गुरुवार, दिसंबर 19 2024 | 11:18:37 AM
Breaking News
Home / Tag Archives: Thawar Chand Gehlot

Tag Archives: Thawar Chand Gehlot

ರಾಜ್ಯಪಾಲರನ್ನು ಭೇಟಿ ಮಾಡಿದ ಕೇಂದ್ರ ಸಚಿವರಾದ ಡಾ. ಎಲ್. ಮುರುಗನ್

ಮೂರು ದಿನಗಳ ಅಧಿಕೃತ ರಾಜ್ಯ ಪ್ರವಾಸದಲ್ಲಿರುವ ಮಾನ್ಯ ಕೇಂದ್ರ ವಾರ್ತಾ ಮತ್ತು ಪ್ರಸಾರ ಹಾಗೂ ಸಂಸದೀಯ ವ್ಯವಹಾರಗಳ ರಾಜ್ಯ ಸಚಿವರಾದ ಡಾ. ಎಲ್. ಮುರುಗನ್ ಅವರು ಇಂದು ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್‌ ಗೆಹ್ಲೋಟ್‌ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿದರು. “ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್‌ ಗೆಹ್ಲೋಟ್‌ ಅವರನ್ನು ಇಂದು ಭೇಟಿ ಮಾಡುವ ಅವಕಾಶ ದೊರೆಯಿತು. ಈ ವೇಳೆ ಹಲವು ವಿಷಯಗಳ ಕುರಿತು ಚರ್ಚೆ ನಡೆಸಿದ್ದು ಸಂತೋಷ ತಂದಿದೆ” ಎಂದು ಮಾನ್ಯ ಸಚಿವರು ತಮ್ಮ ಎಕ್ಸ್‌ ಖಾತೆಯಲ್ಲಿ ತಿಳಿಸಿದ್ದಾರೆ. ರಾಜ್ಯಪಾಲರ ಭೇಟಿಯ ನಂತರ ಮಾನ್ಯ ಸಚಿವರು ಬೆಂಗಳೂರಿನ ಕುಮಾರ ಕೃಪ ಅತಿಥಿ ಗೃಹದಲ್ಲಿ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಿವಿಧ ಮಾಧ್ಯಮ ಘಟಕಗಳ ಮುಖ್ಯಸ್ಥರ ಜೊತೆ ಪರಿಶೀಲನಾ ಸಭೆ ನಡೆಸಿದರು. ಕೇಂದ್ರ ವಾರ್ತಾ ಶಾಖೆಯ ಹೆಚ್ಚುವರಿ ಮಹಾ ನಿರ್ದೇಶಕರಾದ ಶ್ರೀ ಎಸ್. ಜಿ. ರವೀಂದ್ರ ಅವರು ಸೇರಿದಂತೆ ಕೇಂದ್ರ ಸಂವಹನ ಇಲಾಖೆ, ಆಕಾಶವಾಣಿ, ದೂರದರ್ಶನ ಹಾಗೂ ಇತರೆ ಮಾಧ್ಯಮ ಘಟಕಗಳ ಅಧಿಕಾರಿಗಳು ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದರು.

Read More »