Saturday, June 20 2026 | 06:41:32 PM
Breaking News

Tag Archives: Union Budget 2025-26

ಕೇಂದ್ರ ಬಜೆಟ್ 2025-26ರ ಮುಖ್ಯಾಂಶಗಳು

ಕೇಂದ್ರ ಹಣಕಾಸು ಮತ್ತು ಸಾಂಸ್ಥಿಕ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಇಂದು ಸಂಸತ್ತಿನಲ್ಲಿ 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದರು. ಬಜೆಟ್ ನ ಮುಖ್ಯಾಂಶಗಳು ಈ ಕೆಳಗಿನಂತಿವೆ: ಬಜೆಟ್ ಅಂದಾಜು 2025-26 • ಸಾಲವನ್ನು ಹೊರತುಪಡಿಸಿ ಒಟ್ಟು ಆದಾಯ ಮತ್ತು ಒಟ್ಟು ವೆಚ್ಚವನ್ನು ಕ್ರಮವಾಗಿ ₹ 34.96 ಲಕ್ಷ ಕೋಟಿ ಮತ್ತು ₹ 50.65 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ನಿವ್ವಳ ತೆರಿಗೆ ಸ್ವೀಕೃತಿಗಳನ್ನು ₹ 28.37 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • ವಿತ್ತೀಯ ಕೊರತೆಯನ್ನು ಜಿಡಿಪಿಯ ಶೇ.4.4 ಎಂದು ಅಂದಾಜಿಸಲಾಗಿದೆ. • ಒಟ್ಟು ಮಾರುಕಟ್ಟೆ ಸಾಲವನ್ನು ₹ 14.82 ಲಕ್ಷ ಕೋಟಿ ಎಂದು ಅಂದಾಜಿಸಲಾಗಿದೆ. • 2025-26ರ ಹಣಕಾಸು ವರ್ಷದಲ್ಲಿ 11.21 ಲಕ್ಷ ಕೋಟಿ ರೂ.ಗಳ ಕ್ಯಾಪೆಕ್ಸ್ ವೆಚ್ಚವನ್ನು (ಜಿಡಿಪಿಯ 3.1%) ನಿಗದಿ ಮಾಡಲಾಗಿದೆ. ಅಭಿವೃದ್ಧಿಯ ಮೊದಲ ಎಂಜಿನ್ ಆಗಿ ಕೃಷಿ ಪ್ರಧಾನ ಮಂತ್ರಿ ಧನ್-ಧನ್ಯಾ ಕೃಷಿ ಯೋಜನೆ – ಕೃಷಿ ಜಿಲ್ಲೆಗಳ ಅಭಿವೃದ್ಧಿ ಕಾರ್ಯಕ್ರಮ • 1.7 ಕೋಟಿ ರೈತರಿಗೆ ಅನುಕೂಲವಾಗುವಂತೆ ಕಡಿಮೆ ಉತ್ಪಾದಕತೆ, ಮಧ್ಯಮ ಬೆಳೆ ತೀವ್ರತೆ ಮತ್ತು ಸರಾಸರಿಗಿಂತ ಕಡಿಮೆ ಸಾಲ ನಿಯತಾಂಕಗಳನ್ನು ಹೊಂದಿರುವ 100 ಜಿಲ್ಲೆಗಳನ್ನು ಒಳಗೊಂಡಂತೆ  ರಾಜ್ಯಗಳ ಸಹಭಾಗಿತ್ವದಲ್ಲಿ ಈ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದು. ಗ್ರಾಮೀಣ ಸಮೃದ್ಧಿ ಮತ್ತು ಸ್ಥಿತಿಸ್ಥಾಪಕತ್ವವನ್ನು ನಿರ್ಮಿಸುವುದು • ಕೌಶಲ್ಯ, …

Read More »