ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ಕೃತಜ್ಞತೆ ಸಲ್ಲಿಸಿದ ಪ್ರಧಾನಮಂತ್ರಿಯವರು, ಇಂದು ಸಶಸ್ತ್ರ ಪಡೆಗಳ ವೆಟರನ್ಸ್ ದಿನದ ಸಂದರ್ಭದಲ್ಲಿ, ನಮ್ಮ ವೆಟರನ್ ವೀರರು ದೇಶಭಕ್ತಿಯ ಶಾಶ್ವತ ಸಂಕೇತವಾಗಿದ್ದಾರೆ ಎಂದು ಹೇಳಿದ್ದಾರೆ. Xನ ಪೋಸ್ಟ್ ನಲ್ಲಿ, ಅವರು: “ಸಶಸ್ತ್ರ ಪಡೆಗಳ ವೆಟರನ್ಸ್ ದಿನದಂದು, ನಮ್ಮ ರಾಷ್ಟ್ರವನ್ನು ರಕ್ಷಿಸಲು ತಮ್ಮ ಜೀವನವನ್ನು ಮುಡಿಪಾಗಿಟ್ಟ ಧೈರ್ಯಶಾಲಿ ಮಹಿಳೆಯರು ಮತ್ತು ಪುರುಷರಿಗೆ ನಾವು ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ಅವರ ತ್ಯಾಗ, …
Read More »ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭ ಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ: ಪ್ರಧಾನಮಂತ್ರಿ
ಪ್ರಯಾಗ್ ರಾಜ್ ನಲ್ಲಿ 2025ರ ಮಹಾಕುಂಭ ಮೇಳ ಆರಂಭವಾಗುತ್ತಿರುವ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಎಲ್ಲರಿಗೂ ಶುಭ ಹಾರೈಸಿದ್ದಾರೆ. “ಭಾರತೀಯ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಪಾಲಿಸುವ ಕೋಟ್ಯಂತರ ಜನರಿಗೆ ಇದು ಬಹಳ ವಿಶೇಷವಾದ ದಿನವಾಗಿದೆ. ಮತ್ತು, ಭಾರತದ ಕಾಲಾತೀತ ಆಧ್ಯಾತ್ಮಿಕ ಪರಂಪರೆಯನ್ನು ಮಹಾ ಕುಂಭಮೇಳವು ಸಾಕಾರಗೊಳಿಸುತ್ತದೆ ಮತ್ತು ನಂಬಿಕೆ ಮತ್ತು ಸಾಮರಸ್ಯವನ್ನು ಆಚರಿಸುತ್ತದೆ” ಎಂದು ಶ್ರೀ ಮೋದಿ ಅವರು ಹೇಳಿದರು. ಪ್ರಧಾನಮಂತ್ರಿಗಳು ತಮ್ಮ ಎಕ್ಸ್ ತಾಣದ ಸಂದೇಶದಲ್ಲಿ …
Read More »ಜನವರಿ 15 ರಂದು ಮಹಾರಾಷ್ಟ್ರಕ್ಕೆ ಪ್ರಧಾನಮಂತ್ರಿ ಭೇಟಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜನವರಿ 15 ರಂದು ಮಹಾರಾಷ್ಟ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 10:30ರ ಸುಮಾರಿಗೆ, ಪ್ರಧಾನಮಂತ್ರಿಯವರು ಮೂರು ಮುಂಚೂಣಿ ಯುದ್ಧ ನೌಕೆಗಳಾದ ಐಎನ್‌ಎಸ್ ಸೂರತ್, ಐಎನ್‌ಎಸ್ ನೀಲಗಿರಿ ಮತ್ತು ಐಎನ್‌ಎಸ್ ವಾಘ್‌ಶೀರ್‌ಗಳನ್ನು ಮುಂಬೈನ ನೌಕಾ ನೌಕಾನೆಲೆಯಲ್ಲಿ ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ. ನಂತರ, ಮಧ್ಯಾಹ್ನ 3:30ರ ಸುಮಾರಿಗೆ ಅವರು ನವಿ ಮುಂಬೈನ ಖಾರ್ಘರ್‌ನಲ್ಲಿ ಇಸ್ಕಾನ್ ದೇವಾಲಯವನ್ನು ಉದ್ಘಾಟಿಸಲಿದ್ದಾರೆ. ಮೂರು ಪ್ರಮುಖ ನೌಕೆಗಳು ರಕ್ಷಣಾ ಉತ್ಪಾದನೆ ಮತ್ತು ಕಡಲ ಭದ್ರತೆಯಲ್ಲಿ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಜಮ್ಮು ಮತ್ತು ಕಾಶ್ಮೀರದಲ್ಲಿ ಸೋನಾಮಾರ್ಗ್ ಸುರಂಗವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರ ಮತ್ತು ಭಾರತದ ಅಭಿವೃದ್ಧಿಗಾಗಿ ಶ್ರಮಿಸಿದ ಮತ್ತು ತಮ್ಮ ಪ್ರಾಣವನ್ನು ಪಣಕ್ಕಿಟ್ಟ ಕಾರ್ಮಿಕರಿಗೆ ಧನ್ಯವಾದ ಅರ್ಪಿಸಿದರು. ಸವಾಲುಗಳ ಹೊರತಾಗಿಯೂ, ನಮ್ಮ ಸಂಕಲ್ಪವು ಚಂಚಲವಾಗಲಿಲ್ಲ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು. ಕಾರ್ಮಿಕರ ಸಂಕಲ್ಪ ಮತ್ತು ಬದ್ಧತೆಗಾಗಿ ಮತ್ತು ಕೆಲಸವನ್ನು ಪೂರ್ಣಗೊಳಿಸಲು ಎಲ್ಲಾ ಅಡೆತಡೆಗಳನ್ನು …
Read More »ಒಡಿಶಾದಲ್ಲಿ 18ನೇ ಪ್ರವಾಸಿ ಭಾರತೀಯ ದಿನ ಉದ್ಘಾಟಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಒಡಿಶಾದ ಭುವನೇಶ್ವರದಲ್ಲಿ ಇಂದು 18ನೇ ಪ್ರವಾಸಿ ಭಾರತೀಯ ದಿನವನ್ನು ಉದ್ಘಾಟಿಸಿದರು. ಜಗತ್ತಿನ ನಾನಾ ಮೂಲೆಗಳಿಂದ ಆಗಮಿಸಿರುವ ಪ್ರತಿನಿಧಿಗಳು ಹಾಗೂ ಅನಿವಾಸಿ ಭಾರತೀಯರನ್ನು ಸ್ವಾಗತಿಸಿದ ಶ್ರೀ ನರೇಂದ್ರ ಮೋದಿ ಅವರು ಭವಿಷ್ಯದಲ್ಲಿ ಜಗತ್ತಿನಾದ್ಯಂತದ ವಿವಿಧ ಭಾರತೀಯ ಅನಿವಾಸಿ ಕಾರ್ಯಕ್ರಮಗಳಲ್ಲಿ ಉದ್ಘಾಟನಾ ಗೀತೆಯನ್ನು ನುಡಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು. ಭಾರತೀಯ ವಲಸಿಗರ ಭಾವನೆಗಳು ಮತ್ತು ಅನುಭವಗಳನ್ನು ಸೆರೆಹಿಡಿದ ಅದ್ಭುತ ಗಾಯನಕ್ಕಾಗಿ ಅವರು ಗ್ರ್ಯಾಮಿ ಪ್ರಶಸ್ತಿ ವಿಜೇತ …
Read More »ಪ್ರಧಾನಮಂತ್ರಿಯವರನ್ನು ಭೇಟಿಯಾದ ಉತ್ತರಾಖಂಡ ಮುಖ್ಯಮಂತ್ರಿ
ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ ಪುಷ್ಕರ್ ಸಿಂಗ್ ಧಾಮಿ ಅವರು ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಪ್ರಧಾನಮಂತ್ರಿಯವರ ಕಾರ್ಯಾಲಯವು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದೆ ; “ಉತ್ತರಾಖಂಡದ ಮುಖ್ಯಮಂತ್ರಿ ಶ್ರೀ @pushkardhami ಅವರು ಪ್ರಧಾನಮಂತ್ರಿ ಶ್ರೀ @narendramodi ಅವರನ್ನು ಭೇಟಿ ಮಾಡಿದರು.” भारत : 1885 से 1950 (इतिहास पर एक दृष्टि) व/या भारत : 1857 …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ವಿವಿಧ ರೈಲು ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಹೊಸ ಜಮ್ಮು ರೈಲ್ವೆ ವಿಭಾಗವನ್ನು ಪ್ರಧಾನಿ ಉದ್ಘಾಟಿಸಿದರು. ಅವರು ಪೂರ್ವ ಕರಾವಳಿ ರೈಲ್ವೆಯ ರಾಯಗಡ ರೈಲ್ವೆ ವಿಭಾಗ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದರು ಮತ್ತು ತೆಲಂಗಾಣದ ಚಾರ್ಲಪಲ್ಲಿ ಹೊಸ ಟರ್ಮಿನಲ್ ನಿಲ್ದಾಣವನ್ನು ಉದ್ಘಾಟಿಸಿದರು. ಶ್ರೀ ಗುರು ಗೋಬಿಂದ್ ಸಿಂಗ್ ಅವರ ಜಯಂತಿಯ ಸಂದರ್ಭದಲ್ಲಿ ತಮ್ಮ ಶುಭಾಶಯಗಳನ್ನು ತಿಳಿಸಿದ ಪ್ರಧಾನಮಂತ್ರಿಯವರು, …
Read More »ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ದೆಹಲಿಯಲ್ಲಿ 12,200 ಕೋಟಿ ರೂ.ಗೂ ಅಧಿಕ ಮೌಲ್ಯದ ಹಲವು ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಪ್ರಾದೇಶಿಕ ಸಂಪರ್ಕವನ್ನು ಹೆಚ್ಚಿಸುವುದು ಮತ್ತು ಸುಗಮ ಪ್ರಯಾಣವನ್ನು ಖಾತ್ರಿಪಡಿಸುವುದು ಯೋಜನೆಗಳ ಆದ್ಯ ಗಮನವಾಗಿದೆ. ಪ್ರಧಾನಮಂತ್ರಿಯವರು ಸಾಹಿಬಾಬಾದ್ ಆರ್.ಆರ್.ಟಿಎಸ್ ನಿಲ್ದಾಣದಿಂದ ನ್ಯೂ ಅಶೋಕ್ ನಗರ ಆರ್.ಆರ್.ಟಿಎಸ್ ನಿಲ್ದಾಣದವರೆಗೆ ನಮೋ ಭಾರತ್ ರೈಲಿನಲ್ಲಿ ಪ್ರಯಾಣಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಮಂತ್ರಿಯವರು, ಇಂದು, ದೆಹಲಿ-ಎನ್.ಸಿಆರ್ ಭಾರತ ಸರ್ಕಾರದಿಂದ ಮಹತ್ವದ …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗ್ರಾಮೀಣ ಭಾರತ ಮಹೋತ್ಸವ 2025 ಉದ್ಘಾಟಿಸಿದರು
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ನವದೆಹಲಿಯ ಭಾರತ್ ಮಂಟಪದಲ್ಲಿ ಗ್ರಾಮೀಣ ಭಾರತ ಮಹೋತ್ಸವ 2025 ಅನ್ನು ಉದ್ಘಾಟಿಸಿದರು. ವಿಕಸಿತ ಭಾರತ 2024 ಗಾಗಿ ಸ್ಥಿತಿಸ್ಥಾಪಕ ಗ್ರಾಮೀಣ ಭಾರತವನ್ನು ನಿರ್ಮಿಸುವುದು ಮಹೋತ್ಸವದ ವಿಷಯವಾಗಿದೆ. ಈ ಸಂದರ್ಭದಲ್ಲಿ ಸಭಿಕರನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ಅವರು, ನೆರೆದಿದ್ದ ಎಲ್ಲ ಜನರಿಗೆ 2025ರ ಶುಭಾಶಯ ಕೋರಿದರು. ವರ್ಷದ ಆರಂಭದಲ್ಲಿ ಗ್ರಾಮೀಣ ಭಾರತ ಮಹೋತ್ಸವದ ಭವ್ಯ ಸಂಘಟನೆಯು ಭಾರತದ ಅಭಿವೃದ್ಧಿಯ ಪಯಣದ ಒಂದು ಇಣುಕುನೋಟವನ್ನು ನೀಡುತ್ತಿದೆ ಮತ್ತು …
Read More »ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ನಿಧನಕ್ಕೆ ಪ್ರಧಾನಮಂತ್ರಿ ಸಂತಾಪ
ಹಿರಿಯ ಪರಮಾಣು ವಿಜ್ಞಾನಿ ಡಾ. ರಾಜಗೋಪಾಲ ಚಿದಂಬರಂ ಅವರ ನಿಧನಕ್ಕೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಡಾ. ರಾಜಗೋಪಾಲ ಚಿದಂಬರಂ ಅವರು ಭಾರತದ ಪರಮಾಣು ಕಾರ್ಯಕ್ರಮದ ಪ್ರಮುಖ ವಾಸ್ತುಶಿಲ್ಪಿಗಳಲ್ಲಿ ಒಬ್ಬರು ಮತ್ತು ಭಾರತದ ವೈಜ್ಞಾನಿಕ ಮತ್ತು ಕಾರ್ಯತಂತ್ರದ ಸಾಮರ್ಥ್ಯಗಳನ್ನು ಬಲಪಡಿಸುವಲ್ಲಿ ಮಹತ್ವದ ಕೊಡುಗೆಗಳನ್ನು ನೀಡಿದ್ದಾರೆ ಎಂದು ಶ್ರೀ ಮೋದಿ ಹೇಳಿದರು. ಸಾಮಾಜಿಕ ಮಾಧ್ಯಮ X ನಲ್ಲಿ ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ. “ಡಾ. ರಾಜಗೋಪಾಲ ಚಿದಂಬರಂ ಅವರ …
Read More »
Matribhumi Samachar Kannad