ಜೆ ಇಟ್ಟಿದೆ ಎಂದರು. “ಇದೇ ಮೊದಲ ಬಾರಿಗೆ ವಿಧ್ವಂಸಕ ನೌಕೆ, ಯುದ್ಧನೌಕೆ ಮತ್ತು ಜಲಾಂತರ್ಗಾಮಿ ನೌಕೆಯ ತ್ರಿ-ಕಾರ್ಯಾರಂಭ ಮಾಡಲಾಗುತ್ತಿದೆ” ಎಂದು ಪ್ರಧಾನಿ ಒತ್ತಿ ಹೇಳಿದರು. ಎಲ್ಲಾ ಮೂರು ಮುಂಚೂಣಿ ನೌಕೆಗಳನ್ನು ಭಾರತದಲ್ಲಿ ತಯಾರಿಸಲಾಗಿದೆ ಎಂಬುದು ಹೆಮ್ಮೆಯ ವಿಷಯವಾಗಿದೆ ಎಂದು ಅವರು ಒತ್ತಿ ಹೇಳಿದರು. ಈ ಸಾಧನೆಗಾಗಿ ಅವರು ಭಾರತೀಯ ನೌಕಾಪಡೆ, ನಿರ್ಮಾಣ ಕಾರ್ಯದಲ್ಲಿ ಭಾಗಿಯಾಗಿರುವ ಎಲ್ಲಾ ಪಾಲುದಾರರು ಮತ್ತು ಭಾರತದ ನಾಗರಿಕರನ್ನು ಅಭಿನಂದಿಸಿದರು. “ಇಂದಿನ ಕಾರ್ಯಕ್ರಮವು ನಮ್ಮ ಭವ್ಯ ಪರಂಪರೆಯನ್ನು ನಮ್ಮ ಭವಿಷ್ಯದ ಆಕಾಂಕ್ಷೆಗಳೊಂದಿಗೆ ಸಂಪರ್ಕಿಸುತ್ತದೆ” ಎಂದು ಶ್ರೀ ಮೋದಿ ಉದ್ಗರಿಸಿದರು. ಭಾರತವು ದೀರ್ಘ ಸಮುದ್ರಯಾನ, ವಾಣಿಜ್ಯ, ನೌಕಾ ರಕ್ಷಣೆ ಮತ್ತು ಹಡಗು ಉದ್ಯಮಕ್ಕೆ ಸಂಬಂಧಿಸಿದ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದು ಅವರು ಹೇಳಿದರು. ಈ ಶ್ರೀಮಂತ ಇತಿಹಾಸವನ್ನು ಉಲ್ಲೇಖಿಸಿದ ಅವರು, ಇಂದಿನ ಭಾರತವು ವಿಶ್ವದ ಪ್ರಮುಖ ಕಡಲ ಶಕ್ತಿಯಾಗಿ ಹೊರಹೊಮ್ಮುತ್ತಿದೆ ಎಂದರು. ಇಂದು ಕಾರ್ಯಾರಂಭ ಮಾಡಲಾದ ನೌಕೆಗಳು ಅದರ ಒಂದು ನೋಟವನ್ನು ಪ್ರದರ್ಶಿಸಿವೆ ಎಂದೂ ಅವರು ಹೇಳಿದರು. ಚೋಳ ರಾಜವಂಶದ ಕಡಲ ಪರಾಕ್ರಮಕ್ಕೆ ಸಮರ್ಪಿತವಾದ ಐಎನ್ ಎಸ್ ನೀಲಗಿರಿ ಮತ್ತು ಸೂರತ್ ಯುದ್ಧನೌಕೆ ಸೇರಿದಂತೆ ಹೊಸ ನೌಕೆಗಳ ಆರಂಭವನ್ನು ಪ್ರಧಾನಿ ಉಲ್ಲೇಖಿಸಿದರು, ಇದು ಗುಜರಾತ್ ನ ಬಂದರುಗಳು ಭಾರತವನ್ನು ಪಶ್ಚಿಮ ಏಷ್ಯಾದೊಂದಿಗೆ ಸಂಪರ್ಕಿಸಿದ ಯುಗವನ್ನು ನೆನಪಿಸುತ್ತದೆ. ಕೆಲವು ವರ್ಷಗಳ ಹಿಂದೆ ಮೊದಲ ಜಲಾಂತರ್ಗಾಮಿ ನೌಕೆ ಕಲ್ವರಿಯನ್ನು ನಿಯೋಜಿಸಿದ ನಂತರ ಪಿ 75 ವರ್ಗದಲ್ಲಿ ಆರನೇ ವಗ್ಶೀರ್ ಜಲಾಂತರ್ಗಾಮಿ ನೌಕೆಯನ್ನು ನಿಯೋಜಿಸಿದ್ದನ್ನು ಅವರು ಉಲ್ಲೇಖಿಸಿದರು. ಈ ಹೊಸ ಗಡಿನಾಡಿನ ರಕ್ಷಣಾ ವೇದಿಕೆಗಳು ಭಾರತದ ಭದ್ರತೆ ಮತ್ತು ಪ್ರಗತಿ ಎರಡನ್ನೂ ಹೆಚ್ಚಿಸುತ್ತವೆ ಎಂದು ಪ್ರಧಾನಿ ವಿವರಿಸಿದರು. “ಭಾರತವು ಇಂದು ಜಾಗತಿಕವಾಗಿ, ವಿಶೇಷವಾಗಿ ಜಾಗತಿಕ ದಕ್ಷಿಣದಲ್ಲಿ ವಿಶ್ವಾಸಾರ್ಹ ಮತ್ತು ಜವಾಬ್ದಾರಿಯುತ ಪಾಲುದಾರನಾಗಿ ಗುರುತಿಸಲ್ಪಟ್ಟಿದೆ” ಎಂದು ಪ್ರಧಾನಿ ಉದ್ಗರಿಸಿದರು. ಭಾರತವು ಅಭಿವೃದ್ಧಿಯ ಮನೋಭಾವದಿಂದ ಕಾರ್ಯನಿರ್ವಹಿಸುತ್ತದೆಯೇ ಹೊರತು ವಿಸ್ತರಣಾವಾದದಿಂದಲ್ಲ ಎಂದು ಅವರು ಒತ್ತಿ ಹೇಳಿದರು. ಮುಕ್ತ, ಸುರಕ್ಷಿತ, ಅಂತರ್ಗತ ಮತ್ತು ಸಮೃದ್ಧ ಇಂಡೋ-ಪೆಸಿಫಿಕ್ ಪ್ರದೇಶವನ್ನು ಭಾರತ ಸದಾ ಬೆಂಬಲಿಸುತ್ತದೆ ಎಂದು ಅವರು ಹೇಳಿದರು. ಕರಾವಳಿ ರಾಷ್ಟ್ರಗಳ ಅಭಿವೃದ್ಧಿಯ ವಿಷಯಕ್ಕೆ ಬಂದಾಗ, ಭಾರತವು ಸಾಗರ್ (ಈ ಪ್ರದೇಶದ ಎಲ್ಲರಿಗೂ ಭದ್ರತೆ ಮತ್ತು ಬೆಳವಣಿಗೆ) ಮಂತ್ರವನ್ನು ಪರಿಚಯಿಸಿತು ಮತ್ತು ಈ ದೃಷ್ಟಿಕೋನದೊಂದಿಗೆ ಮುಂದುವರಿಯಿತು ಎಂಬುದರತ್ತ ಅವರು ಬೆಟ್ಟು ಮಾಡಿದರು. “ಒಂದು ಭೂಮಿ, …
Read More »ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಪ್ರಯುಕ್ತ ಸರ್ವರಿಗೂ ಪ್ರಧಾನಮಂತ್ರಿ ಶುಭಾಶಯ
ಮಕರ ಸಂಕ್ರಾಂತಿ, ಉತ್ತರಾಯಣ ಮತ್ತು ಮಾಘ ಬಿಹು ಹಬ್ಬದ ಪ್ರಯುಕ್ತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರಿಂದು ಎಲ್ಲರಿಗೂ ಶುಭಾಶಯ ಕೋರಿದ್ದಾರೆ. ಎಕ್ಸ್ ನಲ್ಲಿ ಪ್ರತ್ಯೇಕ ಪೋಸ್ಟ್ ಗಳಲ್ಲಿ ಅವರು ಹೀಗೆ ಬರೆದಿದ್ದಾರೆ: “ಮಕರ ಸಂಕ್ರಾಂತಿ ಅಂಗವಾಗಿ ದೇಶದ ಸಮಸ್ತ ನಾಗರಿಕರಿಗೆ ಶುಭಾಶಯಗಳು. ಸೂರ್ಯನಿಗೆ ಸಮರ್ಪಿತವಾದ ಈ ಪವಿತ್ರ ಉತ್ತರಾಯಣ ಕಾಲವು ನಿಮ್ಮೆಲ್ಲರ ಜೀವನದಲ್ಲಿ ಹೊಸ ಚೈತನ್ಯ ಮತ್ತು ಹೊಸ ಉತ್ಸಾಹವನ್ನು ತುಂಬಲಿ. ” “ಈ ಪವಿತ್ರ ಮಕರ ಸಂಕ್ರಾಂತಿ …
Read More »
Matribhumi Samachar Kannad