ರಾಷ್ಟ್ರೀಯ ತೋಟಗಾರಿಕೆ ಮಂಡಳಿ (ಎನ್.ಹೆಚ್.ಬಿ) ನಿರ್ದೇಶಕರ ಮಂಡಳಿಯ 33ನೇ ಸಭೆ ಇಂದು ನವದೆಹಲಿಯ ಕೃಷಿ ಭವನದಲ್ಲಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅಧ್ಯಕ್ಷತೆಯಲ್ಲಿ ನಡೆಯಿತು. ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶ್ರೀ ರಾಮನಾಥ್ ಠಾಕೂರ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಪ್ರಮುಖ ಕಾರ್ಯಕ್ರಮಗಳು ಮತ್ತು ಕಾರ್ಯತಂತ್ರ ರೂಪುರೇಷೆಗಳ ಪರಿಶೀಲನಾ ಸಭೆಯಲ್ಲಿ – ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು …
Read More »ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು 6ನೇ ಅಂತಾರಾಷ್ಟ್ರೀಯ ಕೃಷಿ ವಿಜ್ಞಾನ ಕಾಂಗ್ರೆಸ್ (ಐಎಸಿ -2025) ಉದ್ಘಾಟಿಸಿದರು
6ನೇ ಅಂತಾರಾಷ್ಟ್ರೀಯ ಕೃಷಿ ವಿಜ್ಞಾನ ಕಾಂಗ್ರೆಸ್ (ಐಎಸಿ-2025) ಅನ್ನು ಇಂದು ನವದೆಹಲಿಯ ಪೂಸಾ ಕ್ಯಾಂಪಸ್‌ನ ಎನ್‌ಪಿಎಲ್ ಸಭಾಂಗಣದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಘನ ಉಪಸ್ಥಿತಿಯಲ್ಲಿ ಯಶಸ್ವಿಯಾಗಿ ಉದ್ಘಾಟಿಸಲಾಯಿತು. ಈ ಮೂರು ದಿನಗಳ ಜಾಗತಿಕ ಕಾರ್ಯಕ್ರಮವನ್ನು (24-26 ನವೆಂಬರ್ 2025) ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್), ಭಾರತೀಯ ಕೃಷಿ ಸಂಶೋಧನಾ ಸಂಸ್ಥೆ (ಐಎಆರ್‌ಐ), ನ್ಯಾಷನಲ್ ಅಕಾಡೆಮಿ ಆಫ್ ಅಗ್ರಿಕಲ್ಚರಲ್ …
Read More »ಪಾಟ್ನಾದಲ್ಲಿ ನಡೆದ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 20ನೇ ಕಂತಿನ ಬಿಡುಗಡೆ ಸಂದರ್ಭದಲ್ಲಿ ರೈತರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ 20ನೇ ಕಂತಿನ ಬಿಡುಗಡೆಯ ಶುಭ ಸಂದರ್ಭದಲ್ಲಿ, ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರು ಬಿಹಾರದ ಪಾಟ್ನಾದಲ್ಲಿ ರೈತರು, ಅಧಿಕಾರಿಗಳು ಮತ್ತು ಗಣ್ಯರ ಬೃಹತ್ ಸಭೆಯನ್ನುದ್ದೇಶಿಸಿ ಮಾತನಾಡಿದರು. ಪವಿತ್ರ ಶ್ರಾವಣ ಮಾಸದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಬಿಹಾರ ಉಪಮುಖ್ಯಮಂತ್ರಿ ಶ್ರೀ ವಿಜಯ್ ಸಿನ್ಹಾ, ಸಹಕಾರ ಸಚಿವರಾದ ಶ್ರೀ ಪ್ರೇಮ್ ಕುಮಾರ್ ಮತ್ತಿತರ ಗಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು. …
Read More »ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭ – ಶ್ರೀ ಶಿವರಾಜ್ ಸಿಂಗ್ ಚೌಹಾಣ್
‘ಬಿಮಾ ಸಖಿ ಯೋಜನೆ’ ಕುರಿತು ಮಾತನಾಡಿದ ಕೇಂದ್ರ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ಮತ್ತು ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್, “ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ನಾವು ‘ಬಿಮಾ ಸಖಿ ಯೋಜನೆ’ಯ ಐತಿಹಾಸಿಕ ಆರಂಭವನ್ನು ಸಾಧಿಸಿದ್ದೇವೆ. ಈ ಯೋಜನೆಯು ಮಹಿಳಾ ಸಬಲೀಕರಣದ ಕಡೆಗೆ ಒಂದು ಪ್ರಮುಖ ಹೆಜ್ಜೆ ಮಾತ್ರವಲ್ಲ, ಗ್ರಾಮೀಣ ಮತ್ತು ಅರೆ-ನಗರ ಭಾರತಕ್ಕೆ ಆರ್ಥಿಕ ಭದ್ರತೆಯನ್ನು ಒದಗಿಸುವ ನಿಟ್ಟಿನಲ್ಲಿಯೂ ಒಂದು ಪ್ರಮುಖ ಹೆಜ್ಜೆಯಾಗಿದೆ. …
Read More »ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಗುಜರಾತಿನ ನೆಲಗಡಲೆ ಹೊಲಗಳಲ್ಲಿ ರೈತರನ್ನು ಭೇಟಿಯಾದರು
ಕೇಂದ್ರ ಕೃಷಿ, ರೈತ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ಗುಜರಾತ್ ಭೇಟಿಯ ಸಂದರ್ಭದಲ್ಲಿ ನೆಲಗಡಲೆ ಬೆಳೆಗಾರರನ್ನು ಭೇಟಿ ಮಾಡಿದರು. ಜುನಾಗಢದ ಮಾಣೆಕ್ವಾಡಾ ಗ್ರಾಮದಲ್ಲಿ ನೆಲಗಡಲೆ ಹೊಲಗಳಿಗೆ ಭೇಟಿ ನೀಡಿ ರೈತರೊಂದಿಗೆ ಸಂವಾದ ನಡೆಸಿ ಮಾಹಿತಿ ಸಂಗ್ರಹಿಸಿದರು. ಕೇಂದ್ರ ಸಚಿವರು ರೈತರೊಂದಿಗೆ ಹೊಲದಲ್ಲಿ ನೆಲಗಡಲೆ ಬೆಳೆಗಳ ಕಳೆ ತೆಗೆಯುವ ಮತ್ತು ಜಮೀನು ಒಪ್ಪಗೊಳಿಸುವ ಕಾರ್ಯದಲ್ಲಿ ಭಾಗವಹಿಸಿದರು. ಸಂವಾದದ ಸಮಯದಲ್ಲಿ, ಶ್ರೀ ಚೌಹಾಣ್ ಅವರು …
Read More »ಹತ್ತಿ ಉತ್ಪಾದನೆ ಕುರಿತು ಚರ್ಚಿಸಲು ಸಭೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಂದ ವಿಡಿಯೋ ಮೂಲಕ ಘೋಷಣೆ
ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು, ಬೆಳೆವಾರು ಸಮಸ್ಯೆಗಳನ್ನು ಚರ್ಚಿಸುವ ಸರಣಿ ಸಭೆಗಳ ಮುಂದುವರಿದ ಭಾಗವಾಗಿ, ಇಂದು ವಿಡಿಯೋ ಸಂದೇಶವೊಂದನ್ನು ಬಿಡುಗಡೆಗೊಳಿಸಿದ್ದಾರೆ. ಹತ್ತಿ ಉತ್ಪಾದನೆಯಲ್ಲಿನ ಬಿಕ್ಕಟ್ಟನ್ನು ಚರ್ಚಿಸಲು ಮುಂಬರುವ ಶುಕ್ರವಾರ, ಜುಲೈ 11, 2025 ರಂದು ಕೊಯಮತ್ತೂರಿನಲ್ಲಿ ಮಹತ್ವದ ಸಭೆಯೊಂದನ್ನು ಆಯೋಜಿಸಿರುವ ಬಗ್ಗೆ ಅವರು ಮಾಹಿತಿ ನೀಡಿದ್ದು, ಈ ನಿಟ್ಟಿನಲ್ಲಿ ದೇಶದ ಸಮಸ್ತ ರೈತ ಸಹೋದರ ಸಹೋದರಿಯರಿಂದ ಸಲಹೆಗಳನ್ನು ಆಹ್ವಾನಿಸಿದ್ದಾರೆ. …
Read More »ಭಾರತವು ವಿಶ್ವದ ಆಹಾರ ಬುಟ್ಟಿಯಾಗಲಿದೆ: ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್
ಕೇಂದ್ರ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಭಾರತವನ್ನು ವಿಶ್ವದ ಆಹಾರ ಬುಟ್ಟಿಯಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಿಸಿದ್ದಾರೆ. ದೇಶದ 145 ಕೋಟಿ ನಾಗರಿಕರಿಗೆ ಆಹಾರವನ್ನು ನೀಡುವುದರ ಜೊತೆಗೆ, ಕೇಂದ್ರ ಸರ್ಕಾರವು ರಾಜ್ಯ ಸರ್ಕಾರಗಳು, ಕೃಷಿ ವಿಶ್ವವಿದ್ಯಾಲಯಗಳು, ಕೃಷಿ ವಿಜ್ಞಾನ ಕೇಂದ್ರಗಳು (ಕೆವಿಕೆಗಳು), ರೈತರು ಮತ್ತು ವಿಜ್ಞಾನಿಗಳೊಂದಿಗೆ ಸಹಯೋಗದೊಂದಿಗೆ ಈ ಗುರಿಯನ್ನು ಸಾಧಿಸಲು ಸಮಗ್ರ ಮಾರ್ಗಸೂಚಿಯನ್ನು ರೂಪಿಸುತ್ತದೆ ಎಂದು ಅವರು ಒತ್ತಿ ಹೇಳಿದರು. ಬೆಂಗಳೂರಿನ ಐಸಿಎಆರ್-ಐಐಎಚ್‌ಆರ್ ಆವರಣದಲ್ಲಿ ಇಂದು ರೈತರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, 2047ರ ವೇಳೆಗೆ ವಿಕಸಿತ ಭಾರತ (ಅಭಿವೃದ್ಧಿ ಹೊಂದಿದ ಭಾರತ) ಎಂಬ ಪ್ರಧಾನಮಂತ್ರಿಯವರ ದೃಷ್ಟಿಕೋನಕ್ಕೆ ಅನುಗುಣವಾಗಿ ಈ ಉಪಕ್ರಮವನ್ನು ರೂಪಿಸಲಾಗಿದೆ ಎಂದು ಸ್ಪಷ್ಟಪಡಿಸಿದರು. ಈ ಅಭಿಯಾನದ ಧ್ಯೇಯವಾಕ್ಯ “ವಿಕಸಿತ ಕೃಷಿ ಭಾರತ”. ಈ ಕಾರ್ಯಕ್ರಮದ ಭಾಗವಾಗಿ, “ಪ್ರಯೋಗಾಲಯದಿಂದ ಭೂಮಿಗೆ” ಉಪಕ್ರಮವನ್ನು ಪ್ರಾರಂಭಿಸಲಾಗಿದ್ದು, ವೈಜ್ಞಾನಿಕ ಜ್ಞಾನ ಮತ್ತು ಬೆಂಬಲವನ್ನು ಒದಗಿಸಲು ದೇಶಾದ್ಯಂತ 16,000 ಕ್ಕೂ ಹೆಚ್ಚು ವಿಜ್ಞಾನಿಗಳು ರೈತರೊಂದಿಗೆ ತೊಡಗಿಸಿಕೊಂಡಿದ್ದಾರೆ. ಕಳೆದ ಹತ್ತು ದಿನಗಳಲ್ಲಿ, 1,896 ತಂಡಗಳು 8,188 ಹಳ್ಳಿಗಳಲ್ಲಿ ಸುಮಾರು 9 ಲಕ್ಷ ರೈತರೊಂದಿಗೆ ಸಂವಾದ ನಡೆಸಿವೆ. ಕರ್ನಾಟಕದಲ್ಲಿಯೇ, ಕೃಷಿ ಮತ್ತು ಸಂಬಂಧಿತ ಇಲಾಖೆಗಳ ವಿಜ್ಞಾನಿಗಳು ಮತ್ತು ಅಧಿಕಾರಿಗಳನ್ನು ಒಳಗೊಂಡ 70ಕ್ಕೂ ಹೆಚ್ಚು ಅಂತರಶಿಸ್ತೀಯ ತಂಡಗಳು ಪ್ರತಿದಿನ ತೋಟಗಳಿಗೆ ಭೇಟಿ ನೀಡುತ್ತಿವೆ. ಅವಶ್ಯಕತೆ ಆಧಾರಿತ, ಸಮಸ್ಯೆ ಆಧಾರಿತ ಕೃಷಿ ಸಂಶೋಧನಾ ಕಾರ್ಯಕ್ರಮಗಳನ್ನು ರೂಪಿಸಲು ಈ ತಂಡಗಳು ರೈತರಿಂದ ನೇರವಾಗಿ ಹಿಮ್ಮಾಹಿತಿಯನ್ನು ಪಡೆದುಕೊಂಡು ದಾಖಲಿಸುತ್ತಿವೆ. ಇಲ್ಲಿಯವರೆಗೆ, 639 ತಂಡಗಳು 2,495 ಹಳ್ಳಿಗಳಿಗೆ ಭೇಟಿ ನೀಡಿ, 2,77,264 ರೈತರೊಂದಿಗೆ ತೊಡಗಿಸಿಕೊಂಡಿವೆ. “ಒಂದು ರಾಷ್ಟ್ರ, ಒಂದು ಕೃಷಿ, ಒಂದು ತಂಡ” ಎಂಬ ಪರಿಕಲ್ಪನೆಯನ್ನು ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಹೊಂದಿದೆ ಎಂದು ಶ್ರೀ ಚೌಹಾಣ್ ಹೇಳಿದರು. ರೈತರು ತಮ್ಮ ಉತ್ಪನ್ನಗಳಿಗೆ ನ್ಯಾಯಯುತ ಬೆಲೆಯನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಮಾರುಕಟ್ಟೆ ಮಧ್ಯಪ್ರವೇಶ ಯೋಜನೆ (ಎಂ.ಐ.ಎಸ್.) ಅಡಿಯಲ್ಲಿ ಕೇಂದ್ರ ಸರ್ಕಾರವು ಸಾರಿಗೆ ವೆಚ್ಚವನ್ನು ಭರಿಸುತ್ತದೆ ಮತ್ತು ಆ ಮೂಲಕ ಮಾರುಕಟ್ಟೆಗಳಿಗೆ ಪ್ರವೇಶವನ್ನು ಬೆಂಬಲಿಸುತ್ತದೆ. …
Read More »ಕೇಂದ್ರ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಯೋಜನೆಗಳ ಕುರಿತು ಪರಿಶೀಲನಾ ಸಭೆ ನಡೆಸಿದರು
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರು ಇಂದು ನವದೆಹಲಿಯಲ್ಲಿ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳ ಕೃಷಿ ಸಚಿವರೊಂದಿಗೆ ಸಚಿವಾಲಯದ ವಿವಿಧ ಯೋಜನೆಗಳ ವಾಸ್ತವ ಪರಿಶೀಲನಾ ಸಭೆಯನ್ನು ನಡೆಸಿದರು. ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕಾರ್ಯದರ್ಶಿ ಡಾ. ದೇವೇಶ್ ಚತುರ್ವೇದಿ ಮತ್ತು ಸಚಿವಾಲಯದ ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು. ಸಚಿವಾಲಯದ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ …
Read More »
Matribhumi Samachar Kannad